ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ

September 22nd, 12:06 pm

ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.

ಫ್ಯಾಕ್ಟ್ ಶೀಟ್: ಇಂಡೋ-ಪೆಸಿಫಿಕ್ ನಲ್ಲಿ ಕ್ಯಾನ್ಸರ್ ಹೊರೆಯನ್ನು ಕಡಿಮೆ ಮಾಡಲು ಕ್ವಾಡ್ ದೇಶಗಳು ಕ್ಯಾನ್ಸರ್ ಮೂನ್ಶಾಟ್ ಉಪಕ್ರಮವನ್ನು ಪ್ರಾರಂಭಿಸಿವೆ

September 22nd, 12:03 pm

ಇಂದು, ಅಮೆರಿಕ, ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್ ಇಂಡೋ-ಪೆಸಿಫಿಕ್ ನಲ್ಲಿ ನಮಗೆ ತಿಳಿದಿರುವಂತೆ ಕ್ಯಾನ್ಸರ್ ಅನ್ನು ಕೊನೆಗೊಳಿಸಲು ಸಹಾಯ ಮಾಡುವ ಅದ್ಭುತ ಪ್ರಯತ್ನವನ್ನು ಪ್ರಾರಂಭಿಸುತ್ತಿವೆ, ಗರ್ಭಕಂಠದ ಕ್ಯಾನ್ಸರ್ ನಿಂದ ಪ್ರಾರಂಭಿಸಿ, ಈ ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಬಿಕ್ಕಟ್ಟಾಗಿ ಮುಂದುವರೆದಿರುವ ಹೆಚ್ಚಾಗಿ ತಡೆಗಟ್ಟಬಹುದಾದ ಕಾಯಿಲೆಯಿಂದ ಪ್ರಾರಂಭಿಸಿ ಮತ್ತು ಇತರ ರೀತಿಯ ಕ್ಯಾನ್ಸರ್ ಅನ್ನು ಸಹ ಪರಿಹರಿಸಲು ಅಡಿಪಾಯವನ್ನು ಹಾಕುತ್ತಿವೆ. ಈ ಉಪಕ್ರಮವು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ Quad Leaders Summit . ಮಾಡಿದ ವ್ಯಾಪಕ ಪ್ರಕಟಣೆಗಳ ಭಾಗವಾಗಿದೆ.

ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼಯ ನಾಯಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಉದ್ಘಾಟನಾ ಭಾಷಣದ ಇಂಗ್ಲಿಷ್‌ ಅವತರಿಣಿಕೆ

August 17th, 10:00 am

ಭಾರತದ 140 ಕೋಟಿ ಭಾರತೀಯರ ಪರವಾಗಿ ತಮ್ಮೆಲ್ಲರಿಗೂ ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼ ಸಮ್ಮೇಳನಕ್ಕೆ (3ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ) ಆತ್ಮೀಯ ಸ್ವಾಗತ. ಕಳೆದ ಎರಡು ಶೃಂಗಸಭೆಗಳಲ್ಲಿ, ನಿಮ್ಮಲ್ಲಿ ಹಲವರೊಂದಿಗೆ ನಿಕಟವಾಗಿ ಕಾರ್ಯನಿವಹಿಸುವ ಅವಕಾಶ ನನಗೆ ಒದಗಿ ಬಂದಿತ್ತು. ಈ ವರ್ಷ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆದ ತರುವಾಯ ಮತ್ತೊಮ್ಮೆ ಈ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಪಾಲ್ಗೊಳ್ಳಲು ಅವಕಾಶ ಸಿಕ್ಕಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ.

ಉತ್ತಮ ನಾಳೆಗಾಗಿ ನಾವು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು: ಪ್ರಧಾನಿ ಮೋದಿ

April 24th, 10:06 am

ವಿಪತ್ತು ನಿರೋಧಕ ಮೂಲಸೌಕರ್ಯ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ 6 ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಉತ್ತಮ ನಾಳೆಗಾಗಿ ನಾವು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು ಎಂದು ಅವರು ಹೇಳಿದರು. ಹೊಸ ಮೂಲಸೌಕರ್ಯ ಸೃಷ್ಟಿಗೆ ಸ್ಥಿತಿಸ್ಥಾಪಕತ್ವವನ್ನು ಅಂಶೀಕರಿಸುವ ಅಗತ್ಯವಿದೆ. ಇದಲ್ಲದೆ, ಇದು ದುರಂತದ ನಂತರದ ಪುನರ್ನಿರ್ಮಾಣದ ಒಂದು ಭಾಗವಾಗಿರಬೇಕು. ವಿಪತ್ತುಗಳ ನಂತರ, ತಕ್ಷಣದ ಗಮನವು ನೈಸರ್ಗಿಕವಾಗಿ ಪರಿಹಾರ ಮತ್ತು ಪುನರ್ವಸತಿ ಮೇಲೆ ಇರುತ್ತದೆ. ಆರಂಭಿಕ ಪ್ರತಿಕ್ರಿಯೆಯ ನಂತರ, ನಮ್ಮ ಗಮನವು ಮೂಲಸೌಕರ್ಯದ ಸ್ಥಿತಿಸ್ಥಾಪಕತ್ವವನ್ನು ಒಳಗೊಂಡಿರಬೇಕು.

ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ 6ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

April 24th, 09:40 am

ವಿಪತ್ತು ನಿರೋಧಕ ಮೂಲಸೌಕರ್ಯ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ 6 ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಉತ್ತಮ ನಾಳೆಗಾಗಿ ನಾವು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು ಎಂದು ಅವರು ಹೇಳಿದರು. ಹೊಸ ಮೂಲಸೌಕರ್ಯ ಸೃಷ್ಟಿಗೆ ಸ್ಥಿತಿಸ್ಥಾಪಕತ್ವವನ್ನು ಅಂಶೀಕರಿಸುವ ಅಗತ್ಯವಿದೆ. ಇದಲ್ಲದೆ, ಇದು ದುರಂತದ ನಂತರದ ಪುನರ್ನಿರ್ಮಾಣದ ಒಂದು ಭಾಗವಾಗಿರಬೇಕು. ವಿಪತ್ತುಗಳ ನಂತರ, ತಕ್ಷಣದ ಗಮನವು ನೈಸರ್ಗಿಕವಾಗಿ ಪರಿಹಾರ ಮತ್ತು ಪುನರ್ವಸತಿ ಮೇಲೆ ಇರುತ್ತದೆ. ಆರಂಭಿಕ ಪ್ರತಿಕ್ರಿಯೆಯ ನಂತರ, ನಮ್ಮ ಗಮನವು ಮೂಲಸೌಕರ್ಯದ ಸ್ಥಿತಿಸ್ಥಾಪಕತ್ವವನ್ನು ಒಳಗೊಂಡಿರಬೇಕು.

ಡೆಹ್ರಾಡೂನ್‌ನಿಂದ ದೆಹಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಭಾಷಣ

May 25th, 11:30 am

ಉತ್ತರಾಖಂಡದ ಗವರ್ನರ್ ಶ್ರೀ ಗುರ್ಮೀತ್ ಸಿಂಗ್ ಜಿ, ಉತ್ತರಾಖಂಡದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉತ್ತರಾಖಂಡ ಸರ್ಕಾರದ ಸಚಿವರು, ವಿವಿಧ ಸಂಸದರು, ಶಾಸಕರು, ಮೇಯರ್‌ಗಳು, ಜಿಲ್ಲಾ ಪರಿಷತ್ ಸದಸ್ಯರು, ಇತರ ಗಣ್ಯರು ಮತ್ತು ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ ! ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕಾಗಿ ಉತ್ತರಾಖಂಡದ ಎಲ್ಲ ಜನರಿಗೆ ಅಭಿನಂದನೆಗಳು.

ಡೆಹ್ರಾಡೂನ್‌- ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ

May 25th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್‌ನಿಂದ ದೆಹಲಿಗೆ ಸಂಚರಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ರೈಲಿಗೆ ಹಸಿರು ನಿಶಾನೆ ತೋರಿದರು. ಹೊಸದಾಗಿ ವಿದ್ಯುದ್ದೀಕರಿಸಿದ ರೈಲು ವಿಭಾಗಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಉತ್ತರಾಖಂಡವನ್ನು ಶೇ.100 ರಷ್ಟು ವಿದ್ಯುದ್ದೀಕರಿಸಿದ ರಾಜ್ಯವೆಂದು ಘೋಷಿಸಿದರು.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

May 23rd, 08:54 pm

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ

May 23rd, 01:30 pm

ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.

FIPIC III ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಮಾರೋಪ ಹೇಳಿಕೆಯ ಅನುವಾದ

May 22nd, 04:33 pm

ಈಗಾಗಲೇ ನೀವು ನೀಡಿರುವ ಅಭಿಪ್ರಾಯಗಳಿಗೆ ತುಂಬಾ ಧನ್ಯವಾದಗಳು. ಈಗ ನಡೆಯುತ್ತಿರುವ ಚರ್ಚೆಗಳಿಂದ ಹೊರಹೊಮ್ಮಿದ ವಿಚಾರಗಳನ್ನು ನಾವು ಖಂಡಿತವಾಗಿ ಪರಿಗಣಿಸುತ್ತೇವೆ. ಪೆಸಿಫಿಕ್ ದ್ವೀಪ ದೇಶಗಳ ಅಗತ್ಯತೆಗಳನ್ನು ಮತ್ತು ಕೆಲವು ಆದ್ಯತೆಗಳನ್ನು ಈಗಾಗಲೇ ನಾವು ಹಂಚಿಕೊಂಡಿದ್ದೇವೆ. ಈ ಎರಡೂ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಈ ವೇದಿಕೆಯ ಮುಖಾಂತರ ಎಲ್ಲ ರೀತಿಯ ಪ್ರಯತ್ನಗಳನ್ನು ಕೈಗೊಳ್ಳಲು ನಾವು ಮುಂದುವರಿಯುತ್ತೇವೆ. ಫೋರಂ ಫಾರ್ ಇಂಡಿಯಾ ಪೆಸಿಫಿಕ್ ಕೋಆಪರೇಷನ್ - FIPIC ಜೊತೆಗಿನ ನಮ್ಮ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು, ನಾನು ಕೆಲವು ಹೇಳಿಕೆಗಳನ್ನು ನೀಡಲು ಬಯಸುತ್ತೇನೆ.

ಪ್ರಧಾನಮಂತ್ರಿಯವರಿಗೆ ಪಪುವಾ ನ್ಯೂ ಗಿನಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವ

May 22nd, 03:09 pm

ಸರ್ಕಾರಿ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ಪಪುವಾ ನ್ಯೂ ಗಿನಿಯಾ (ಪಿಎನ್.ಜಿ) ಗವರ್ನರ್ ಜನರಲ್ ಮಾನ್ಯ ಸರ್ ಬಾಬ್ ದಾಡೆ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಆರ್ಡರ್ ಆಫ್ ಲೋಗೊಹು (ಜಿಸಿಎಲ್) ಗ್ರ್ಯಾಂಡ್ ಕಂಪಾನಿಯನ್ ಪ್ರಶಸ್ತಿ ಪ್ರದಾನ ಮಾಡಿದರು. ಇದು ಪಿಎನ್.ಜಿಯ ಅತ್ಯುನ್ನತ ನಾಗರಿಕ ಗೌರವವಾಗಿದ್ದು, ಪ್ರಶಸ್ತಿ ಪಡೆದವರಿಗೆ ಚೀಫ್ ಎಂಬ ಗೌರವ ಶೀರ್ಷಿಕೆ ಲಭಿಸುತ್ತದೆ..

ಪಪುವಾ ನ್ಯೂ ಗಿನಿಯಾದಲ್ಲಿ ಐಟಿಇಸಿ ವಿದ್ವಾಂಸರೊಂದಿಗೆ ಪ್ರಧಾನಮಂತ್ರಿ ಸಂವಾದ

May 22nd, 02:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಮೇ 22ರಂದು ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯ (ಎಫ್ಐಪಿಐಸಿ) 3ನೇ ಶೃಂಗಸಭೆಗಾಗಿ ಪೋರ್ಟ್ ಮೊರೆಸ್ಬಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಪೆಸಿಫಿಕ್ ದ್ವೀಪ ರಾಷ್ಟ್ರಗಳಾದ್ಯಂತದ ಭಾರತೀಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರ (ಐಟಿಇಸಿ) ಕೋರ್ಸ್ ಗಳ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಹಿರಿಯ ವಿದ್ಯಾರ್ಥಿಗಳಲ್ಲಿ ಐಟಿಇಸಿ ಅಡಿಯಲ್ಲಿ ಭಾರತದಲ್ಲಿ ತರಬೇತಿ ಪಡೆದ ಹಿರಿಯ ಸರ್ಕಾರಿ ಅಧಿಕಾರಿಗಳು, ಪ್ರಮುಖ ವೃತ್ತಿಪರರು ಮತ್ತು ಸಮುದಾಯದ ಮುಖಂಡರೂ ಸೇರಿದ್ದರು. ಅವರು ಭಾರತದಲ್ಲಿ ಗಳಿಸಿದ ಕೌಶಲ್ಯಗಳನ್ನು ಬಳಸಿಕೊಂಡು ತಮ್ಮ ಸಮಾಜಗಳಿಗೆ ಕೊಡುಗೆ ನೀಡುತ್ತಿದ್ದಾರೆ.

Prime Minister honoured with the highest civilian awards of Papua New Guinea, Fiji and Palau

May 22nd, 02:18 pm

Prime Minister Narendra Modi, during his historic visit to Papua New Guinea, was conferred with three prestigious civilian awards. He was conferred the ‘Grand Companion of the Order of Logohu’ by Papua New Guinea, ‘Companion of the Order of Fiji’ by Republic of Fiji and ‘Ebakl’ Award by Republic of Palau.

ಎಫ್‌ ಐ ಪಿ ಐ ಸಿ ಮೂರನೇ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ

May 22nd, 02:15 pm

ಮೂರನೇ ಎಫ್‌ ಐ ಪಿ ಐ ಸಿ ಶೃಂಗಸಭೆಗೆ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ! ಪ್ರಧಾನ ಮಂತ್ರಿ ಜೇಮ್ಸ್ ಮರಾಪೆ ನನ್ನೊಂದಿಗೆ ಈ ಶೃಂಗಸಭೆಯನ್ನು ಆಯೋಜಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಪೋರ್ಟ್ ಮೊರೆಸ್ಬಿಯಲ್ಲಿ ಶೃಂಗಸಭೆಗಾಗಿ ಮಾಡಿರುವ ಎಲ್ಲಾ ವ್ಯವಸ್ಥೆಗಳಿಗಾಗಿ ನಾನು ಅವರಿಗೆ ಮತ್ತು ಅವರ ತಂಡಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.

ಪಪುವಾ ನ್ಯೂಗಿನಿಯಾದ ಗವರ್ನರ್ ಜನರಲ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ

May 22nd, 08:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯ 3 ನೇ ಶೃಂಗಸಭೆಯ (ಎಫ್‌ ಐ ಪಿ ಐ ಸಿ) ಸಂದರ್ಭದಲ್ಲಿ 22 ಮೇ 2023 ರಂದು ಪೋರ್ಟ್ ಮೊರೆಸ್ಬಿಯಲ್ಲಿರುವ ಸರ್ಕಾರಿ ಭವನದಲ್ಲಿ ಪಪುವಾ ನ್ಯೂಗಿನಿ ಗವರ್ನರ್-ಜನರಲ್ ಸರ್ ಬಾಬ್ ದಡಾಯೆ ಅವರನ್ನು ಭೇಟಿ ಮಾಡಿದರು.

ಪಪುವಾ ನ್ಯೂ ಗಿನಿಯಾದ ಪೋರ್ಟ್ ಮೊರೆಸ್ಬಿಗೆ ಆಗಮಿಸಿದ ಪ್ರಧಾನಮಂತ್ರಿ

May 21st, 08:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಮೇ 21ರ ಸಂಜೆ ಪೋರ್ಟ್ ಮೊರೆಸ್ಬಿಗೆ ಆಗಮಿಸಿದರು. ಪಪುವಾ ನ್ಯೂ ಗಿನಿಯಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಜೇಮ್ಸ್ ಮರಪೆ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದರು. 19 ಬಂದೂಕುಗಳ ಗೌರವ ವಂದನೆಯನ್ನು (ಗಾರ್ಡ್ ಆಫ್ ಹಾನರ್ ) ಪ್ರಧಾನಿ ಮೋದಿ ಅವರಿಗೆ ನೀಡಲಾಯಿತು.

ಜಪಾನ್, ಪಪುವಾ ನ್ಯೂ ಗಿನಿಯಾ ಮತ್ತು ಆಸ್ಟ್ರೇಲಿಯಾ ದೇಶಗಳಿಗೆ ಅಧಿಕೃತ ಭೇಟಿಗಾಗಿ ನಿರ್ಗಮಿಸುವ ಮುನ್ನ ಭಾರತದಲ್ಲಿ ಪ್ರಧಾನಿಯವರ ಹೇಳಿಕೆ

May 19th, 08:38 am

ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ಕಿಶಿಡಾ ಅವರನ್ನು ಭಾರತ-ಜಪಾನ್ ಶೃಂಗಸಭೆ ಹಿನ್ನೆಲೆಯಲ್ಲಿ ಮತ್ತೆ ಭೇಟಿಯಾಗಲು ಸಂತೋಷವಾಗುತ್ತಿದೆ. ಭಾರತವು ಈ ವರ್ಷ ಜಿ-20 ಅಧ್ಯಕ್ಷತೆಯನ್ನು ವಹಿಸಿಕೊಂಡಿರುವುದರಿಂದ, ಈ ಜಿ-7 ಶೃಂಗಸಭೆಯಲ್ಲಿ ನನ್ನ ಉಪಸ್ಥಿತಿ ವಿಶೇಷವಾಗಿ ಅರ್ಥಪೂರ್ಣವಾಗಿದೆ. ಜಗತ್ತು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳನ್ನು ಸಾಮೂಹಿಕವಾಗಿ ಪರಿಹರಿಸುವ ಅಗತ್ಯದ ಬಗ್ಗೆ ಜಿ-7 ರಾಷ್ಟ್ರಗಳು ಮತ್ತು ಇತರ ಆಹ್ವಾನಿತ ಪಾಲುದಾರರೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ. ಹಿರೋಷಿಮಾ ಜಿ-7 ಶೃಂಗಸಭೆಯಲ್ಲಿ ಭಾಗವಹಿಸುವ ಕೆಲವು ನಾಯಕರೊಂದಿಗೆ ನಾನು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದೇನೆ.

​​​​​​​ಸ್ವಾವಲಂಬಿ ಭಾರತ ನಿರ್ಮಾಣ ಮಾಡುವ ಪ್ರಯತ್ನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

January 31st, 07:49 pm

ದೇಶೀಯವಾಗಿ ಉತ್ಪಾದಿಸಿದ ಎವಿಜಿಎಎಸ್ 10 ಎಲ್ಎಲ್ ನ ಮೊದಲ ಹಂತದ ಉತ್ಪನ್ನಗಳನ್ನು ಪಪುವಾ ನ್ಯೂ ಗಿನಿಯಾಗೆ ಯಶಸ್ವಿಯಾಗಿ ರಫ್ತು ಮಾಡುವ ಮೂಲಕ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವ ಭಾರತೀಯ ತೈಲ ನಿಗಮದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

PM meets various leaders during FIPIC Summit

August 21st, 04:13 pm