ಮಧ್ಯಪ್ರದೇಶದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿಯವರ ಭೇಟಿ

December 22nd, 12:55 pm

ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಮೋಹನ ಯಾದವ್, ಉಪಮುಖ್ಯಮಂತ್ರಿಗಳಾದ ಶ್ರೀ ರಾಜೇಂದ್ರ ಶುಕ್ಲಾ ಮತ್ತು ಶ್ರೀ ಜಗದೀಶ ದೇವಡಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ. ಮೋಹನ ಯಾದವ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

December 13th, 02:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ. ಮೋಹನ ಯಾದವ್ ಅವರನ್ನು ಅಭಿನಂದಿಸಿದರು. ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಜಗದೀಶ ದೇವ್ರಾ ಮತ್ತು ರಾಜೇಂದ್ರ ಶುಕ್ಲಾ ಅವರನ್ನು ಸಹ ಪ್ರಧಾನಮಂತ್ರಿಯವರು ಅಭಿನಂದಿಸಿದರು.