ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಪ್ರಧಾನಮಂತ್ರಿ ಭೇಟಿ
December 08th, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೈಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಬೆಳಿಗ್ಗೆ 10:30 ರ ಸುಮಾರಿಗೆ ಜೈಪುರ ಪ್ರದರ್ಶನ ಮತ್ತು ಕನ್ವೆನ್ಷನ್ ಸೆಂಟರ್ (ಜೆಇಸಿಸಿ) ನಲ್ಲಿ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಇನ್ವೆಸ್ಟ್‌ಮೆಂಟ್ ಶೃಂಗಸಭೆ 2024 ಅನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ಪಾಣಿಪತ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆಗೆ ಅವರು ಎಲ್‌ಐಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಮತ್ತು ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.ದೇಶದ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 11th, 04:50 pm
ದೆಹಲಿಯಲ್ಲಿಂದು 109 ಹೊಸ ಬೆಳೆ ತಳಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಹವಾಮಾನ ಸ್ನೇಹಿ ಮತ್ತು ಹೆಚ್ಚಿನ ಇಳುವರಿಯ ತಳಿಗಳು ರೈತರ ಆದಾಯವನ್ನು ವೃದ್ಧಿಸಬಹುದಾಗಿದೆ ಎಂದೂ ಸಹ ಅವರು ತಿಳಿಸಿದ್ದಾರೆ.ಹೆಚ್ಚು ಇಳುವರಿ ನೀಡುವ, ಹವಾಮಾನಕ್ಕೆ ಚೇತರಿಸಿಕೊಳ್ಳುವ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಿದರು
August 11th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ನವದೆಹಲಿಯ ಭಾರತ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಹೆಚ್ಚು ಇಳುವರಿ ನೀಡುವ, ಹವಾಮಾನ ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಬಿಡುಗಡೆ ಮಾಡಿದರು.ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 01st, 12:31 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
January 01st, 12:30 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ದೇಶದ ಕೃಷಿ ನೀತಿಗಳಲ್ಲಿ ಸಣ್ಣ ರೈತರಿಗೆ ಈಗ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
August 09th, 12:31 pm
ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.ಪಿಎಂ-ಕಿಸಾನ್ ಯೋಜನೆಯ 9ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ
August 09th, 12:30 pm
ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.PM to release commemorative coin of Rs 75 denomination to mark the 75th Anniversary of FAO
October 14th, 11:59 am
On the occasion of 75th Anniversary of Food and Agriculture Organization (FAO) on 16th October 2020, Prime Minister Shri Narendra Modi will release a commemorative coin of Rs 75 denomination to mark the long-standing relation of India with FAO. Prime Minister will also dedicate to the Nation 17 recently developed biofortified varieties of 8 crops.