ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
July 30th, 11:30 am
'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.2ನೇ ಭಾರತ ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮಾನ್ಯ ಸ್ಕಾಟ್ ಮಾರಿಸನ್
March 21st, 06:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮಾನ್ಯ ಸ್ಕಾಟ್ ಮಾರಿಸನ್ ಅವರಿಂದು 2ನೇ ಭಾರತ- ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆ ನಡೆಸಿದರು, ಈ ವೇಳೆ, ಅವರು ಎರಡೂ ದೇಶಗಳ ನಡುವಿನ ಬಹುಮುಖಿ ಬಾಂಧವ್ಯದ ಪರಾಮರ್ಶೆ ನಡೆಸಿ, ಪ್ರಾದೇಶಿಕ ಮತ್ತು ಜಾಗತಿಕ ಬೆಳೆವಣಿಗೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು.ಯುವ ಕಲಾವಿದರ ವರ್ಣ ಚಿತ್ರಗಳು ಮತ್ತು ಸಾರ್ವಜನಿಕ ಆರೋಗ್ಯ ಕುರಿತ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
August 26th, 06:02 pm
ಬೆಂಗಳೂರಿನ ವಿದ್ಯಾರ್ಥಿ ಸ್ಟೀವನ್ ಹ್ಯಾರೀಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪತ್ರ ಬರೆದು ವರ್ಣ ಚಿತ್ರಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 20 ವರ್ಷದ ಯುವ ಕಲಾವಿದ ಪ್ರಧಾನಮಂತ್ರಿ ಅವರ ಎರಡು ಸುಂದರ ವರ್ಣ ಭಾವಚಿತ್ರಗಳನ್ನು ರಚಿಸಿ, ಜತೆಗೆ ಪತ್ರವೊಂದನ್ನು ಪ್ರಧಾನಮಂತ್ರಿ ಅವರಿಗೆ ಕಳುಹಿಸಿದ್ದರು. ಪ್ರಧಾನಮಂತ್ರಿ ಅವರು ಉತ್ತೇಜನ ಮತ್ತು ಪ್ರಶಂಸೆಯೊಂದಿಗೆ ಅವರಿಗೆ ಉತ್ತರ ನೀಡಿದ್ದಾರೆ.