ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.ಯಶಸ್ವಿಯಾಗಿ ಅನುಷ್ಠಾನಗೊಂಡ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 03rd, 11:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿಂದು 3 ಪರಿವರ್ತನೀಯ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ 3 ಕಾನೂನುಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಸತ್ಯ ಮತ್ತು ನ್ಯಾಯ ಸ್ಥಾಪಿಸುವ ಶಕ್ತಿಯ ರೂಪವಾದ ಮಾತೆ ಚಂಡಿ ದೇವಿಗೆ ಚಂಡೀಗಢದ ಗುರುತು ಸಂಬಂಧಿಸಿದೆ, ಅದೇ ತತ್ವಶಾಸ್ತ್ರವು ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಪೂರ್ಣ ಸ್ವರೂಪದ ಆಧಾರವಾಗಿದೆ. ಭಾರತ ಸಂವಿಧಾನದ ಸ್ಫೂರ್ತಿಯಿಂದ ಪ್ರೇರಿತವಾದ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದ್ದು, ರಾಷ್ಟ್ರವು ವಿಕಸಿತ ಭಾರತ್ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯುವ ಪ್ರಮುಖ ಘಟ್ಟದಲ್ಲಿದೆ. ಭಾರತೀಯ ಸಂವಿಧಾನ ಅಳವಡಿಸಿಕೊಂ 75 ವರ್ಷಗಳಲ್ಲಿ ನಮ್ಮ ಸಂವಿಧಾನವು ದೇಶದ ನಾಗರಿಕರಿಗೆ ಕಲ್ಪಿಸಿದ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಸಂಕೀರ್ಣ ಪ್ರಯತ್ನವಾಗಿದೆ. ಅದರ ಲೈವ್ ಡೆಮೊ ಮೂಲಕ ಕಾನೂನುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಕುರಿತು ತನಗೆ ಒಂದು ನೋಟ ಸಿಕ್ಕಿದೆ. ಹಾಗಾಗಿ, ಕಾನೂನುಗಳ ಲೈವ್ ಡೆಮೊಗೆ ಭೇಟಿ ನೀಡುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದರು. 3 ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಚಂಡೀಗಢದ ಆಡಳಿತದ ಎಲ್ಲಾ ಪಾಲುದಾರರನ್ನು ಅವರು ಅಭಿನಂದಿಸಿದರು.ಗಯಾನಾದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯ ಪ್ರವರ್ಧಮಾನಕ್ಕೆ ಬರುತ್ತಿವೆ: ಪ್ರಧಾನಮಂತ್ರಿ
November 22nd, 03:06 am
ಭಾರತ-ಗಯಾನ ಸಾಂಸ್ಕೃತಿಕ ಸಂಬಂಧಗಳ ಮತ್ತಷ್ಟು ಬಲವರ್ಧನೆಗೆ ಸ್ವಾಮಿ ಆಕಾಶರಾನಂದಜಿ ಕೈಗೊಂಡಿರುವ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸರಸ್ವತಿ ವಿದ್ಯಾನಿಕೇತನ ಶಾಲೆಗೆ ಭೇಟಿ ನೀಡಿದ್ದರು ಮತ್ತು ಭಾರತದ ಸಂಸ್ಕೃತಿ ಮತ್ತು ಸಂಪ್ರದಾಯ ಗಯಾನಾದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿವೆ ಎಂದು ಹೇಳಿದರು.ಗಯಾನದ ಅಧ್ಯಕ್ಷರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
November 21st, 04:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ನವೆಂಬರ್ 20ರಂದು ಜಾರ್ಜ್ ಟೌನ್ ನ ಸ್ಟೇಟ್ ಹೌಸ್ ನಲ್ಲಿ ಅಧ್ಯಕ್ಷ ಗೌರವಾನ್ವಿತ ಡಾ.ಮೊಹಮ್ಮದ್ ಇರ್ಫಾನ್ ಆಲಿ ಅವರನ್ನು ಭೇಟಿ ಮಾಡಿದ್ದರು. ಪ್ರಧಾನಿ ಅವರು ಸ್ಟೇಟ್ ಹೌಸ್ ಗೆ ಆಗಮಿಸುತ್ತಿದ್ದಂತೆಯೇ ಅಧ್ಯಕ್ಷ ಆಲಿ ಅವರು ಸ್ವಾಗತಿಸಿದರು ಮತ್ತು ಸಾಂಪ್ರದಾಯಿಕ ಗೌರವ ವಂದನೆ ಸಲ್ಲಿಸಿದರು.ಜಂಟಿ ಹೇಳಿಕೆ: ಭಾರತ-ಆಸ್ಟ್ರೇಲಿಯಾ 2ನೇ ವಾರ್ಷಿಕ ಶೃಂಗಸಭೆ
November 19th, 11:22 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರು 2024ರ ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ʻಗ್ರೂಪ್ ಆಫ್ 20ʼ (ಜಿ 20) ಶೃಂಗಸಭೆಯ ನೇಪಥ್ಯದಲ್ಲಿ ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ ನಡೆಸಿದರು.ಸಿ -295 ವಿಮಾನ ಕಾರ್ಖಾನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 28th, 10:45 am
ಗೌರವಾನ್ವಿತ ಪೆಡ್ರೊ ಸ್ಯಾಂಚೆಜ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ, ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜೀ, ವಿದೇಶಾಂಗ ಸಚಿವರಾದ ಶ್ರೀ ಎಸ್. ಜೈಶಂಕರ್ ಜೀ, ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಸ್ಪೇನ್ ಮತ್ತು ರಾಜ್ಯ ಸರ್ಕಾರದ ಸಚಿವರು, ಏರ್ ಬಸ್ ಮತ್ತು ಟಾಟಾ ತಂಡಗಳ ಎಲ್ಲಾ ಸದಸ್ಯರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ದೇಶದ ಪ್ರಧಾನಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಗುಜರಾತ್ ನ ವಡೋದರಾದಲ್ಲಿ ಸಿ-295 ವಿಮಾನಗಳನ್ನು ತಯಾರಿಸಲು ಟಾಟಾ ವಿಮಾನ ತಯಾರಿಕಾ ಸಂಕೀರ್ಣವನ್ನು ಜಂಟಿಯಾಗಿ ಉದ್ಘಾಟಿಸಿದರು
October 28th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಮಂತ್ರಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಇಂದು ಗುಜರಾತ್ ನ ವಡೋದರದಲ್ಲಿರುವ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ-295 ವಿಮಾನಗಳನ್ನು ತಯಾರಿಸುವ ಟಾಟಾ ವಿಮಾನ ತಯಾರಿಕಾ ಸಂಕೀರ್ಣ (ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್) ವನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ಇಬ್ಬರು ಪ್ರಧಾನಿಗಳೂ ವೀಕ್ಷಿಸಿದರು.ಜರ್ಮನಿಯ ಚಾನ್ಸಲರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಭಾಷಾಂತರ
October 25th, 01:50 pm
ಮೊದಲನೆಯದಾಗಿ, ನಾನು ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತ ಕೋರಲು ಬಯಸುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಮೂರನೇ ಬಾರಿಗೆ ನಿಮ್ಮನ್ನು ಭಾರತಕ್ಕೆ ಸ್ವಾಗತಿಸುವ ಅವಕಾಶ ನಮಗೆ ದೊರೆತಿರುವುದಕ್ಕೆ ಸಂತೋಷವಾಗಿದೆ.ಜಮೈಕಾದ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆ
October 01st, 12:00 pm
ಪ್ರಧಾನ ಮಂತ್ರಿ ಹೋಲ್ನೆಸ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ನನಗೆ ಸಂತೋಷವಾಗಿದೆ. ಇದು ಪ್ರಧಾನಮಂತ್ರಿ ಹೋಲ್ನೆಸ್ ಅವರ ಮೊದಲ ದ್ವಿಪಕ್ಷೀಯ ಭಾರತ ಭೇಟಿಯಾಗಿದೆ. ಅದಕ್ಕಾಗಿಯೇ ನಾವು ಈ ಭೇಟಿಗೆ ವಿಶೇಷ ಪ್ರಾಮುಖ್ಯತೆ ನೀಡುತ್ತೇವೆ.ಪ್ರಧಾನ ಮಂತ್ರಿ ಹೋಲ್ನೆಸ್ ಅವರು ಬಹಳ ಹಿಂದಿನಿಂದಲೂ ಭಾರತದ ಸ್ನೇಹಿತರಾಗಿದ್ದಾರೆ. ಹಲವಾರು ಬಾರಿ ಅವರನ್ನು ಭೇಟಿಯಾಗುವ ಅವಕಾಶ ನನಗೆ ದೊರೆತಿದೆ. ಮತ್ತು ಪ್ರತಿ ಬಾರಿಯೂ, ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸುವ ಅವರ ಆಲೋಚನೆಗಳಲ್ಲಿ ಅವರ ಬದ್ಧತೆಯನ್ನು ನಾನು ಅರಿತುಕೊಂಡಿದ್ದೇನೆ. ಅವರ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಇಡೀ ಕೆರಿಬಿಯನ್ ಪ್ರದೇಶದೊಂದಿಗಿನ ನಮ್ಮ ಬಾಂಧವ್ಯವನ್ನು ವರ್ಧಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಬ್ರೂನೈ ಸುಲ್ತಾನರು ಆಯೋಜಿಸಿದ್ದ ಔತಣಕೂಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಇಂಗ್ಲೀಷ್ ಅನುವಾದ
September 04th, 12:32 pm
ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಮಹಾರಾಜರು ಮತ್ತು ಇಡೀ ರಾಜಮನೆತನಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಬ್ರೂನೈಗೆ ಭಾರತದ ಪ್ರಧಾನಮಂತ್ರಿಯೊಬ್ಬರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಆದಾಗ್ಯೂ, ಇಲ್ಲಿ ನಾನು ಪಡೆದಿರುವ ಆತ್ಮೀಯತೆ ಮತ್ತು ಗೌರವ ನಮ್ಮ ದೇಶಗಳ ನಡುವಿನ ಶತಮಾನಗಳ ಹಳೆಯ ಬಾಂಧವ್ಯದ ಪ್ರತಿ ಕ್ಷಣವನ್ನು ನಾನು ನೆನಪಿಸಿಕೊಳ್ಳುತ್ತೇನೆ."ಕಾರ್ಯತಂತ್ರ ಸಹಭಾಗಿತ್ವದ ಸ್ಥಾಪನೆ" ಕುರಿತು ಭಾರತ-ಪೋಲೆಂಡ್ ಜಂಟಿ ಹೇಳಿಕೆ
August 22nd, 08:21 pm
ಪೋಲೆಂಡ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಆಗಸ್ಟ್ 21-22ರಂದು ಪೋಲೆಂಡ್‌ಗೆ ಅಧಿಕೃತ ಭೇಟಿ ನೀಡಿದರು. ಎರಡೂ ರಾಷ್ಟ್ರಗಳು ರಾಜತಾಂತ್ರಿಕ ಸಂಬಂಧಗಳ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಈ ಐತಿಹಾಸಿಕ ಭೇಟಿ ನೀಡಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪೋಲೆಂಡ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯ ಕನ್ನಡ ಅನುವಾದ
August 22nd, 03:00 pm
ಘನತೆವೆತ್ತ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ,ರಷ್ಯಾದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
July 09th, 11:35 am
ನಿಮ್ಮ ಪ್ರೀತಿ, ವಾತ್ಸಲ್ಯ ಮತ್ತು ನೀವು ಇಲ್ಲಿರಲು ತೆಗೆದುಕೊಂಡಿರುವ ದೀರ್ಘ ಸಮಯವನ್ನು ನಾನು ಗಾಢವಾಗಿ ಪ್ರಶಂಸಿಸುತ್ತೇನೆ. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ; ನಾನು ನನ್ನೊಂದಿಗೆ ಬಹಳಷ್ಟು ತಂದಿದ್ದೇನೆ. ನಾನು ಭಾರತದ ಫಲವತ್ತಾದ ಮಣ್ಣಿನ ಸಾರವನ್ನು ತಂದಿದ್ದೇನೆ, 140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಅವರ ಹೃತ್ಪೂರ್ವಕ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ. 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಭಾರತೀಯ ಸಮುದಾಯದ ಜತೆಗಿನ ನನ್ನ ಮೊದಲ ಸಂವಾದ ಇಲ್ಲಿ ಮಾಸ್ಕೋದಲ್ಲಿ ನಡೆಯುತ್ತಿರುವುದು ನನಗೆ ಅಪಾರ ಸಂತೋಷ ನೀಡುತ್ತಿದೆ.ಪ್ರಧಾನಮಂತ್ರಿಯವರು ರಷ್ಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು
July 09th, 11:30 am
ಇಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರನ್ನು ಭಾರತೀಯ ಸಮುದಾಯದ ಸದಸ್ಯರು ವಿಶೇಷ ಅಕ್ಕರೆ ಮತ್ತು ಆತ್ಮೀಯತೆಯಿಂದ ಸ್ವಾಗತಿಸಿದರು.ಯುಎಇಯ ಅಬುಧಾಬಿಯಲ್ಲಿ ಬಿಎಪಿಎಸ್ ಹಿಂದೂ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 14th, 07:16 pm
ಶ್ರೀ ಸ್ವಾಮಿ ನಾರಾಯಣ್ ಜೈ ದೇವ್, ಗೌರವಾನ್ವಿತ ಶೇಖ್ ನಹ್ಯಾನ್ ಅಲ್ ಮುಬಾರಕ್, ಗೌರವಾನ್ವಿತ ಮಹಂತ್ ಸ್ವಾಮಿ ಜೀ ಮಹಾರಾಜ್, ಭಾರತ, ಯುಎಇ ಮತ್ತು ವಿಶ್ವದಾದ್ಯಂತದ ವಿವಿಧ ದೇಶಗಳ ಗೌರವಾನ್ವಿತ ಅತಿಥಿಗಳು ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನನ್ನ ಸಹೋದರ ಸಹೋದರಿಯರೇ!PM Modi inaugurates BAPS Hindu Mandir in Abu Dhabi, UAE
February 14th, 06:51 pm
Prime Minister Narendra Modi inaugurated the BAPS Hindu Mandir in Abu Dhabi, UAE. The PM along with the Mukhya Mahant of BAPS Hindu Mandir performed all the rituals. The PM termed the Hindu Mandir in Abu Dhabi as a symbol of shared heritage of humanity.ವಿಶ್ವ ಸರ್ಕಾರದ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
February 14th, 02:30 pm
ವಿಶ್ವ ಸರ್ಕಾರದ ಶೃಂಗಸಭೆಯಲ್ಲಿ ವಿಶೇಷವಾಗಿ ಎರಡನೇ ಬಾರಿಗೆ ಮುಖ್ಯ ಭಾಷಣ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪಾಲಿಗೆ ದೊಡ್ಡ ಗೌರವವಾಗಿದೆ. ಈ ಆಮಂತ್ರಣವನ್ನು ನೀಡಿದ್ದಕ್ಕಾಗಿ ಮತ್ತು ಅಂತಹ ಆತ್ಮೀಯ ಸ್ವಾಗತವನ್ನು ನೀಡಿದ್ದಕ್ಕಾಗಿ ಘನತೆವೆತ್ತ ಶ್ರೀ ಶೇಖ್ ಮೊಹಮ್ಮದ್ ಬಿನ್ ರಶೀದ್ ಜಿ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಗೌರವಾನ್ವಿತ ಸಹೋದರ , ಘನತೆವೆತ್ತ ಶ್ರೀ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಹಲವಾರು ಸಂದರ್ಭಗಳಲ್ಲಿ ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿದೆ. ಅವರು ದೂರ ದೃಷ್ಟಿಕೋನ ಹೊಂದಿರುವ ನಾಯಕ ಮಾತ್ರವಲ್ಲದೆ ನಿರ್ಣಯ ಮತ್ತು ಬದ್ಧತೆಯ ನಾಯಕರೂ ಕೂಡಾ ಹೌದು.ವಿಶ್ವ ಸರ್ಕಾರಗಳ ಶೃಂಗಸಭೆ 2024 ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
February 14th, 02:09 pm
ಯು.ಎ.ಇ. ಉಪಾಧ್ಯಕ್ಷ, ಪ್ರಧಾನಮಂತ್ರಿ, ರಕ್ಷಣಾ ಸಚಿವರು ಮತ್ತು ದುಬೈ ಆಡಳಿತಗಾರರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 14 ಫೆಬ್ರವರಿ 2024 ರಂದು ದುಬೈನಲ್ಲಿ ವಿಶ್ವ ಸರ್ಕಾರಗಳ ಶೃಂಗಸಭೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದರು. ಶೃಂಗಸಭೆಯಲ್ಲಿ ಭವಿಷ್ಯದ ಸರ್ಕಾರಗಳನ್ನು ರೂಪಿಸುವುದು ವಿಷಯದ ಕುರಿತು ಅವರು ಪ್ರಧಾನ ಅಧಿವೇಶನದಲ್ಲಿ ವಿಶೇಷ ಭಾಷಣವನ್ನು ಮಾಡಿದರು. 2018 ರಲ್ಲಿ ವಿಶ್ವ ಸರ್ಕಾರಗಳ ಶೃಂಗಸಭೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಪ್ರಧಾನಮಂತ್ರಿಯವರು ಭಾಗವಹಿಸಿದ್ದರು. ಈ ಬಾರಿಯ ಶೃಂಗಸಭೆಯಲ್ಲಿ 10 ರಾಷ್ಟ್ರಾಧ್ಯಕ್ಷರು ಮತ್ತು 10 ದೇಶಗಳ ಪ್ರಧಾನಮಂತ್ರಿಗಳು ಸೇರಿದಂತೆ 20 ವಿಶ್ವ ನಾಯಕರು ಭಾಗವಹಿಸಿದ್ದಾರೆ. ಈ ಜಾಗತಿಕ ಕೂಟದಲ್ಲಿ 120 ದೇಶಗಳ ಸರ್ಕಾರಗಳು ಮತ್ತು ಪ್ರತಿನಿಧಿಗಳು ಭಾಗವಹಿಸಿ ಪ್ರತಿನಿಧಿಸಿದ್ದಾರೆ.