ಪ್ರಧಾನ ಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ನಾಯಕರು

June 08th, 12:24 pm

2024ರ ಸಾರ್ವತ್ರಿಕ ಚುನಾವಣೆಯ ನಂತರ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವನ್ನು 2024 ಜೂನ್ 9ರಂದು ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ದೇಶಗಳ ನಾಯಕರನ್ನು ಗೌರವಾನ್ವಿತ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಕೆ

June 05th, 08:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ನೇಪಾಳದ ಪ್ರಧಾನಮಂತ್ರಿ ಆರ್.ಟಿ. ಪುಷ್ಪ ಕಮಲ್ ದಹಲ್ 'ಪ್ರಚಂಡ ದೂರವಾಣಿ ಕರೆ ಮಾಡಿ ಲೋಕಸಭಾ ಚುನಾವಣೆ ಗೆಲುವಿನ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿದ್ದಾರೆ. ಭಾರತದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಸಾರ್ವತ್ರಿಕ ಚುನಾವಣೆಯಲ್ಲಿ ಮೂರನೇ ಅವಧಿಗೆ ಐತಿಹಾಸಿಕ ಜಯಗಳಿಸಿದ ನರೇಂದ್ರ ಮೋದಿಯವರನ್ನು ಪ್ರಧಾನಿ ಪ್ರಚಂಡ ಅಭಿನಂದಿಸಿದರು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತ-ನೇಪಾಳ ಸಂಬಂಧಗಳು ಮತ್ತಷ್ಟು ಬಲಗೊಳ್ಳಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಹಾರೈಸಿ, ಶುಭಾಶಯ ಕೋರಿದ ವಿಶ್ವದ ಜನನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ

August 15th, 04:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಾಶಯ ಕೋರಿದ ವಿಶ್ವದ ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಮಂತ್ರಿ ಅವರ ಜೊತೆ ಮಾತುಕತೆ ನಡೆಸಿದರು

August 05th, 06:16 pm

ಇಂದು ನೇಪಾಳದ ಪ್ರಧಾನಮಂತ್ರಿಯಾಗಿ ಪ್ರತಿಜ್ಞೆ ಸ್ವೀಕರಿಸಿದ ಗೌರವಾನ್ವಿತ ಶ್ರೀ ಪುಷ್ಪ ಕಮಲ್ ದಹಾಲ್ 'ಪ್ರಚಂಡ' ಅವರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೂರವಾಣಿ ಸಂಭಾಷಣೆ ನಡೆಸಿದರು.

ನೇಪಾಳ ಪ್ರಧಾನಿ ಪತ್ನಿ ಶ್ರೀಮತಿ ಸೀತಾ ದಾಹಲ್ ನಿಧನಕ್ಕೆ ಪ್ರಧಾನಿ ಸಂತಾಪ

July 12th, 01:05 pm

ನೇಪಾಳ ಪ್ರಧಾನ ಮಂತ್ರಿ ಪುಷ್ಪ ಕಮಲ್ ದಾಹಲ್ ಪ್ರಚಂಡ ಅವರ ಪತ್ನಿ ಶ್ರೀಮತಿ ಸೀತಾ ದಾಹಲ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನೇಪಾಳ ಪ್ರಧಾನಿಗೆ ಮೋದಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.

ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಪುಷ್ಪಕಮಲ್ ದಹಲ್ 'ಪ್ರಚಂಡ' ಅವರನ್ನು ಪ್ರಧಾನ‌ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

December 25th, 10:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಕಾಮ್ರೇಡ್ ಪ್ರಚಂಡ ಅವರನ್ನು ಅಭಿನಂದಿಸಿದ್ದಾರೆ.

ನೇಪಾಳದ ಮಾಜಿ ಪ್ರಧಾನಮಂತ್ರಿ ಶ್ರೀ ಪುಷ್ಪ ಕಮಲ್ ದಾಹಾಲ್ ‘ಪ್ರಚಂಡಾ’ ಅವರಿಂದ ಪ್ರಧಾನಮಂತ್ರಿ ಬೇಟಿ

September 08th, 05:07 pm

ನೇಪಾಳದ ಮಾಜಿ ಪ್ರಧಾನಮಂತ್ರಿ ಮತ್ತು ನೇಪಾಳ ಕಮ್ಯೂನಿಷ್ಟ್ ಪಾರ್ಟಿಯ ಸಹ ಕಾರ್ಯಾಧ್ಯಕ್ಷ ಶ್ರೀ ಪುಷ್ಪ ಕಮಲ್ ದಾಹಾಲ್ ‘ಪ್ರಚಂಡಾ’ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

PM Modi meets Mr. Pushpa Kamal Dahal 'Prachanda', former PM of Nepal

May 12th, 01:27 pm

Prime Minister Narendra Modi today held wide ranging talks with former PM Mr. Pushpa Kamal Dahal 'Prachanda' of Nepal. The leaders met in Kathmandu and discussed several aspects of India-Nepal ties.