Officers of the Prime Minister’s Office read Preamble on Constitution Day

November 26th, 08:17 pm

Principal Secretary to the Prime Minister, Dr. PK Mishra, along with other officers and officials of the PMO read the Preamble today in Prime Minister’s Office on occasion of Constitution Day.

ಹರ್ದೋಯಿ ರಸ್ತೆ ಅಪಘಾತದಲ್ಲಿ ಸಾವು- ಪ್ರಧಾನಮಂತ್ರಿ ಸಂತಾಪ

November 06th, 05:59 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮತ್ತು ಪ್ರೀತಿಪಾತ್ರರಿಗೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮ @PMOIndia ದಲ್ಲಿ ತಮ್ಮ ಹೇಳಿಕೆ ಹಂಚಿಕೊಂಡಿರುವ ಅವರು, ಈ ಅಪಘಾತದಿಂದ ಬಾಧಿತರಾದ ಕುಟುಂಬಗಳಿಗೆ ತಮ್ಮ ಶೋಕವನ್ನು ವ್ಯಕ್ತಪಡಿಸಿದ್ದು ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಪ್ರಧಾನ ಕಾರ್ಯದರ್ಶಿಯವರಾದ ಡಾ. ಪಿ.ಕೆ. ಮಿಶ್ರಾ ಅವರ ನೇತೃತ್ವದಲ್ಲಿ 'ತಾಯಿಯ ಹೆಸರಲ್ಲಿ ಒಂದು ವೃಕ್ಷ' ಆಂದೋಲನದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿಗಳು ಭಾಗಿಯಾದರು

September 17th, 02:17 pm

ಪ್ರಧಾನ ಕಾರ್ಯದರ್ಶಿಯವರಾದ ಡಾ.ಪಿ.ಕೆ.ಮಿಶ್ರಾ ನೇತೃತ್ವದ ಪ್ರಧಾನ ಮಂತ್ರಿ ಕಛೇರಿಯ ಅಧಿಕಾರಿಗಳು ಇಂದು ಬೆಳಿಗ್ಗೆ 'ತಾಯಿಯ ಹೆಸರಲ್ಲಿ ಒಂದು ವೃಕ್ಷ' ಆಂದೋಲನದಲ್ಲಿ ಭಾಗವಹಿಸಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮ

June 21st, 02:26 pm

ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ)ದಲ್ಲಿ ಇಂದು ಬೆಳಗ್ಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಪಿಎಂಒದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ, ಹಿರಿಯ ಅಧಿಕಾರಿಗಳು ಮತ್ತು ಇತರರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಪ್ರಧಾನಮಂತ್ರಿಗಳ ಕಾರ್ಯಾಲಯದ (ಪಿಎಂಒ) ಅಧಿಕಾರ ವಹಿಸಿಕೊಂಡ ಪ್ರಧಾನ ಮಂತ್ರಿ

June 10th, 05:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಕಾರ್ಯಾಲಯದ(ಪಿಎಂಒ) ಅಧಿಕಾರ ವಹಿಸಿಕೊಂಡರು. ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಪ್ರಧಾನಮಂತ್ರಿ ಕಾರ್ಯಾಲಯವನ್ನು ಮೊದಲಿನಿಂದಲೂ ಒಂದು ಸೇವಾ ಸಂಸ್ಥೆ ಮತ್ತು ʻಜನರ ಪ್ರಧಾನ ಮಂತ್ರಿ ಕಾರ್ಯಾಲಯʼವನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದರು. ನಾವು ಪ್ರಧಾನಮಂತ್ರಿಗಳ ಕಾರ್ಯಾಲಯವನ್ನು ವೇಗವರ್ಧಕ ಸಾಧನವನ್ನಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸಿದ್ದೇವೆ, ಇದು ಹೊಸ ಶಕ್ತಿ ಮತ್ತು ಸ್ಫೂರ್ತಿಯ ಮೂಲವಾಗಿದೆ, ಎಂದು ಪ್ರಧಾನಿ ಹೇಳಿದರು.

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸಿಂಧಿಯಾ ಶಾಲೆಯ 125ನೇ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

October 21st, 11:04 pm

ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲ ಶ್ರೀ ಮಂಗುಭಾಯ್ ಪಟೇಲ್ ಅವರೇ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಾಗೂ ಸಿಂಧಿಯಾ ಶಾಲಾ ಮಂಡಳಿಯ ನಿರ್ದೇಶಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮತ್ತು ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀ ನರೇಂದ್ರ ಸಿಂಗ್ ತೋಮರ್, ಡಾ. ಜಿತೇಂದ್ರ ಸಿಂಗ್ ಅವರೇ, ಶಾಲಾ ಆಡಳಿತ ಮಂಡಳಿಯ ಸಹೋದ್ಯೋಗಿಗಳೇ, ಎಲ್ಲಾ ಸಿಬ್ಬಂದಿ, ಶಿಕ್ಷಕರು, ಪೋಷಕರು ಮತ್ತು ಆತ್ಮೀಯ ಯುವ ಸ್ನೇಹಿತರೇ!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಿಂಧಿಯಾ ಶಾಲೆಯ 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

October 21st, 05:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 'ದಿ ಸಿಂಧಿಯಾ ಶಾಲೆಯ' 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಪ್ರಧಾನಮಂತ್ರಿಯವರು ಶಾಲೆಯಲ್ಲಿ 'ವಿವಿಧೋದ್ದೇಶ ಕ್ರೀಡಾ ಸಂಕೀರ್ಣ'ಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಪ್ರತಿಭಾವಂತ ಹಳೆಯ ವಿದ್ಯಾರ್ಥಿಗಳು ಮತ್ತು ಉನ್ನತ ಸಾಧಕರಿಗೆ ಶಾಲೆಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಿಂಧಿಯಾ ಶಾಲೆಯನ್ನು 1897ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಐತಿಹಾಸಿಕ ಗ್ವಾಲಿಯರ್ ಕೋಟೆಯ ಮೇಲಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಣಾರ್ಥ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿದರು.

ರಾಜಸ್ಥಾನದಲ್ಲಿ ಪ್ರಧಾನಮಂತ್ರಿಯವರ ಕಾರ್ಯಕ್ರಮದಲ್ಲಿ ರಾಜಸ್ಥಾನದ ಮುಖ್ಯಮಂತ್ರಿಯವರ ಉಪಸ್ಥಿತಿಯ ಕುರಿತು ಪ್ರಧಾನಮಂತ್ರಿಯವರ ಕಾರ್ಯಾಲಯದ ಟ್ವೀಟ್

July 27th, 10:46 am

ರಾಜ್ಯದಲ್ಲಿ ಪ್ರಧಾನಮಂತ್ರಿಯವರ ಕಾರ್ಯಕ್ರಮದಲ್ಲಿ ಹಾಜರಿರುವ ಕುರಿತು ರಾಜಸ್ಥಾನದ ಮುಖ್ಯಮಂತ್ರಿಯವರು ಮಾಡಿದ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರ ಕಾರ್ಯಾಲಯವು ಈ ಕೆಳಗಿನ ಟ್ವೀಟ್ ಅನ್ನು ಬಿಡುಗಡೆ ಮಾಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಿಕರ್ ಗೆ ಭೇಟಿ ನೀಡುತ್ತಿದ್ದಾರೆ.

ಪ್ರಧಾನಿಯನ್ನು ಭೇಟಿ ಮಾಡಿದ ಒಡಿಶಾ ಸಿಎಂ

May 11th, 06:07 pm

ಒಡಿಶಾ ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯಕ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

​​​​​​​ಜೋಶಿಮಠ ಕುರಿತು ಪ‍್ರಧಾನಮಂತ್ರಿ ಕಾರ್ಯಾಲಯ ಉನ್ನತ ಮಟ್ಟದ ಸಭೆ ನಡೆಸಲಿದೆ

January 08th, 02:19 pm

ಸಂಪುಟ ಕಾರ್ಯದರ್ಶಿ ಮತ್ತು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ಅವರು ಪ‍್ರಧಾನಮಂತ್ರಿ ಕಾರ್ಯಾಲಯದಲ್ಲಿ ಇಂದು ಮಧ್ಯಾಹ್ನ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.

ಗುಜರಾತ್ ನ ಗಾಂಧಿನಗರದಲ್ಲಿ ಭಾರತದ ಸುಜುಕಿಯ 40ನೇ ವರ್ಷದ ಸ್ಮರಣಾರ್ಥವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

August 28th, 08:06 pm

ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಜೀ, ಉಪ ಮುಖ್ಯಮಂತ್ರಿ ಶ್ರೀ ಕೃಷ್ಣ ಚೌಟಾಲಾ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀ ಸಿ.ಆರ್. ಪಾಟೀಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ನ ಹಿರಿಯ ಅಧಿಕಾರಿಗಳೇ, ಭಾರತದಲ್ಲಿನ ಜಪಾನ್ ರಾಯಭಾರಿಯವರೇ, ಮಾರುತಿ-ಸುಜುಕಿಯ ಹಿರಿಯ ಅಧಿಕಾರಿಗಳೇ, ಇತರ ಎಲ್ಲ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ!

ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿಂದು ಭಾರತದಲ್ಲಿ ಸುಜುಕಿಯ 40ನೇ ವರ್ಷಗಳ ಕಾರ್ಯಾಚರಣೆ, ಸ್ಮರಣಾರ್ಥ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

August 28th, 05:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾರತದಲ್ಲಿ ಸುಜುಕಿಯ 40 ವರ್ಷಗಳ ಕಾರ್ಯಾಚರಣೆ ಅಂಗವಾಗಿ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಭಾರತದಲ್ಲಿನ ಜಪಾನ್ ರಾಯಭಾರಿ ಮಾನ್ಯ ಶ್ರೀ ಸತೋಶಿ ಸುಜುಕಿ, ಗುಜರಾತ್ ಮುಖ್ಯಮಂತ್ರಿ ಮಾನ್ಯ ಶ್ರೀ ಭೂಪೇಂದ್ರ ಪಟೇಲ್, ಸಂಸದ ಶ್ರೀ ಸಿ.ಆರ್.ಪಾಟೀಲ್, ರಾಜ್ಯ ಸಚಿವ ಶ್ರೀ ಜಗದೀಶ್ ಪಾಂಚಾಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ಮಾಜಿ ಅಧ್ಯಕ್ಷರಾದ ಶ್ರೀ ಒ. ಸುಜುಕಿ, ಸುಜುಕಿ ಮೋಟಾರ್ ಕಾರ್ಪೊರೇಷನ್ ಅಧ್ಯಕ್ಷ ಶ್ರೀ ಟಿ. ಸುಜುಕಿ ಮತ್ತು ಮಾರುತಿ-ಸುಜುಕಿಯ ಅಧ್ಯಕ್ಷ ಶ್ರೀ ಆರ್.ಸಿ ಭಾರ್ಗವ ಉಪಸ್ಥಿತರಿದ್ದರು. ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು ಮತ್ತು ಜಪಾನಿನ ಪ್ರಧಾನ ಮಂತ್ರಿ ಮಾನ್ಯ ಶ್ರೀ ಫುಮಿಯೋ ಕಿಶಿದಾ ಅವರ ವೀಡಿಯೊ ಸಂದೇಶವನ್ನು ಸಹ ಪ್ರದರ್ಶಿಸಲಾಯಿತು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರು ಮಾರಿಷಸ್‌ನಲ್ಲಿ ಜಂಟಿಯಾಗಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಉದ್ಘಾಟಿಸಿದರು

January 20th, 06:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಮಂತ್ರಿ ಶ್ರೀ ಪ್ರವಿಂದ್ ಕುಮಾರ್ ಜುಗ್ನೌತ್ ಅವರು ಇಂದು ಮಾರಿಷಸ್‌ನಲ್ಲಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ ಮತ್ತು ಮಾರಿಷಸ್ ನಡುವಿನ ಸದೃಢ ಅಭಿವೃದ್ಧಿ ಪಾಲುದಾರಿಕೆಯ ಭಾಗವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಸಂದರ್ಭದಲ್ಲಿ, ಭಾರತದ ಅಭಿವೃದ್ಧಿ ಬೆಂಬಲದ ಭಾಗವಾಗಿ ಇತರೆ ಎರಡು ಯೋಜನೆಗಳಾದ - ಅತ್ಯಾಧುನಿಕ ನಾಗರಿಕ ಸೇವಾ ಕಾಲೇಜು ಸ್ಥಾಪನೆ ಮತ್ತು 8 ಮೆಗಾವ್ಯಾಟ್ ಸೌರ ಪಿವಿ ಫಾರ್ಮ್ ಸ್ಥಾಪನೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿತು. ಈ ಸಮಾರಂಭದಲ್ಲಿ ಇಬ್ಬರೂ ಪ್ರಧಾನಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು. ಮಾರಿಷಸ್‌ನಲ್ಲಿ ಅಲ್ಲಿನ ಪಿಎಂಒ ಆವರಣದಲ್ಲಿ ಮಾರಿಷಸ್ ಕ್ಯಾಬಿನೆಟ್ ಸಚಿವರು ಮತ್ತು ಮಾರಿಷಸ್ ಸರಕಾರದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮವು ನಡೆಯಿತು.

India and Mauritius are united by history, ancestry, culture, language: PM Modi

January 20th, 04:49 pm

In his remarks, PM Modi said, India and Mauritius are united by history, ancestry, culture, language and the shared waters of the Indian Ocean. Today, our robust development partnership has emerged as a key pillar of our close ties. Mauritius is a prime example of India's approach to development partnership which is based on the needs and priorities of our partners and respects their sovereignty.

ದೀಪಾವಳಿ ಮಿಲನ್ ನಲ್ಲಿ ಪಿಎಂಓ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

November 12th, 08:49 pm

ಲೋಕ ಕಲ್ಯಾಣ ಮಾರ್ಗದಲ್ಲಿನ ಪ್ರಧಾನಮಂತ್ರಿಮಂತ್ರಿಯವರ ನಿವಾಸದಲ್ಲಿಂದು ಆಯೋಜಿಸಿದ್ದ ‘ದೀಪಾವಳಿ ಮಿಲನ್’ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಅವರು ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ಕೋರಿದರು.

“ತೌಕ್ತೆ’ ಚಂಡಮಾರುತ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಪರಾಮರ್ಶೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಮಂತ್ರಿ

May 15th, 06:54 pm

‘ತೌಕ್ತೆ’ ಚಂಡಮಾರುತದಿಂದಾಗಿ ಉದ್ಭವಿಸಲಿರುವ ಸ್ಥಿತಿಗತಿ ನಿರ್ವಹಣೆ ಕುರಿತಂತೆ ಸಂಬಂಧಿಸಿದ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು/ಸಂಸ್ಥೆಗಳು ಕೈಗೊಂಡಿರುವ ಸಿದ್ಧತಾ ಕ್ರಮಗಳ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.

ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ಮತ್ತು ಲಸಿಕೆ ಪೂರೈಕೆ, ವಿತರಣೆ ಹಾಗೂ ಆಡಳಿತ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

October 17th, 04:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ದೇಶದ ಕೋವಿಡ್ -19 ಸಾಂಕ್ರಾಮಿಕದ ಪರಿಸ್ಥಿತಿ ಮತ್ತು ಲಸಿಕೆಯ ಪೂರೈಕೆ, ವಿತರಣೆ ಹಾಗೂ ಆಡಳಿತ ಕುರಿತಂತೆ ಪರಾಮರ್ಶೆ ನಡೆಸಿದರು.

ಎನ್‌ಸಿಆರ್ ಪ್ರದೇಶದಲ್ಲಿ ವಾಯುಮಾಲಿನ್ಯದ ನಿರ್ವಹಣೆಗಾಗಿ ಪ್ರಧಾನಿ ಕಾರ್ಯಾಲಯ ನೇತೃತ್ವದ ಸಮಿತಿಯಿಂದ ಕಾರ್ಯ ಯೋಜನೆ

September 19th, 06:57 pm

ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ಎನ್‌ಸಿಆರ್) ದಲ್ಲಿ ವಾಯು ಗುಣಮಟ್ಟವನ್ನು ಸುಧಾರಿಸಲು ರಚಿಸಲಾದ ಉನ್ನತ ಮಟ್ಟದ ಕಾರ್ಯಪಡೆಯ ಸಭೆಯು ಪ್ರಧಾನ ಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆಯಿತು. ದೆಹಲಿ, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳು, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಕೃಷಿ, ರಸ್ತೆ, ಪೆಟ್ರೋಲಿಯಂ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆ / ಸಚಿವಾಲಯಗಳ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು.

PMO reviews efforts of eleven Empowered Groups towards tackling COVID-19

April 10th, 02:50 pm

A meeting of the Empowered Groups of Officers, to tackle the challenges emerging as a result of spread of COVID-19, was held today under the Chairmanship of Principal Secretary to Prime Minister.

ಕೊರೋನಾ ವೈರಸ್ ಪ್ರಕ್ರಿಯೆ, ಸಿದ್ದತೆ ಕುರಿತು ಪ್ರಧಾನಿ ಕಚೇರಿ ಪರಾಮರ್ಶೆ

March 04th, 05:49 pm

ಕೊರೋನಾ ವೈರಸ್ ವಿಷಯದಲ್ಲಿ ಸಿದ್ದತೆ ಮತ್ತು ಪ್ರಕ್ರಿಯಾ ವ್ಯವಸ್ಥೆಯ ಪರಾಮರ್ಶನಾ ಸಭೆ ಇಂದು ನಡೆದಿದ್ದು, ಪ್ರಧಾನ ಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಕೆ. ಮಿಶ್ರಾ ಅವರು ಈ ಅಂತರ –ಸಚಿವಾಲಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೊದಲ ಸಭೆ 2020 ರ ಜನವರಿ 25 ರಂದು ನಡೆದಿತ್ತು. ಇಂದಿನ ಸಭೆಯು ಪರಿಸ್ಥಿತಿಯ ಅವಲೋಕನಕ್ಕಾಗಿ ಆಯೋಜನೆಯಾದ ಇತ್ತೀಚಿನ ಸಭೆಯಾಗಿದೆ. ಇಂದಿನ ಸಭೆಯಲ್ಲಿ ಸಂಪುಟ ಕಾರ್ಯದರ್ಶಿ, ವಿದೇಶಾಂಗ ಕಾರ್ಯದರ್ಶಿ, ಆರೋಗ್ಯ ಸಚಿವಾಲಯ, ನಾಗರಿಕ ವಾಯುಯಾನ ಸಚಿವಾಲಯ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ. ಶಿಪ್ಪಿಂಗ್, ಪ್ರವಾಸೋದ್ಯಮ ಕಾರ್ಯದರ್ಶಿಗಳು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧ್ಯಕ್ಷರು, ಕಾರ್ಯದರ್ಶಿ (ಗಡಿ ಆಡಳಿತ) , ಎಂ.ಎಚ್.ಎ. ಮತ್ತು ರಕ್ಷಣಾ ಸಚಿವಾಲಯಗಳ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ನೀತಿ ಆಯೋಗ, ಮತ್ತು ಪ್ರಧಾನ ಮಂತ್ರಿ ಅವರ ಕಾರ್ಯಾಲಯದ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು.