ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಪಾಲುದಾರಿಕೆ

September 09th, 09:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಗೌರವಾನ್ವಿತ ಶ್ರೀ ಜೋ ಬೈಡನ್ ಅವರು 2023 ರ ಸೆಪ್ಟೆಂಬರ್ 9 ರಂದು ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಹೊರತಾಗಿ ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಕುರಿತ ವಿಶೇಷ ಕಾರ್ಯಕ್ರಮದ ಸಹ ಅಧ್ಯಕ್ಷತೆ ವಹಿಸಿದ್ದರು.

ಜಾಗತಿಕ ಮೂಲಸೌಕರ್ಯ ಹೂಡಿಕೆಯ ಪಾಲುದಾರಿಕೆ (PGII) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಕುರಿತ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಗಳು

September 09th, 09:27 pm

ಈ ವಿಶೇಷ ಕಾರ್ಯಕ್ರಮಕ್ಕಾಗಿ ನಾನು ನಿಮ್ಮೆಲ್ಲರಿಗೂ ಆತ್ಮೀಯ ಮತ್ತು ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ನನ್ನ ಸ್ನೇಹಿತ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗೆ ಈ ಕಾರ್ಯಕ್ರಮದ ಸಹ-ಅಧ್ಯಕ್ಷರಾಗಲು ನಾನು ಸಂತಸಪಡುತ್ತೇನೆ. ಇಂದು, ನಾವೆಲ್ಲರೂ ಮಹತ್ವದ ಮತ್ತು ಐತಿಹಾಸಿಕ ಒಪ್ಪಂದವನ್ನು ಅಂಗೀಕರಿಸಿರುವುದನ್ನು ನೋಡಿದ್ದೇವೆ. ಮುಂಬರುವ ಸಮಯದಲ್ಲಿ, ಇದು ಭಾರತ, ಪಶ್ಚಿಮ ಏಷ್ಯಾ ಮತ್ತು ಯುರೋಪ್ ನಡುವೆ ಆರ್ಥಿಕ ಏಕೀಕರಣದ ಪರಿಣಾಮಕಾರಿ ಮಾಧ್ಯಮವಾಗಲಿದೆ.