ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಪರಿಸ್ಥಿತಿ ಮತ್ತು ಲಸಿಕಾ ಅಭಿಯಾನದ ಸ್ಥಿತಿಗತಿ ಪರಿಶೀಲನೆ

March 09th, 11:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಪರಿಸ್ಥಿತಿಯನ್ನು ವಿಶೇಷವಾಗಿ ಓಮಿಕ್ರಾನ್ ಅಲೆಯ ಪರಿಣಾಮಗಳು ಮತ್ತು ದೇಶದಲ್ಲಿ ಲಸಿಕಾ ಅಭಿಯಾನ ಸ್ಥಿತಿಗತಿ ಪರಿಶೀಲಿಸಿದರು.

ದೇಶದಾದ್ಯಂತ ಕೋವಿಡ್-19, ಓಮೈಕ್ರಾನ್ ಸ್ಥಿತಿ ಮತ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

December 23rd, 10:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋವಿಡ್-19 ಮತ್ತು ಒಮೈಕ್ರಾನ್ ಸ್ಥಿತಿ ಗತಿ, ಹೊಸ ರೂಪಾಂತರಿ (ವಿ.ಓ.ಸಿ.)ಮತ್ತು ಅದರ ಸಮಸ್ಯೆ, ಕೋವಿಡ್ -19 ನಿಯಂತ್ರಣ ಮತ್ತು ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆ ಕ್ರಮಗಳು, ಔಷಧಗಳ ಲಭ್ಯತೆ ಸೇರಿದಂತೆ ಆರೋಗ್ಯ ಮೂಲಸೌಕರ್ಯಗಳ ಬಲವರ್ಧನೆ, ಆಮ್ಲಜನಕ ಸಿಲಿಂಡರ್‌ ಗಳು ಮತ್ತು ಸಾಂದ್ರಕಗಳು, ವೆಂಟಿಲೇಟರ್‌ ಗಳು, ಪಿ.ಎಸ್.ಎ. ಘಟಕಗಳು, ಐ.ಸಿ.ಯು/ಆಮ್ಲಜನಕ ಸೌಲಭ್ಯದ ಹಾಸಿಗೆಗಳು, ಮಾನವ ಸಂಪನ್ಮೂಲಗಳು, ಐಟಿ ಮಧ್ಯಸ್ಥಿಕೆಗಳು ಮತ್ತು ಲಸಿಕೆ ಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.