The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.ಬಿಹಾರದ ರಾಜ್‌ಗಿರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 19th, 10:31 am
ಬಿಹಾರದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಈ ರಾಜ್ಯಕ್ಕಾಗಿ ಪರಿಶ್ರಮ ಪಡುವ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ನಮ್ಮ ವಿದೇಶಾಂಗ ಸಚಿವ, ಶ್ರೀ ಎಸ್. ಜೈಶಂಕರ್ ಜಿ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಪಬಿತ್ರಾ ಜಿ, ವಿವಿಧ ದೇಶಗಳ ಗಣ್ಯರು ಮತ್ತು ರಾಯಭಾರಿಗಳೆ, ನಳಂದ ವಿಶ್ವವಿದ್ಯಾಲಯದ ಉಪ -ಕುಲಪತಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನನ್ನ ಎಲ್ಲಾ ಸ್ನೇಹಿತರೆ!ಬಿಹಾರದ ರಾಜ್ ಗಿರ್ ನಲ್ಲಿ ನಳಂದಾ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಮಂತ್ರಿ
June 19th, 10:30 am
ಬಿಹಾರದ ರಾಜ್ ಗಿರ್ ನ ನಳಂದಾ ವಿಶ್ವವಿದ್ಯಾಲಯದಲ್ಲಿ ಹೊಸ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆ [ಇಎಎಸ್] ದೇಶಗಳೊಂದಿಗೆ ಈ ವಿಶ್ವವಿದ್ಯಾಲಯ ಸಹಯೋಗ ಹೊಂದಿದೆ. ಈ ಉದ್ಘಾಟನಾ ಸಮಾರಂಭದಲ್ಲಿ 17 ಪ್ರಮುಖ ದೇಶಗಳ ಮುಖ್ಯಸ್ಥರು ಒಳಗೊಂಡಂತೆ ಹಲವು ಪ್ರಮುಖ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಗಿಡ ನೆಟ್ಟು ನೀರೆರದರು.ಹೊಸದಿಲ್ಲಿ ಜಿ 20 ಶೃಂಗಸಭೆ ಮಾನವ ಕೇಂದ್ರಿತ ಮತ್ತು ಅಂತರ್ಗತ ಅಭಿವೃದ್ಧಿಯಲ್ಲಿ ಹೊಸ ಹಾದಿಯನ್ನು ರೂಪಿಸಲಿದೆ: ಪ್ರಧಾನ ಮಂತ್ರಿ
September 08th, 04:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹೊಸದಿಲ್ಲಿ ಜಿ-20 ಶೃಂಗಸಭೆ ಮಾನವ ಕೇಂದ್ರಿತ ಮತ್ತು ಅಂತರ್ಗತ ಅಭಿವೃದ್ಧಿಯಲ್ಲಿ ಹೊಸ ಹಾದಿಯನ್ನು ರೂಪಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಜಿ 20 ಅಧ್ಯಕ್ಷತೆಯು ಅಂತರ್ಗತ, ಮಹತ್ವಾಕಾಂಕ್ಷೆಯ, ನಿರ್ಣಾಯಕ ಮತ್ತು ಕ್ರಿಯಾ-ಆಧಾರಿತವಾಗಿದೆ, ಅಲ್ಲಿ ಜಾಗತಿಕ ದಕ್ಷಿಣದ ಅಭಿವೃದ್ಧಿ ಕಾಳಜಿಗಳಿಗೆ ಸಕ್ರಿಯವಾದ ಧ್ವನಿಯನ್ನು ಎತ್ತಲಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.ಜಿ 20 ಆರೋಗ್ಯ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ವಿಡಿಯೋ ಸಂದೇಶದ ಪಠ್ಯ
August 18th, 02:15 pm
ಭಾರತದ 1.4 ಶತಕೋಟಿ ಜನರ ಪರವಾಗಿ, ನಾನು ನಿಮಗೆ ಭಾರತಕ್ಕೆ ಮತ್ತು ನನ್ನ ತವರು ರಾಜ್ಯ ಗುಜರಾತ್ ಗೆ ಬಹಳ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ನಿಮ್ಮನ್ನು ಸ್ವಾಗತಿಸಲು ನನ್ನೊಂದಿಗೆ 2.4 ಮಿಲಿಯನ್ ವೈದ್ಯರು, 3.5 ಮಿಲಿಯನ್ ದಾದಿಯರು, 1.3 ಮಿಲಿಯನ್ ಅರೆವೈದ್ಯಕೀಯ ಕ್ಷೇತ್ರದ ತಜ್ಞರು, 1.6 ಮಿಲಿಯನ್ ಫಾರ್ಮಾಸಿಸ್ಟ್ ಗಳು ಮತ್ತು ಭಾರತದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿರುವ ಲಕ್ಷಾಂತರ ಇತರರು ಸೇರಿದ್ದಾರೆ.PM addresses G20 Health Ministers’ Meeting
August 18th, 01:52 pm
PM Modi addressed the G20 Health Ministers’ Meet held in Gandhinagar, Gujarat via video message. He underlined that the Covid-19 pandemic has reminded us that health should be at the center of our decisions. He said that time also showed us the value of international cooperation, whether in medicine and vaccine deliveries or in bringing our people back homeಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.
August 15th, 02:14 pm
1. ನನ್ನ ಪ್ರೀತಿಯ 140 ಕೋಟಿ ಕುಟುಂಬ ಸದಸ್ಯರೇ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆ ಹಾಗೂ ನಂಬಿಕೆಯಲ್ಲೂ ನಾವು ನಂಬರ್ ಒನ್ ಎಂದು ಅನೇಕ ಜನರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಬೃಹತ್ ದೇಶ, 140 ಕೋಟಿ ದೇಶವಾಸಿಗಳು, ನನ್ನ ಸಹೋದರ ಸಹೋದರಿಯರು, ನನ್ನ ಕುಟುಂಬ ಸದಸ್ಯರು ಇಂದು ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದ್ದಾರೆ. ಭಾರತವನ್ನು ಪ್ರೀತಿಸುವ, ಭಾರತವನ್ನು ಗೌರವಿಸುವ, ಭಾರತದ ಬಗ್ಗೆ ಹೆಮ್ಮೆಪಡುವ ದೇಶ ಮತ್ತು ಜಗತ್ತಿನ ಕೋಟ್ಯಂತರ ಜನರಿಗೆ ನಾನು ಈ ಮಹಾನ್ ಪವಿತ್ರ ಸ್ವಾತಂತ್ರ್ಯದ ಹಬ್ಬದಂದು ಶುಭ ಹಾರೈಸುತ್ತೇನೆ.India Celebrates 77th Independence Day
August 15th, 09:46 am
On the occasion of India's 77th year of Independence, PM Modi addressed the nation from the Red Fort. He highlighted India's rich historical and cultural significance and projected India's endeavour to march towards the AmritKaal. He also spoke on India's rise in world affairs and how India's economic resurgence has served as a pole of overall global stability and resilient supply chains. PM Modi elaborated on the robust reforms and initiatives that have been undertaken over the past 9 years to promote India's stature in the world.77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
August 15th, 07:00 am
ನಮ್ಮದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಜನಸಂಖ್ಯೆಯ ವಿಚಾರದಲ್ಲೂ, ನಾವು ʻನಂಬರ್ ಒನ್ʼ ಎಂದು ನಂಬಲಾಗಿದೆ. ಅಂತಹ ದೊಡ್ಡ ರಾಷ್ಟ್ರವು ಇಂದು ತನ್ನ 140 ಕೋಟಿ ಸಹೋದರ ಸಹೋದರಿಯರು ಮತ್ತು ಎಲ್ಲಾ ಕುಟುಂಬ ಸದಸ್ಯರೊಂದಿಗೆ ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದೆ. ಈ ಮಹತ್ವದ ಮತ್ತು ಪವಿತ್ರ ಸಂದರ್ಭದಲ್ಲಿ, ನಾನು ದೇಶದ ಪ್ರತಿಯೊಬ್ಬ ನಾಗರಿಕನಿಗೂ, ನಮ್ಮ ರಾಷ್ಟ್ರವಾದ ಭಾರತವನ್ನು ಪ್ರೀತಿಸುವ, ಗೌರವಿಸುವ ಮತ್ತು ಹೆಮ್ಮೆಪಡುವ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
May 23rd, 08:54 pm
ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ
May 23rd, 01:30 pm
ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.ಜಿ7 ಶೃಂಗಸಭೆಯ 6ನೇ ಕಾರ್ಯಕಾರಿ ಅಧಿವೇಶನ ಉದ್ದೇಶಿಸಿ ಪ್ರಧಾನ ಮಂತ್ರಿ ಉದ್ಘಾಟನಾ ಭಾಷಣ
May 20th, 04:53 pm
ವಿಶ್ವದ ಅತ್ಯಂತ ದುರ್ಬಲ ಜನರನ್ನು, ವಿಶೇಷವಾಗಿ ಕನಿಷ್ಠ ರೈತರ ಮೇಲೆ ಕೇಂದ್ರೀಕರಿಸುವ ಎಲ್ಲರನ್ನೂ ಒಳಗೊಂಡ ಆಹಾರ ಭದ್ರತಾ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಬೇಕು. ಜಾಗತಿಕ ರಸಗೊಬ್ಬರ ಪೂರೈಕೆ ಸರಪಳಿಗಳನ್ನು ಬಲಪಡಿಸಬೇಕು. ಅದರಲ್ಲಿರುವ ರಾಜಕೀಯ ಅಡೆತಡೆಗಳನ್ನು ನಿವಾರಿಸಬೇಕು. ರಸಗೊಬ್ಬರ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳುವ ವಿಸ್ತರಣಾ ಮನೋಭಾವ ನಿಲ್ಲಿಸಬೇಕು. ಇವು ನಮ್ಮೆಲ್ಲರ ಸಹಕಾರದ ಉದ್ದೇಶಗಳಾಗಿರಬೇಕು.ಒನ್ ಅರ್ಥ್ ಒನ್ ಹೆಲ್ತ್ – ಅಡ್ವಾಂಟೇಜ್ ಹೆಲ್ತ್ ಕೇರ್ ಇಂಡಿಯಾ 2023 ರಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
April 26th, 03:40 pm
ಘನತೆವೆತ್ತರೇ, ವಿಶ್ವದ ಅನೇಕ ದೇಶಗಳ ಆರೋಗ್ಯ ಮಂತ್ರಿಗಳು, ಪಶ್ಚಿಮ ಏಷ್ಯಾ, ಸಾರ್ಕ್, ಆಸಿಯಾನ್ ಮತ್ತು ಆಫ್ರಿಕನ್ ಪ್ರದೇಶಗಳ ಗೌರವಾನ್ವಿತ ಪ್ರತಿನಿಧಿಗಳೇ, ನಾನು ಭಾರತಕ್ಕೆ ಹಾರ್ದಿಕ ಸ್ವಾಗತ ಕೋರುತ್ತೇನೆ. ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳು ಮತ್ತು ಭಾರತೀಯ ಆರೋಗ್ಯ ಉದ್ಯಮದ ಪ್ರತಿನಿಧಿಗಳೇ, ನಮಸ್ಕಾರ!ಒಂದು ಪೃಥ್ವಿ ಒಂದು ಆರೋಗ್ಯ - ಅಡ್ವಾಂಟೇಜ್ ಹೆಲ್ತ್‌ಕೇರ್ ಇಂಡಿಯಾ 2023ರ 6ನೇ ಆವೃತ್ತಿ ಉದ್ಘಾಟಿಸಿದ ಪ್ರಧಾನಿ
April 26th, 03:39 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನವದೆಹಲಿಯ ಪ್ರಗತಿ ಮೈದಾನದಲ್ಲಿ ಒಂದು ಪೃಥ್ವಿ ಒಂದು ಆರೋಗ್ಯ - ಅಡ್ವಾಂಟೇಜ್ ಹೆಲ್ತ್‌ಕೇರ್ ಇಂಡಿಯಾ - 2023 ಸಮಾವೇಶದ 6ನೇ ಆವೃತ್ತಿಯನ್ನು ಉದ್ಘಾಟಿಸಿ, ಮಾತನಾಡಿದರು.ಪ್ರಜಾಪ್ರಭುತ್ವಕ್ಕಾಗಿ ಎರಡನೇ ಶೃಂಗಸಭೆಯ ನಾಯಕರ ಮಟ್ಟದ ಸಮಗ್ರ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಭಿಪ್ರಾಯಗಳು
March 29th, 04:06 pm
ವಿಶಾಲ-ಆಧಾರಿತ ಸಲಹಾ ಅಂಗಗಳು ಅಥವಾ ಸಂಸ್ಥೆಗಳು ರಾಜಕೀಯ ಅಧಿಕಾರವನ್ನು ಚಲಾಯಿಸುವ ಬಗ್ಗೆ ನಮ್ಮ ಪವಿತ್ರ ವೇದಗಳು ಹೇಳುತ್ತವೆ. ಪ್ರಾಚೀನ ಭಾರತದಲ್ಲಿ ಗಣರಾಜ್ಯ ರಾಜ್ಯಗಳ ಬಗ್ಗೆ ಅನೇಕ ಐತಿಹಾಸಿಕ ಉಲ್ಲೇಖಗಳಿವೆ, ಅಲ್ಲಿ ಆಡಳಿತಗಳು ಅನುವಂಶೀಯವಾಗಿರಲಿಲ್ಲ. ಭಾರತ ನಿಜವಾಗಿಯೂ ಪ್ರಜಾಪ್ರಭುತ್ವದ ತಾಯಿ.ವಾರಾಣಸಿಯ ರುದ್ರಕಾಶ್ ಕನ್ವೆನ್ಷನ್ ಸೆಂಟರ್‌ನಲ್ಲಿ 'ಒನ್ ವರ್ಲ್ಡ್ ಟಿಬಿ ಶೃಂಗಸಭೆ' ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 24th, 10:20 am
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಆರೋಗ್ಯ ಸಚಿವ ಶ್ರೀ ಮನ್ಸುಖ್ ಮಾಂಡವಿಯಾ ಜಿ, ಉಪಮುಖ್ಯಮಂತ್ರಿ ಶ್ರೀ ಬ್ರಿಜೇಶ್ ಪಾಠಕ್ ಜಿ, ವಿವಿಧ ದೇಶಗಳ ಆರೋಗ್ಯ ಸಚಿವರು, ವಿಶ್ವ ಆರೋಗ್ಯ ಸಂಘಟನೆಯ ಪ್ರಾದೇಶಿಕ ನಿರ್ದೇಶಕರು, ಇಲ್ಲಿರುವ ಎಲ್ಲಾ ಗಣ್ಯರು, ಸ್ಟಾಪ್ ಟಿಬಿ ಪಾರ್ಟ್ ನರ್ ಶಿಪ್ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಮಹಿಳೆಯರೆ ಮತ್ತು ಮಹನೀಯರೆ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಒಂದು ವಿಶ್ವ ಕ್ಷಯರೋಗ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 24th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯ ರುದ್ರಾಕ್ಷ್ ಸಮಾವೇಶ ಕೇಂದ್ರದಲ್ಲಿ ಒಂದು ವಿಶ್ವ ಟಿಬಿ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಅವರು ಟಿಬಿ ಮುಕ್ತ ಪಂಚಾಯತ್, ಅಲ್ಪಾವಧಿಯ ಟಿಬಿ ತಡೆಗಟ್ಟುವ ಚಿಕಿತ್ಸೆಗೆ (ಟಿಪಿಟಿ)ನ್ನು ಭಾರತದಾದ್ಯಂತ ಅಧಿಕೃತ ಅನುಷ್ಠಾನ, ಕ್ಷಯರೋಗಕ್ಕೆ ಕುಟುಂಬ ಕೇಂದ್ರಿತ ಆರೈಕೆ ಮಾದರಿ ಮತ್ತು ಭಾರತದ ವಾರ್ಷಿಕ ಟಿಬಿ ವರದಿ 2023 ರ ಬಿಡುಗಡೆ ಸೇರಿದಂತೆ ವಿವಿಧ ಉಪಕ್ರಮಗಳಿಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ರೋಗ ನಿಯಂತ್ರಣ ಮತ್ತು ಹೈ ಕಂಟೈನ್ಮೆಂಟ್ ಪ್ರಯೋಗಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ವಾರಣಾಸಿಯಲ್ಲಿ ಮೆಟ್ರೋಪಾಲಿಟನ್ ಸಾರ್ವಜನಿಕ ಆರೋಗ್ಯ ಕಣ್ಗಾವಲು ಘಟಕದ ತಾಣವನ್ನು ಉದ್ಘಾಟಿಸಿದರು. ಕ್ಷಯ ರೋಗವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾಧಿಸಿರುವ ಪ್ರಗತಿಗಾಗಿ ಆಯ್ದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಜಿಲ್ಲೆಗಳಿಗೆ ಪ್ರಧಾನಮಂತ್ರಿಯವರು ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಮಟ್ಟದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ಹಾಗೂ ಜಿಲ್ಲಾ ಮಟ್ಟದಲ್ಲಿ ನೀಲಗಿರಿ, ಪುಲ್ವಾಮಾ ಮತ್ತು ಅನಂತ್ ನಾಗ್ ಈ ಪ್ರಶಸ್ತಿಗಳನ್ನು ಪಡೆದಿವೆ.