ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 08th, 01:00 pm

ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

February 08th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್‌ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.

​​​​​​​ಫೆಬ್ರವರಿ 8 ರಂದು ಶ್ರೀಲ ಪ್ರಭುಪಾದರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 07th, 04:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 8 ಫೆಬ್ರವರಿ 2024 ರಂದು ಮಧ್ಯಾಹ್ನ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀಯವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅಕ್ಟೋಬರ್‌ 27ರಂದು ಭಾರತೀಯ ಮೊಬೈಲ್‌ ಕಾಂಗ್ರೆಸ್‌ (ಐಎಂಸಿ) 2023ರ 7ನೇ ಆವೃತ್ತಿಯನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

October 26th, 02:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಅಕ್ಟೋಬರ್‌ 27ರಂದು ಬೆಳಗ್ಗೆ 9:45/ಕ್ಕೆ ನವದೆಹಲಿಯ ಪ್ರಗತಿ ಮೈದಾನದ ಭಾರತ್‌ ಮಂಟಪದಲ್ಲಿ ಭಾರತೀಯ ಮೊಬೈಲ್‌ ಕಾಂಗ್ರೆಸ್‌ 2023ರ 7ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ದೇಶಾದ್ಯಂತದ ಶಿಕ್ಷಣ ಸಂಸ್ಥೆಗಳಿಗೆ 100 ‘5ಜಿ ಯೂಸ್‌ ಕೇಸ್‌ ಲ್ಯಾಬ್‌’ಗಳನ್ನು ಪ್ರದಾನ ಮಾಡಲಿದ್ದಾರೆ. ಈ ಪ್ರಯೋಗಾಲಯಗಳನ್ನು ‘100 5ಜಿ ಲ್ಯಾಬ್ಸ್ ಉಪಕ್ರಮ’ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

August 07th, 04:16 pm

ಕೆಲವು ದಿನಗಳ ಹಿಂದೆ ಭಾರತ ಮಂಟಪವನ್ನು ಅದ್ಧೂರಿಯಾಗಿ ಉದ್ಘಾಟಿಸಲಾಗಿತ್ತು. ನಿಮ್ಮಲ್ಲಿ ಕೆಲವರು ಮೊದಲು ಇಲ್ಲಿಗೆ ಬಂದು ನಿಮ್ಮ ಮಳಿಗೆಗಳು ಅಥವಾ ಟೆಂಟ್‌ಗಳನ್ನು ಹಾಕಿದ್ದಿರಿ. ಆದರೆ ಇಂದು ನೀವು ಇಲ್ಲಿ ಪರಿವರ್ತಿತ ರಾಷ್ಟ್ರವನ್ನು ನೋಡುತ್ತಿದ್ದೀರಿ. ಇಂದು ನಾವು ಈ ಭಾರತ ಮಂಟಪದಲ್ಲಿ ರಾಷ್ಟ್ರೀಯ ಕೈಮಗ್ಗ ದಿನ ಆಚರಿಸುತ್ತಿದ್ದೇವೆ. ಭಾರತ ಮಂಟಪದ ಈ ವೈಭವದಲ್ಲಿಯೂ ಭಾರತದ ಕೈಮಗ್ಗ ಉದ್ಯಮವು ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರಾಚೀನ ಮತ್ತು ಆಧುನಿಕತೆಯ ಈ ಸಂಗಮವು ಇಂದಿನ ಭಾರತವನ್ನು ವ್ಯಾಖ್ಯಾನಿಸುತ್ತಿದೆ. ಇಂದಿನ ಭಾರತ ಕೇವಲ ಸ್ಥಳೀಯರ ಬಗ್ಗೆ ಧ್ವನಿಯೆತ್ತದೆ, ವಿಶ್ವವ್ಯಾಪಿಯಾಗಿಸಲು ಜಾಗತಿಕ ವೇದಿಕೆ ಒದಗಿಸುತ್ತಿದೆ. ಸ್ವಲ್ಪ ಸಮಯದ ಹಿಂದೆ, ನಮ್ಮ ಕೆಲವು ನೇಕಾರರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶ ಸಿಕ್ಕಿತು. ದೇಶಾದ್ಯಂತ ಅನೇಕ ಕೈಮಗ್ಗ ಕ್ಲಸ್ಟರ್‌ಗಳಿಂದ ನಮ್ಮ ನೇಕಾರ ಸಹೋದರರು ಮತ್ತು ಸಹೋದರಿಯರು ನಮ್ಮೊಂದಿಗೆ ಇರಲು ದೂರದೂರುಗಳಿಂದ ಇಲ್ಲಿಗೆ ಬಂದಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ!

ನವದೆಹಲಿಯಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

August 07th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದ `ಭಾರತ್ ಮಂಟಪ’ದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ʻರಾಷ್ಟ್ರೀಯ ಫ್ಯಾಶನ್ ಟೆಕ್ನಾಲಜಿ ಸಂಸ್ಥೆʼ ಅಭಿವೃದ್ಧಿಪಡಿಸಿದ 'ಭಾರತೀಯ ವಸ್ತ್ರ ಏವಮ್ ಶಿಲ್ಪ ಕೋಶ್ʼ ಎಂಬ ಜವಳಿ ಮತ್ತು ಕರಕುಶಲ ವಸ್ತುಗಳ ಭಂಡಾರ ಪೋರ್ಟಲ್‌ಗೆ ಅವರು ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನಕ್ಕೂ ಭೇಟಿ ನೀಡಿ, ನೇಕಾರರೊಂದಿಗೆ ಸಂವಾದ ನಡೆಸಿದರು.

ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಭಾಗಿ

August 05th, 10:27 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಆಗಸ್ಟ್ 7ರಂದು ಮಧ್ಯಾಹ್ನ 12 ಗಂಟೆಗೆ ದೆಹಲಿಯ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

In NEP traditional knowledge and futuristic technologies have been given the same importance: PM Modi

July 29th, 11:30 am

PM Modi inaugurated Akhil Bhartiya Shiksha Samagam at Bharat Mandapam in Delhi. Addressing the gathering, the PM Modi underlined the primacy of education among the factors that can change the destiny of the nation. “Our education system has a huge role in achieving the goals with which 21st century India is moving”, he said. Emphasizing the importance of the Akhil Bhartiya Shiksha Samagam, the Prime Minister said that discussion and dialogue are important for education.

ದೆಹಲಿಯ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಉದ್ಘಾಟಿಸಿದ ಪ್ರಧಾನಮಂತ್ರಿ

July 29th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿದರು. ಇದು ರಾಷ್ಟ್ರೀಯ ಶಿಕ್ಷಣ ನೀತಿ 2020 ರ 3 ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ. ಪಿಎಂ ಶ್ರೀ ಯೋಜನೆಯಡಿ ಮೊದಲ ಕಂತಿನ ಹಣವನ್ನು ಅವರು ಬಿಡುಗಡೆ ಮಾಡಿದರು. 6207 ಶಾಲೆಗಳು ಒಟ್ಟು 630 ಕೋಟಿ ರೂಪಾಯಿಗಳ ಮೊದಲ ಕಂತನ್ನು ಪಡೆದಿವೆ. 12 ಭಾರತೀಯ ಭಾಷೆಗಳಿಗೆ ಭಾಷಾಂತರಿಸಲಾದ ಶಿಕ್ಷಣ ಮತ್ತು ಕೌಶಲ್ಯ ಪಠ್ಯಕ್ರಮ ಪುಸ್ತಕಗಳನ್ನು ಅವರು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.

ದೆಹಲಿಯ ಭಾರತ ಮಂಟಪದಲ್ಲಿಂದು (ಜುಲೈ 29) ಅಖಿಲ ಭಾರತೀಯ ಶಿಕ್ಷಾ ಸಮಾಗಮ ಉದ್ಘಾಟಿಸಲಿರುವ ಪ್ರಧಾನ ಮಂತ್ರಿ

July 28th, 06:50 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2023 ರ ಜುಲೈ 29 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿಂದು(ಜುಲೈ 29) ಬೆಳಗ್ಗೆ 10 ಗಂಟೆಗೆ ಅಖಿ ಲಭಾರತೀಯ ಶಿಕ್ಷಾ ಸಮಾಗಮ ಉದ್ಘಾಟಿಸಲಿದ್ದಾರೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ 2020ರ 3ನೇ ವಾರ್ಷಿಕೋತ್ಸವ ಸಂದರ್ಭದಲ್ಲೇ ನಡೆಯುತ್ತಿದೆ.

ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರ (ಐಇಸಿಸಿ) ಸಂಕೀರ್ಣವನ್ನು ಉದ್ಘಾಟಿಸಿ ಪ್ರಧಾನಮಂತ್ರಿಯವರ ಭಾಷಣ

July 26th, 11:28 pm

ಇಂದು, ಈ ದೈವಿಕ ಮತ್ತು ಭವ್ಯವಾದ 'ಭಾರತ ಮಂಟಪ'ವನ್ನು ನೋಡುವಾಗ ಪ್ರತಿಯೊಬ್ಬ ಭಾರತೀಯನು ಸಂತೋಷ, ಸಡಗರ ಮತ್ತು ಹೆಮ್ಮೆಯ ಪ್ರಜ್ಞೆಯಿಂದ ತುಂಬಿದ್ದಾನೆ. 'ಭಾರತ ಮಂಟಪ' ಭಾರತದ ಸಾಮರ್ಥ್ಯ ಮತ್ತು ಹೊಸ ಶಕ್ತಿಗೆ ಸಾಕ್ಷಿಯಾಗಲು ಆಹ್ವಾನವಾಗಿದೆ. 'ಭಾರತ ಮಂಟಪ' ಭಾರತದ ಭವ್ಯತೆ ಮತ್ತು ಅದರ ಇಚ್ಛಾಶಕ್ತಿಯ ದೃಷ್ಟಿಕೋನವಾಗಿದೆ. ಕೊರೋನಾ ಸೋಂಕಿನ ಸವಾಲಿನ ಸಮಯದಲ್ಲಿ ಎಲ್ಲೆಡೆ ಕೆಲಸ ಸ್ಥಗಿತಗೊಂಡಾಗ, ನಮ್ಮ ಕಾರ್ಮಿಕರು ಅದರ ನಿರ್ಮಾಣವನ್ನು ಪೂರ್ಣಗೊಳಿಸಲು ಹಗಲು ರಾತ್ರಿ ಕೆಲಸ ಮಾಡಿದರು.

ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಭಾಂಗಣ (ಐಐಸಿಸಿ) ಸಂಕೀರ್ಣವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು

July 26th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಸಭಾಂಗಣ (ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್ ಸೆಂಟರ್ - ಐಐಸಿಸಿ) ಸಂಕೀರ್ಣವನ್ನು ಉದ್ಘಾಟಿಸಿದರು. ಅವರು ಜಿ-20 ನಾಣ್ಯ ಮತ್ತು ಜಿ-20 ಅಂಚೆಚೀಟಿಯನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ, ಡ್ರೋನ್ ಮೂಲಕ ನಡೆಸಲಾದ ವೀಕ್ಷಣಾ ವ್ಯವಸ್ಥೆ ಮೂಲಕ ಕನ್ವೆನ್ಷನ್ ಸೆಂಟರ್ ಗೆ ‘ಭಾರತ ಮಂಟಪ’ ಎಂದು ನಾಮಕರಣ ಮಾಡಲಾಯಿತು ಮತ್ತು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಪ್ರಧಾನಮಂತ್ರಿ ಭಾಗವಹಿಸಿದರು. ಪ್ರಧಾನಮಂತ್ರಿಯವರ ದೃಷ್ಟಿಕೋನದಂತೆ, ಮತ್ತು ರಾಷ್ಟ್ರೀಯ ಯೋಜನೆಯಾಗಿ ಸುಮಾರು ರೂ 2700 ಕೋಟಿ ವೆಚ್ಚದಲ್ಲಿ ಈ ಸಂಕೀರ್ಣವನ್ನು ಅಭಿವೃದ್ಧಿಪಡಿಸಲಾಗಿದೆ. ಪ್ರಗತಿಯ ಹಾದಿಯ ಭಾರತವನ್ನು ಜಾಗತಿಕ ವ್ಯಾಪಾರ ತಾಣವಾಗಿ ಉತ್ತೇಜಿಸಲು ಈ ಸಂಕೀರ್ಣ ಸಹಾಯ ಮಾಡುತ್ತದೆ.

ಐಟಿಪಿಒ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದ ಶ್ರಮಿಕ ವರ್ಗದವರನ್ನು ಪ್ರಧಾನಮಂತ್ರಿಯವರು ಗೌರವಿಸಿದರು

July 26th, 04:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸ ಐಟಿಪಿಒ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ ಪೂಜೆ ನೆರವೇರಿಸಿದರು ಮತ್ತು ಕೇಂದ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕೆಲಸಗಾರರನ್ನು ಸನ್ಮಾನಿಸಿದರು.

ಜುಲೈ 26ರಂದು ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರ (ಐಇಸಿಸಿ) ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ

July 24th, 07:45 pm

ದೇಶದಲ್ಲಿ ಸಭೆಗಳು, ಸಮ್ಮೇಳನಗಳು ಮತ್ತು ಪ್ರದರ್ಶನಗಳನ್ನು ಆಯೋಜಿಸಲು ವಿಶ್ವದರ್ಜೆಯ ಮೂಲಸೌಕರ್ಯವನ್ನು ಹೊಂದುವ ಪ್ರಧಾನ ಮಂತ್ರಿಯವರ ದೃಷ್ಟಿಕೋನವು ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದ (ಐಇಸಿಸಿ) ಪರಿಕಲ್ಪನೆಗೆ ಕಾರಣವಾಗಿದೆ. ಪ್ರಗತಿ ಮೈದಾನದಲ್ಲಿನ ಹಳೆಯ ಮತ್ತು ಹಳೆಯ ಸೌಲಭ್ಯಗಳನ್ನು ಪುನರುಜ್ಜೀವನಗೊಳಿಸಿದ ಈ ಯೋಜನೆಯನ್ನು ಸುಮಾರು 2700 ಕೋಟಿ ರೂ.ಗಳ ವೆಚ್ಚದಲ್ಲಿ ರಾಷ್ಟ್ರೀಯ ಯೋಜನೆಯಾಗಿ ಅಭಿವೃದ್ಧಿಪಡಿಸಲಾಗಿದೆ. ಸರಿಸುಮಾರು 123 ಎಕರೆ ಕ್ಯಾಂಪಸ್ ಪ್ರದೇಶವನ್ನು ಹೊಂದಿರುವ ಐಇಸಿಸಿ ಸಂಕೀರ್ಣವನ್ನು ಭಾರತದ ಅತಿದೊಡ್ಡ ಎಂಐಸಿಇ (ಸಭೆಗಳು, ಪ್ರೋತ್ಸಾಹಕಗಳು, ಸಮ್ಮೇಳನಗಳು ಮತ್ತು ಪ್ರದರ್ಶನಗಳು) ತಾಣವಾಗಿ ಅಭಿವೃದ್ಧಿಪಡಿಸಲಾಗಿದೆ. ಕಾರ್ಯಕ್ರಮಗಳಿಗೆ ಲಭ್ಯವಿರುವ ಸ್ಥಳಾವಕಾಶದ ದೃಷ್ಟಿಯಿಂದ, ಐಇಸಿಸಿ ಸಂಕೀರ್ಣವು ವಿಶ್ವದ ಉನ್ನತ ಪ್ರದರ್ಶನ ಮತ್ತು ಸಮಾವೇಶ ಸಂಕೀರ್ಣಗಳಲ್ಲಿ ತನ್ನ ಸ್ಥಾನವನ್ನು ಕಂಡುಕೊಳ್ಳುತ್ತದೆ.

ಜುಲೈ 1 ರಂದು 17 ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 30th, 03:09 pm

ಅಂತಾರಾಷ್ಟ್ರೀಯ ಸಹಕಾರಿ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 1 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ 17 ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮೊದಲ ರಾಷ್ಟ್ರೀಯ ತರಬೇತಿ ಸಮಾವೇಶವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ

June 11th, 06:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯ ಪ್ರಗತಿ ಮೈದಾನದಲ್ಲಿರುವ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ ಮೊದಲ ರಾಷ್ಟ್ರೀಯ ತರಬೇತಿ ಸಮಾವೇಶ ಉದ್ಘಾಟಿಸಿದರು.

ಮೊಟ್ಟಮೊದಲ ರಾಷ್ಟ್ರೀಯ ತರಬೇತಿ ಸಮಾವೇಶ ಪ್ರಧಾನ ಮಂತ್ರಿಗಳಿಂದ ಉದ್ಘಾಟನೆ

June 10th, 10:40 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 11ರಂದು ಬೆಳಗ್ಗೆ 10:30ಕ್ಕೆ ದೆಹಲಿಯ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರ ಪ್ರಗತಿ ಮೈದಾನದಲ್ಲಿ ಮೊದಲ ರಾಷ್ಟ್ರೀಯ ತರಬೇತಿ ಸಮಾವೇಶವನ್ನು ಉದ್ಘಾಟಿಸಿ, ನಂತರ ಮಾತನಾಡಲಿದ್ದಾರೆ.

ಇಂಟರ್‌ನ್ಯಾಶನಲ್ ಮ್ಯೂಸಿಯಂ ಎಕ್ಸ್‌ಪೋ-2023 ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

May 18th, 11:00 am

ನನ್ನ ಸಂಪುಟ ಸಹೋದ್ಯೋಗಿಗಳಾದ ಜಿ. ಕಿಶನ್ ರೆಡ್ಡಿ ಜಿ, ಮೀನಾಕ್ಷಿ ಲೇಖಿ ಜಿ ಮತ್ತು ಅರ್ಜುನ್ ರಾಮ್ ಮೇಘವಾಲ್ ಜಿ, ಲೌವ್ರೆ ಮ್ಯೂಸಿಯಂ ನಿರ್ದೇಶಕ ಮ್ಯಾನುಯೆಲ್ ರಬಾಟೆ ಜಿ, ವಿಶ್ವದ ವಿವಿಧ ದೇಶಗಳ ಅತಿಥಿಗಳು, ಗಣ್ಯರು, ಮಹಿಳೆಯರು ಮತ್ತು ಮಹನಿಯರೆ! ನಾನು ನಿಮಗೆಲ್ಲರಿಗೂ ಅಂತಾರಾಷ್ಟ್ರೀಯ ಮ್ಯೂಸಿಯಂ ದಿನದ ಶುಭಾಶಯಗಳನ್ನು ಕೋರುತ್ತೇನೆ. ಮ್ಯೂಸಿಯಂ ಲೋಕದ ದಿಗ್ಗಜರು ಇಂದು ಇಲ್ಲಿ ಸೇರಿದ್ದಾರೆ. ಇಂದಿನ ಸಂದರ್ಭವೂ ವಿಶೇಷವಾಗಿದೆ, ಏಕೆಂದರೆ ಭಾರತವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಅಮೃತ ಮಹೋತ್ಸವ ಆಚರಿಸುತ್ತಿದೆ.

ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಉದ್ಘಾಟಿಸಿದ ಪ್ರಧಾನಮಂತ್ರಿ

May 18th, 10:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಅನ್ನು ಉದ್ಘಾಟಿಸಿದರು. ಉತ್ತರ ಮತ್ತು ದಕ್ಷಿಣ ಬ್ಲಾಕ್ ಗಳಲ್ಲಿ ಮುಂಬರುವ ರಾಷ್ಟ್ರೀಯ ವಸ್ತುಸಂಗ್ರಹಾಲಯದ ವರ್ಚುವಲ್ ವಾಕ್ ಥ್ರೋವನ್ನು ಅವರು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಟೆಕ್ನೋ ಮೇಳ, ಸಂರಕ್ಷಣಾ ಪ್ರಯೋಗಾಲಯ ಮತ್ತು ವಸ್ತುಪ್ರದರ್ಶನಗಳಲ್ಲಿ ವಾಕ್ ಥ್ರೂ ನಡೆಸಿದರು. 'ವಸ್ತುಸಂಗ್ರಹಾಲಯಗಳು, ಸುಸ್ಥಿರತೆ ಮತ್ತು ಯೋಗಕ್ಷೇಮ' ಎಂಬ ಈ ವರ್ಷದ ಧ್ಯೇಯವಾಕ್ಯದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ 47 ನೇ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನವನ್ನು ಆಚರಿಸಲು ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋವನ್ನು ಆಯೋಜಿಸಲಾಗಿದೆ.

ಮೇ 18ರಂದು ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಉದ್ಘಾಟಿಸಲಿರುವ ಪ್ರಧಾನಮಂತ್ರಿ

May 16th, 06:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಪ್ರಗತಿ ಮೈದಾನದಲ್ಲಿ ಮೇ 18 ರಂದು ಬೆಳಿಗ್ಗೆ 10:30 ಕ್ಕೆ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಅನ್ನು ಉದ್ಘಾಟಿಸಲಿದ್ದಾರೆ.