ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ

July 26th, 09:30 am

ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು

July 26th, 09:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್‌ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.

ಪಾಕಿಸ್ತಾನದ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಶೆಹಬಾಜ್ ಷರೀಫ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

March 05th, 10:34 am

ಪಾಕಿಸ್ತಾನದ ಪ್ರಧಾನಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಕಾಂಗ್ರೆಸ್ ಮತಬ್ಯಾಂಕ್‌ಗಾಗಿ ಭಯೋತ್ಪಾದನೆಯನ್ನು ರಕ್ಷಿಸಿದೆ: ಕರ್ನಾಟಕದ ಬಳ್ಳಾರಿಯಲ್ಲಿ ಪ್ರಧಾನಿ ಮೋದಿ

May 05th, 07:38 pm

ಬಳ್ಳಾರಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇರಳದಲ್ಲಿ ನಡೆಯುತ್ತಿರುವ ಭಯೋತ್ಪಾದಕರ ಸಂಚುಗಳ ಬಗ್ಗೆಯೂ ಚರ್ಚಿಸಿದ ಅವರು, ಸಮಾಜಕ್ಕೆ ಉಂಟು ಮಾಡುವ ವಿನಾಶದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಂತಹ ಪಿತೂರಿಗಳನ್ನು ಆಧರಿಸಿದ ‘ದಿ ಕೇರಳ ಸ್ಟೋರಿ’ ಎಂಬ ಚಿತ್ರವನ್ನು ಅವರು ಉಲ್ಲೇಖಿಸಿದ್ದಾರೆ. 'ದಿ ಕೇರಳ ಸ್ಟೋರಿ' ಭಯೋತ್ಪಾದನೆಯ ಕೊಳಕು ಸತ್ಯವನ್ನು ತೋರಿಸುತ್ತದೆ ಮತ್ತು ಭಯೋತ್ಪಾದಕರ ವಿನ್ಯಾಸವನ್ನು ಬಹಿರಂಗಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಭಯೋತ್ಪಾದನೆ ಮತ್ತು ಭಯೋತ್ಪಾದನಾ ಪ್ರವೃತ್ತಿಯ ಚಿತ್ರಣವನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಕಾಂಗ್ರೆಸ್ ಮತ ಬ್ಯಾಂಕ್‌ಗಾಗಿ ಭಯೋತ್ಪಾದನೆಯನ್ನು ರಕ್ಷಿಸಿದೆ.

ಪ್ರಧಾನಿ ಮೋದಿ ಕರ್ನಾಟಕದ ಬಳ್ಳಾರಿ ಮತ್ತು ತುಮಕೂರಿನಲ್ಲಿ ಪ್ರಚಾರ ನಡೆಸುತ್ತಿದ್ದಾರೆ

May 05th, 02:00 pm

ಕರ್ನಾಟಕದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಬಳ್ಳಾರಿ ಮತ್ತು ತುಮಕೂರಿನಲ್ಲಿ ಎರಡು ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಬಳ್ಳಾರಿಯಲ್ಲಿ ನಡೆದ ತಮ್ಮ ಮೊದಲ ರ್ಯಾಲಿಯಲ್ಲಿ ಪ್ರಧಾನಿ ಮೋದಿ, “ಬಿಜೆಪಿಯ ಸಂಕಲ್ಪ ಪತ್ರವು ಕರ್ನಾಟಕವನ್ನು ದೇಶದ ಅಗ್ರ ರಾಜ್ಯವನ್ನಾಗಿ ಮಾಡುವ ಮಾರ್ಗಸೂಚಿಯನ್ನು ಒಳಗೊಂಡಿದೆ ಆದರೆ ಕಾಂಗ್ರೆಸ್ ಪ್ರಣಾಳಿಕೆಯು ಹಲವಾರು ಸುಳ್ಳು ಭರವಸೆಗಳನ್ನು ಒಳಗೊಂಡಿದೆ ಮತ್ತು ಸಮಾಧಾನಗೊಳಿಸುವ ಕ್ರಮಗಳ ಸಂಗ್ರಹವಾಗಿದೆ” ಎಂದು ಹೇಳಿದರು.

We are against war, but peace is not possible without strength: PM Modi in Kargil

October 24th, 02:52 pm

Keeping in with his tradition of spending Diwali with armed forces, the PM Modi spent this Diwali with the forces in Kargil. Addressing the brave jawans, the Prime Minister said that the reverence for the soil of Kargil always draws him towards the brave sons and daughters of the armed forces.

PM celebrates Diwali with Armed Forces in Kargil

October 24th, 11:37 am

Keeping in with his tradition of spending Diwali with armed forces, the PM Modi spent this Diwali with the forces in Kargil. Addressing the brave jawans, the Prime Minister said that the reverence for the soil of Kargil always draws him towards the brave sons and daughters of the armed forces.

ಐಸಿಸಿ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

October 23rd, 11:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಐಸಿಸಿ ಟಿ 20 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಉತ್ತಮ ಹೋರಾಟ ನಡೆಸಿ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.

ಪಾಕಿಸ್ತಾನದಲ್ಲಿ ಪ್ರವಾಹದಿಂದಾಗಿ ಜೀವಹಾನಿಗೆ ಪ್ರಧಾನಿ ಸಂತಾಪ

August 29th, 08:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಾಕಿಸ್ತಾನದಲ್ಲಿ ಪ್ರವಾಹದಿಂದ ಆಗಿರುವ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 28th, 11:56 pm

ಏಷ್ಯಾ ಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ತಂಡ ಅಮೋಘ ಕೌಶಲ್ಯ ಮತ್ತು ದೃಢವಾದ ಸ್ಫೂರ್ತಿಯನ್ನು ಪ್ರದರ್ಶಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

During Kargil War, Indian Army showed its might to the world: PM Modi during Mann Ki Baat

July 26th, 11:30 am

During Mann Ki Baat, PM Modi paid rich tributes to the martyrs of the Kargil War, spoke at length about India’s fight against the Coronavirus and shared several inspiring stories of self-reliant India. The Prime Minister also shared his conversation with youngsters who have performed well during the board exams this year.

PM condoles the loss of life due to a plane crash in Pakistan

May 22nd, 07:28 pm

The Prime Minister, Shri Narendra Modi has condoled the loss of life due to a plane crash in Pakistan.

ಕೊನಾ ವೈರಾಣು ಹರಡದಂತೆ ತಡೆಯಲು ಭಾರತ ಮಾಡುತ್ತಿರುವ ಪ್ರಯತ್ನಗಳೇನು? ತಿಳಿಯಲು ಓದಿ!

March 16th, 02:44 pm

ಸಾರ್ಕ್ ನಾಯಕರು ಮತ್ತು ಪ್ರತಿನಿಧಿಗಳೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಮಂತ್ರಿ ಮೋದಿ ಕೊರೋನಾ ವೈರಾಣು ಹಬ್ಬದಂತೆ ತಡೆಯಲು ಭಾರತ ಕೈಗೊಂಡಿರುವ ಪ್ರಯತ್ನಗಳ ಬಗ್ಗೆ ಒತ್ತಿ ಹೇಳಿದರು. ಸನ್ನದ್ಧರಾಗಿರಿ ಆದರೆ, ಆತಂಕಕ್ಕೆ ಒಳಗಾಗಬೇಡಿ ಎಂಬುದು ನಮ್ಮ ಮಾರ್ಗದರ್ಶಿ ಮಂತ್ರವಾಗಿದೆ ಎಂದು ತಿಳಿಸಿದರು. ನಾವು ಸಮಸ್ಯೆಯನ್ನು ಕಡೆಗಣಿಸದಂತೆ ಜಾಗರೂಕತೆ ವಹಿಸಿದ್ದೇವೆ, ಆದರೂ ಅನೈಚ್ಛಿಕ ಸೆಳೆತದ ಪ್ರಕ್ರಿಯೆ ತಡೆಯಲು ಮುಂದಾಗಿದ್ದೇವೆ.ನಾವು ಶ್ರೇಣೀಕೃತ ಸ್ಪಂದನ ವ್ಯವಸ್ಥೆ ಸೇರಿದಂತೆ ಸಕಾರಾತ್ಮಕವಾದ ಕ್ರಮಗಳನ್ನು ಕೈಗೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಸಾರ್ಕ್ ರಾಷ್ಟ್ರಗಳಿಗಾಗಿ ಕೋವಿಡ್ -19 ತುರ್ತು ನಿಧಿ ಸ್ಥಾಪಿಸುವ ಪ್ರಸ್ತಾಪವನ್ನು ಭಾರತವು ಮಾಡುತ್ತದೆ. ಅದರ ಬಗ್ಗೆ ಇಲ್ಲಿ ತಿಳಿಯಿರಿ...

March 16th, 02:42 pm

ಸಾರ್ಕ್ ನಾಯಕರು ಮತ್ತು ಪ್ರತಿನಿಧಿಗಳೊಂದಿಗೆ ಸಂವಾದದ ವೇಳೆ, ಪ್ರಧಾನಮಂತ್ರಿ ಮೋದಿ ಅವರು, ಕೋವಿಡ್ 19 ತುರ್ತು ನಿಧಿ ಸ್ಥಾಪಿಸುವ ಪ್ರಸ್ತಾಪ ಮುಂದಿಟ್ಟರು. ಈ ನಿಧಿ ಸಾರ್ಕ್ ರಾಷ್ಟ್ರಗಳ ಸ್ವಯಂಪ್ರೇರಿತ ದೇಣಿಗೆಯಿಂದ ರೂಪುಗೊಳ್ಳುತ್ತದೆ. ಮೊದಲಿಗೆ ಭಾರತವು ಆರಂಭಿಕವಾದಿ 10 ದಶಲಕ್ಷ ಡಾಲರ್ ಗಳನ್ನು ನಿಧಿಗೆ ನೀಡುವುದಾಗಿ ತಿಳಿಸಿದೆ.

ಕೋವಿಡ್ -19 ನಿಗ್ರಹಿಸುವ ಕುರಿತಂತೆ ಸಾರ್ಕ್ ನಾಯಕರ ವಿಡಿಯೋ ಸಂವಾದ

March 15th, 08:18 pm

ನಿಮ್ಮ ಕಲ್ಪನೆಗಳು ಮತ್ತು ನಿಮ್ಮ ಸಮಯಕ್ಕಾಗಿ ಮತ್ತೊಮ್ಮೆ ಧನ್ಯವಾದಗಳು. ನಾವು ಇಂದು ಇಲ್ಲಿ ರಚನಾತ್ಮಕ ಮತ್ತು ಫಲಪ್ರದವಾದ ಸಂವಾದ ನಡೆಸಿದ್ದೇವೆ.

ಸಾರ್ಕ್ ದೇಶಗಳ ನಾಯಕರ ವಿಡಿಯೊ ಕಾನ್ಫರೆನ್ಸ್ ನಲ್ಲಿ COVID-19 ನಿಯಂತ್ರಣದ ಮಾರ್ಗೋಪಾಯ ಕುರಿತು ಪ್ರಧಾನಿ

March 15th, 07:00 pm

ಪರಿಸ್ಥಿತಿಯ ಬಗ್ಗೆ ನಿಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಕ್ಕಾಗಿ ಮತ್ತು ನೀವು ಕೈಗೊಂಡಿರುವ ಕ್ರಮಗಳಿಗಾಗಿ ಧನ್ಯವಾದಗಳು.

ಕೋವಿಡ್ -19 ನಿಗ್ರಹಿಸುವ ಕುರಿತಂತೆ ಸಾರ್ಕ್ ನಾಯಕರ ವಿಡಿಯೋ ಸಂವಾದ

March 15th, 06:54 pm

ಅದರಲ್ಲೂ ವಿಶೇಷವಾಗಿ ಇತ್ತೀಚಿಗೆ ಶಸ್ತ್ರಚಿಕಿತ್ಸೆಗೆ ಒಳಪಟ್ಟ ತಕ್ಷಣವೇ ನಮ್ಮ ಜೊತೆಗೂಡಿರುವ ನನ್ನ ಸ್ನೇಹಿತರಾದ ಪ್ರಧಾನಮಂತ್ರಿ ಓಲಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಮತ್ತು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ನಾನು ಪುನರಾಯ್ಕೆಯಾಗಿರುವ ಅಧ್ಯಕ್ಷ ಅಷರಫ್ ಘನಿ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ.

COVID-19 ನಿಯಂತ್ರಣಕ್ಕೆ ಸಾರ್ಕ್ ನಾಯಕರೊಂದಿಗೆ ಪ್ರಧಾನಿ ಮಾತುಕತೆ

March 15th, 06:18 pm

ಸಾರ್ಕ್ ರಾಷ್ಟ್ರಗಳಾದ್ಯಂತ COVID-19 ಅನ್ನು ಎದುರಿಸಲು ಒಂದು ಸಾಮಾನ್ಯ ಕಾರ್ಯತಂತ್ರವನ್ನು ರೂಪಿಸುವ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳ ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು.