ಪಿ.ಎಂ. ಕೇರ್ಸ್ ನಿಂದ ನಿರ್ಮಿಸಿರುವ ಪಿಎಸ್ಎ ಆಮ್ಲಜನಕ ಘಟಕಗಳನ್ನು ಅಕ್ಟೋಬರ್ 7 ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ
October 06th, 02:54 pm
35 ಜಿಲ್ಲೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಿಎಂ ಕೇರ್ಸ್ ನಿಂದ ನಿರ್ಮಿಸಿರುವ ಒತ್ತಡ ಹೀರಿಕೊಳ್ಳುವ [ಪಿಎಸ್ಎ] ಆಮ್ಲಜನಕ ಘಟಕಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. 2021 ರ ಅಕ್ಟೋಬರ್ 7 ರಂದು ಪ್ರಧಾನಮಂತ್ರಿ ಅವರು ಉತ್ತರಾಖಂಡದ ರಿಷಿಕೇಶ್ ದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಇವುಗಳನ್ನು ಉದ್ಘಾಟಿಸಲಿದ್ದಾರೆ. ಈ ಮೂಲಕ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಪಿಎಸ್ಎ ಆಮ್ಲಜನಕ ಘಟಕಗಳನ್ನು ಹೊಂದಿದಂತಾಗಲಿದೆ. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಈಶಾನ್ಯ ರಾಜ್ಯಗಳಲ್ಲಿ ಕೋವಿಡ್ -19 ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಪ್ರಧಾನ ಮಂತ್ರಿ ಅವರ ಸಂವಾದ
July 13th, 03:53 pm
ಮೊದಲಿಗೆ ನಾನು ಹೊಸ ಜವಾಬ್ದಾರಿಗಳನ್ನು ಹೊಂದಿರುವ ವ್ಯಕ್ತಿಗಳನ್ನು ಪರಿಚಯಿಸುತ್ತೇನೆ, ಯಾಕೆಂದರೆ ಇದು ನಿಮಗೂ ಉತ್ತಮ. ಶ್ರೀ ಮನ್ ಸುಖ್ ಭಾಯಿ ಮಾಂಡವೀಯ, ಅವರು ಇತ್ತೀಚೆಗಷ್ಟೇ ನಮ್ಮ ಆರೋಗ್ಯ ಸಚಿವರಾಗಿದ್ದಾರೆ. ಅವರ ಜೊತೆ ಕುಳಿತುಕೊಂಡಿರುವ ಡಾ. ಭಾರತೀ ಪವಾರ್ ಜೀ ಅವರು ಎಂ.ಒ.ಎಸ್. ಆಗಿದ್ದಾರೆ. ಅವರು ನಮ್ಮ ಆರೋಗ್ಯ ಇಲಾಖೆಯಲ್ಲಿ ಎಂ.ಒ.ಎಸ್. ಆಗಿ ಕಾರ್ಯ ನಿರ್ವಹಿಸುತ್ತಾರೆ. ನಿಮ್ಮೊಂದಿಗೆ ನಿಯಮಿತವಾಗಿ ವ್ಯವಹರಿಸುವ ಇನ್ನಿಬ್ಬರು ಇಲ್ಲಿದ್ದಾರೆ. ಅವರೆಂದರೆ ಡಿ.ಒ.ಎನ್.ಇ.ಆರ್. ಸಚಿವಾಲಯದ ಹೊಸ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ ಮತ್ತು ಅವರೊಂದಿಗೆ ಕುಳಿತಿರುವ ಎಂ.ಒ.ಎಸ್. ಶ್ರೀ ಬಿ.ಎಲ್.ವರ್ಮಾ ಜೀ. ಈ ಪರಿಚಯ ನಿಮಗೂ ಅವಶ್ಯಕ.ಕೋವಿಡ್-19 ಪರಿಸ್ಥಿತಿ ಕುರಿತು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
July 13th, 01:02 pm
ಕೋವಿಡ್-19 ಪರಿಸ್ಥಿತಿ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಇಂದು ಸಂವಾದ ನಡೆಸಿದರು. ಸಂವಾದದಲ್ಲಿ ನಾಗಾಲ್ಯಾಂಡ್, ತ್ರಿಪುರ, ಸಿಕ್ಕಿಂ, ಮೇಘಾಲಯ, ಮಿಜೋರಾಂ, ಅರುಣಾಚಲ ಪ್ರದೇಶ, ಮಣೀಪುರ ಮತ್ತು ಅಸ್ಸಾಂ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ಕೋವಿಡ್ ಸಾಂಕ್ರಾಮಿಕ ನಿಭಾಯಿಸುವಲ್ಲಿ ಕೈಗೊಂಡ ಸಕಾಲಿಕ ಕ್ರಮಕ್ಕೆ ಧನ್ಯವಾದ ಸಲ್ಲಿಸಿದರು. ಈಶಾನ್ಯ ರಾಜ್ಯಗಳ ಬಗ್ಗೆ ವಿಶೇಷ ಪ್ರೀತಿ ಮತ್ತು ಕಾಳಜಿ ತೋರಿದ ಪ್ರಧಾನಮಂತ್ರಿ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು. ಸಂವಾದದಲ್ಲಿ ಮುಖ್ಯಮಂತ್ರಿಗಳಲ್ಲದೇ ಕೇಂದ್ರ ಗೃಹ, ರಕ್ಷಣೆ, ಆರೋಗ್ಯ, ಈಶಾನ್ಯ ರಾಜ್ಯಗಳ ಅಬಿವೃದ್ಧಿ ಕುರಿತ ಸಚಿವಾಲಯ – ಡಿ.ಒ.ಎನ್.ಇ.ಆರ್ ಮತ್ತು ಇತರೆ ಸಚಿವರು ಸಹ ಭಾಗವಹಿಸಿದ್ದರು.ಕೊರೋನ ಅವಧಿಯು ಕೌಶಲ್ಯ, ಮರು ಕೌಶಲ್ಯ ಮತ್ತು ಕೌಶಲ್ಯದ ಮಹತ್ವವನ್ನು ಸಾಬೀತುಪಡಿಸಿದೆ: ಪ್ರಧಾನಿ
June 18th, 09:45 am
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೋವಿಡ್ 19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮವನ್ನು’ ಇಂದು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ನಾವು ದೇಶದಲ್ಲಿ 1 ಲಕ್ಷ ಮುಂಚೂಣಿ ಕಾರ್ಮಿಕರನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಪ್ರಾರಂಭದೊಂದಿಗೆ, ಇದು 26 ರಾಜ್ಯಗಳಲ್ಲಿ ವ್ಯಾಪಿಸಿರುವ 111 ತರಬೇತಿ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ.ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗಾಗಿ “ವೈಯಕ್ತೀಕರಿಸಿದ ಕ್ರಾಶ್ ಕೋರ್ಸ್ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ
June 18th, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಕೋವಿಡ್-19 ಮುಂಚೂಣಿ ಕಾರ್ಮಿಕರಿಗಾಗಿ `ವೈಯಕ್ತೀಕರಿಸಿದ ಕ್ರ್ಯಾಶ್ ಕೋರ್ಸ್’ ಕಾರ್ಯಕ್ರಮಕ್ಕೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ತರಬೇತಿ ಕಾರ್ಯಕ್ರಮವನ್ನು 26 ರಾಜ್ಯಗಳಲ್ಲಿರುವ 111 ತರಬೇತಿ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಉಪಕ್ರಮದಲ್ಲಿ ಸುಮಾರು ಒಂದು ಲಕ್ಷ ಮುಂಚೂಣಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಸೇರಿದಂತೆ ಅನೇಕ ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ತಜ್ಞರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.Continuous efforts are being made to increase the supply of Corona vaccine on a very large scale: PM Modi
May 18th, 11:40 am
Prime Minister Modi through video conference interacted with field officials from States and Districts regarding their experience in handling the Covid-19 pandemic. During the interaction, the officials thanked the Prime Minister for leading the fight against the second wave of Covid from the front.ಕೋವಿಡ್ ಪರಿಸ್ಥಿತಿಯ ಬಗ್ಗೆ ದೇಶಾದ್ಯಂತದ ವೈದ್ಯರೊಂದಿಗೆ ಪ್ರಧಾನಿ ಸಂವಾದ
May 18th, 11:39 am
ಕೋವಿಡ್ ಪರಿಸ್ಥಿತಿ ಕುರಿತು ದೇಶಾದ್ಯಂತದ ವೈದ್ಯರ ಗುಂಪಿನೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.ಕೋವಿಡ್ ಮತ್ತು ಲಸಿಕೆ ಸಂಬಂಧಿತ ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ
May 15th, 02:42 pm
ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕೋವಿಡ್, ಪರೀಕ್ಷೆ, ಆಮ್ಲಜನಕ ಲಭ್ಯತೆ, ಆರೋಗ್ಯ ಆರೈಕೆ ಮೂಲಸೌಕರ್ಯ, ಲಸಿಕೆ ಮಾರ್ಗಸೂಚಿಯ ಪರಿಸ್ಥಿತಿ ಕುರಿತಂತೆ ಅಧಿಕಾರಿಗಳು ಸವಿವರವಾದ ಪ್ರಾತ್ಯಕ್ಷಿಕೆ ನೀಡಿದರು. ಪ್ರಧಾನಮಂತ್ರಿಯವರು ಸ್ಥಳೀಯ ಕಂಟೈನ್ಮೆಂಟ್ ಕಾರ್ಯತಂತ್ರಗಳು ಅದರಲ್ಲೂ ಜಿಲ್ಲೆಗಳಲ್ಲಿ ಟಿಪಿಆರ್ ಹೆಚ್ಚಿರುವ ರಾಜ್ಯಗಳಲ್ಲಿ ಈ ಹೊತ್ತಿನ ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು.