ಕಾಂಗ್ರೆಸ್ ಪಕ್ಷ ತುಷ್ಟೀಕರಣ ರಾಜಕಾರಣದಲ್ಲಿ ತೊಡಗಿದೆ: ಬಾದಾಮಿಯಲ್ಲಿ ಪ್ರಧಾನಿ ಮೋದಿ

May 06th, 03:30 pm

ಕರ್ನಾಟಕದ ಬಾಗಲಕೋಟೆಯ ಬಾದಾಮಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಾದಾಮಿಯನ್ನು ಚಾಲುಕ್ಯ ರಾಜವಂಶದ ರಾಜಧಾನಿ ಎಂದು ಒಪ್ಪಿಕೊಂಡು ಕನ್ನಡದಲ್ಲಿ ನಿವಾಸಿಗಳಿಗೆ ಶುಭಾಶಯ ಕೋರಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಿಮ್ಮ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂಬ ನಂಬಿಕೆಯನ್ನು ನನಗೆ ನೀಡಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಕರ್ನಾಟಕದ ಬಾದಾಮಿ ಮತ್ತು ಹಾವೇರಿಯಲ್ಲಿ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು

May 06th, 03:08 pm

ಪ್ರಧಾನಿ ಮೋದಿ ಅವರು ಕರ್ನಾಟಕದ ಬಾದಾಮಿ ಮತ್ತು ಹಾವೇರಿಯಲ್ಲಿ ಎರಡು ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಉತ್ತಮ ಆಡಳಿತದ ಮೇಲೆ ಬಿಜೆಪಿಯ ಗಮನವನ್ನು ಪ್ರಧಾನಿ ಮೋದಿ ವಿವರಿಸಿದರು ಮತ್ತು ರಾಜ್ಯದಲ್ಲಿ ಸ್ಥಿರ ಮತ್ತು ಅಭಿವೃದ್ಧಿ ಆಧಾರಿತ ಬಿಜೆಪಿ ಸರ್ಕಾರವನ್ನು ಪೂರ್ಣ ಬಹುಮತದೊಂದಿಗೆ ಆಯ್ಕೆ ಮಾಡುವಂತೆ ಜನರನ್ನು ಒತ್ತಾಯಿಸಿದರು.

Co-operative is a great model of self-reliance: PM Modi at Sahkar Se Samrudhi programme in Gujarat

May 28th, 04:55 pm

Prime Minister Shri Narendra Modi addressed the seminar of leaders of various cooperative institutions on 'Sahakar Se Samriddhi' at Mahatma Mandir, Gandhinagar, where he also inaugurated the Nano Urea (Liquid) Plant constructed at IFFCO, Kalol. Chief Minister of Gujarat Shri Bhupendrabhai Patel, Union Ministers Shri Amit Shah, Dr. ​​Mansukh Mandaviya, Members of Parliament, MLA, Ministers from the Gujarat Government, and leaders of the cooperative sector were among those present on the occasion.

PM addresses a seminar of leaders of various cooperative institutes in Gandhinagar

May 28th, 04:54 pm

Prime Minister Shri Narendra Modi addressed the seminar of leaders of various cooperative institutions on 'Sahakar Se Samriddhi' at Mahatma Mandir, Gandhinagar, where he also inaugurated the Nano Urea (Liquid) Plant constructed at IFFCO, Kalol. Chief Minister of Gujarat Shri Bhupendrabhai Patel, Union Ministers Shri Amit Shah, Dr. ​​Mansukh Mandaviya, Members of Parliament, MLA, Ministers from the Gujarat Government, and leaders of the cooperative sector were among those present on the occasion.

2022 ಕೇಂದ್ರ ಬಜೆಟ್ ನಲ್ಲಿ ಕೃಷಿ ರಂಗದ ಮೇಲೆ ಸಕಾರಾತ್ಮಕ ಪರಿಣಾಮ ಕುರಿತ ಪ್ರಧಾನ ಮಂತ್ರಿಗಳ ವೆಬಿನಾರ್ ಭಾಷಣ

February 24th, 10:13 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಮಿತ್ರರೆ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳೇ, ಕೈಗಾರಿಕಾ ಮತ್ತು ಶಿಕ್ಷಣ ಕ್ಷೇತ್ರದ ಸಹೋದ್ಯೋಗಿಗಳೇ, ನನ್ನೆಲ್ಲಾ ರೈತ ಸಹೋದರ, ಸಹೋದರಿಯರೇ, ಕೃಷಿ ವಿಜ್ಞಾನ ಕೇಂದ್ರಗಳ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಗಣ್ಯರೆ,

ಕೃಷಿ ವಲಯದ ಮೇಲೆ ʻಕೇಂದ್ರ ಬಜೆಟ್-2022ʼರ ಸಕಾರಾತ್ಮಕ ಪರಿಣಾಮಗಳ ಬಗ್ಗೆ ವೆಬಿನಾರ್‌ ಉದ್ದೇಶಿಸಿ ಮಾತನಾಡಿದ ಪ್ರಧಾನಿ

February 24th, 10:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷಿ ಕ್ಷೇತ್ರದ ಮೇಲೆ ಕೇಂದ್ರ ಬಜೆಟ್-2022ರ ಸಕಾರಾತ್ಮಕ ಪರಿಣಾಮಗಳ ಬಗ್ಗೆ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಕೃಷಿ ವಲಯವನ್ನು ಬಲಪಡಿಸಲು ಬಜೆಟ್ ಯಾವ ರೀತಿಯಲ್ಲಿ ಕೊಡುಗೆ ನೀಡುತ್ತದೆ ಎಂಬುದನ್ನು ಅವರು ಚರ್ಚಿಸಿದರು. 'ಸ್ಮಾರ್ಟ್ ಕೃಷಿ-ಅನುಷ್ಠಾನದ ಕಾರ್ಯತಂತ್ರಗಳುʼ ವಿಷಯದ ಮೇಲೆ ವೆಬಿನಾರ್‌ ಕೇಂದ್ರೀಕೃತವಾಗಿತ್ತು. ಸಂಬಂಧಪಟ್ಟ ಕೇಂದ್ರ ಸಚಿವರು, ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ದೇಶದ ವಿವಿಧ ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮಣಿಪುರವು ಪೂರ್ವ ಏಷ್ಯಾದ ಇತರ ಭಾಗಗಳೊಂದಿಗೆ ವ್ಯಾಪಾರ ಮಾಡಲು ಹೆಬ್ಬಾಗಿಲು ಆಗುತ್ತಿದೆ: ಇಂಫಾಲ್‌ನಲ್ಲಿ ಪ್ರಧಾನಿ ಮೋದಿ

February 22nd, 10:45 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವು ಕಳೆದ ಒಂದು ತಿಂಗಳಲ್ಲಿ ತನ್ನ ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ ಎಂದು ಹೈಲೈಟ್ ಮಾಡುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕಾಂಗ್ರೆಸ್ ಆಡಳಿತದ ದಶಕಗಳಲ್ಲಿ ಮಣಿಪುರವು ಅಸಮಾನತೆ ಮತ್ತು ಅಸಮತೋಲಿತ ಅಭಿವೃದ್ಧಿಯನ್ನು ಮಾತ್ರ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ್ ಮಣಿಪುರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

February 22nd, 10:41 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವು ಕಳೆದ ಒಂದು ತಿಂಗಳಲ್ಲಿ ತನ್ನ ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ ಎಂದು ಹೈಲೈಟ್ ಮಾಡುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕಾಂಗ್ರೆಸ್ ಆಡಳಿತದ ದಶಕಗಳಲ್ಲಿ ಮಣಿಪುರವು ಅಸಮಾನತೆ ಮತ್ತು ಅಸಮತೋಲಿತ ಅಭಿವೃದ್ಧಿಯನ್ನು ಮಾತ್ರ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ್ ಮಣಿಪುರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಮಣಿಪುರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 04th, 09:45 am

ಕಾರ್ಯಕ್ರಮದಲ್ಲಿ ಹಾಜರಿರುವ ಮಣಿಪುರ ರಾಜ್ಯಪಾಲ ಗಣೇಶನ್ ಜೀ, ಮುಖ್ಯಮಂತ್ರಿ ಶ್ರೀ ಎನ್. ಬಿರೇನ್ ಸಿಂಗ್ ಜೀ, ಉಪ ಮುಖ್ಯಮಂತ್ರಿ ವೈ. ಜೋಯ್ ಕುಮಾರ್ ಸಿಂಗ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಭುಪೇಂದ್ರ ಯಾದವ್ ಜೀ, ಮತ್ತು ರಾಜಕುಮಾರ್ ರಂಜನ್ ಸಿಂಗ್ ಜೀ, ಮಣಿಪುರ ಸರಕಾರದಲ್ಲಿ ಸಚಿವರಾಗಿರುವ ಬಿಶ್ವಜಿತ್ ಸಿಂಗ್ ಜೀ, ಲೋಸೀ ದಿಕೋ ಜೀ, ಲೆಟ್ಪಾವೋ ಹಾವೋಕಿಪ್ ಜೀ, ಅವಾಂಗ್ಬೋ ನೆವ್ಮಾಯಿ ಜೀ, ಎಸ್. ರಾಜೆನ್ ಸಿಂಗ್ ಜೀ, ವುಂಗ್ಜಗೀನ್ ವಾಲ್ಟೇ ಜೀ, ಸತ್ಯಬ್ರತ್ ಸಿಂಗ್ ಜೀ, ಮತ್ತು ಒ.ಲುಕಿಯೋ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಗಳೇ, ಶಾಸಕರೇ, ಜನ ಪ್ರತಿನಿಧಿಗಳೇ, ಮತ್ತು ಮಣಿಪುರದ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ! ಖುರುಂಜರಿ

ಮಣಿಪುರದ ಇಂಫಾಲದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿದ ಪ್ರಧಾನಮಂತ್ರಿ

January 04th, 09:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಮಣಿಪುರದ ಇಂಫಾಲದಲ್ಲಿ ಸುಮಾರು 1850 ಕೋಟಿ ರೂ. ಮೌಲ್ಯದ 13 ಹೊಸ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 2950 ಕೋಟಿ ರೂ. ಮೊತ್ತದ 9 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ರಸ್ತೆ ಮೂಲಸೌಕರ್ಯ, ಕುಡಿಯುವ ನೀರು ಪೂರೈಕೆ, ಆರೋಗ್ಯ, ನಗರಾಭಿವೃದ್ಧಿ, ವಸತಿ, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ವಲಯಗಳಿಗೆ ಸಂಬಂಧಿಸಿದವುಗಳಾಗಿವೆ.

ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 01st, 12:31 pm

ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

January 01st, 12:30 pm

ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

"2022-23 ರ ಮಾರುಕಟ್ಟೆ ಹಂಗಾಮಿಗೆ ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳಕ್ಕೆ ಸಂಪುಟದ ಅನುಮೋದನೆ "

September 08th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2022-23 ರ ಹಿಂಗಾರು ಮಾರುಕಟ್ಟೆ ಹಂಗಾಮಿಗೆ ಎಲ್ಲಾ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ (ಎಂಎಸ್‌ಪಿ) ಹೆಚ್ಚಳವನ್ನು ಅನುಮೋದಿಸಿದೆ.

ಖಾದ್ಯ ತೈಲದ ರಾಷ್ಟ್ರೀಯ ಅಭಿಯಾನದಲ್ಲಿ – ಆಯಿಲ್ ಪಾಮ್ ಜಾರಿಗೆ ಸಂಪುಟದ ಅನುಮೋದನೆ

August 18th, 11:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಈಶಾನ್ಯ ವಲಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ವಿಶೇಷ ಗಮನ ಕೇಂದ್ರೀಕರಿಸಿ ಹೊಸ ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಖಾದ್ಯ ತೈಲಗಳ ರಾಷ್ಟ್ರೀಯ ಅಭಿಯಾನ – ಆಯಿಲ್ ಪಾಮ್ (ಎನ್.ಎಂ.ಇ.ಒ–ಒಪಿ) ಎಂದು ಕರೆಯಲಾಗುವ ತೈಲ ತಾಳೆ (ಆಯಿಲ್ ಪಾಮ್) ಆರಂಭಿಸಲು ತನ್ನ ಅನುಮೋದನೆ ನೀಡಿದೆ. ಖಾದ್ಯ ತೈಲಗಳ ಆಮದಿನ ಮೇಲೆ ಭಾರಿ ಅವಲಂಬನೆಯಿಂದಾಗಿ, ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವ ಪ್ರಯತ್ನ ಮಾಡುವುದು ಮುಖ್ಯವಾಗಿದ್ದು, ತೈಲ ತಾಳೆಯ ಬೆಳೆ ಪ್ರದೇಶದ ಹೆಚ್ಚಳ ಮತ್ತು ಉತ್ಪಾದಕತೆಯು ಪ್ರಮುಖ ಪಾತ್ರ ವಹಿಸುತ್ತದೆ.