ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ (ಸಿಎನ್ ಸಿಐ)ನ ಎರಡನೇ ಕ್ಯಾಂಪಸ್ ಉದ್ಘಾಟಿಸಿ ಪ್ರಧಾನಮಂತ್ರಿ ಅವರ ಭಾಷಣ
January 07th, 01:01 pm
ನಮಸ್ಕಾರ, ಪಶ್ಚಿಮ ಬಂಗಾಳದ ಗೌರವಾನ್ವಿತ ಮುಖ್ಯಮಂತ್ರಿ ಕುಮಾರಿ ಮಮತಾ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಮನ್ಸುಖ್ ಮಾಂಡವಿಯಾ ಜಿ, ಸುಭಾಸ್ ಸರ್ಕಾರ್ ಜಿ. ಶಾಂತನು ಠಾಕೂರ್ ಜಿ, ಜಾನ್ ಬಾರ್ಲಾ ಜಿ ಮತ್ತು ನಿಸಿತ್ ಪ್ರಮಾಣಿಕ್ ಜಿ, ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜಿ. ಸಿ.ಎನ್.ಐ.ಸಿ ಕೋಲ್ಕತ್ತಾದ ಆಡಳಿತ ಮಂಡಳಿ, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಪರಿಶ್ರಮಪಡುವ ಮಿತ್ರರೇ, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ….!ಕೋಲ್ಕತ್ತಾದ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
January 07th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೋಲ್ಕತ್ತಾದ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕುಮಾರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ, ಡಾ. ಸುಭಾಷ್ ಸರ್ಕಾರ್, ಶ್ರೀ ಶಂತನು ಠಾಕೂರ್, ಶ್ರೀ ಜಾನ್ ಬಾರ್ಲಾ ಮತ್ತು ಶ್ರೀ ನಿಸಿತ್ ಪ್ರಮಾಣಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ದೇಶದಾದ್ಯಂತ ಕೋವಿಡ್-19, ಓಮೈಕ್ರಾನ್ ಸ್ಥಿತಿ ಮತ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 23rd, 10:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋವಿಡ್-19 ಮತ್ತು ಒಮೈಕ್ರಾನ್ ಸ್ಥಿತಿ ಗತಿ, ಹೊಸ ರೂಪಾಂತರಿ (ವಿ.ಓ.ಸಿ.)ಮತ್ತು ಅದರ ಸಮಸ್ಯೆ, ಕೋವಿಡ್ -19 ನಿಯಂತ್ರಣ ಮತ್ತು ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆ ಕ್ರಮಗಳು, ಔಷಧಗಳ ಲಭ್ಯತೆ ಸೇರಿದಂತೆ ಆರೋಗ್ಯ ಮೂಲಸೌಕರ್ಯಗಳ ಬಲವರ್ಧನೆ, ಆಮ್ಲಜನಕ ಸಿಲಿಂಡರ್ ಗಳು ಮತ್ತು ಸಾಂದ್ರಕಗಳು, ವೆಂಟಿಲೇಟರ್ ಗಳು, ಪಿ.ಎಸ್.ಎ. ಘಟಕಗಳು, ಐ.ಸಿ.ಯು/ಆಮ್ಲಜನಕ ಸೌಲಭ್ಯದ ಹಾಸಿಗೆಗಳು, ಮಾನವ ಸಂಪನ್ಮೂಲಗಳು, ಐಟಿ ಮಧ್ಯಸ್ಥಿಕೆಗಳು ಮತ್ತು ಲಸಿಕೆ ಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಪಿ.ಎಂ. ಕೇರ್ಸ್ ನಿಂದ ನಿರ್ಮಿಸಿರುವ ಪಿಎಸ್ಎ ಆಮ್ಲಜನಕ ಘಟಕಗಳನ್ನು ಅಕ್ಟೋಬರ್ 7 ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ
October 06th, 02:54 pm
35 ಜಿಲ್ಲೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಿಎಂ ಕೇರ್ಸ್ ನಿಂದ ನಿರ್ಮಿಸಿರುವ ಒತ್ತಡ ಹೀರಿಕೊಳ್ಳುವ [ಪಿಎಸ್ಎ] ಆಮ್ಲಜನಕ ಘಟಕಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. 2021 ರ ಅಕ್ಟೋಬರ್ 7 ರಂದು ಪ್ರಧಾನಮಂತ್ರಿ ಅವರು ಉತ್ತರಾಖಂಡದ ರಿಷಿಕೇಶ್ ದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಇವುಗಳನ್ನು ಉದ್ಘಾಟಿಸಲಿದ್ದಾರೆ. ಈ ಮೂಲಕ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಪಿಎಸ್ಎ ಆಮ್ಲಜನಕ ಘಟಕಗಳನ್ನು ಹೊಂದಿದಂತಾಗಲಿದೆ. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 37ನೇ ಪ್ರಗತಿ ಸಭೆ
August 25th, 07:55 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ 37ನೇ ಆವೃತ್ತಿಯ ಪ್ರಗತಿ ಸಭೆ ನಡೆಯಿತು. ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ಸಕ್ರಿಯ ಮತ್ತು ಕ್ರಿಯಾಶೀಲ ಆಡಳಿತ, ಯೋಜನೆ ಮತ್ತು ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನ ಕುರಿತು ಚರ್ಚಿಸುವ ಬಹು-ಮಾದರಿ ವೇದಿಕೆ ಇದಾಗಿದೆ.ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಟೀಕಾ: ಪಿಎಂ ಮೋದಿ ಅವರ ತಂತ್ರವನ್ನು ನಾವು ಮುಂದುವರಿಸಬೇಕಾಗಿದೆ
July 16th, 12:07 pm
ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳದ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿ ಕೋವಿಡ್ ಸಂಬಂಧಿತ ಪರಿಸ್ಥಿತಿ ಕುರಿತು ಚರ್ಚಿಸಿದರು. ಮೈಕ್ರೋ-ಕಂಟೈನ್‌ಮೆಂಟ್ ವಲಯಗಳ ಮೇಲೆ ವಿಶೇಷ ಗಮನ ಹರಿಸುವಾಗ ನಾವು ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಟೀಕಾ (ವ್ಯಾಕ್ಸಿನೇಷನ್) ಕಾರ್ಯತಂತ್ರವನ್ನು ಮುಂದುವರಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕೋವಿಡ್ ಪರಿಸ್ಥಿತಿಯ ಕುರಿತಂತೆ ಚರ್ಚಿಸಲು 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
July 16th, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋವಿಡ್ ಸಂಬಂಧಿತ ಪರಿಸ್ಥಿತಿಯ ಕುರಿತು ಚರ್ಚಿಸಲು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವರು, ಆರೋಗ್ಯ ಸಚಿವರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಕೋವಿಡ್ ಎದುರಿಸಲು ಎಲ್ಲ ಸಾಧ್ಯ ನೆರವು ಒದಗಿಸಿದ ಪ್ರಧಾನಮಂತ್ರಿಯವರಿಗೆ ಮುಖ್ಯಮಂತ್ರಿಗಳು ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಸೋಂಕು ತಡೆಯಲು ಕೈಗೊಂಡಿರುವ ಕ್ರಮಗಳು ಮತ್ತು ಲಸಿಕಾ ಕಾರ್ಯಕ್ರಮದ ಪ್ರಗತಿಯ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಲಸಿಕಾ ಕಾರ್ಯತಂತ್ರದ ಕುರಿತಂತೆ ತಮ್ಮ ಪ್ರತಿಕ್ರಿಯೆಯನ್ನೂ ನೀಡಿದರು.ಈಶಾನ್ಯ ರಾಜ್ಯಗಳಲ್ಲಿ ಕೋವಿಡ್ -19 ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಪ್ರಧಾನ ಮಂತ್ರಿ ಅವರ ಸಂವಾದ
July 13th, 03:53 pm
ಮೊದಲಿಗೆ ನಾನು ಹೊಸ ಜವಾಬ್ದಾರಿಗಳನ್ನು ಹೊಂದಿರುವ ವ್ಯಕ್ತಿಗಳನ್ನು ಪರಿಚಯಿಸುತ್ತೇನೆ, ಯಾಕೆಂದರೆ ಇದು ನಿಮಗೂ ಉತ್ತಮ. ಶ್ರೀ ಮನ್ ಸುಖ್ ಭಾಯಿ ಮಾಂಡವೀಯ, ಅವರು ಇತ್ತೀಚೆಗಷ್ಟೇ ನಮ್ಮ ಆರೋಗ್ಯ ಸಚಿವರಾಗಿದ್ದಾರೆ. ಅವರ ಜೊತೆ ಕುಳಿತುಕೊಂಡಿರುವ ಡಾ. ಭಾರತೀ ಪವಾರ್ ಜೀ ಅವರು ಎಂ.ಒ.ಎಸ್. ಆಗಿದ್ದಾರೆ. ಅವರು ನಮ್ಮ ಆರೋಗ್ಯ ಇಲಾಖೆಯಲ್ಲಿ ಎಂ.ಒ.ಎಸ್. ಆಗಿ ಕಾರ್ಯ ನಿರ್ವಹಿಸುತ್ತಾರೆ. ನಿಮ್ಮೊಂದಿಗೆ ನಿಯಮಿತವಾಗಿ ವ್ಯವಹರಿಸುವ ಇನ್ನಿಬ್ಬರು ಇಲ್ಲಿದ್ದಾರೆ. ಅವರೆಂದರೆ ಡಿ.ಒ.ಎನ್.ಇ.ಆರ್. ಸಚಿವಾಲಯದ ಹೊಸ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ ಮತ್ತು ಅವರೊಂದಿಗೆ ಕುಳಿತಿರುವ ಎಂ.ಒ.ಎಸ್. ಶ್ರೀ ಬಿ.ಎಲ್.ವರ್ಮಾ ಜೀ. ಈ ಪರಿಚಯ ನಿಮಗೂ ಅವಶ್ಯಕ.ಕೋವಿಡ್-19 ಪರಿಸ್ಥಿತಿ ಕುರಿತು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
July 13th, 01:02 pm
ಕೋವಿಡ್-19 ಪರಿಸ್ಥಿತಿ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಇಂದು ಸಂವಾದ ನಡೆಸಿದರು. ಸಂವಾದದಲ್ಲಿ ನಾಗಾಲ್ಯಾಂಡ್, ತ್ರಿಪುರ, ಸಿಕ್ಕಿಂ, ಮೇಘಾಲಯ, ಮಿಜೋರಾಂ, ಅರುಣಾಚಲ ಪ್ರದೇಶ, ಮಣೀಪುರ ಮತ್ತು ಅಸ್ಸಾಂ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ಕೋವಿಡ್ ಸಾಂಕ್ರಾಮಿಕ ನಿಭಾಯಿಸುವಲ್ಲಿ ಕೈಗೊಂಡ ಸಕಾಲಿಕ ಕ್ರಮಕ್ಕೆ ಧನ್ಯವಾದ ಸಲ್ಲಿಸಿದರು. ಈಶಾನ್ಯ ರಾಜ್ಯಗಳ ಬಗ್ಗೆ ವಿಶೇಷ ಪ್ರೀತಿ ಮತ್ತು ಕಾಳಜಿ ತೋರಿದ ಪ್ರಧಾನಮಂತ್ರಿ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು. ಸಂವಾದದಲ್ಲಿ ಮುಖ್ಯಮಂತ್ರಿಗಳಲ್ಲದೇ ಕೇಂದ್ರ ಗೃಹ, ರಕ್ಷಣೆ, ಆರೋಗ್ಯ, ಈಶಾನ್ಯ ರಾಜ್ಯಗಳ ಅಬಿವೃದ್ಧಿ ಕುರಿತ ಸಚಿವಾಲಯ – ಡಿ.ಒ.ಎನ್.ಇ.ಆರ್ ಮತ್ತು ಇತರೆ ಸಚಿವರು ಸಹ ಭಾಗವಹಿಸಿದ್ದರು.ದೇಶಾದ್ಯಂತ ಆಮ್ಲಜನಕ ಪೂರೈಕೆ ಹೆಚ್ಚಿಸಲು ಪ್ರಧಾನ ಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಪರಾಮರ್ಶೆ ಸಭೆ
July 09th, 01:10 pm
ದೇಶಾದ್ಯಂತ ಆಮ್ಲಜನಕ ಉತ್ಪಾದನೆ, ಪೂರೈಕೆ ಮತ್ತು ಲಭ್ಯತೆ ಮತ್ತು ಘಟಕಗಳ ಸ್ಥಾಪನೆಯ ಪ್ರಗತಿ ಕುರಿತು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿಂದು ಉನ್ನತ ಮಟ್ಟದ ಪರಾಮರ್ಶೆ ಸಭೆ ನಡೆಯಿತು.ಕೊರೋನ ಅವಧಿಯು ಕೌಶಲ್ಯ, ಮರು ಕೌಶಲ್ಯ ಮತ್ತು ಕೌಶಲ್ಯದ ಮಹತ್ವವನ್ನು ಸಾಬೀತುಪಡಿಸಿದೆ: ಪ್ರಧಾನಿ
June 18th, 09:45 am
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೋವಿಡ್ 19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮವನ್ನು’ ಇಂದು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ನಾವು ದೇಶದಲ್ಲಿ 1 ಲಕ್ಷ ಮುಂಚೂಣಿ ಕಾರ್ಮಿಕರನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಪ್ರಾರಂಭದೊಂದಿಗೆ, ಇದು 26 ರಾಜ್ಯಗಳಲ್ಲಿ ವ್ಯಾಪಿಸಿರುವ 111 ತರಬೇತಿ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ.ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗಾಗಿ “ವೈಯಕ್ತೀಕರಿಸಿದ ಕ್ರಾಶ್ ಕೋರ್ಸ್ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ
June 18th, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಕೋವಿಡ್-19 ಮುಂಚೂಣಿ ಕಾರ್ಮಿಕರಿಗಾಗಿ `ವೈಯಕ್ತೀಕರಿಸಿದ ಕ್ರ್ಯಾಶ್ ಕೋರ್ಸ್’ ಕಾರ್ಯಕ್ರಮಕ್ಕೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ತರಬೇತಿ ಕಾರ್ಯಕ್ರಮವನ್ನು 26 ರಾಜ್ಯಗಳಲ್ಲಿರುವ 111 ತರಬೇತಿ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಉಪಕ್ರಮದಲ್ಲಿ ಸುಮಾರು ಒಂದು ಲಕ್ಷ ಮುಂಚೂಣಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಸೇರಿದಂತೆ ಅನೇಕ ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ತಜ್ಞರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.ಸಿಎಸ್ಐಆರ್ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
June 04th, 10:28 am
ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಸ್‌ಐಆರ್ ಸೊಸೈಟಿಯ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಹಿಸಿದ್ದರು. ಕೊರೋನಾ ಸಾಂಕ್ರಾಮಿಕ ಈ ಶತಮಾನದ ಅತಿದೊಡ್ಡ ಸವಾಲಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ಮೋದಿ ಹೇಳಿದರು . ಆದರೆ ಹಿಂದೆ ದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾದಾಗಲೆಲ್ಲಾ ವಿಜ್ಞಾನವು ಉತ್ತಮ ಭವಿಷ್ಯದ ಹಾದಿಯನ್ನು ಸಿದ್ಧಪಡಿಸಿದೆ.ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಸಿಎಸ್ಐಆರ್ ಸೊಸೈಟಿಯ ಸಭೆ
June 04th, 10:27 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್ಐಆರ್) ಸೊಸೈಟಿಯ ಸಭೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು.ಕಳೆದ 7 ವರ್ಷಗಳಲ್ಲಿ, ನಾವೆಲ್ಲರೂ 'ಟೀಮ್ ಇಂಡಿಯಾ' ಆಗಿ ಕೆಲಸ ಮಾಡಿದ್ದೇವೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
May 30th, 11:30 am
ಸ್ನೇಹಿತರೆ, 2 ನೇ ಅಲೆ ಬಂದಾಗ ಇದ್ದಕ್ಕಿದ್ದಂತೆ ಆಮ್ಲಜನಕದ ಬೇಡಿಕೆ ಬಹಳಷ್ಟು ಹೆಚ್ಚಾಯಿತು. ಇದು ಬಹುದೊಡ್ಡ ಸವಾಲಾಗಿತ್ತು. ವೈದ್ಯಕೀಯ ಆಮ್ಲಜನಕವನ್ನು ದೇಶದ ದೂರ ಪ್ರದೇಶಗಳಿಗೆ ತಲುಪಿಸುವುದು ಬಹುದೊಡ್ಡ ಸವಾಲಾಗಿತ್ತು. ಆಮ್ಲಜನಕದ ಟ್ಯಾಂಕರ್ ಗಳು ಹೆಚ್ಚು ವೇಗವಾಗಿ ತಲುಪಬೇಕು. ಸ್ವಲ್ಪ ಅಲಕ್ಷವಾದರೂ ವಿಸ್ಪೋಟವಾಗುವಂತಹ ಆತಂಕವಿರುತ್ತದೆ. ಔದ್ಯಮಿಕ ಆಮ್ಲಜನಕವನ್ನು ಉತ್ಪಾದಿಸುವ ಅನೇಕ ಘಟಕಗಳು ದೇಶದ ಪೂರ್ವಭಾಗದಲ್ಲಿವೆ. ಅಲ್ಲಿಂದ ದೇಶದ ಇತರ ಭಾಗಗಳಿಗೆ ಆಮ್ಲಜನಕ ಸರಬರಾಜು ಮಾಡಲು ಕೂಡ ಹಲವು ದಿನಗಳು ಬೇಕಾಗುತ್ತವೆ.Continuous efforts are being made to increase the supply of Corona vaccine on a very large scale: PM Modi
May 18th, 11:40 am
Prime Minister Modi through video conference interacted with field officials from States and Districts regarding their experience in handling the Covid-19 pandemic. During the interaction, the officials thanked the Prime Minister for leading the fight against the second wave of Covid from the front.ಕೋವಿಡ್ ಪರಿಸ್ಥಿತಿಯ ಬಗ್ಗೆ ದೇಶಾದ್ಯಂತದ ವೈದ್ಯರೊಂದಿಗೆ ಪ್ರಧಾನಿ ಸಂವಾದ
May 18th, 11:39 am
ಕೋವಿಡ್ ಪರಿಸ್ಥಿತಿ ಕುರಿತು ದೇಶಾದ್ಯಂತದ ವೈದ್ಯರ ಗುಂಪಿನೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.ಕೋವಿಡ್ ಪರಿಸ್ಥಿತಿಯ ಬಗ್ಗೆ ದೇಶಾದ್ಯಂತದ ವೈದ್ಯರೊಂದಿಗೆ ಪ್ರಧಾನಿ ಸಂವಾದ
May 17th, 07:42 pm
ಕೋವಿಡ್ ಪರಿಸ್ಥಿತಿ ಕುರಿತು ದೇಶಾದ್ಯಂತದ ವೈದ್ಯರ ಗುಂಪಿನೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.ಕೋವಿಡ್ ಮತ್ತು ಲಸಿಕೆ ಸಂಬಂಧಿತ ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ
May 15th, 02:42 pm
ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕೋವಿಡ್, ಪರೀಕ್ಷೆ, ಆಮ್ಲಜನಕ ಲಭ್ಯತೆ, ಆರೋಗ್ಯ ಆರೈಕೆ ಮೂಲಸೌಕರ್ಯ, ಲಸಿಕೆ ಮಾರ್ಗಸೂಚಿಯ ಪರಿಸ್ಥಿತಿ ಕುರಿತಂತೆ ಅಧಿಕಾರಿಗಳು ಸವಿವರವಾದ ಪ್ರಾತ್ಯಕ್ಷಿಕೆ ನೀಡಿದರು. ಪ್ರಧಾನಮಂತ್ರಿಯವರು ಸ್ಥಳೀಯ ಕಂಟೈನ್ಮೆಂಟ್ ಕಾರ್ಯತಂತ್ರಗಳು ಅದರಲ್ಲೂ ಜಿಲ್ಲೆಗಳಲ್ಲಿ ಟಿಪಿಆರ್ ಹೆಚ್ಚಿರುವ ರಾಜ್ಯಗಳಲ್ಲಿ ಈ ಹೊತ್ತಿನ ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು.India won't lose courage. We will fight and win: PM Modi
May 14th, 11:04 am
Prime Minister Shri Narendra Modi released 8th instalment of financial benefit of Rs 2,06,67,75,66,000 to 9,50,67,601 beneficiary farmers under Pradhan Mantri Kisan Samman Nidhi (PM-KISAN) scheme today via video conferencing. Prime Minister also interacted with farmer beneficiaries during the event. Union Agriculture Minister was also present on the occasion.