ಬಾರಾಬಂಕಿಯ ಪೂರ್ವಾಂಚಲ್ ಎಕ್ಸಪ್ರೆಸ್ ವೇ ಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ

July 25th, 01:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾರಾಬಂಕಿಯ ಪೂರ್ವಾಂಚಲ್ ಎಕ್ಸಪ್ರೆಸ್ ವೇ ಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ ಮತ್ತು ಸ್ಥಳೀಯ ಆಡಳಿತ ಸಾಧ್ಯವಾದ ಎಲ್ಲ ನೆರವು ನೀಡಲಿದೆ ಎಂದು ಹೇಳಿದ್ದಾರೆ.

Purvanchal Expressway is a reflection of modern facilities in Uttar Pradesh: PM Modi

November 16th, 01:23 pm

Prime Minister Narendra Modi inaugurated the Purvanchal Expressway in Uttar Pradesh. PM Modi said, This is the expressway to the state’s development and will show the way to a new Uttar Pradesh. This expressway is a reflection of modern facilities in UP. This expressway is the expressway of the strong will power of UP.

ಪೂರ್ವಾಂಚಲ್ ಎಕ್ಸಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಮಂತ್ರಿ

November 16th, 01:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಅನ್ನು ಉದ್ಘಾಟಿಸಿದರು. ಅಲ್ಲದೆ ಅವರು ಸುಲ್ತಾನ್ ಪುರ್ ಜಿಲ್ಲೆಯಲ್ಲಿ ಎಕ್ಸ್ ಪ್ರೆಸ್ ವೇ ಮೇಲೆ ನಿರ್ಮಿಸಿರುವ 3.2 ಕಿಲೋಮೀಟರ್ ಉದ್ದದ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾದರು.

ನವೆಂಬರ್ 16ರಂದು ಪ್ರಧಾನಮಂತ್ರಿ ಉತ್ತರ ಪ್ರದೇಶಕ್ಕೆ ಭೇಟಿ ಮತ್ತು ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಉದ್ಘಾಟನೆ

November 15th, 11:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 16ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಮಧ್ಯಾಹ್ನ ಸುಮಾರು 1.30ಕ್ಕೆ ಸುಲ್ತಾನ್ ಪುರ್ ಜಿಲ್ಲೆಯ ಕರ್ವಾಲ್ ಖೇರಿಯಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಲಿದ್ದಾರೆ.

ನಾಯಕರು ಮತ್ತು ಯೋಧರಿಗೆ ಗೌರವ ನೀಡದ ಇತಿಹಾಸದ ತಪ್ಪುಗಳನ್ನು ನಾವು ಸರಿಪಡಿಸುತ್ತಿದ್ದೇವೆ: ಪ್ರಧಾನಮಂತ್ರಿ

February 16th, 02:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶ ಸ್ವಾತಂತ್ರ್ಯದ 75ನೇ ವರ್ಷ ಆಚರಿಸುತ್ತಾ ಸಾಗಿದ್ದೇವೆ. ಈ ವೇಳೆ ದೇಶಕ್ಕಾಗಿ ಅಪ್ರತಿಮ ಕೊಡುಗೆಯನ್ನು ನೀಡಿರುವ ಐತಿಹಾಸಿಕ ನಾಯಕರು ಮತ್ತು ನಾಯಕಿಯರ ಕೊಡುಗೆಗಳನ್ನು ಸ್ಮರಿಸುವುದು ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ಮಹಾರಾಜ ಸುಹೆಲ್‌ದೇವ್ ಸ್ಮಾರಕ ಮತ್ತು ಚಿತ್ತೌರಾ ಸರೋವರದ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ

February 16th, 11:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಮಹಾರಾಜ ಸುಹೆಲ್‌ದೇವ್ ಹೆಸರನ್ನು ನಾಮಕರಣ ಮಾಡಿರುವ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ

February 16th, 11:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಮಹಾರಾಜ ಸುಹೆಲ್‌ದೇವ್ ಹೆಸರನ್ನು ನಾಮಕರಣ ಮಾಡಿರುವ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಾರಾಜ ಸುಹೇಲ್ ದೇವ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮತ್ತು ಘಾಜಿಪುರದಲ್ಲಿ ವೈದ್ಯಕೀಯ ಕಾಲೇಜಿನ ಶಿಲಾನ್ಯಾಸದಲ್ಲಿ ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ

December 29th, 12:15 pm

ಪ್ರಧಾನಿ ಮೋದಿ ಇಂದು ಘಾಜಿಪುರದಲ್ಲಿ ವೈದ್ಯಕೀಯ ಕಾಲೇಜಿನ ಶಿಲಾನ್ಯಾಸ ಮಾಡಿದರು . ಸಮಾರಂಭದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ರಕ್ಷಣೆ ಮೂಲಸೌಕರ್ಯ ಸುಧಾರಣೆ ಮತ್ತು ಎಲ್ಲರಿಗೂ ವಸತಿ ನೀಡುವ ಬಗ್ಗೆ ಸರಕಾರದ ಪ್ರಯತ್ನಗಳ ಬಗ್ಗೆ ಮಾತನಾಡಿದರು.

ಗಾಜಿಪುರದಲ್ಲಿ ಪ್ರಧಾನಮಂತ್ರಿ

December 29th, 12:11 pm

ಮಹಾರಾಜಾ ಸುಹೇಲ್ ದೇವ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ, ಗಾಜಿಪುರ ವೈದ್ಯಕೀಯ ಕಾಲೇಜಿಗೆ ಶಿಲಾನ್ಯಾಸ.

ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ

July 14th, 06:28 pm

ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ವಾರಣಾಸಿ ನಗರವನ್ನು ಸ್ಮಾರ್ಟ್ ಸಿಟಿ ಆಗಿ ರೂಪಾಂತರಗೊಳಿಸಲು ಕೆಲಸ ಪೂರ್ಣ ರೀತಿಯಲ್ಲಿ ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ. ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನ ಕೆಲಸದ ಜೊತೆಗೆ ಹತ್ತು ಇತರ ಯೋಜನೆಗಳನ್ನು ಶೀಘ್ರವಾಗಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಪ್ರದೇಶದ ಜನರ ಜೀವನವನ್ನು ಮಾರ್ಪಡಿಸುವುದು ಮಾತ್ರವಲ್ಲದೆ ಆದರೆ ಯುವಕರಿಗೆ ಉದ್ಯೋಗಾವಕಾಶಗಳನ್ನು ರಚಿಸಲಾಗುತ್ತಿದೆ .

ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

July 14th, 06:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಾರಾಣಸಿಯಲ್ಲಿ ಒಟ್ಟಾರೆ 900 ಕೋಟಿ ರೂಪಾಯಿ ಮೌಲ್ಯದ ಮಹತ್ವದ ಯೋಜನೆಗಳಿಗೆ ಶಂಕುಸ್ಥಾಪನೆ ಅಥವಾ ಚಾಲನೆ ನೀಡಿದರು. ಉದ್ಘಾಟನೆಯಾದ ಯೋಜನೆಗಳಲ್ಲಿ ವಾರಾಣಸಿ ನಗರ ಅನಿಲ ವಿತರಣಾ ಯೋಜನೆ ಮತ್ತು ವಾರಾಣಸಿ – ಬಲ್ಲಿಯಾ ಮೆಮು ರೈಲು ಯೋಜನೆಯೂ ಸೇರಿತ್ತು. ಪಂಚಕೋಶಿ ಪರಿಕ್ರಮ ಮಾರ್ಗ, ಸ್ಮಾರ್ಟ್ ಸಿಟಿ ಮತ್ತು ನಮಾಮಿ ಗಂಗೆ ಯೋಜನೆಗಳ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರಕ್ಕೂ ಶಿಲಾನ್ಯಾಸ ನೆರವೇರಿಸಿದರು.

ಅಜಂಘರ್ ನಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣದ ಪಠ್ಯ

July 14th, 04:14 pm

ಅಜಂಘರ್ ನಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರದೇಶದ ಜನರ ಜೀವನವನ್ನು ಉತ್ತಮಗೊಳಿಸಲು ಎನ್ಡಿಎ ಸರಕಾರದ ಗಮನ ಹರಿಸಿದರು. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಕೇಂದ್ರದ ಅಭಿವೃದ್ಧಿ ಕಾರ್ಯಗಳಲ್ಲಿ ಜನರನ್ನು ದಾರಿತಪ್ಪಿಸುವ ಉದ್ದೇಶ ಹೊಂದಿದ ವಿರೋಧ ಪಕ್ಷವನ್ನು ದೂಷಿಸಿದರು ಮತ್ತು ತ್ರಿಪಲ್ ತಲಾಖ್ ವಿರುದ್ಧದ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವುದನ್ನು ತಡೆಗಟ್ಟಿದರು ಎಂದು ವಿರೋಧ ಪಕ್ಷವನ್ನು ಟೀಕಿಸಿದರು .

ಅಜಂಘರ್ ನಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

July 14th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಅಜಂಘರ್ ನಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ನೆರವೇರಿಸಿದರು.