ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
January 28th, 11:30 am
ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.ಆಯುಷ್ಮಾನ್ ಭವ ಅಭಿಯಾನಕ್ಕೆ ದೊರಕಿದ ಉತ್ತಮ ಪ್ರತಿಕ್ರಿಯೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
October 16th, 09:22 pm
ಆಯುಷ್ಮಾನ್ ಭವ ಅಭಿಯಾನದ ಅಡಿಯಲ್ಲಿ 80,000 ಕ್ಕೂ ಹೆಚ್ಚು ಜನರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದು ಅಂಗಾಂಗ ದಾನ ಅಭಿಯಾನದ ಯಶಸ್ಸನ್ನು ತೋರಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.'ಏಕ್ ಭಾರತ್, ಶ್ರೇಷ್ಠ ಭಾರತ'ದ ಮನೋಭಾವವು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ: 'ಮನ್ ಕಿ ಬಾತ್' ಸಂದರ್ಭದಲ್ಲಿ ಪ್ರಧಾನಿ ಮೋದಿ
March 26th, 11:00 am
ನನ್ನ ಪ್ರಿಯ ದೇಶಬಾಂಧವರೆ. ಮನದ ಮಾತಿನಲ್ಲಿ ಬೇರೆಯವರ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಂಥ ಸಾವಿರಾರು ಜನರ ಬಗ್ಗೆ ಚರ್ಚಿಸಿದ್ದೇವೆ. ತಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂಪೂರ್ಣ ಪಿಂಚಣಿಯನ್ನೇ ಮುಡಿಪಾಗಿಟ್ಟವರು ಹಲವರಿದ್ದರೆ, ಇನ್ನೂ ಎಷ್ಟೋ ಜನರು ತಮ್ಮ ಜೀವನವದ ಸಂಪೂರ್ಣ ಗಳಿಕೆಯನ್ನು ಪರಿಸರ ಮತ್ತು ಪ್ರಾಣಿ ಪಕ್ಷಿಗಳ ಸೇವೆಗೆ ಸಮರ್ಪಿಸಿಬಿಡುತ್ತಾರೆ. ನಮ್ಮ ದೇಶದಲ್ಲಿ ಪರಮಾರ್ಥವನ್ನು ಎಷ್ಟು ಉತ್ತುಂಗದಲ್ಲಿರಿಸಿದ್ದಾರೆಂದರೆ ಬೇರೆಯವರ ಸುಖಕ್ಕಾಗಿ ತಮ್ಮ ಸರ್ವಸ್ವವನ್ನೂ ದಾನ ಮಾಡಲು ಹಿಂಜರಿಯುವುದಿಲ್ಲ. ಹಾಗಾಗಿ ಬಾಲ್ಯದಿಂದಲೂ ನಮಗೆ ಶಿಬಿ ಮತ್ತು ದಧೀಚಿಯಂತಹ ದೇಹ ದಾನ ಮಾಡಿದವರ ಕಥೆಗಳನ್ನು ಹೇಳುತ್ತಾರೆ.