2024ರ ಹಿಂಗಾರು ಹಂಗಾಮಿನಲ್ಲಿ(01.10.2024ರಿಂದ 31.03.2025ರ ವರೆಗೆ) ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ ದರ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ ಸಭೆ

September 18th, 03:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. 2024ರ ಹಿಂಗಾರು ಹಂಗಾಮಿನಲ್ಲಿ(01.10.2024ರಿಂದ 31.03.2025 ರ ವರೆಗೆ ಅನ್ವಯ) ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್(ಪಿ ಅಂಡ್ ಕೆ) ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ(ಎನ್|ಬಿಎಸ್) ದರ ನಿಗದಿಪಡಿಸುವಂತೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವಾಲಯ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸಂಪುಟ ಸಭೆ ಅನುಮೋದನೆ ನೀಡಿದೆ.

ಶರತ್ಕಾಲದ ರಬಿ ಋತು 2023-24 (01.10.2023 ರಿಂದ 31.03.2024 ರವರೆಗೆ) ಕ್ಕಾಗಿ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳಿಗೆ ಪೌಷ್ಟಿಕಾಂಶ ಆಧಾರಿತ ಸಬ್ಸಿಡಿ (ಎನ್.ಬಿ.ಎಸ್.) ದರಗಳನ್ನು ಕೇಂದ್ರ ಸಂಪುಟ ಸಭೆ ಅನುಮೋದಿಸಿದೆ

October 25th, 03:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಶರತ್ಕಾಲದ ರಬಿ ಋತು 2023-24 (01.10.2023 ರಿಂದ 31.03.2024 ರವರೆಗೆ)ಕ್ಕಾಗಿ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳಿಗೆ ಪೌಷ್ಟಿಕಾಂಶ ಆಧಾರಿತ ಸಬ್ಸಿಡಿ (ಎನ್.ಬಿ.ಎಸ್.) ದರಗಳನ್ನು ನಿಗದಿಪಡಿಸಲು ರಸಗೊಬ್ಬರ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಯನ್ನು ಅನುಮೋದಿಸಿದೆ.