ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 25th, 04:31 pm

ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಮೆರ್ರಿ ಕ್ರಿಸ್ಮಸ್! ಇಂದು ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆ ಹೊಂದಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುವ ದಿನ. ಇಂದು ಮಹಾಮನ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನ. ಇಂದು ಅಟಲ್ ಜಿ ಅವರ ಜನ್ಮದಿನವೂ ಆಗಿದೆ. ಈ ಪವಿತ್ರ ಸಂದರ್ಭದಲ್ಲಿ ನಾನು ಮಹಾಮನ ಮಾಳವೀಯ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ಅಟಲ್ ಜೀ ಅವರಿಗೆ ಗೌರವಪೂರ್ವಕ ನಮನ ಸಲ್ಲಿಸುತ್ತೇನೆ. ಅಟಲ್ ಜೀ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ದೇಶವು ಉತ್ತಮ ಆಡಳಿತ ದಿನವನ್ನು ಆಚರಿಸುತ್ತಿದೆ. ಉತ್ತಮ ಆಡಳಿತ ದಿನದಂದು ನಾನು ಎಲ್ಲಾ ನಾಗರಿಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

​​​​​​​ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ʻಪಂಡಿತ್‌ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼ ಪುಸ್ತಕವನ್ನು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿಗಳು

December 25th, 04:30 pm

ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ʻಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼದ 11 ಸಂಪುಟಗಳ ಸರಣಿಯ ಪೈಕಿ ಮೊದಲ ಸಂಪುಟವನ್ನು ಲೋಕಾರ್ಪಣೆ ಮಾಡಿದರು. ಶ್ರೀ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಪುಷ್ಪ ನಮನವನ್ನೂ ಸಲ್ಲಿಸಿದರು. ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಖ್ಯಾತ ಸ್ಥಾಪಕ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಜನರಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸಲು ಅವಿರತವಾಗಿ ಶ್ರಮಿಸಿದ ಶ್ರೇಷ್ಠ ವಿದ್ವಾಂಸ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿ ಮಾಳವೀಯ ಅವರನ್ನು ಸ್ಮರಿಸಲಾಗುತ್ತದೆ.

ಡಿಸೆಂಬರ್ 25ರಂದು “ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿ” ಗಳನ್ನು ಬಿಡುಗಡೆ ಮಾಡಲಿದ್ದಾರೆ ಪ್ರಧಾನಮಂತ್ರಿ

December 24th, 07:47 pm

ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ' 11 ಸಂಪುಟಗಳ ಮೊದಲ ಸರಣಿಯನ್ನು 2023 ರ ಡಿಸೆಂಬರ್ 25 ರಂದು ಸಂಜೆ 4:30 ಕ್ಕೆ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಪ್ರಧಾನಮಂತ್ರಿ ಅವರು ಸಂಸತ್ತಿನಲ್ಲಿ ಗೌರವ ನಮನ ಸಲ್ಲಿಸಿದರು

December 25th, 07:55 pm

ಇಂದು ಸಂಸತ್ತಿನಲ್ಲಿ ನಡೆದ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.