ಮಧ್ಯಪ್ರದೇಶದ ಝಬುವಾದಲ್ಲಿ ಸುಮಾರು 7300 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
February 11th, 07:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಜಬುವಾದಲ್ಲಿ ಸುಮಾರು 7300 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು. ಇಂದಿನ ಈ ಅಭಿವೃದ್ಧಿ ಯೋಜನೆಗಳು ಈ ಪ್ರದೇಶದಲ್ಲಿರುವ ಗಮನಾರ್ಹ ಸಂಖ್ಯೆಯ ಬುಡಕಟ್ಟು ಜನತೆಗೆ ಪ್ರಯೋಜನ ಒದಗಿಸುತ್ತವೆ, ನೀರು ಸರಬರಾಜು ಮತ್ತು ಕುಡಿಯುವ ನೀರು ಪೂರೈಕೆಯನ್ನು ಬಲಪಡಿಸುತ್ತವೆ. ಜೊತೆಗೆ, ಮಧ್ಯಪ್ರದೇಶದಲ್ಲಿ ರಸ್ತೆ, ರೈಲು, ವಿದ್ಯುತ್ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಉತ್ತೇಜನ ನೀಡುತ್ತವೆ. ಪ್ರಧಾನಮಂತ್ರಿಯವರು ʻವಿಶೇಷವಾಗಿ ಹಿಂದುಳಿದ ಬುಡಕಟ್ಟು ಜನಾಂಗʼದ ಸುಮಾರು 2 ಲಕ್ಷ ಮಹಿಳಾ ಫಲಾನುಭವಿಗಳಿಗೆ ʻಆಧಾರ್ ಅನುದಾನʼದ ಮಾಸಿಕ ಕಂತನ್ನು ವಿತರಿಸಿದರು, ʻಸ್ವಾಮಿತ್ವʼ ಯೋಜನೆಯ ಫಲಾನುಭವಿಗಳಿಗೆ 1.75 ಲಕ್ಷ ಹಕ್ಕುಪತ್ರಗಳನ್ನು ವಿತರಿಸಿದರು ಹಾಗೂ ʻಪ್ರಧಾನ ಮಂತ್ರಿ ಆದರ್ಶ ಗ್ರಾಮʼ ಯೋಜನೆಯಡಿ 559 ಗ್ರಾಮಗಳಿಗೆ 55.9 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದರು.