"ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ದೇಶಗಳಿಗೆ ಐದು ದಿನಗಳ ಭೇಟಿಗೆ ತೆರಳುವ ಮುನ್ನಾ ಹೇಳಿಕೆ ನೀಡಿದ ಪ್ರಧಾನಮಂತ್ರಿ
November 16th, 12:45 pm
ಪಶ್ಚಿಮ ಆಫ್ರಿಕಾದಲ್ಲಿರುವ ನಮ್ಮ ದೇಶದ ನಿಕಟ ಪಾಲುದಾರರಾಗಿರುವ ನೈಜೀರಿಯಾಕ್ಕೆ, ಘನತೆವೆತ್ತ ಅಧ್ಯಕ್ಷ ಶ್ರೀ ಬೋಲಾ ಅಹ್ಮದ್ ಟಿನುಬು ಅವರ ಆಹ್ವಾನದ ಮೇರೆಗೆ ಭೇಟಿ ನೀಡುತ್ತಿದ್ದೇನೆ. ಇದು ಆ ದೇಶಕ್ಕೆ ನನ್ನ ಮೊದಲ ಭೇಟಿಯಾಗಿದೆ. ನನ್ನ ಭೇಟಿಯು ಪ್ರಜಾಪ್ರಭುತ್ವ ಮತ್ತು ಬಹುತ್ವದಲ್ಲಿ ಹಂಚಿಕೊಂಡ ನಂಬಿಕೆಯನ್ನು ಆಧರಿಸಿದ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನೂ ಸಧೃಡಗೊಳಿಸಲು ಮತ್ತು ಇನ್ನೂ ಉತ್ತಮವಾಗಿ ನಿರ್ಮಿಸಲು ಒಂದು ಅವಕಾಶವಾಗಿದೆ.ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ: ಯುಎನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
September 23rd, 09:32 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.‘ಭವಿಷ್ಯದ ಶೃಂಗಸಭೆ’ಯಲ್ಲಿ ಪ್ರಧಾನಮಂತ್ರಿಯವರ ಭಾಷಣ
September 23rd, 09:12 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.ಪೋಲೆಂಡ್ ನ ವಾರ್ಸಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 21st, 11:45 pm
ಈ ನೋಟ ನಿಜಕ್ಕೂ ಅದ್ಭುತ. ಮತ್ತು ನಿಮ್ಮ ಉತ್ಸಾಹವೂ ಅದ್ಭುತವಾಗಿದೆ. ನಾನು ಇಲ್ಲಿಗೆ ಕಾಲಿಟ್ಟ ಕ್ಷಣದಿಂದ, ನೀವು ದಣಿದಿಲ್ಲ. ನೀವೆಲ್ಲರೂ ಪೋಲೆಂಡ್ ನ ವಿವಿಧ ಭಾಗಗಳಿಂದ, ವಿಭಿನ್ನ ಭಾಷೆಗಳು, ಉಪಭಾಷೆಗಳು ಮತ್ತು ಪಾಕಪದ್ಧತಿಗಳ ಹಿನ್ನೆಲೆಯಿಂದ ಬಂದಿದ್ದೀರಿ. ಆದರೆ ಪ್ರತಿಯೊಬ್ಬರೂ ಭಾರತೀಯತೆಯ ಪ್ರಜ್ಞೆಯಿಂದ ಪರಸ್ಪರ ಸಂಪರ್ಕ ಹೊಂದಿದ್ದೀರಿ. ನೀವು ಇಲ್ಲಿ ನನಗೆ ಅದ್ಭುತ ಸ್ವಾಗತವನ್ನು ನೀಡಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ಮತ್ತು ಪೋಲೆಂಡ್ ಜನರಿಗೆ ಈ ಸ್ವಾಗತಕ್ಕಾಗಿ ತುಂಬಾ ಕೃತಜ್ಞನಾಗಿದ್ದೇನೆ.ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
August 21st, 11:30 pm
ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಪ್ರಸ್ತುತ ಜಾಗತಿಕ ಕಾರ್ಯತಂತ್ರವು ಬಲವಾದ ಅಂತರಾಷ್ಟ್ರೀಯ ಸಂಬಂಧಗಳನ್ನು ನಿರ್ಮಿಸಲು ಮತ್ತು ಶಾಂತಿಯನ್ನು ಪೋಷಿಸಲು ಒತ್ತು ನೀಡುತ್ತದೆ ಎಂದು ಪ್ರಧಾನಿ ವ್ಯಕ್ತಪಡಿಸಿದರು. ಪ್ರತಿ ರಾಷ್ಟ್ರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಭಾರತದ ವಿಧಾನವು ಬದಲಾಗಿದೆ. ಜಾಗತಿಕ ಸಹಕಾರವನ್ನು ಹೆಚ್ಚಿಸುವ ಮತ್ತು ಭಾರತದ ಐತಿಹಾಸಿಕ ಮೌಲ್ಯಗಳಾದ ಏಕತೆ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸಿದೆ.ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.ಭಾರತದ ಪರಂಪರೆ ಕೇವಲ ಇತಿಹಾಸವಲ್ಲ. ಭಾರತದ ಪರಂಪರೆಯೂ ಒಂದು ವಿಜ್ಞಾನ: ಪ್ರಧಾನಿ ಮೋದಿ
July 21st, 07:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಉದ್ಘಾಟಿಸಿದ ಪ್ರಧಾನಮಂತ್ರಿ
July 21st, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.ಬಿಹಾರದ ರಾಜ್‌ಗಿರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 19th, 10:31 am
ಬಿಹಾರದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಈ ರಾಜ್ಯಕ್ಕಾಗಿ ಪರಿಶ್ರಮ ಪಡುವ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ನಮ್ಮ ವಿದೇಶಾಂಗ ಸಚಿವ, ಶ್ರೀ ಎಸ್. ಜೈಶಂಕರ್ ಜಿ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಪಬಿತ್ರಾ ಜಿ, ವಿವಿಧ ದೇಶಗಳ ಗಣ್ಯರು ಮತ್ತು ರಾಯಭಾರಿಗಳೆ, ನಳಂದ ವಿಶ್ವವಿದ್ಯಾಲಯದ ಉಪ -ಕುಲಪತಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನನ್ನ ಎಲ್ಲಾ ಸ್ನೇಹಿತರೆ!ಬಿಹಾರದ ರಾಜ್ ಗಿರ್ ನಲ್ಲಿ ನಳಂದಾ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಮಂತ್ರಿ
June 19th, 10:30 am
ಬಿಹಾರದ ರಾಜ್ ಗಿರ್ ನ ನಳಂದಾ ವಿಶ್ವವಿದ್ಯಾಲಯದಲ್ಲಿ ಹೊಸ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆ [ಇಎಎಸ್] ದೇಶಗಳೊಂದಿಗೆ ಈ ವಿಶ್ವವಿದ್ಯಾಲಯ ಸಹಯೋಗ ಹೊಂದಿದೆ. ಈ ಉದ್ಘಾಟನಾ ಸಮಾರಂಭದಲ್ಲಿ 17 ಪ್ರಮುಖ ದೇಶಗಳ ಮುಖ್ಯಸ್ಥರು ಒಳಗೊಂಡಂತೆ ಹಲವು ಪ್ರಮುಖ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಗಿಡ ನೆಟ್ಟು ನೀರೆರದರು.ಕಾಂಗ್ರೆಸ್ ಯಾವಾಗಲೂ ಮಧ್ಯಮ ವರ್ಗದ ವಿರೋಧಿ ಪಕ್ಷ: ಹೈದರಾಬಾದ್‌ನಲ್ಲಿ ಪ್ರಧಾನಿ ಮೋದಿ
May 10th, 04:00 pm
ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹೈದರಾಬಾದ್‌ನ ಮಹತ್ವ ಮತ್ತು ಇತರ ರಾಜಕೀಯ ಪಕ್ಷಗಳಿಗಿಂತ ಬಿಜೆಪಿಯನ್ನು ಆಯ್ಕೆ ಮಾಡುವ ತೆಲಂಗಾಣದ ಜನರ ಸಂಕಲ್ಪವನ್ನು ಎತ್ತಿ ತೋರಿಸಿದರು. ಹೈದರಾಬಾದ್ ನಿಜವಾಗಿಯೂ ವಿಶೇಷವಾಗಿದೆ. ಈ ಸ್ಥಳವು ಇನ್ನಷ್ಟು ವಿಶೇಷವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ಒಂದು ದಶಕದ ಹಿಂದೆ ಭರವಸೆ ಮತ್ತು ಬದಲಾವಣೆಯಲ್ಲಿ ನಗರವು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು.ತೆಲಂಗಾಣದ ಮಹಬೂಬ್‌ನಗರ ಮತ್ತು ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 10th, 03:30 pm
ತೆಲಂಗಾಣದ ಮಹಬೂಬ್‌ನಗರ ಮತ್ತು ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಭವಿಷ್ಯಕ್ಕಾಗಿ ಮುಂಬರುವ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದರು. ಭಾವೋದ್ವೇಗದಿಂದ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಗಳು ಮತ್ತು ಬಿಜೆಪಿ ನೇತೃತ್ವದ ಸರ್ಕಾರ ನೀಡುವ ಕಾಂಕ್ರೀಟ್ ಭರವಸೆಗಳ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದರು.ವಿಶ್ವದ ಅನೇಕ ಯುದ್ಧಗಳ ಸಮಯದಲ್ಲಿ ನಮ್ಮ ತೀರ್ಥಂಕರರ ಬೋಧನೆಯು ಹೊಸ ಪ್ರಸ್ತುತತೆಯನ್ನು ಪಡೆದುಕೊಂಡಿದೆ: ಭಾರತ ಮಂಟಪದಲ್ಲಿ ಪ್ರಧಾನಿ ಮೋದಿ
April 21st, 11:00 am
ಭಾರತ ಮಂಟಪದಲ್ಲಿ ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ 2550 ನೇ ಭಗವಾನ್ ಮಹಾವೀರ ನಿರ್ವಾಣ ಮಹೋತ್ಸವವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಅಮೃತ್ ಕಾಲದ ಕಲ್ಪನೆಯು ಕೇವಲ ನಿರ್ಣಯವಲ್ಲ ಆದರೆ ಅಮರತ್ವ ಮತ್ತು ಶಾಶ್ವತತೆಯ ಮೂಲಕ ಬದುಕಲು ನಮಗೆ ಅನುವು ಮಾಡಿಕೊಡುವ ಆಧ್ಯಾತ್ಮಿಕ ಸ್ಫೂರ್ತಿಯಾಗಿದೆ ಎಂದು ಅವರು ಒತ್ತಿ ಹೇಳಿದರು.ಮಹಾವೀರ ಜಯಂತಿಯ ಸಂದರ್ಭದಲ್ಲಿ 2550ನೇ ಭಗವಾನ್ ಮಹಾವೀರ ನಿರ್ವಾಣ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
April 21st, 10:18 am
ಭಾರತ ಮಂಟಪದಲ್ಲಿ ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ 2550 ನೇ ಭಗವಾನ್ ಮಹಾವೀರ ನಿರ್ವಾಣ ಮಹೋತ್ಸವವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಅಮೃತ್ ಕಾಲದ ಕಲ್ಪನೆಯು ಕೇವಲ ನಿರ್ಣಯವಲ್ಲ ಆದರೆ ಅಮರತ್ವ ಮತ್ತು ಶಾಶ್ವತತೆಯ ಮೂಲಕ ಬದುಕಲು ನಮಗೆ ಅನುವು ಮಾಡಿಕೊಡುವ ಆಧ್ಯಾತ್ಮಿಕ ಸ್ಫೂರ್ತಿಯಾಗಿದೆ ಎಂದು ಅವರು ಒತ್ತಿ ಹೇಳಿದರು.ವಿಶ್ವ ಗಾಯತ್ರಿ ಪರಿವಾರ್ ಆಯೋಜಿಸಿದ ಅಶ್ವಮೇಧ ಯಾಗದಲ್ಲಿ ಪಾಲ್ಗೊಂಡಿದ್ದ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಅನುವಾದ
February 25th, 09:10 am
ಗಾಯತ್ರಿ ಪರಿವಾರ ಆಯೋಜಿಸುವ ಯಾವುದೇ ಕಾರ್ಯಕ್ರಮವು ಪಾವಿತ್ರ್ಯತೆಯೊಂದಿಗೆ ಕೂಡಿರುತ್ತೆ, ಅದರಲ್ಲಿ ಭಾಗವಹಿಸುವುದು ದೊಡ್ಡ ಅದೃಷ್ಟದ ವಿಷಯವಾಗಿದೆ. ದೇವ ಸಂಸ್ಕೃತಿ ವಿಶ್ವವಿದ್ಯಾನಿಲಯವು ಇಂದು ಆಯೋಜಿಸಿರುವ ಅಶ್ವಮೇಧ ಯಾಗದ ಭಾಗವಾಗಲು ನನಗೆ ಸಂತೋಷವಾಗಿದೆ. ಈ ಅಶ್ವಮೇಧ ಯಾಗದಲ್ಲಿ ಭಾಗವಹಿಸಲು ಗಾಯತ್ರಿ ಪರಿವಾರದಿಂದ ಆಹ್ವಾನ ಬಂದಾಗ ಸಮಯದ ಅಭಾವದಿಂದ ನನಗೆ ಸಂಕಷ್ಟ ಎದುರಾಗಿದೆ. ವೀಡಿಯೋ ಮೂಲಕ ಈ ಕಾರ್ಯಕ್ರಮವನ್ನು ನೋಡಬೇಕಾಗಿದೆ. ಸಮಸ್ಯೆಯೆಂದರೆ ಅಶ್ವಮೇಧ ಯಾಗವನ್ನು ಸಾಮಾನ್ಯ ಮನುಷ್ಯನು ಶಕ್ತಿಯ ವಿಸ್ತರಣೆ ಎಂದು ಗ್ರಹಿಸುತ್ತಾನೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅಶ್ವಮೇಧ ಯಾಗವನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳುವುದು ಸಹಜ. ಆದರೆ ಈ ಅಶ್ವಮೇಧ ಯಾಗವು ಆಚಾರ್ಯ ಶ್ರೀರಾಮ ಶರ್ಮರ ಚೈತನ್ಯವು ಮುನ್ನಡೆಸುತ್ತಿದೆ ಮತ್ತು ಅಶ್ವಮೇಧ ಯಾಗವನ್ನು ಮರು ವ್ಯಾಖ್ಯಾನಿಸುತ್ತಿದೆ ಎಂದು ನಾನು ಕಂಡುಕೊಂಡೆ, ಆದ್ದರಿಂದ ನನ್ನ ಎಲ್ಲಾ ಸಂದಿಗ್ಧತೆಗಳು ಮಾಯವಾದವು.