India is a spirit where the nation is above the self: PM Modi
December 19th, 03:15 pm
PM Modi attended function marking Goa Liberation Day. PM Modi noted that even after centuries and the upheaval of power, neither Goa forgot its Indianness, nor did the rest of India forgot Goa. This is a relationship that has only become stronger with time. The people of Goa kept the flame of freedom burning for the longest time in the history of India.ಗೋವಾದಲ್ಲಿ ಜರುಗಿದ ಗೋವಾ ವಿಮೋಚನಾ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
December 19th, 03:12 pm
ಗೋವಾದಲ್ಲಿ ಜರುಗಿದ ಗೋವಾ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ‘ಆಪರೇಷನ್ ವಿಜಯ್’ ಯೋಧರನ್ನು ಪ್ರಧಾನಿ ಸನ್ಮಾನಿಸಿದರು. ನವೀಕರಿಸಿದ ಫೋರ್ಟ್ ಅಗುಡಾ ಜೈಲ್ ಮ್ಯೂಸಿಯಂ, ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಬ್ಲಾಕ್, ನ್ಯೂ ಸೌತ್ ಗೋವಾ ಜಿಲ್ಲಾ ಆಸ್ಪತ್ರೆ, ಮೋಪಾ ವಿಮಾನ ನಿಲ್ದಾಣದಲ್ಲಿ ವೈಮಾನಿಕ ಕೌಶಲ್ಯ ಅಭಿವೃದ್ಧಿ ಕೇಂದ್ರ ಮತ್ತು ದಾಬೋಲಿಮ್-ನವೇಲಿಮ್, ಮಾರ್ಗೋವಾದಲ್ಲಿ ಗ್ಯಾಸ್ ಇನ್ಸುಲೇಟೆಡ್ ಸಬ್‌ಸ್ಟೇಷನ್ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಅವರು ಉದ್ಘಾಟಿಸಿದರು. ಅವರು ಗೋವಾದಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಟ್ರಸ್ಟ್‌ನ ಇಂಡಿಯಾ ಇಂಟರ್ ನ್ಯಾಷನಲ್ ಯೂನಿವರ್ಸಿಟಿ ಆಫ್ ಲೀಗಲ್ ಎಜುಕೇಶನ್ ಮತ್ತು ರಿಸರ್ಚ್ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.ಪ್ರಧಾನ ಮಂತ್ರಿ ಅವರು ಡಿಸೆಂಬರ್ 19ರಂದು ಗೋವಾಕ್ಕೆ ಭೇಟಿ ನೀಡಲಿದ್ದು, ಗೋವಾ ವಿಮೋಚನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ
December 17th, 04:34 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡಿಸೆಂಬರ್ 19ರಂದು ಗೋವಾಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 3 ಗಂಟೆಗೆ ಗೋವಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಗೋವಾ ವಿಮೋಚನಾ ದಿನಾಚರಣೆಯ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ‘ಆಪರೇಷನ್ ವಿಜಯ್’ ನ ಯೋಧರನ್ನು ಪ್ರಧಾನ ಮಂತ್ರಿ ಅವರು ಸನ್ಮಾನಿಸಲಿದ್ದಾರೆ. ಗೋವಾವನ್ನು ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಳಿಸಿದ ಭಾರತೀಯ ಸಶಸ್ತ್ರ ಪಡೆಗಳು ಕೈಗೊಂಡ 'ಆಪರೇಷನ್ ವಿಜಯ್' ಯಶಸ್ಸನ್ನು ಸ್ಮರಿಸಲು ಪ್ರತಿ ವರ್ಷ ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನವನ್ನು ಆಚರಿಸಲಾಗುತ್ತದೆ.ಉತ್ತರ ಪ್ರದೇಶದ ಕುಶಿನಗರದಲ್ಲಿ ಬಹು ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿ ಪ್ರಧಾನ ಮಂತ್ರಿ ಅವರ ಭಾಷಣ
October 20th, 01:25 pm
ಭಗವಾನ್ ಬುದ್ಧ ಅವರ ಪರಿನಿರ್ವಾಣದ ಸ್ಥಳವಾದ ಕುಶಿನಗರದ ನಿಮಗೆಲ್ಲರಿಗೂ ಶುಭಾಶಯಗಳು!. ಇಂದು ನಾನು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದೇನೆ ಮತ್ತು ನೀವು ಬಹಳ ದೀರ್ಘ ಕಾಲದಿಂದ ಕಾಯುತ್ತಿದ್ದ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆಯನ್ನು ಮಾಡಿದ್ದೇನೆ. ಈಗ ವಿಮಾನಗಳು ಇಲ್ಲಿಂದ ಹಾರಾಟ ಆರಂಭ ಮಾಡಲಿವೆ ಮತ್ತು ಗಂಭೀರ ಖಾಯಿಲೆಗಳಿಗೆ ಇಲ್ಲಿ ಚಿಕಿತ್ಸಾ ಸೌಲಭ್ಯ ಇರಲಿದೆ. ಇದರೊಂದಿಗೆ ನಿಮ್ಮೆಲ್ಲರ ಬಹಳ ದೊಡ್ಡ ಕನಸು ನನಸಾದಂತಾಗಿದೆ. ನಿಮ್ಮೆಲ್ಲರಿಗೂ ಬಹಳ ಅಭಿನಂದನೆಗಳು.ಕುಶಿನಗರದ ರಾಜ್ ಕಿಯಾ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
October 20th, 01:24 pm
ಉತ್ತರ ಪ್ರದೇಶದ ರಾಜ್ ಕಿಯಾ ವೈದ್ಯಕೀಯ ಕಾಲೇಜಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅವರು ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.“ಜನೌಷಧಿ ದಿವಸ್” ಆಚರಣೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 07th, 10:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಜನೌಷಧಿ ದಿನ’ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅವರು ಶಿಲ್ಲಾಂಗ್ ನ ನೈಗ್ರಿಮ್ಸ್ (ಈಶಾನ್ಯ ಇಂದಿರಾಗಾಂಧಿ ಪ್ರಾದೇಶಿಕ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಯಲ್ಲಿ 7500ನೇ ಜನೌಷಧಿ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಉತ್ತಮ ಕೆಲಸ ಮಾಡಿರುವ ಪಾಲುದಾರರರ ಬಗ್ಗೆ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡ, ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ಅನುರಾಗ್ ಠಾಕೂರ್, ಹಿಮಾಚಲಪ್ರದೇಶ, ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳು, ಮೇಘಾಲಯ ಮತ್ತು ಗುಜರಾತ್ ರಾಜ್ಯಗಳ ಉಪಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. v‘ಜನೌಷಧಿ ದಿನ’ ಆಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 07th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಜನೌಷಧಿ ದಿನ’ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅವರು ಶಿಲ್ಲಾಂಗ್ ನ ನೈಗ್ರಿಮ್ಸ್ (ಈಶಾನ್ಯ ಇಂದಿರಾಗಾಂಧಿ ಪ್ರಾದೇಶಿಕ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಯಲ್ಲಿ 7500ನೇ ಜನೌಷಧಿ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಉತ್ತಮ ಕೆಲಸ ಮಾಡಿರುವ ಪಾಲುದಾರರರ ಬಗ್ಗೆ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡ, ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ಅನುರಾಗ್ ಠಾಕೂರ್, ಹಿಮಾಚಲಪ್ರದೇಶ, ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳು, ಮೇಘಾಲಯ ಮತ್ತು ಗುಜರಾತ್ ರಾಜ್ಯಗಳ ಉಪಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ತಮಿಳುನಾಡಿನ ಮಧುರೈಯಲ್ಲಿ ಎ.ಐ.ಐ.ಎಂ.ಎಸ್. ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ.
January 27th, 11:55 am
ದೇಶವು ನಿನ್ನೆ ಗಣರಾಜ್ಯೋತ್ಸವವನ್ನು ಆಚರಿಸಿತು. ಕೆಲವು ರೀತಿಯಲ್ಲಿ , ಮಧುರೈಯಲ್ಲಿ ಇಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗೆ ಶಿಲಾನ್ಯಾಸ ಮಾಡಿರುವುದು ನಮ್ಮ “ಏಕ ಭಾರತ್ ಶ್ರೇಷ್ಟ ಭಾರತ್” ಚಿಂತನೆಯನ್ನು ಪ್ರತಿಫಲಿಸುತ್ತದೆ.ಮದುರೈನ ಏಮ್ಸ್ ನೊಂದಿಗೆ ದೇಶದ ಎಲ್ಲ ಮೂಲೆಗಳಿಗೂ ಬ್ರಾಂಡ್ ಏಮ್ಸ್ ತಂದಂತಾಗುತ್ತದೆ: ಪಿ.ಎಂ.
January 27th, 11:54 am
ತಮಿಳುನಾಡಿನ ಮದುರೈ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಆರೋಗ್ಯ ಆರೈಕೆ ಸೌಲಭ್ಯ ಮತ್ತು ಸೇವೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಮದುರೈ ಏಮ್ಸ್ ಗೆ ಶಂಕುಸ್ಥಾಪನೆ ನೆರೆವೇರಿಸಿ ಹಲವು ಯೋಜನೆಗಳನ್ನು ಉದ್ಘಾಟಿಸಿದರು.ಆಗ್ರಾದಲ್ಲಿ ಉತ್ತಮ ಮತ್ತು ಹೆಚ್ಚು ಭರವಸೆದಾಯಕ ನೀರು ಪೂರೈಕೆ ಮಾಡುವ ಗಂಗಾಜಲ ಯೋಜನೆ, ಪ್ರಧಾನಮಂತ್ರಿ ಅವರಿಂದ ಆರಂಭ.
January 09th, 02:21 pm
ಆಗ್ರಾವನ್ನು ಪ್ರವಾಸೀ ಸ್ನೇಹೀ ನಗರವಾಗಿಸಲು ಆಗ್ರಾ ಸ್ಮಾರ್ಟ್ ಸಿಟಿಗಾಗಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ನಿರ್ಮಾಣ, ಎಸ್.ಎನ್. ವೈದ್ಯಕೀಯ ಕಾಲೇಜು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಪ್ರಧಾನಮಂತ್ರಿ ಅವರಿಂದ ಶಿಲಾನ್ಯಾಸ, ಆಗ್ರಾ ಪಂಚಧಾರಾ- ಅಭಿವೃದ್ಧಿಯ ಐದು ಧಾರೆಗಳು ರಾಷ್ಟಾಭಿವೃದ್ಧಿಯ ಪ್ರಮುಖ ಕೀಲಿ ಕೈ: ಪ್ರಧಾನಮಂತ್ರಿಸಾಮಾನ್ಯ ವರ್ಗ ಬಡವರಿಗೆ 10% ಮೀಸಲಾತಿಯು ಸರಿಯಾದ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ: ಆಗ್ರಾದಲ್ಲಿ ಪ್ರಧಾನಿ ಮೋದಿ
January 09th, 02:21 pm
ಆಗ್ರಾದಲ್ಲಿ ಅಭಿವೃದ್ಧಿಗೆ ವೇಗ ಕೊಡಲು ಮತ್ತು ಪ್ರವಾಸೀ ಮೂಲಸೌಕರ್ಯಗಳನ್ನು ಹೆಚ್ಚಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಗ್ರಾ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ರೂಪಾಯಿ 2900 ಕೋಟಿ ಮೌಲ್ಯದ ಸರಣಿ ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಿದರು. ಪ್ರಧಾನಮಂತ್ರಿ ಅವರು ಆಗ್ರಾಕ್ಕೆ ಉತ್ತಮ ಮತ್ತು ಹೆಚ್ಚು ಭರವಸೆದಾಯಕ, ಖಚಿತ ನೀರು ಪೂರೈಕೆ ಯೋಜನೆಯಾದ ಗಂಗಾಜಲ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದರ ಅಂದಾಜು ವೆಚ್ಚ 2880 ಕೋ.ರೂ. ಗಂಗಾಜಲ ಯೋಜನೆ 140 ಕ್ಯೂಸೆಕ್ಸ್ ಗಂಗಾ ನೀರನ್ನು ಆಗ್ರಾಕ್ಕೆ ತರುವ ಉದ್ದೇಶವನ್ನು ಹೊಂದಿದೆ. ಇದು ನಗರದ ಕುಡಿಯುವ ನೀರಿನ ಬೇಡಿಕೆಯನ್ನು ಈಡೇರಿಸಲಿದೆ.ಜಾರ್ಖಂಡ್ ನ ದಿಯೋಘರ್ ನಲ್ಲಿ ನೂತನ ಏಮ್ಸ್ ಸ್ಥಾಪನೆಗೆ ಸಂಪುಟದ ಸಮ್ಮತಿ
May 16th, 04:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಜಾರ್ಖಂಡ್ ನ ಡಿಯೋಘರ್ ನಲ್ಲಿ ನೂತನ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಸ್ಥಾಪನೆಗೆ ತನ್ನ ಸಮ್ಮತಿ ಸೂಚಿಸಿದೆ. ಯೋಜನೆಗೆ 1103 ಕೋಟಿ ರೂಪಾಯಿಗಳ ಮೌಲ್ಯದ ನಿಧಿಗೂ ಅನುಮೋದಿಸಿದೆ ಮತ್ತು ಏಮ್ಸ್ ಅನ್ನು ಪ್ರಧಾನಮಂತ್ರಿ ಆರೋಗ್ಯ ಸುರಕ್ಷಾ ಯೋಜನೆ (ಪಿ.ಎಂ.ಎಸ್.ಎಸ್.ವೈ.) ಅಡಿ ಸ್ಥಾಪಿಸುವುದಾಗಿ ಹೇಳಿದೆ.