ಭಾರತೀಯ ಸಂಸ್ಕೃತಿಯ ಕಂಪನವು ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
January 30th, 11:30 am
ಸ್ನೇಹಿತರೆ, ಆಜಾದಿ ಕೆ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ದೇಶ ಇಂಥ ಪ್ರಯತ್ನಗಳ ಮೂಲಕ ರಾಷ್ಟ್ರೀಯ ಪ್ರತಿಷ್ಠೆಯನ್ನು ಪುನಃ ಪ್ರತಿಸ್ಥಾಪಿಸುತ್ತಿದೆ. ಇಂಡಿಯಾ ಗೇಟ್ ಬಳಿಯ ‘ಅಮರ ಜವಾನ್ ಜ್ಯೋತಿ’ ಯನ್ನು ಹತ್ತಿರವೇ ‘ರಾಷ್ಟ್ರೀಯ ಯುದ್ಧ ಸ್ಮಾರಕ’ ದ ಜ್ಯೋತಿಗಳಲ್ಲಿ ಲೀನಗೊಳಿಸಿದ್ದೇವೆ ಎಂಬುದನ್ನು ನಾವು ನೋಡಿದ್ದೇವೆ. ಇಂಥ ಭಾವನಾತ್ಮಕ ಸಂದರ್ಭದಲ್ಲಿ ಬಹಳಷ್ಟು ದೇಶವಾಸಿಗಳು ಮತ್ತು ಹುತಾತ್ಮ ಕುಟುಂಬದವರ ಕಣ್ಣಲ್ಲಿ ನೀರು ಜಿನುಗಿತ್ತು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವಾತಂತ್ರ್ಯಾ ನಂತರ ಹುತಾತ್ಮರಾದ ಎಲ್ಲ ಯೋಧರ ಹೆಸರುಗಳನ್ನು ಬರೆಯಲಾಗಿದೆ. ನನಗೆ ಸೇನೆಯ ಕೆಲವು ಮಾಜಿ ಯೋಧರು ಪತ್ರ ಬರೆದು ಹೀಗೆ ಹೇಳಿದ್ದಾರೆ – “ಹುತಾತ್ಮರ ನೆನಪುಗಳೆದುರು ಪ್ರಜ್ವಲಿಸುತ್ತಿರುವ ‘ಅಮರ ಜವಾನ್ ಜ್ಯೋತಿ’ ಹುತಾತ್ಮರು ಅಮರರಾಗಿರುವುದಕ್ಕೆ ಸಾಕ್ಷಿಯಾಗಿದೆ.” ಅಮರ ಜವಾನ್ ಜ್ಯೋತಿ’ ಯಂತೆ ಹುತಾತ್ಮರ ತ್ಯಾಗ ಮತ್ತು ಬಲಿದಾನವೂ ಅಮರವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಎಂದು ನಿಮ್ಮೆಲ್ಲರಿಗೂ ಹೇಳಬಯಸುತ್ತೇನೆ. ನಿಮ್ಮ ಕುಟುಂಬ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿ. ಇಲ್ಲಿ ನಿಮಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಪ್ರೇರಣೆಯ ಅನುಭವವಾಗುತ್ತದೆ.ಅಲಿಘರ್ ನಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾನಿಲಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
September 14th, 12:01 pm
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಜನಪ್ರಿಯ ಮತ್ತು ಉತ್ಸಾಹೀ, ಸಿಡಿಗುಂಡಿನಂತಹ ಮಾತಿನ ಮುಖ್ಯಮಂತ್ರಿ, ಯೋಗಿ ಆದಿತ್ಯನಾಥ ಜೀ, ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಜೀ, ಉತ್ತರ ಪ್ರದೇಶ ಸರಕಾರದ ಸಚಿವರೇ, ಇತರ ಸಂಸತ್ ಸದಸ್ಯರೇ, ಶಾಸಕರೇ ಮತ್ತು ಅಲಿಘರ್ ನ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ,ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
September 14th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್‌ನ ಅಲಿಗಢ ನೋಡ್ ಮತ್ತು ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಪ್ರದರ್ಶನ ಮಾದರಿಗಳನ್ನೂ ಅವರು ವೀಕ್ಷಿಸಿದರು.ಸೆಪ್ಟಂಬರ್ 14ರಂದು ಆಲಿಘಡ್ ನಲ್ಲಿ ರಾಜಾ ಮಹೇಂದ್ರ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
September 13th, 11:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟಂಬರ್ 14ರಂದು ಮಧ್ಯಾಹ್ನ 12 ಗಂಟೆಗೆ ಉತ್ತರ ಪ್ರದೇಶದ ಆಲಿಘಡ್ ನಲ್ಲಿ ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಆನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್ ಮತ್ತು ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಆಲಿಘಡ್ ವಿಭಾಗದ ಪ್ರದರ್ಶನ ಮಾದರಿಗಳಿಗೆ ಭೇಟಿ ನೀಡಲಿದ್ದಾರೆ.