ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಹೂಡಿಕೆ ಕುರಿತಾದ ಉನ್ನತ ಮಟ್ಟದ ಕಾರ್ಯಪಡೆಯ ಚೊಚ್ಚಲ ಸಭೆ ನಡೆಸಿದ ಭಾರತ-ಸೌದಿ ಅರೇಬಿಯಾ
July 28th, 11:37 pm
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಗೌರವಾನ್ವಿತ ಡಾ.ಪಿ.ಕೆ. ಮಿಶ್ರಾ ಮತ್ತು ಸೌದಿ ಇಂಧನ ಸಚಿವ ರಾಜಕುಮಾರ ಅಬ್ದುಲ್ ಅಜೀಜ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಸಹ ಅಧ್ಯಕ್ಷತೆಯಲ್ಲಿ ಹೂಡಿಕೆಗಳ ಕುರಿತ ಭಾರತ-ಸೌದಿ ಅರೇಬಿಯಾ ಉನ್ನತ ಮಟ್ಟದ ಕಾರ್ಯಪಡೆಯ ಮೊದಲ ಸಭೆಯು ಇಂದು ವರ್ಚುವಲ್ ಮಾದರಿಯಲ್ಲಿ ನಡೆಯಿತು.ಗುಜರಾತ್ ನ ಅಹ್ಮದಾಬಾದ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 12th, 10:00 am
ಗುಜರಾತ್ ರಾಜ್ಯಪಾಲ ಆಚಾರ್ಯ ಶ್ರೀ ದೇವವ್ರತ್ ಜೀ, ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ, ಸಂಪುಟದ ನನ್ನ ಸಹೋದ್ಯೋಗಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಜೀ, ಸಂಸತ್ತಿನಲ್ಲಿ ನನ್ನ ಸಹವರ್ತಿ ಮತ್ತು ಗುಜರಾತ್ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಸಿ.ಆರ್. ಪಾಟೀಲ್ ಮತ್ತು ಎಲ್ಲಾ ಗೌರವಾನ್ವಿತ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸತ್ ಸದಸ್ಯರು, ಶಾಸನ ಸಭೆಗಳ ಸದಸ್ಯರು ಮತ್ತು ಮಂತ್ರಿಗಳು. ಸ್ಥಳೀಯ ಸಂಸತ್ ಸದಸ್ಯರು ಮತ್ತು ಸಚಿವರ ನೇತೃತ್ವದಲ್ಲಿ ಇಂದು ದೇಶಾದ್ಯಂತ 700 ಕ್ಕೂ ಹೆಚ್ಚು ಸ್ಥಳಗಳಲ್ಲಿ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದನ್ನು ನಾನು ಪರದೆಯ ಮೇಲೆ ನೋಡುತ್ತಿದ್ದೇನೆ. ಬಹುಶಃ ಭಾರತದ ಮೂಲೆ ಮೂಲೆಗೂ ವ್ಯಾಪಿಸಿರುವ ಇಂತಹ ಬೃಹತ್ ಘಟನೆ ರೈಲ್ವೆಯ ಇತಿಹಾಸದಲ್ಲಿ ಹಿಂದೆಂದೂ ಸಂಭವಿಸಿಲ್ಲ. 100 ವರ್ಷಗಳಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಇದೇ ಮೊದಲು. ಈ ಭವ್ಯವಾದ ಘಟನೆಗಾಗಿ ನಾನು ರೈಲ್ವೆಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಅಹ್ಮದಾಬಾದ್ ನಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
March 12th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ನ ಕಾರ್ಯಾಚರಣೆ ನಿಯಂತ್ರಣ ಕೇಂದ್ರದಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ಅನೇಕ ಕ್ಷೇತ್ರಗಳನ್ನು ಒಳಗೊಂಡಿವೆ. ಅವರು 10 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.ಒಡಿಶಾದ ಜಜ್ಪುರದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 05th, 05:30 pm
ಒಡಿಶಾದ ರಾಜ್ಯಪಾಲರಾದ ಶ್ರೀ ರಘುಬರ್ ದಾಸ್ ಜೀ, ಈ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯಕ್ ಜೀ, ನನ್ನ ಸಂಪುಟ ಸಹೋದ್ಯೋಗಿ ಶ್ರೀ ಧರ್ಮೇಂದ್ರ ಪ್ರಧಾನ್ ಜೀ, ಶ್ರೀ ವಿಶ್ವೇಶ್ವರ ಟುಡು ಜೀ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ!ಒಡಿಶಾದ ಚಂಡಿಖೋಲೆಯಲ್ಲಿ 19,600 ಕೋಟಿ ರೂ. ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
March 05th, 01:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಚಂಡಿಖೋಲೆಯಲ್ಲಿಂದು 19,600 ಕೋಟಿ ರೂ. ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಯೋಜನೆಗಳು ತೈಲ ಮತ್ತು ಅನಿಲ, ರೈಲ್ವೆ, ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳು ಮತ್ತು ಪರಮಾಣು ಶಕ್ತಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿವೆ.ತೆಲಂಗಾಣದ ಸಂಗಾರೆಡ್ಡಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಅನುವಾದ
March 05th, 10:39 am
ತೆಲಂಗಾಣದ ಗವರ್ನರ್ ತಮಿಳಿಸೈ ಸೌಂದರರಾಜನ್ ಜಿ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ, ಜಿ. ಕಿಶನ್ ರೆಡ್ಡಿ ಜಿ, ತೆಲಂಗಾಣ ಸರ್ಕಾರದ ಮಂತ್ರಿಗಳು, ಕೊಂಡಾ ಸುರೇಖಾ ಜಿ ಮತ್ತು ಕೆ. ವೆಂಕಟ್ ರೆಡ್ಡಿ ಜಿ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಡಾ. ಕೆ. ಲಕ್ಷ್ಮಣ್ ಜಿ, ಮತ್ತು ಎಲ್ಲಾ ಇತರ ಗೌರವಾನ್ವಿತ ಗಣ್ಯರೇ, ಮಾನ್ಯರೇ ಮತ್ತು ಮಹಿಳೆಯರೇ!ತೆಲಂಗಾಣದ ಸಂಗಾರೆಡ್ಡಿಯಲ್ಲಿ 6,800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
March 05th, 10:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ 6,800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ, ವಾಯುಯಾನ ಮತ್ತು ನೈಸರ್ಗಿಕ ಅನಿಲದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ.ಬಿಹಾರದ ಬೇಗುಸರಾಯ್ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
March 02nd, 08:06 pm
ʻಜೈ ಮಂಗಲ ಘರ್ ಮಂದಿರʼ ಮತ್ತು ನೌಲಾಖಾ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವತೆಗಳಿಗೆ ನಾನು ನಮಸ್ಕರಿಸುತ್ತೇನೆ. ಇಂದು, ನಾನು 'ವಿಕಸಿತ ಭಾರತ'ಕ್ಕಾಗಿ(ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ) 'ವಿಕಸಿತ ಬಿಹಾರʼದ(ಅಭಿವೃದ್ಧಿ ಹೊಂದಿದ ಬಿಹಾರ) ಅಭಿವೃದ್ಧಿಗೆ ಕೊಡುಗೆ ನೀಡುವ ಸಂಕಲ್ಪದೊಂದಿಗೆ ಬೇಗುಸರಾಯ್ಗೆ ಬಂದಿದ್ದೇನೆ. ಇಷ್ಟು ದೊಡ್ಡ ಜನಸಮೂಹವನ್ನು ಭೇಟಿಯಾಗುವುದು ನನ್ನ ಸೌಭಾಗ್ಯ.ಬಿಹಾರದ ಬಿಗುಸರಾಯ್ನಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ
March 02nd, 04:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಬಿಗುಸರಾಯ್ನಲ್ಲಿಂದು ಸುಮಾರು 1.48 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಹು ತೈಲ ಮತ್ತು ಅನಿಲ ಕ್ಷೇತ್ರದ ಯೋಜನೆಗಳು ಮತ್ತು ಬಿಹಾರದಲ್ಲಿ 13,400 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.ಫೆಬ್ರವರಿ 20 ರಂದು ಜಮ್ಮುವಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 19th, 08:55 am
ಬೆಳಗ್ಗೆ 11:30ರ ಸುಮಾರಿಗೆ ಜಮ್ಮುವಿನ ಮೌಲಾನಾ ಆಜಾದ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು 32,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಲಿದ್ದಾರೆ, ಹಾಗೂ ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಆರೋಗ್ಯ, ಶಿಕ್ಷಣ, ರೈಲು, ರಸ್ತೆ, ವಿಮಾನಯಾನ, ಪೆಟ್ರೋಲಿಯಂ, ನಾಗರಿಕ ಮೂಲಸೌಕರ್ಯ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಇವುಗಳಲ್ಲಿ ಒಳಗೊಂಡಿವೆ. ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರದ ಸುಮಾರು 1500 ಹೊಸ ಸರ್ಕಾರಿ ನೇಮಕಾತಿಗಳಿಗೆ ಪ್ರಧಾನಮಂತ್ರಿಯವರು ನೇಮಕಾತಿ ಆದೇಶಗಳನ್ನು ವಿತರಿಸಲಿದ್ದಾರೆ. 'ವಿಕಸಿತ ಭಾರತ ವಿಕಸಿತ ಜಮ್ಮು' ಕಾರ್ಯಕ್ರಮದ ಭಾಗವಾಗಿ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಲಿದ್ದಾರೆ.ಒಡಿಶಾದ ಸಂಬಲ್ಪುರ್ ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲೀಷ್ ಅನುವಾದ
February 03rd, 02:10 pm
ಒಡಿಶಾ ರಾಜ್ಯಪಾಲರಾದ ರಘುವರ್ ದಾಸ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತರವಾದ ಶ್ರೀ ನವೀನ್ ಪಟ್ನಾಯಕ್ ಜೀ. ನನ್ನ ಸಂಪುಟ ಸಹೋದ್ಯೋಗಿಗಳಾದ ಧರ್ಮೇಂದ್ರ ಪ್ರಧಾನ್ ಜೀ, ಅಶ್ವಿನಿ ವೈಷ್ಣವ್ ಜೀ, ಬಿಶ್ವೇಶ್ವರ್ ತಡು ಜೀ, ನನ್ನ ಸಂಸದೀಯ ಕ್ಷೇತ್ರದ ಪ್ರತಿನಿಧಿ ನಿತೇಶ್ ಗಂಗಾ ದೇವ್ ಜೀ, ಸಂಬಲ್ಪುರ್ ದ ಐಐಎಂ ನಿರ್ದೇಶಕರಾದ ಮಹದೇವ್ ಜೈಸ್ವಾಲ್ ಹಾಗೂ ಇತರೆ ಗಣ್ಯರೇ, ಮಹಿಳೆಯರೇ, ಮಹನೀಯರೇ.ಒಡಿಶಾದ ಸಂಬಲ್ಪುರದಲ್ಲಿ 68,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ
February 03rd, 02:07 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಸಂಬಲ್ಪುರದಲ್ಲಿಂದು 68,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಯೋಜನೆಗಳಿಗೆ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ರಸ್ತೆ, ರೈಲ್ವೆ ಮತ್ತು ಉನ್ನತ ಶಿಕ್ಷಣ ಕ್ಷೇತ್ರ ಸೇರಿದಂತೆ ಪ್ರಮುಖ ಯೋಜನೆಗಳ ಜತೆಗೆ, ನೈಸರ್ಗಿಕ ಅನಿಲ, ಕಲ್ಲಿದ್ದಲು ಮತ್ತು ವಿದ್ಯುತ್ ಉತ್ಪಾದನೆ ಒಳಗೊಂಡ ಇಂಧನ ಕ್ಷೇತ್ರವನ್ನು ಉತ್ತೇಜಿಸುವ ಗುರಿ ಹೊಂದಿದೆ. ಇದೇ ಸಂದರ್ಭದಲ್ಲಿ ಐಐಎಂ ಸಂಬಲ್ಪುರ ಮಾದರಿಯ ದರ್ಶನ ಪಡೆದ ಶ್ರೀ ಮೋದಿ ಅವರು, ಇದೇ ವೇಳೆ ಛಾಯಾಚಿತ್ರ ಪ್ರದರ್ಶನವನ್ನು ಸಹ ವೀಕ್ಷಿಸಿದರು.ಕೃಷ್ಣಾ- ಗೋದಾವರಿ ಜಲಾನಯನ ಪ್ರದೇಶದಿಂದ ಆಳ ನೀರಿನಲ್ಲಿ ತೈಲ ಉತ್ಪಾದನೆ ಶುಭಾರಂಭಕ್ಕೆ ಪ್ರಧಾನ ಮಂತ್ರಿಗಳ ಶ್ಲಾಘನೆ
January 08th, 10:06 am
ಕೃಷ್ಣಾ- ಗೋದಾವರಿ ಜಲಾನಯನ ಪ್ರದೇಶದಲ್ಲಿ ಸಂಕೀರ್ಣ ಮತ್ತು ಕ್ಲಿಷ್ಟಕರವಾದ ಆಳವಾದ ನೀರಿನಲ್ಲಿ ಮೊದಲ ತೈಲ ಉತ್ಪಾದನಾ ಕಾರ್ಯ (ಕೆಜಿ-ಡಿಡಬ್ಲ್ಯೂಎನ್-98/2 ಬ್ಲಾಕ್, ಬಂಗಾಳ ಕೊಲ್ಲಿಯ ಕರಾವಳಿಯಲ್ಲಿದೆ) ಶುಭಾರಂಭಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂದು ಶ್ಲಾಘಿಸಿದ್ದಾರೆ.ಲಕ್ಷದ್ವೀಪದ ಅಗತ್ತಿ ವಿಮಾನ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
January 02nd, 04:45 pm
ಲಕ್ಷದ್ವೀಪವು ಅಪಾರ ಸಾಮರ್ಥ್ಯವನ್ನು ಹೊಂದಿದೆ, ಆದಾಗ್ಯೂ ಸ್ವಾತಂತ್ರ್ಯದ ನಂತರದಲ್ಲಿ ಬಹಳ ಕಾಲದವರೆಗೆ, ಅಂದರೆ ಗಮನಾರ್ಹ ಅವಧಿಯವರೆಗೆ, ಈ ಪ್ರದೇಶದ ಮೂಲಸೌಕರ್ಯಕ್ಕೆ ಸೀಮಿತ ಗಮನವನ್ನು ನೀಡಲಾಯಿತು. ಹಡಗು ಇಲ್ಲಿ ನಿರ್ಣಾಯಕ ಜೀವನಾಡಿಯಾಗಿದ್ದರೂ, ಬಂದರು ಮೂಲಸೌಕರ್ಯವು ಅಭಿವೃದ್ಧಿ ಹೊಂದಿರಲಿಲ್ಲ. ಶಿಕ್ಷಣ ಮತ್ತು ಆರೋಗ್ಯದಿಂದ ಹಿಡಿದು ಪೆಟ್ರೋಲ್ ಮತ್ತು ಡೀಸೆಲ್ ಲಭ್ಯತೆಯವರೆಗೆ ವಿವಿಧ ಕ್ಷೇತ್ರಗಳಲ್ಲಿ ಸವಾಲುಗಳು ಸ್ಪಷ್ಟವಾದ ಸಾಕ್ಷ್ಯವನ್ನು ನುಡಿಯುತ್ತಿದ್ದವು. ನಮ್ಮ ಸರ್ಕಾರವು ಈಗ ಈ ಸಮಸ್ಯೆಗಳನ್ನು ಸಕ್ರಿಯವಾಗಿ ಪರಿಹರಿಸುತ್ತಿದೆ, ಇದು ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತಿದೆ. ಲಕ್ಷದ್ವೀಪದ ಮೊದಲ ಪಿಒಎಲ್ ಬೃಹತ್ ಶೇಖರಣಾ ಸೌಲಭ್ಯವನ್ನು ಕವರತ್ತಿ ಮತ್ತು ಮಿನಿಕೋಯ್ ದ್ವೀಪಗಳಲ್ಲಿ ಸ್ಥಾಪಿಸಲಾಗಿದೆ. ಪರಿಣಾಮವಾಗಿ, ಅನೇಕ ಕ್ಷೇತ್ರಗಳಲ್ಲಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ.ಲಕ್ಷದ್ವೀಪದ ʻಅಗತ್ತಿ ವಿಮಾನ ನಿಲ್ದಾಣʼದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಅವರ ಭಾಷಣ
January 02nd, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಕ್ಷದ್ವೀಪದ ʻಅಗತ್ತಿ ವಿಮಾನ ನಿಲ್ದಾಣʼಕ್ಕೆ ಆಗಮಿಸಿದ ಬೆನ್ನಲ್ಲೇ, ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಲಕ್ಷದ್ವೀಪದಲ್ಲೇ ರಾತ್ರಿ ತಂಗಲಿದ್ದಾರೆ.ವಾರಣಾಸಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
December 18th, 02:16 pm
ಕಾಶಿಯಲ್ಲಿ ಹರಿಯುತ್ತಿರುವ ಅಭಿವೃದ್ಧಿಯ ಈ ಅಮೃತವು ಈ ಇಡೀ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಪೂರ್ವಾಂಚಲದ ಈ ಇಡೀ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ. ಆದರೆ ಮಹಾದೇವನ ಆಶೀರ್ವಾದದಿಂದ ಈಗ ಮೋದಿ ನಿಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಚುನಾವಣೆ ಇದೆ. ಮೋದಿ ಅವರು ತಮ್ಮ ಮೂರನೇ ಇನ್ನಿಂಗ್ಸ್ನಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದಾಗಿ ದೇಶಕ್ಕೆ ಗ್ಯಾರಂಟಿ ನೀಡಿದ್ದಾರೆ. ನಾನು ಇಂದು ದೇಶಕ್ಕೆ ಈ ಗ್ಯಾರಂಟಿ ನೀಡುತ್ತಿದ್ದೇನೆ ಎಂದಾದರೆ ಅದಕ್ಕೆ ನನ್ನ ಕಾಶಿಯ ಜನರೇ ಕಾರಣ. ನೀವು ಸದಾ ನನ್ನೊಂದಿಗೆ ನಿಲ್ಲುತ್ತೀರಿ, ನನ್ನ ನಿರ್ಣಯಗಳನ್ನು ಬಲಪಡಿಸುತ್ತೀರಿ.ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿಗಳು
December 18th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರುPM Modi Addresses public meetings in Sagwara and Kotri, Rajasthan
November 22nd, 09:05 am
The electoral atmosphere intensified as PM Narendra Modi engaged in two spirited rallies in Sagwara and Kotri ahead of the Rajasthan assembly election. “This region has suffered greatly under Congress rule. The people of Dungarpur are well aware of how the misrule of the Congress has shattered the dreams of the youth,” PM Modi said while addressing the public rally.