ಪದ್ಮ ಪ್ರಶಸ್ತಿಗಳಿಗೆ ಪ್ರೇರಣಾದಾಯಕ ವ್ಯಕ್ತಿಗಳ ನಾಮನಿರ್ದೇಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮನವಿ

September 09th, 06:00 pm

ಪ್ರತಿಷ್ಠಿತ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಭಾರತದ ಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.

ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

March 21st, 10:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಮಾಜದ ನಾನಾ ಕ್ಷೇತ್ರಗಳ ಗಣ್ಯರಿಗೆ ನೀಡಲಾಗುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಮಧ್ಯಪ್ರದೇಶದ ಭೋಪಾಲದಲ್ಲಿ ಜನಜಾತೀಯ ಗೌರವ ದಿವಸ್ ಮಹಾಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

November 15th, 01:05 pm

ಮಧ್ಯಪ್ರದೇಶದ ಮೊದಲ ಬುಡಕಟ್ಟು ರಾಜ್ಯಪಾಲರು ಎಂಬ ಗೌರವ ಶ್ರೀ ಮಂಗೂಭಾಯಿ ಪಟೇಲ್ ಜೀ ಅವರದಾಗಿರುವುದಕ್ಕೆ ನನಗೆ ಹೆಮ್ಮೆ ಇದೆ. ಅವರು ತಮ್ಮ ಇಡೀ ಜೀವನವನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ವಿನಿಯೋಗಿಸಿದರು. ತಮ್ಮ ಬದುಕಿನುದ್ದಕ್ಕೂ ಅವರು ಸಾಮಾಜಿಕ ಸಂಘಟನೆಯ ಅರ್ಪಣಾಭಾವದ “ಸೇವಕ” ನಾಗಿ ಉಳಿದರು ಮತ್ತು ಬಳಿಕ ಸರಕಾರದಲ್ಲಿ ಸಚಿವರೂ ಆದರು.

ಜನ್ ಜಾತಿಯಾ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಜನ್ ಜಾತಿಯಾ ಸಮುದಾಯದ ಅನೇಕ ಕಲ್ಯಾಣ ಕಾರ್ಯಕ್ರಮಗಳಿಗೆ ಪ್ರಧಾನಮಂತ್ರಿ ಚಾಲನೆ

November 15th, 01:00 pm

ಮಧ್ಯಪ್ರದೇಶದಲ್ಲಿ ಜನ್ ಜಾತಿಯಾ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಜನ್ ಜಾತಿಯಾ ಸಮುದಾಯದ ಅನೇಕ ಕಲ್ಯಾಣ ಕಾರ್ಯಕ್ರಮಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. “ರೇಷನ್ ಆಪ್ಕೆ ಗ್ರಾಮ್” ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಮಧ್ಯಪ್ರದೇಶದ ಸಿಕೆಲ್ ಸೆಲ್ ಅಭಿಯಾನಕ್ಕೂ ಚಾಲನೆ ನೀಡಿದರು. ದೇಶಾದ್ಯಂತ 50 ಏಕಲವ್ಯ ಮಾದರಿ ವಸತಿ ಶಾಲೆಗಳ ನಿರ್ಮಾಣಕ್ಕೆ ಪ್ರಧಾನಮಂತ್ರಿ ಅವರು ಅಡಿಪಾಯ ಹಾಕಿದರು. ಮಧ್ಯಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಯವರಲ್ಲದೇ ಕೇಂದ್ರ ಸಚಿವರಾದ ಡಾ. ವಿರೇಂದ್ರ ಕುಮಾರ್, ಶ್ರೀ ನರೇಂದ್ರ ಸಿಂಗ್ ತೋಮರ್, ಶ್ರೀ ಜ್ಯೋತಿರಾಧಿತ್ಯಾ ಸಿಂಧಿಯಾ, ಕೇಂದ್ರ ಸಂಪುಟದ ರಾಜ್ಯ ಸಚಿವರಾದ ಶ್ರೀ ಪ್ರಹ್ಲಾದ್ ಎಸ್. ಪಟೇಲ್, ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಡಾ.ಎಲ್. ಮುರುಗನ್ ಮತ್ತಿತರರು ಉಪಸ್ಥಿತರಿದ್ದರು.

ಜನರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ದುಲಾರಿ ದೇವಿಜಿ ಅವರ ಉಡುಗೊರೆಗಾಗಿ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

November 11th, 10:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ದುಲಾರಿ ದೇವಿಜಿ ಅವರು ತೋರಿದ ವರ್ತನೆಗಾಗಿ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಜನರ ಪದ್ಮ ಪ್ರಶಸ್ತಿಗೆ ಸ್ಫೂರ್ತಿದಾಯಕ ಜನರನ್ನು ನಾಮನಿರ್ದೇಶನ ಮಾಡುವಂತೆ ಸಾರ್ವಜನಿಕರಿಗೆ ಕೋರಿದ ಪ್ರಧಾನಮಂತ್ರಿ

July 11th, 11:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರ ಪದ್ಮ ಪ್ರಶಸ್ತಿಗೆ ಬೇರುಮಟ್ಟದಲ್ಲಿ ಅಸಾಧಾರಣ ಕಾರ್ಯ ಮಾಡಿದ ಮತ್ತು ಹೆಚ್ಚು ಪ್ರಚಾರಕ್ಕೆ ಬಾರದ ಜನರನ್ನು ನಾಮನಿರ್ದೇಶನ ಮಾಡುವಂತೆ ಕೋರಿದ್ದಾರೆ. ಸೆಪ್ಟೆಂಬರ್ 15ರವರೆಗೆ ಈ ನಾಮನಿರ್ದೇಶನ ತೆರೆದಿರುತ್ತದೆ.