​​​​​​​ಕರ್ನಾಟಕದ ಹುಬ್ಬಳ್ಳಿಯಲ್ಲಿ ಜರುಗಿದ 26ನೇ ರಾಷ್ಟ್ರೀಯ ಯುವಜನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

January 12th, 04:30 pm

ಕರ್ನಾಟಕದ ಈ ಪ್ರದೇಶವು ತನ್ನ ಸಂಪ್ರದಾಯ, ಸಂಸ್ಕೃತಿ ಮತ್ತು ಜ್ಞಾನಕ್ಕೆ ಹೆಸರುವಾಸಿಯಾಗಿದೆ. ಇಲ್ಲಿನ ಅನೇಕ ವ್ಯಕ್ತಿಗಳಿಗೆ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರದೇಶವು ದೇಶಕ್ಕೆ ಹಲವಾರು ಶ್ರೇಷ್ಠ ಸಂಗೀತಗಾರರನ್ನು ನೀಡಿದೆ. ಪಂಡಿತ್ ಕುಮಾರ ಗಂಧರ್ವ, ಪಂಡಿತ್ ಬಸವರಾಜ ರಾಜಗುರು, ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್, ಭಾರತ ರತ್ನ ಪಂಡಿತ್ ಭೀಮಸೇನ್ ಜೋಶಿ ಮತ್ತು ಪಂಡಿತೆ ಶ್ರೀಮತಿ ಗಂಗೂಬಾಯಿ ಹಾನಗಲ್ ಜೀ ಅವರಿಗೆ ಇಂದು ಹುಬ್ಬಳ್ಳಿಯ ನಾಡಿನಿಂದ ನಾನು ನಮನ ಸಲ್ಲಿಸುತ್ತೇನೆ.

ಕರ್ನಾಟಕದ ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

January 12th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಹುಬ್ಬಳ್ಳಿಯಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಿದರು. ಸ್ವಾಮಿ ವಿವೇಕಾನಂದರ ಜನ್ಮದಿನದಂದು ಆಚರಿಸಲಾಗುವ ರಾಷ್ಟ್ರೀಯ ಯುವ ದಿನದಂದು ಅವರ ಆದರ್ಶಗಳು, ಬೋಧನೆಗಳು ಮತ್ತು ಕೊಡುಗೆಗಳನ್ನು ಗೌರವಿಸಲು ಮತ್ತು ಪಾಲಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ಸವದ ವಿಷಯವು ‘ವಿಕಸಿತ ಯುವ – ವಿಕಸಿತ ಭಾರತʼ. ಇದು ದೇಶದ ಎಲ್ಲಾ ಭಾಗಗಳ ವೈವಿಧ್ಯಮಯ ಸಂಸ್ಕೃತಿಗಳನ್ನು ಒಂದೇ ವೇದಿಕೆಯಲ್ಲಿ ತರುತ್ತದೆ ಮತ್ತು ಏಕ್ ಭಾರತ್, ಶ್ರೇಷ್ಠ ಭಾರತ್ ಮನೋಭಾವದಲ್ಲಿ ಭಾಗವಹಿಸುವವರನ್ನು ಒಂದುಗೂಡಿಸುತ್ತದೆ.

ಪಂಡಿತ್ ಭೀಮಸೇನ್ ಜೋಶಿ ಅವರ 100ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸ್ಮರಿಸಿದ್ದಾರೆ

February 04th, 07:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ಭೀಮಸೇನ್ ಜೋಶಿ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅವರನ್ನು ಸ್ಮರಿಸಿದ್ದಾರೆ.

ಪಂಡಿತ್ ಭೀಮಸೇನ್ ಜೋಶಿ ಜನ್ಮ ದಿನಾಚರಣೆ: ಪ್ರಧಾನಿ ಗೌರವ ಸಲ್ಲಿಕೆ

February 04th, 05:14 pm

ಪಂಡಿತ್ ಭೀಮಸೇನ್ ಜೋಶಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.