10 ನೇ ವೈಬ್ರೆಂಟ್ ಗುಜರಾತ್ ಶೃಂಗಸಭೆ 2024 ರ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಜೆಕ್ ಗಣರಾಜ್ಯದ ಪ್ರಧಾನಮಂತ್ರಿಯನ್ನು ಭೇಟಿಯಾದರು
January 10th, 07:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಫಿಯಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ವಿಶೇಷವಾಗಿ ಜ್ಞಾನ, ತಂತ್ರಜ್ಞಾನ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ಮುನ್ನಡೆಸುವ ಮಾರ್ಗಗಳ ಕುರಿತು ಚರ್ಚಿಸಿದರು. ಮೇಕ್ ಇನ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಹಲವಾರು ಜೆಕ್ ಕಂಪನಿಗಳು ರಕ್ಷಣಾ, ರೈಲ್ವೇ ಮತ್ತು ವಾಯುಯಾನ ಕ್ಷೇತ್ರಗಳಲ್ಲಿ ಭಾರತೀಯ ತಯಾರಕರೊಂದಿಗೆ ಪಾಲುದಾರಿಕೆ ಮಾಡಿಕೊಂಡಿರುವ ಬಗ್ಗೆ ಪ್ರಧಾನಮಂತ್ರಿ ವಿವರಿಸಿದರು. ಭಾರತೀಯ ಬೆಳವಣಿಗೆಯ ಕಥೆ ಮತ್ತು ಜೆಕ್ ಗಣರಾಜ್ಯದ ದೃಢವಾದ ಕೈಗಾರಿಕಾ ನೆಲೆಯು ಜಾಗತಿಕ ಪೂರೈಕೆಯಲ್ಲಿ ಸಮಾನ ಪಾಲುದಾರರರನ್ನಾಗಿ ಮಾಡುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.ಜೆಕ್ ಗಣರಾಜ್ಯದ ಪ್ರಧಾನಿಯಾಗಿ ನೇಮಕಗೊಂಡ ಘನತೆವೆತ್ತ ಪೀಟರ್ ಫಿಯಾಲಾ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
November 28th, 09:11 pm
ಜೆಕ್ ಗಣರಾಜ್ಯದ ಪ್ರಧಾನಮಂತ್ರಿಯಾಗಿ ನೇಮಕಗೊಂಡ ಘನತೆವೆತ್ತ ಪೀಟರ್ ಫಿಯಾಲಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.