ಪ್ಯಾರಾಲಿಂಪಿಕ್ ಕ್ರೀಡಾಕೂಟ: ಭಾರತೀಯ ಕ್ರೀಡಾಪಟುಗಳ ಉತ್ತಮ ಸಾಧನೆಗೆ ಪ್ರಧಾನ ಮಂತ್ರಿ ಶ್ಲಾಘನೆ

September 08th, 10:29 pm

ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಅತ್ಯುತ್ತಮ ಸಾಧನೆಯನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ಯಾರಿಸ್‌ನಲ್ಲಿ ನಡೆದ ಪ್ಯಾರಾಲಿಂಪಿಕ್ ಗೇಮ್ಸ್ 2024 ರಲ್ಲಿ 29 ಪದಕಗಳನ್ನು ಗಳಿಸಿದ ರಾಷ್ಟ್ರದ ಪ್ಯಾರಾ-ಅಥ್ಲೀಟ್‌ಗಳ ಅಚಲವಾದ ಸಮರ್ಪಣೆ ಮತ್ತು ಅದಮ್ಯ ಮನೋಭಾವವನ್ನು ಅವರು ಕೊಂಡಾಡಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೈಜಂಪ್ ನಲ್ಲಿ ಚಿನ್ನ ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ

September 06th, 05:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈ ಜಂಪ್ ಟಿ64ರಲ್ಲಿ ಚಿನ್ನದ ಪದಕವನ್ನು ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

ಭಾರತದ ಅಥ್ಲೀಟ್ ಕಪಿಲ್ ಪರ್ಮಾರ್ ಗೆ ಜೂಡೋದಲ್ಲಿ ಕಂಚಿನ ಪದಕ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 05th, 10:26 pm

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ 60 ಕೆಜಿ ಜೂಡೋ1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ಕಪಿಲ್ ಪರ್ಮಾರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಚೊಚ್ಚಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವ; ಪ್ರಧಾನಿ ನರೇಂದ್ರ ಮೋದಿ ಸಂದೇಶ

September 05th, 11:00 am

ನನ್ನ ಆತ್ಮೀಯ ಸ್ನೇಹಿತರೇ, ನಿಮ್ಮೆಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು. ಮೊದಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವಕ್ಕೆ ನಿಮ್ಮೆಲ್ಲರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ಈ ಅದ್ಭುತ ಉಪಕ್ರಮಕ್ಕಾಗಿ ನಾನು ಅಂತಾರಾಷ್ಟ್ರೀಯ ಸೌರಶಕ್ತಿ ಮೈತ್ರಿಕೂಟವನ್ನು ಅಭಿನಂದಿಸುತ್ತೇನೆ.

2024 ಪ್ಯಾರೀಸ್ ಒಲಿಂಪಿಕ್ಸ್: ಎರಡನೇ ಪದಕ ಗೆದ್ದ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

September 02nd, 10:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸದ್ಯ ನಡೆಯುತ್ತಿರುವ 2024ರ ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಎರಡನೇ ಪದಕ ಗೆದ್ದ ಟ್ರ್ಯಾಕ್ ಮತ್ತು ಫೀಲ್ಡ್‌ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಅಭಿನಂದಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪುರುಷರ ಹೈ ಜಂಪ್ T47 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು

September 02nd, 10:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ಯಾರಾಲಿಂಪಿಕ್ಸ್ 2024ನ ಪುರುಷರ ಎತ್ತರ ಜಿಗಿತ ಟಿ47 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್‌ ಅವರನ್ನು ಅಭಿನಂದಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ 2024: ಪಿ2 - ಮಹಿಳೆಯರ 10ಮೀ, ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ರುಬಿನಾ ಫ್ರಾನ್ಸಿಸ್ ಗೆ ಪ್ರಧಾನಮಂತ್ರಿ ಅಭಿನಂದನೆ

August 31st, 08:19 pm

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪಿ2 - ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ರುಬಿನಾ ಫ್ರಾನ್ಸಿಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪಿ1 ಪುರುಷರ 10 ಮೀ. ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಗೆ ಬೆಳ್ಳಿ ಪದಕ: ಪ್ರಧಾನ ಮಂತ್ರಿ ಹರ್ಷ

August 30th, 08:55 pm

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪಿ1 ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಮನೀಶ್ ನರ್ವಾಲ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

100 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಥ್ಲೀಟ್ ಪ್ರೀತಿ ಪಾಲ್: ಪ್ರಧಾನಮಂತ್ರಿ ಅಭಿನಂದನೆ

August 30th, 06:42 pm

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರ 100 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

R2 ಮಹಿಳೆಯರ 10 ಮೀಟರ್ ಏರ್ ರೈಫಲ್ SH1 ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಭಾರತೀಯ ಶೂಟರ್ ಮೋನಾ ಅಗರ್ ವಾಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 30th, 04:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ R2 ಮಹಿಳಾ 10 ಮೀಟರ್ ಏರ್ ರೈಫಲ್ SH1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಶೂಟರ್ ಮೋನಾ ಅಗರ್ ವಾಲ್ ಅವರನ್ನು ಅಭಿನಂದಿಸಿದ್ದಾರೆ.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಆರ್ 2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಅವನಿ ಲೇಖರಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

August 30th, 04:49 pm

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಆರ್ 2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತೀಯ ಶೂಟರ್ ಅವನಿ ಲೇಖರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಮೂರು ಪ್ಯಾರಾಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್-2024ರ ತಂಡಕ್ಕೆ ಶುಭ ಹಾರೈಸಿರುವ 140 ಕೋಟಿ ಭಾರತೀಯರು: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

August 28th, 09:47 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡಕ್ಕೆ ಶುಭ ಕೋರಿದ್ದಾರೆ. ಕ್ರೀಡಾಪಟುಗಳ ಧೈರ್ಯ ಮತ್ತು ದೃಢನಿಶ್ಚಯವನ್ನು ಶ್ಲಾಘಿಸಿದ ಅವರು, 140 ಕೋಟಿ ಭಾರತೀಯರು ಅವರ ಯಶಸ್ಸಿಗೆ ಶುಭ ಹಾರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ತಂಡದೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು

August 19th, 06:30 pm

ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಭಾರತೀಯ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತೋಷಕರ ಸಂವಾದ ನಡೆಸಿದರು. ಶೀತಲ್ ದೇವಿ, ಅವನಿ ಲೆಖರಾ, ಸುನಿಲ್ ಅಂತಿಲ್, ಮರಿಯಪ್ಪನ್ ತಂಗವೇಲು ಮತ್ತು ಅರುಣಾ ತನ್ವಾರ್ ಅವರಂತಹ ಕ್ರೀಡಾಪಟುಗಳೊಂದಿಗೆ ಪ್ರಧಾನಿ ವೈಯಕ್ತಿಕವಾಗಿ ಮಾತನಾಡಿದರು. ಕ್ರೀಡಾಕೂಟಕ್ಕಾಗಿ ಎಲ್ಲಾ ಕ್ರೀಡಾಪಟುಗಳಿಗೆ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು

ಪ್ಯಾರಿಸ್ ಒಲಿಂಪಿಕ್ಸ್‌ಗೆ ಹೋದ ಪ್ರತಿಯೊಬ್ಬ ಆಟಗಾರನೂ ಚಾಂಪಿಯನ್: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 15th, 05:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಮ್ಮ ರಾಷ್ಟ್ರವನ್ನು ಪ್ರತಿನಿಧಿಸಿದ ಭಾರತೀಯ ತುಕಡಿಯೊಂದಿಗೆ ಸಂವಾದ ನಡೆಸಿದರು. ನವದೆಹಲಿಯಲ್ಲಿ ಅವರನ್ನು ಭೇಟಿಯಾದಾಗ, ಶ್ರೀ ಮೋದಿ ಅವರು ಆಟಗಳಿಂದ ಅವರ ಅನುಭವಗಳನ್ನು ಕೇಳಿದರು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅವರ ಸಾಧನೆಗಳನ್ನು ಶ್ಲಾಘಿಸಿದರು.

ಕಂಚಿನ ಪದಕ ವಿಜೇತರಾದ ಮನು ಭಾಕರ್ ಮತ್ತು ಸರಬ್ ಜೋತ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

July 30th, 01:38 pm

ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಶೂಟರ್ ಗಳಾದ ಮನು ಭಾಕರ್ ಮತ್ತು ಸರಬ್ ಜೋತ್ ಅವರುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

June 30th, 11:00 am

'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.

ಪ್ರಧಾನ ಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿ ಪ್ರದಾನ

July 13th, 11:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ ನ ಅತ್ಯುನ್ನತ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ನ್ನು ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಪ್ರದಾನ ಮಾಡಿದರು.

ಫ್ರಾನ್ಸ್ ಅಧ್ಯಕ್ಷರ ಜೊತೆ ಪ್ರಧಾನಮಂತ್ರಿ ನಡೆಸಿದ ಸಭೆಯ ಪತ್ರಿಕಾ ಪ್ರಕಟಣೆ

May 04th, 10:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೂಪನ್ ಹೇಗನ್ ನಲ್ಲಿ 2ನೇ ಭಾರತ- ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿ ವಾಪಸ್ಸಾಗುವಾಗ 2022ರ ಮೇ 4ರಂದು ಫ್ರಾನ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು.

ಬರ್ಲಿನ್, ಕೂಪನ್ ಹೇಗನ್ ಮತ್ತು ಪ್ಯಾರೀಸ್ ಭೇಟಿಗೂ ಮುನ್ನ ಪ್ರಧಾನಮಂತ್ರಿಗಳ ನಿರ್ಗಮನ ಹೇಳಿಕೆ

May 01st, 11:34 am

ಜರ್ಮನಿಯ ಫೆಡರಲ್ ಚಾನ್ಸೆಲರ್ ಗೌರವಾನ್ವಿತ ಶ್ರೀ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ನಾನು 2022ರ ಮೇ 2ರಂದು ಜರ್ಮನಿಯ ಬರ್ಲಿನ್‌ಗೆ ಭೇಟಿ ನೀಡಲಿದ್ದೇನೆ. ನಂತರ 2022ರ ಮೇ 3-4ರಂದು ಡೆನ್ಮಾರ್ಕ್ ಪ್ರಧಾನ ಮಂತ್ರಿ ಗೌರನ್ವಾನಿತ ಮೆಟ್ಟೆ ಫೆಡ್ರಿಕ್ಸನ್ ಅವರ ಆಹ್ವಾನದ ಮೇರೆಗೆ ಡೆನ್ಮಾರ್ಕ್‌ನ ಕೋಪನ್‌ ಹೇಗನ್‌ಗೆ ಪ್ರಯಾಣಿಸುತ್ತೇನೆ, ಅಲ್ಲಿ ಪ್ರಧಾನಮಂತ್ರಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತೇನೆ ಮತ್ತು ಎರಡನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತೇನೆ. ಭಾರತಕ್ಕೆ ಹಿಂತಿರುಗುವಾಗ, ಫ್ರಾನ್ಸ್‌ನ ಅಧ್ಯಕ್ಷ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗಿನ ಮಾತುಕತೆಗಾಗಿ ನಾನು ಪ್ಯಾರೀಸ್ ನಲ್ಲಿ ಕೆಲ ಕಾಲ ನಿಲುಗಡೆ ಮಾಡುತ್ತೇನೆ.

ಪ್ರಧಾನಿ ಗ್ಲೋಬಲ್‌ ಸಿಟಿಝನ್‌ ಲೈವ್‌’ ಕಾರ್ಯಕ್ರಮದಲ್ಲಿ ಸೆ.25ರಂದು ಸಂಜೆ ವಿಡಿಯೊ ಭಾಷಣ ಮಾಡುವರು

September 24th, 05:31 pm

ಪ್ರಧಾನಿ ನರೇಂದ್ರಮೋದಿ ಅವರು ಗ್ಲೋಬಲ್‌ ಸಿಟಿಜನ್‌ ಲೈವ್‌ ಕಾರ್ಯಕ್ರಮದಲ್ಲಿ ಸೆ.25 ಶನಿವಾರ ಸಂಜೆ ವಿಡಿಯೊ ಭಾಷಣ ನೀಡಲಿದ್ದಾರೆ.