ಛತ್ತೀಸ್‌ಗಢದ ರಾಯ್‌ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

May 12th, 05:46 pm

ಛತ್ತೀಸ್‌ಗಢದ ರಾಯ್‌ಪುರದಲ್ಲಿ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈಶಾನ್ಯ ದಿಲ್ಲಿಯ ದಯಾಳ್ ಪುರ ಪ್ರದೇಶದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ  ಆಗಿರುವ  ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಈಶಾನ್ಯ ದಿಲ್ಲಿಯ ದಯಾಳ್ ಪುರ ಪ್ರದೇಶದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

April 19th, 09:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಈಶಾನ್ಯ ದಿಲ್ಲಿಯ ದಯಾಳ್ ಪುರ ಪ್ರದೇಶದಲ್ಲಿ ಕಟ್ಟಡ ಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ  ಜೀವಹಾನಿ -  ಪ್ರಧಾನಮಂತ್ರಿ ಸಂತಾಪ

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ - ಪ್ರಧಾನಮಂತ್ರಿ ಸಂತಾಪ

April 04th, 03:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

January 22nd, 02:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್‌ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಪಂಜಾಬ್ ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

December 27th, 07:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಂಜಾಬ್ ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪಿಎಂಎನ್ಆರ್ ಎಫ್ ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಮುಂಬೈನಲ್ಲಿ ದೋಣಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

December 18th, 10:32 pm

ಮಹಾರಾಷ್ಟ್ರದ ಮುಂಬೈನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.

ಉತ್ತರ ಪ್ರದೇಶದ ಕನೌಜ್‌ ನಲ್ಲಿ ಬಸ್ ಅಪಘಾತ – ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ಸಂತಾಪ; ಪಿ ಎಂ ಎನ್‌ ಆರ್‌ ಎಫ್ ನಿಂದ ಪರಿಹಾರ ಘೋಷಣೆ

December 06th, 08:05 pm

ಉತ್ತರಪ್ರದೇಶದ ಕನೌಜ್‌ ನಲ್ಲಿ ಇಂದು ಬಸ್ ಅಪಘಾತದಲ್ಲಿ ಸಂಭವಿಸಿದ ಪ್ರಾಣ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ಮೃತರ ವಾರಸುದಾರಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.

ಹರ್ದೋಯಿ ರಸ್ತೆ ಅಪಘಾತದಲ್ಲಿ ಸಾವು- ಪ್ರಧಾನಮಂತ್ರಿ ಸಂತಾಪ

November 06th, 05:59 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮತ್ತು ಪ್ರೀತಿಪಾತ್ರರಿಗೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮ @PMOIndia ದಲ್ಲಿ ತಮ್ಮ ಹೇಳಿಕೆ ಹಂಚಿಕೊಂಡಿರುವ ಅವರು, ಈ ಅಪಘಾತದಿಂದ ಬಾಧಿತರಾದ ಕುಟುಂಬಗಳಿಗೆ ತಮ್ಮ ಶೋಕವನ್ನು ವ್ಯಕ್ತಪಡಿಸಿದ್ದು ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಬೆಂಗಳೂರಿನಲ್ಲಿ ಕಟ್ಟಡ ಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ; ಪಿ.ಎಂ.ಎನ್.ಆರ್.ಎಫ್ ನಿಂದ ಪರಿಹಾರ ಘೋಷಣೆ

October 24th, 07:47 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಕಟ್ಟಡ ಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಇಂದು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೃತರ ಹತ್ತಿರದ ಸಂಬಂಧಿಗಳಿಗೆ ಪಿ.ಎಂ.ಎನ್.ಆರ್.ಎಫ್. ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಘೋಷಿಸಿದರು.

ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಧಾನಮಂತ್ರಿಯವರಿಂದ ಪರಿಹಾರ ಅನುಮೋದನೆ

October 12th, 05:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲು ಅನುಮೋದನೆ ನೀಡಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಗೋಡೆ ಕುಸಿದ ಘಟನೆಯಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ

October 12th, 05:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ ನ ಮೆಹ್ಸಾನಾ ಜಿಲ್ಲೆಯಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ತನಾಹುನ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ

August 24th, 02:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ. ಪಿಎಂಎನ್ಆರ್ಎಫ್ ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟದಿಂದ ಕಾರ್ಮಿಕರ ಸಾವು: ಪ್ರಧಾನ ಮಂತ್ರಿ ಮೋದಿ ಸಂತಾಪ

August 22nd, 06:56 am

ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿರುವ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿರುವ ದುರ್ಘಟನೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ

June 17th, 12:58 pm

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಪಘಾತ ಸ್ಥಳಕ್ಕೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಧಾವಿಸುತ್ತಿದ್ದು, ಸಂತ್ರಸ್ತರಿಗೆ ಸಹಾಯ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(PMNRF)ಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಸ್ಸಾಂ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

January 03rd, 12:01 pm

ಅಸ್ಸಾಂನ ಗೋಲಘಾಟ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮಹಾರಾಷ್ಟ್ರದ ಶಹಾಪುರದಲ್ಲಿ ಸಂಭವಿಸಿದ ಭೀಕರ ಕ್ರೇನ್‌ ಕುಸಿತ ದುರ್ಘಟನೆಗೆ ಪ್ರಧಾನ ಮಂತ್ರಿ ಸಂತಾಪ

August 01st, 08:26 am

ಮಹಾರಾಷ್ಟ್ರದ ಶಹಾಪುರದಲ್ಲಿ ಸಂಭವಿಸಿರುವ ಭೀಕರ ಕ್ರೇನ್‌ ಕುಸಿತ ದುರ್ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಫತೇಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ

May 16th, 09:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ಪರಿಹಾರ ಧನವನ್ನು ಶ್ರೀ ಮೋದಿ ಅವರು ಘೋಷಿಸಿದ್ದಾರೆ.

ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ

May 09th, 02:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ

May 07th, 11:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ತಮ್ಮ ಸಂತಾಪವನ್ನು ತಿಳಿಸುವಾಗ, ಪ್ರಧಾನಮಂತ್ರಿಯವರು ಮೃತರಿಗೆ ಪರಿಹಾರವನ್ನು ಘೋಷಿಸಿದ್ದಾರೆ.

ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

March 30th, 07:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ್ದಾರೆ.