ಕಂಚಿನ ಪದಕ ವಿಜೇತರಾದ ಮನು ಭಾಕರ್ ಮತ್ತು ಸರಬ್ ಜೋತ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

July 30th, 01:38 pm

ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಶೂಟರ್ ಗಳಾದ ಮನು ಭಾಕರ್ ಮತ್ತು ಸರಬ್ ಜೋತ್ ಅವರುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 28th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!

ಪ್ಯಾರಿಸ್ ಒಲಿಂಪಿಕ್ಸ್: ಭಾರತೀಯ ಅಥ್ಲೀಟ್ ಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ

July 26th, 10:50 pm

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡದ ಎಲ್ಲಾ ಅಥ್ಲೀಟ್ ಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ರಷ್ಯಾದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

July 09th, 11:35 am

ನಿಮ್ಮ ಪ್ರೀತಿ, ವಾತ್ಸಲ್ಯ ಮತ್ತು ನೀವು ಇಲ್ಲಿರಲು ತೆಗೆದುಕೊಂಡಿರುವ ದೀರ್ಘ ಸಮಯವನ್ನು ನಾನು ಗಾಢವಾಗಿ ಪ್ರಶಂಸಿಸುತ್ತೇನೆ. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ; ನಾನು ನನ್ನೊಂದಿಗೆ ಬಹಳಷ್ಟು ತಂದಿದ್ದೇನೆ. ನಾನು ಭಾರತದ ಫಲವತ್ತಾದ ಮಣ್ಣಿನ ಸಾರವನ್ನು ತಂದಿದ್ದೇನೆ, 140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಅವರ ಹೃತ್ಪೂರ್ವಕ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ. 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಭಾರತೀಯ ಸಮುದಾಯದ ಜತೆಗಿನ ನನ್ನ ಮೊದಲ ಸಂವಾದ ಇಲ್ಲಿ ಮಾಸ್ಕೋದಲ್ಲಿ ನಡೆಯುತ್ತಿರುವುದು ನನಗೆ ಅಪಾರ ಸಂತೋಷ ನೀಡುತ್ತಿದೆ.

ಪ್ರಧಾನಮಂತ್ರಿಯವರು ರಷ್ಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು

July 09th, 11:30 am

ಇಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರನ್ನು ಭಾರತೀಯ ಸಮುದಾಯದ ಸದಸ್ಯರು ವಿಶೇಷ ಅಕ್ಕರೆ ಮತ್ತು ಆತ್ಮೀಯತೆಯಿಂದ ಸ್ವಾಗತಿಸಿದರು.

ಪ್ಯಾರಿಸ್ ಒಲಿಂಪಿಕ್ಸ್-2024ರ ಭಾರತೀಯ ತಂಡದೊಂದಿಗೆ ಪ್ರಧಾನ ಮಂತ್ರಿ ಸಂವಾದ

July 05th, 05:07 pm

ಗೌರವಾನ್ವಿತ ಪ್ರಧಾನ ಮಂತ್ರಿಗಳೆ, ಮಾನ್ಯ ಸಚಿವರೆ, ಡಾ. ಪಿ.ಟಿ. ಉಷಾ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಎಲ್ಲಾ ಅಥ್ಲೀಟ್ ಗಳು ಇಂದು ನಿಮ್ಮೊಂದಿಗೆ ಸಂವಾದ ನಡೆಸಲು ಬಂದಿದ್ದಾರೆ. ಅವರು ನಿಮ್ಮಿಂದ ಮಾರ್ಗದರ್ಶನ ನಿರೀಕ್ಷಿಸುತ್ತಿದ್ದಾರೆ. ಸರ್, ಅವರ ತರಬೇತಿಯು ವಿದೇಶದಲ್ಲಿ ಮತ್ತು ದೇಶದ ಇತರ ಕೇಂದ್ರಗಳಲ್ಲಿ ನಡೆಯುತ್ತಿರುವುದರಿಂದ, ಸರಿಸುಮಾರು 98 ಕ್ರೀಡಾಪಟುಗಳು ಆನ್‌ಲೈನ್‌ನಲ್ಲಿ ಸಂಪರ್ಕ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ನೀವೆಲ್ಲರೂ ಪ್ಯಾರಿಸ್‌ಗೆ ಹೊರಡಲಿದ್ದೀರಿ. ದಯವಿಟ್ಟು ಎಲ್ಲರಿಗೂ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕಾಗಿ ವಿನಂತಿಸುತ್ತೇನೆ. ಧನ್ಯವಾದಗಳು, ಸರ್!

ಪ್ಯಾರಿಸ್ ಒಲಿಂಪಿಕ್ 2024 ರಲ್ಲಿ ಪಾಲ್ಗೊಳ್ಳಲು ತೆರಳಲಿರುವ ಭಾರತ ತಂಡದೊಂದಿಗೆ ಪ್ರಧಾನಮಂತ್ರಿ ಸಂವಾದ

July 04th, 09:36 pm

ಪ್ಯಾರಿಸ್ ಒಲಿಂಪಿಕ್ 2024 ರಲ್ಲಿ ಭಾಗವಹಿಸಲಿರುವ ಭಾರತೀಯ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ಸಂವಾದ ನಡೆಸಿದರು.