ಅಬುಧಾಬಿಯ ಯುವರಾಜ ಗೌರವಾನ್ವಿತ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಭಾರತ ಭೇಟಿ (ಸೆಪ್ಟೆಂಬರ್ 9-10, 2024)

September 09th, 07:03 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಅಬುಧಾಬಿಯ ಯುವರಾಜ ಗೌರವಾನ್ವಿತ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 2024 ಸೆಪ್ಟೆಂಬರ್ 9-10ರ ವರೆಗೆ ಅಧಿಕೃತ ಭಾರತ ಭೇಟಿಯಲ್ಲಿದ್ದಾರೆ. ಯುವರಾಜ ಶೇಖ್ ಖಲೀದ್ ಅವರು ಭಾರತಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಟಿ ಇದಾಗಿದೆ. ನಿನ್ನೆ ದೆಹಲಿಗೆ ಆಗಮಿಸಿದ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರು ಬರಮಾಡಿಕೊಂಡರು, ನಂತರ ಅವರಿಗೆ ವಿಧ್ಯುಕ್ತ ಗೌರವ ವಂದನೆ ನೀಡಲಾಯಿತು. ಅವರ ಜೊತೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಮತ್ತು ದೊಡ್ಡ ಉದ್ಯಮ ದಿಗ್ಗಜರ ನಿಯೋಗ ಆಗಮಿಸಿದೆ.

ಕಾಂಗ್ರೆಸ್ ಯಾವಾಗಲೂ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸುತ್ತದೆ, ನಾವು ಅವರನ್ನು ಗೌರವಿಸಿದ್ದೇವೆ: ಹೋಶಂಗಾಬಾದ್‌ನಲ್ಲಿ ಪ್ರಧಾನಿ ಮೋದಿ

April 14th, 01:15 pm

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಹೊಶಂಗಾಬಾದ್ ರ್‍ಯಾಲಿಯಲ್ಲಿ ಆಗಮಿಸಿದ ನಂತರ ನೆರೆದಿದ್ದ ಎಲ್ಲರಿಗೂ ಹೃತ್ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಬಾಬಾಸಾಹೇಬರು ರಚಿಸಿದ ಸಂವಿಧಾನವು ಇಂದು ಮೂರನೇ ಬಾರಿಗೆ ನಾನು ಸೇವೆ ಮಾಡಲು ನಿಮ್ಮ ಆಶೀರ್ವಾದವನ್ನು ಬಯಸುತ್ತಿದ್ದೇನೆ. ಬಾಬಾಸಾಹೇಬ್ ಅವರ ಸಂವಿಧಾನದಿಂದಾಗಿ ಇಂದು, ದೇಶದ ಅಧ್ಯಕ್ಷರು ಬುಡಕಟ್ಟು ಕುಟುಂಬದಿಂದ ಬಂದವರು.

ಮಧ್ಯಪ್ರದೇಶದ ಹೊಶಂಗಾಬಾದ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ

April 14th, 12:50 pm

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಹೊಶಂಗಾಬಾದ್ ರ್‍ಯಾಲಿಯಲ್ಲಿ ಆಗಮಿಸಿದ ನಂತರ ನೆರೆದಿದ್ದ ಎಲ್ಲರಿಗೂ ಹೃತ್ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಬಾಬಾಸಾಹೇಬರು ರಚಿಸಿದ ಸಂವಿಧಾನವು ಇಂದು ಮೂರನೇ ಬಾರಿಗೆ ನಾನು ಸೇವೆ ಮಾಡಲು ನಿಮ್ಮ ಆಶೀರ್ವಾದವನ್ನು ಬಯಸುತ್ತಿದ್ದೇನೆ. ಬಾಬಾಸಾಹೇಬ್ ಅವರ ಸಂವಿಧಾನದಿಂದಾಗಿ ಇಂದು, ದೇಶದ ಅಧ್ಯಕ್ಷರು ಬುಡಕಟ್ಟು ಕುಟುಂಬದಿಂದ ಬಂದವರು.

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 02nd, 12:30 pm

ತಮಿಳುನಾಡಿನ ರಾಜ್ಯಪಾಲ ಶ್ರೀ ಆರ್.ಎನ್.ರವಿ ಜೀ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ ಮತ್ತು ಈ ಮಣ್ಣಿನ ಮಗ ಎಲ್.ಮುರುಗನ್ ಜೀ, ತಮಿಳುನಾಡು ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಮತ್ತು ತಮಿಳುನಾಡಿನ ನನ್ನ ಕುಟುಂಬ ಸದಸ್ಯರೇ!

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

January 02nd, 12:15 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿಂದು 20,000 ಕೋಟಿ ರೂ. ವೊತ್ತದ ಬಹುಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬಹುಅಭಿವೃದ್ಧಿ ಯೋಜನೆಗಳು ತಮಿಳುನಾಡಿನಲ್ಲಿ ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ಹಡಗು ಕ್ಷೇತ್ರಗಳಂತಹ ಕ್ಷೇತ್ರಗಳನ್ನು ಒಳಗೊಂಡಿವೆ.

ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದ್ದಕ್ಕಾಗಿ ವಿಜ್ಞಾನಿಗಳು ಮತ್ತು ಇಂಜಿನಿಯರ್ ಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 31st, 09:45 pm

ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಕ್ಕಾಗಿ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಗುಜರಾತಿನ ಮೊದಲ ಅತಿ ದೊಡ್ಡ ಸ್ವದೇಶಿ 700 ಎಂ.ಡಬ್ಲ್ಯೂ.ಇ “ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರ” ಇದರ ಘಟಕ-3 ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.