ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

August 25th, 11:30 am

ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.