ಪಿಎಂ-ಜನ್ ಮನ್ ಯೋಜನೆಯಡಿ ಪಿಎಂಎವೈ(ಜಿ)ಯ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಬಿಡುಗಡೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 15th, 12:15 pm

ಎಲ್ಲರಿಗೂ ಶುಭಾಶಯಗಳು! ಪ್ರಸ್ತುತ ಉತ್ತರಾಯಣ, ಮಕರ ಸಂಕ್ರಾಂತಿ, ಪೊಂಗಲ್ ಮತ್ತು ಬಿಹು ಹಬ್ಬದ ಆಚರಣೆಯ ವಾತಾವರಣವು ಇಡೀ ದೇಶವನ್ನು ವ್ಯಾಪಿಸಿದೆ. ಹಲವಾರು ಹಬ್ಬಗಳ ಸಂಭ್ರಮ ನಮ್ಮನ್ನು ಆವರಿಸಿದೆ. ಇಂದಿನ ಈ ಕಾರ್ಯಕ್ರಮದ ಉತ್ಸಾಹಕ್ಕೆ ಹೆಚ್ಚಿನ ಭವ್ಯತೆ ಮತ್ತು ಲವಲವಿಕೆಯನ್ನು ಸೇರಿಸಿದೆ. ಈ ಸಂದರ್ಭದಲ್ಲಿ ನಿಮ್ಮೊಂದಿಗೆ ಸಂವಹನ ನಡೆಸುವುದು ನನಗೆ ಸಂಭ್ರಮಾಚರಣೆಯಂತೆ ಭಾಸವಾಗುತ್ತಿದೆ. ಪ್ರಸ್ತುತ, ಅಯೋಧ್ಯೆಯಲ್ಲಿ ಹಬ್ಬಗಳು ತೆರೆದುಕೊಳ್ಳುತ್ತಿವೆ, ಅದೇ ಸಮಯದಲ್ಲಿ, ನನ್ನ ಕುಟುಂಬದ ಭಾಗವೆಂದು ಪರಿಗಣಿಸಲ್ಪಟ್ಟ ಒಂದು ಲಕ್ಷ ಅತ್ಯಂತ ಹಿಂದುಳಿದ ಬುಡಕಟ್ಟು ಸಹೋದರರು ಮತ್ತು ಸಹೋದರಿಯರು ತಮ್ಮ ಮನೆಗಳಲ್ಲಿ ಸಂತೋಷದಿಂದ ಹಬ್ಬ ಆಚರಿಸುತ್ತಿದ್ದಾರೆ. ಇದು ನನಗೆ ಅಪಾರ ಸಂತೋಷ ತರುತ್ತಿದೆ. ಇಂದು ಅವರ ಪಕ್ಕಾ ಮನೆಗಳ ನಿರ್ಮಾಣಕ್ಕಾಗಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ನಾನು ಈ ಎಲ್ಲಾ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಸಂತೋಷದ ಮಕರ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ! ಈ ಉದಾತ್ತ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಲು ನನಗೆ ಸಿಕ್ಕಿರುವ ಅವಕಾಶವು ನನ್ನ ಜೀವನದಲ್ಲಿ ಬಹಳ ಸಂತೋಷ ತಂದಿದೆ.

​​​​​​​ʻಪಿಎಂ-ಜನಮನʼ ಯೋಜನೆಯಡಿ 1 ಲಕ್ಷ ʻಪಿಎಂಎವೈ(ಜಿ)ʼ ಫಲಾನುಭವಿಗಳಿಗೆ ಮೊದಲ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ

January 15th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ’ದ (ಪಿಎಂ-ಜನಮನ) ಅಡಿಯಲ್ಲಿ ʻಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆʼಯ(ಪಿಎಂಎವೈ-ಜಿ)ʼ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪಿಎಂ-ಜನಮನʼ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಸಮಾಜದಲ್ಲಿನ ಅನಿಷ್ಟಗಳು, ತಾರತಮ್ಯವನ್ನು ಕೊನೆಗೊಳಿಸಲು ನಾವು ಪ್ರತಿಜ್ಞೆ ತೆಗೆದುಕೊಳ್ಳಬೇಕು: ದೆಹಲಿಯ ದ್ವಾರಕಾದಲ್ಲಿ ಪ್ರಧಾನಿ ಮೋದಿ

October 24th, 06:32 pm

ದೆಹಲಿಯ ದ್ವಾರಕಾದಲ್ಲಿ ರಾಮ್ ಲೀಲಾದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ರಾವಣ ದಹನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ವಿಜಯದಶಿಮಿಯು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ, ಅಹಂಕಾರದ ಮೇಲೆ ವಿನಯ ಮತ್ತು ಕೋಪದ ಮೇಲೆ ತಾಳ್ಮೆಯ ಹಬ್ಬವಾಗಿದೆ. ಇದು ಪ್ರತಿಜ್ಞೆಗಳನ್ನು ನವೀಕರಿಸುವ ದಿನವೂ ಆಗಿದೆ ಎಂದು ಹೇಳಿದರು.

ದೆಹಲಿಯ ದ್ವಾರಕಾದಲ್ಲಿ ವಿಜಯ ದಶಮಿ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 24th, 06:31 pm

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯದಶಮಿಯು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ, ಅಹಂಕಾರದ ಮೇಲೆ ವಿನಯ ಮತ್ತು ಕೋಪದ ಮೇಲೆ ತಾಳ್ಮೆಯ ಹಬ್ಬವಾಗಿದೆ. ಇದು ಸಂಕಲ್ಪಗಳನ್ನು ನವೀಕರಿಸುವ ದಿನವೂ ಆಗಿದೆ ಎಂದು ಹೇಳಿದರು.

ಆಕಾಶವೇ ಮಿತಿಯಲ್ಲ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ

November 27th, 11:00 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. 'ಮನದ ಮಾತಿಗೆ' ನಿಮಗೆಲ್ಲರಿಗೂ ಮತ್ತೊಮ್ಮೆ ಸ್ವಾಗತ. ಈ ಕಾರ್ಯಕ್ರಮವು 95 ನೇ ಸಂಚಿಕೆಯಾಗಿದೆ. ನಾವು 'ಮನದ ಮಾತಿನ’ ಶತಕದತ್ತ ಬಹು ವೇಗವಾಗಿ ಸಾಗುತ್ತಿದ್ದೇವೆ. ಈ ಕಾರ್ಯಕ್ರಮವು 130 ಕೋಟಿ ದೇಶವಾಸಿಗಳೊಂದಿಗೆ ಸಂಪರ್ಕ ಸಾಧಿಸಲು ನನಗೆ ಮತ್ತೊಂದು ಮಾಧ್ಯಮವಾಗಿದೆ. ಪ್ರತಿ ಸಂಚಿಕೆಗೂ ಮುನ್ನ ಗ್ರಾಮಗಳು-ನಗರಗಳಿಂದ ಬರುವ ಸಾಕಷ್ಟು ಪತ್ರಗಳನ್ನು ಓದುವುದು, ಮಕ್ಕಳಿಂದ ಹಿರಿಯರವರೆಗೆ ಆಡಿಯೋ ಸಂದೇಶಗಳನ್ನು ಕೇಳುವುದು ನನಗೆ ಒಂದು ಆಧ್ಯಾತ್ಮಿಕ ಅನುಭವದಂತಿದೆ.

Read what PM Narendra Modi said on Shri Ram and Ram Rajya

January 13th, 08:51 pm

While inaugurating the Ramayana Bharat Darshana, Mata Sadnam & Statue of Lord Hanuman in Kanyakumari, PM Modi said, “Shri Ram was an ideal son, brother, husband, friend and was a great king. Ayodhya was an ideal city and Ram Rajya was an ideal system.

PM Modi releases Digital Version of timeless epic Ramcharitmanas

August 31st, 08:00 pm



PM’s address on the release of the digital version of Ramcharitmanas

August 31st, 05:18 pm



PM releases digital version of Ramcharitmanas

August 31st, 12:51 pm