ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿ ನಡೆದ ʻಅಹ್ಲನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
February 13th, 11:19 pm
ಇಂದು, ನೀವು ಅಬುಧಾಬಿಯಲ್ಲಿ ಇತಿಹಾಸ ನಿರ್ಮಿಸಿದ್ದೀರಿ. ಅರಬ್ ಸಂಯುಕ್ತ ಸಂಸ್ಥಾನದ(ಯುಎಇ) ವಿವಿಧ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ನೀವು ಬಂದಿದ್ದೀರಿ, ಆದರೆ ಎಲ್ಲರ ಹೃದಯಗಳು ಪರಸ್ಪರ ಬೆಸೆದುಕೊಂಡಿವೆ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಮಿಡಿತವು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿʼ! ಪ್ರತಿ ಉಸಿರು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹ ಚಿರಾಯುವಾಗಲಿ! ಪ್ರತಿಯೊಂದು ಧ್ವನಿಯೂ ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿ! ನಾವು ಈ ಕ್ಷಣವನ್ನು ಪೂರ್ಣವಾಗಿ ಬದುಕಬೇಕು. ಇಂದು, ನಾವು ಜೀವಮಾನವಿಡೀ ನಮ್ಮೊಂದಿಗೆ ಉಳಿಯುವ ನೆನಪುಗಳನ್ನು ಸಂಗ್ರಹಿಸಬೇಕಾಗಿದೆ - ಜೀವಮಾನವಿಡೀ ನನ್ನೊಂದಿಗೆ ಉಳಿಯುವ ನೆನಪುಗಳು...ಯು.ಎ.ಇ.ಯಲ್ಲಿ ನಡೆದ ಭಾರತೀಯ ಸಮುದಾಯದ -''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಸಂವಾದ
February 13th, 08:30 pm
ಯು.ಎ.ಇ.ಯಲ್ಲಿನ ಭಾರತೀಯ ಸಮುದಾಯವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಗೌರವಾರ್ಥವಾಗಿ ಆಯೋಜಿಸಿದ ''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಯು.ಎ.ಇ.ಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಯು.ಎ.ಇ.ಯ 7 ಎಮಿರೇಟ್ಸ್ ನಾದ್ಯಂತ ಭಾರತೀಯ ಅನಿವಾಸಿ ಸಮುದಾಯ (ಡಯಾಸ್ಪೊರಾ) ಬೃಹತ್ ಪ್ರಮಾಣದಲ್ಲಿ ಭಾಗವಹಿಸುವಿಕೆ ಮತ್ತು ಎಲ್ಲಾ ಸಮುದಾಯಗಳ ಭಾರತೀಯರನ್ನು ''ಅಹ್ಲಾನ್ ಮೋದಿ'' ಕಾರ್ಯಕ್ರಮ ಒಳಗೊಂಡಿತ್ತು. ಯು.ಎ.ಇ.ಯ ಪ್ರಜೆಗಳಾದ ಅರಬಿ(ಎಮಿರಾಟಿ)ಗಳು ಸಹ ಪ್ರೇಕ್ಷಕರಾಗಿ ಒಳಗೊಂಡಿದ್ದರು.ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಗೌರವಗಳು
May 22nd, 12:14 pm
ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ರಾಷ್ಟ್ರಗಳು ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿ ಗೌರವಿಸಿವೆ. ಈ ಮನ್ನಣೆಗಳು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ದೃಷ್ಟಿಯ ಪ್ರತಿಬಿಂಬವಾಗಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತದ ಹೊರಹೊಮ್ಮುವಿಕೆಯನ್ನು ಬಲಪಡಿಸಿದೆ. ಇದು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ.