ಸಾವಯವ ಕೃಷಿಕರಾದ ಶ್ರೀಮತಿ ಪಪ್ಪಮ್ಮಾಳ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ
September 28th, 07:35 am
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಸಾವಯವ ಕೃಷಿಯಲ್ಲಿ ಅಪಾರ ಸಾಧನೆ ಮಾಡಿರುವ ರೈತ ನಾಯಕಿ ಶ್ರೀಮತಿ ಪಪ್ಪಮ್ಮಾಳ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ
August 31st, 10:39 pm
“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 31st, 10:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 03:04 pm
ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 01:09 pm
ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ
August 15th, 07:30 am
78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್‌ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.ದೇಶದ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 11th, 04:50 pm
ದೆಹಲಿಯಲ್ಲಿಂದು 109 ಹೊಸ ಬೆಳೆ ತಳಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಹವಾಮಾನ ಸ್ನೇಹಿ ಮತ್ತು ಹೆಚ್ಚಿನ ಇಳುವರಿಯ ತಳಿಗಳು ರೈತರ ಆದಾಯವನ್ನು ವೃದ್ಧಿಸಬಹುದಾಗಿದೆ ಎಂದೂ ಸಹ ಅವರು ತಿಳಿಸಿದ್ದಾರೆ.ಹೆಚ್ಚು ಇಳುವರಿ ನೀಡುವ, ಹವಾಮಾನಕ್ಕೆ ಚೇತರಿಸಿಕೊಳ್ಳುವ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಿದರು
August 11th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ನವದೆಹಲಿಯ ಭಾರತ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಹೆಚ್ಚು ಇಳುವರಿ ನೀಡುವ, ಹವಾಮಾನ ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಬಿಡುಗಡೆ ಮಾಡಿದರು.ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.ಮೋದಿ ಬದುಕಿರುವವರೆಗೂ ಎಸ್‌ಟಿ-ಎಸ್‌ಸಿ-ಒಬಿಸಿ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ಬನಸ್ಕಾಂತದಲ್ಲಿ ಪ್ರಧಾನಿ ಮೋದಿ
May 01st, 04:30 pm
ಗುಜರಾತ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಬನಸ್ಕಾಂತದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.ಪ್ರಧಾನಿ ಮೋದಿ ಅವರು ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 01st, 04:00 pm
ಗುಜರಾತ್‌ನ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.‘ಲೂಟಿ, ಜಿಂದಗಿ ಕೆ ಸಾಥ್ ಭಿ, ಜಿಂದಗಿ ಕೆ ಬಾದ್ ಭಿ’ ಎಂಬುದು ಕಾಂಗ್ರೆಸ್‌ನ ತತ್ವವಾಗಿದೆ: ಗೋವಾದಲ್ಲಿ ಪ್ರಧಾನಿ ಮೋದಿ
April 27th, 08:01 pm
2024 ರಲ್ಲಿ ಲೋಕಸಭೆ ಚುನಾವಣೆಗೆ ಮುನ್ನ, ದಕ್ಷಿಣ ಗೋವಾದಲ್ಲಿ ದೈತ್ಯಾಕಾರದ ಜನಸಮೂಹವನ್ನು ಸ್ವಾಗತಿಸುವ ನಡುವೆ ಪ್ರಧಾನಿ ಮೋದಿ ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಎರಡು ಹಂತದ ಮತದಾನದಿಂದಾಗಿ, ನೆಲಮಟ್ಟದ ಪ್ರತಿಕ್ರಿಯೆಯು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಒಂದೇ ಒಂದು ನಂಬಿಕೆಯೊಂದಿಗೆ ಅನುರಣಿಸುತ್ತದೆ ಎಂದು ಅವರು ಹೇಳಿದರು.ದಕ್ಷಿಣ ಗೋವಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ
April 27th, 08:00 pm
2024 ರಲ್ಲಿ ಲೋಕಸಭೆ ಚುನಾವಣೆಗೆ ಮುನ್ನ, ದಕ್ಷಿಣ ಗೋವಾದಲ್ಲಿ ದೈತ್ಯಾಕಾರದ ಜನಸಮೂಹವನ್ನು ಸ್ವಾಗತಿಸುವ ನಡುವೆ ಪ್ರಧಾನಿ ಮೋದಿ ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಎರಡು ಹಂತದ ಮತದಾನದಿಂದಾಗಿ, ನೆಲಮಟ್ಟದ ಪ್ರತಿಕ್ರಿಯೆಯು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಒಂದೇ ಒಂದು ನಂಬಿಕೆಯೊಂದಿಗೆ ಅನುರಣಿಸುತ್ತದೆ ಎಂದು ಅವರು ಹೇಳಿದರು.ಸಾವಯವ ಕೃಷಿಯು ಜನರ ಮತ್ತು ಭೂಮಿಯ ಆರೋಗ್ಯಕ್ಕೆ ನಿರ್ಣಾಯಕ: ಪ್ರಧಾನಮಂತ್ರಿ
January 08th, 03:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಸಮಾವೇಶ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಪ್ರತಿನಿಧಿಗಳೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ದೇಶಾದ್ಯಂತದ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
September 26th, 11:04 am
ಇಂದಿನ ರೋಜ್ಗಾರ್ ಮೇಳದಲ್ಲಿ ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಪಡೆದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನೀವೆಲ್ಲರೂ ಅಪಾರ ಪರಿಶ್ರಮದ ನಂತರ ಈ ಯಶಸ್ಸನ್ನು ಸಾಧಿಸಿದ್ದೀರಿ. ಲಕ್ಷಾಂತರ ಅಭ್ಯರ್ಥಿಗಳಿಂದ ನಿಮ್ಮನ್ನು ಆಯ್ಕೆ ಮಾಡಲಾಗಿದೆ; ಆದ್ದರಿಂದ, ಈ ಯಶಸ್ಸು ನಿಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ.ರೋಜ್ ಗಾರ್ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ
September 26th, 10:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳ ಉದ್ದೇಶಿಸಿ ಭಾಷಣ ಮಾಡಿದರು ಮತ್ತು ಹೊಸದಾಗಿ ನೇಮಕಗೊಂಡ 51,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಹೊಸದಾಗಿ ನೇಮಕಗೊಂಡರು ದೇಶಾದ್ಯಂತ ಅಂಚೆ ಇಲಾಖೆ, ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆ, ಅಣು ಇಂಧನ ಇಲಾಖೆ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ಸರ್ಕಾರದ ಹಲವು ಇಲಾಖೆಗಳು/ಸಚಿವಾಲಯಗಳಿಗೆ ಸೇರ್ಪಡೆಯಾಗಲಿದ್ದಾರೆ. ಈ ರೋಜ್ ಗಾರ್ ಮೇಳ ದೇಶಾದ್ಯಂತ 46 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಿತು.17ನೇ ʻಭಾರತೀಯ ಸಹಕಾರಿ ಕಾಂಗ್ರೆಸ್ʼ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
July 01st, 11:05 am
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಅಮಿತ್ ಶಾ ಅವರೇ, ರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ದಿಲೀಪ್ ಸಂಘಾನಿ ಅವರೇ, ಡಾ. ಚಂದ್ರಪಾಲ್ ಸಿಂಗ್ ಯಾದವ್ ಅವರೇ, ದೇಶದ ಮೂಲೆ ಮೂಲೆಯ ಸಹಕಾರ ಸಂಘಗಳ ಎಲ್ಲಾ ಸದಸ್ಯರೇ, ನಮ್ಮ ರೈತ ಸಹೋದರ ಸಹೋದರಿಯರೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ನಿಮ್ಮೆಲ್ಲರಿಗೂ 17ನೇ ಭಾರತೀಯ ಸಹಕಾರಿ ಸಮ್ಮೇಳನದ ಅಂಗವಾಗಿ ಹೃತ್ಪೂರ್ವಕ ಅಭಿನಂದನೆಗಳು. ಈ ಸಮ್ಮೇಳನಕ್ಕೆ ನಾನು ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ!ಪ್ರಧಾನಮಂತ್ರಿಯವರು ನವದೆಹಲಿಯಲ್ಲಿ 17ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದರು
July 01st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂತಾರಾಷ್ಟ್ರೀಯ ಸಹಕಾರಿ ದಿನಾಚರಣೆಯ ಸಂದರ್ಭದಲ್ಲಿ ನವದೆಹಲಿಯ ಪ್ರಗತಿ ಮೈದಾನದಲ್ಲಿ 17ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದರು. 17 ನೇ ಭಾರತೀಯ ಸಹಕಾರಿ ಕಾಂಗ್ರೆಸ್ನ ಮುಖ್ಯ ವಿಷಯ ‘ಅಮೃತ ಕಾಲ: ಶಕ್ತಿಶಾಲಿ ಭಾರತಕ್ಕಾಗಿ ಸಹಕಾರದ ಮೂಲಕ ಸಮೃದ್ಧಿʼ. ಪ್ರಧಾನಿಯವರು ಸಹಕಾರಿ ಮಾರ್ಕೆಟಿಂಗ್ ಮತ್ತು ಸಹಕಾರ ವಿಸ್ತರಣೆ ಮತ್ತು ಸಲಹಾ ಸೇವೆಗಳ ಪೋರ್ಟಲ್ಗಾಗಿ ಇ-ಕಾಮರ್ಸ್ ವೆಬ್ಸೈಟ್ನ ಇ-ಪೋರ್ಟಲ್ಗಳಿಗೂ ಚಾಲನೆ ನೀಡಿದರು.ನಾಗಾಲ್ಯಾಂಡ್‌ನ ಸಂಪದ್ಭರಿತ ಸಾವಯವ ಉತ್ಪನ್ನಗಳನ್ನು ಕಂಡು ಸಂತಸವಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ
June 12th, 06:42 pm
ನಾಗಾಲ್ಯಾಂಡ್‌ನ ಸಮೃದ್ಧ ಸಂಪದ್ಭರಿತ ಸಾವಯವ ಉತ್ಪನ್ನಗಳು ಪ್ರಕೃತಿ ಮತ್ತು ಸಂಸ್ಕೃತಿಯ ನಡುವಿನ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.