ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 27th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.Our efforts are on modernizing the agriculture sector by incorporating latest technology: PM Modi
January 28th, 10:22 am
Prime Minister Modi addressed the Global Potato Conclave in Gandhinagar, Gujarat via video conferencing. PM Modi highlighted the steps being undertaken to double the income of farmers by 2022. The PM spoke at length about the government's efforts to modernize the agriculture sector by incorporating latest technology.3 ನೇ ಜಾಗತಿಕ ಆಲೂಗಡ್ಡೆ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ
January 28th, 10:21 am
ವಿಡಿಯೋ ಕಾನ್ಫೆರೆನ್ಸ್ ಮೂಲಕ ಇಂದು ಪ್ರಧಾನ ಮಂತ್ರಿಯವರು ಗುಜರಾತ್ ನ ಗಾಂಧಿನಗರದಲ್ಲಿ ಆಯೋಜಿಸಿರುವ 3 ನೇ ಜಾಗತಿಕ ಆಲೂಗಡ್ಡೆ ಸಮಾವೇಶ ಉದ್ದೇಶಿಸಿ ಮಾತನಾಡಿದರು ಹಿಂದಿನ 2 ಜಾಗತಿಕ ಆಲೂಗಡ್ಡೆ ಸಮಾವೇಶಗಳನ್ನು 1999 ಮತ್ತು 2008 ರಲ್ಲಿ ಆಯೋಜಿಸಲಾಗಿತ್ತು. ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಮಂಡಳಿ ಮತ್ತು ಕೇಂದ್ರ ಆಲೂಗಡ್ಡೆ ಸಂಶೋಧನಾ ಸಂಸ್ಥೆ (ಐಸಿಎಆರ್), ಶಿಮ್ಲಾ ಹಾಗೂ ಪೆರುವಿನ ಲಿಮಾದ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರ (ಸಿಐಪಿ) ಸಹಭಾಗಿತ್ವದಲ್ಲಿ ಭಾರತೀಯ ಆಲೂಗಡ್ಡೆ ಸಂಶೋಧನ ಸಂಸ್ಥೆ ಈ ಸಮಾವೇಶವನ್ನು ಆಯೋಜಿಸುತ್ತಿದೆ.