ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ

July 26th, 09:30 am

ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು

July 26th, 09:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್‌ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.

​​​​​​​ರೋಜ್‌ಗಾರ್ ಮೇಳದ ಅಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆ ವೇಳೆ ಪ್ರಧಾನಮಂತ್ರಿಯವರ ಭಾಷಣ

February 12th, 11:00 am

ಇಂದು, 1 ಲಕ್ಷಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ವಲಯದಲ್ಲಿ ಉದ್ಯೋಗಾವಕಾಶಗಳನ್ನು ನೀಡಲಾಗಿದೆ. ನಿಮ್ಮ ಶ್ರದ್ಧೆ ಮತ್ತು ಕಠಿಣ ಪರಿಶ್ರಮ ಈ ಸಾಧನೆಗೆ ಕಾರಣವಾಗಿದೆ. ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕೇಂದ್ರ ಸರ್ಕಾರದಲ್ಲಿ ಯುವಕರಿಗೆ ಉದ್ಯೋಗ ಒದಗಿಸುವ ಉಪಕ್ರಮವು ವೇಗವಾಗಿ ಪ್ರಗತಿಯಲ್ಲಿದೆ. ಈ ಹಿಂದಿನ ಸರ್ಕಾರಗಳ ಆಡಳಿತದಲ್ಲಿ ಉದ್ಯೋಗ ಜಾಹೀರಾತು, ನೇಮಕಾತಿ ಪತ್ರಗಳನ್ನು ನೀಡುವ ವೇಳೆ ಲಂಚ ನೀಡಲೇಬೇಕಾಗಿತ್ತು. ನಾವು ಈಗ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇವೆ, ದಕ್ಷತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳುತ್ತೇವೆ. ನೇಮಕಾತಿ ಪ್ರಕ್ರಿಯೆಯು ನಿಗದಿತ ಸಮಯಾವಧಿಗೆ ಬದ್ಧವಾಗಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಸರ್ಕಾರವು ಬದ್ದವಾಗಿದೆ. ಪ್ರತಿಯೊಬ್ಬ ಯುವಕರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ನೀಡುತ್ತದೆ. ಈಗ ಯುವಕರು ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯಿಂದ ತಮಗಾಗಿ ಒಂದು ಪುಟ್ಟ ಗೂಡು ಕಟ್ಟಬಹುದು ಎಂಬ ವಿಶ್ವಾಸ ಹೊಂದಿದ್ದಾರೆ. 2014 ರಿಂದ, ಯುವಕರನ್ನು ಕೇಂದ್ರ ಸರ್ಕಾರದೊಂದಿಗೆ ಮತ್ತು ರಾಷ್ಟ್ರ ನಿರ್ಮಾಣದ ಪ್ರಯತ್ನಗಳಲ್ಲಿ ಅವರನ್ನು ತೊಡಗಿಸಿಕೊಳ್ಳುವುದು ನಮ್ಮ ಗುರಿಯಾಗಿದೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಬಿಜೆಪಿ ಸರ್ಕಾರ ತನ್ನ ಹತ್ತು ವರ್ಷಗಳಲ್ಲಿ ಸುಮಾರು ಒಂದೂವರೆ ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ. ಇಂದು, ನಾವು ದೆಹಲಿಯಲ್ಲಿ ಸಮಗ್ರ ತರಬೇತಿ ಸಂಕೀರ್ಣಕ್ಕೆ ಅಡಿಪಾಯ ಹಾಕಿದ್ದೇವೆ, ಇದು ನಮ್ಮ ಸಾಮರ್ಥ್ಯ-ವರ್ಧನೆಯ ಪ್ರಯತ್ನಗಳನ್ನು ಹೆಚ್ಚಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ರೋಜ್‌ಗಾರ್ ಮೇಳದ ಅಡಿ, ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಉದ್ಯೋಗಾಕಾಂಕ್ಷಿಗಳಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ

February 12th, 10:30 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಅವರು ನವದೆಹಲಿಯಲ್ಲಿ ಇಂಟಿಗ್ರೇಟೆಡ್ ಕಾಂಪ್ಲೆಕ್ಸ್ ಕರ್ಮಯೋಗಿ ಭವನದ ಒಂದನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂಕೀರ್ಣವು ಮಿಷನ್ ಕರ್ಮಯೋಗಿಯ ವಿವಿಧ ಆಧಾರಸ್ತಂಭಗಳ ನಡುವೆ ಸಹಭಾಗಿತ್ವ ಮತ್ತು ಸಂಯೋಜಿತ ಕ್ರಿಯೆ ಅಥವಾ ಕಾರ್ಯಾಚರಣೆಯನ್ನು ಉತ್ತೇಜಿಸುತ್ತದೆ.

PM condemns the the attack on the Assam Rifles convoy in Manipur

November 13th, 07:15 pm

The Prime Minister, Shri Narendra Modi has condemned the attack on the Assam Rifles convoy in Manipur. He paid homage to those soldiers and family members who have been martyred today.