ಹರ್ ಘರ್ ತಿರಂಗ ಅಭಿಯಾನವು ತ್ರಿವರ್ಣ ಧ್ವಜದ ಬಗ್ಗೆ 140 ಕೋಟಿ ಭಾರತೀಯರ ಆಳವಾದ ಗೌರವವನ್ನು ಸೂಚಿಸುತ್ತದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 14th, 09:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರ್ ಘರ್ ತಿರಂಗಾ ಅಭಿಯಾನದ ಬಗ್ಗೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಹರ್ ಘರ್ ತಿರಂಗ ಚಳುವಳಿಯು ಭಾರತದಾದ್ಯಂತ ಜನಪ್ರಿಯವಾಗಿದೆ ಎಂದು ಹೇಳಿದರು, ಇದು ತ್ರಿವರ್ಣ ಧ್ವಜದ ಬಗ್ಗೆ 140 ಕೋಟಿ ಭಾರತೀಯರ ಆಳವಾದ ಗೌರವವನ್ನು ಸೂಚಿಸುತ್ತದೆ.ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
January 22nd, 05:12 pm
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂತರು ಮತ್ತು ಸಾಧುಗಳಿಗೆ, ಇಲ್ಲಿ ಉಪಸ್ಥಿತರಿರುವ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಂಪರ್ಕ ಹೊಂದಿರುವ ಎಲ್ಲಾ ರಾಮ ಭಕ್ತರಿಗೆ ನನ್ನ ಶುಭಾಶಯಗಳು. ಎಲ್ಲರಿಗೂ ರಾಮ್ ರಾಮ್!ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
January 22nd, 01:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದರು. ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಶ್ರಮಜೀವಿಗಳೊಂದಿಗೆ ಶ್ರೀ ಮೋದಿ ಸಂವಾದ ನಡೆಸಿದರು.ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 02nd, 12:30 pm
ತಮಿಳುನಾಡಿನ ರಾಜ್ಯಪಾಲ ಶ್ರೀ ಆರ್.ಎನ್.ರವಿ ಜೀ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ ಮತ್ತು ಈ ಮಣ್ಣಿನ ಮಗ ಎಲ್.ಮುರುಗನ್ ಜೀ, ತಮಿಳುನಾಡು ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಮತ್ತು ತಮಿಳುನಾಡಿನ ನನ್ನ ಕುಟುಂಬ ಸದಸ್ಯರೇ!ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
January 02nd, 12:15 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿಂದು 20,000 ಕೋಟಿ ರೂ. ವೊತ್ತದ ಬಹುಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬಹುಅಭಿವೃದ್ಧಿ ಯೋಜನೆಗಳು ತಮಿಳುನಾಡಿನಲ್ಲಿ ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ಹಡಗು ಕ್ಷೇತ್ರಗಳಂತಹ ಕ್ಷೇತ್ರಗಳನ್ನು ಒಳಗೊಂಡಿವೆ.ವಾರಾಣಸಿಯಲ್ಲಿ ಕಾಶಿ ತಮಿಳು ಸಂಗಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಭಾಷಾಂತರ.
November 19th, 07:00 pm
ಕಾರ್ಯಕ್ರಮದಲ್ಲಿ ಉಪಸ್ತಿತರಿರುವ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಧರ್ಮೇಂದ್ರ ಪ್ರಧಾನ್ ಜೀ ಮತ್ತು ಶ್ರೀ ಎಲ್. ಮುರುಗನ್ ಜೀ, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಜಿ, ವಿಶ್ವವಿಖ್ಯಾತ ಸಂಗೀತಗಾರ ಮತ್ತು ರಾಜ್ಯಸಭಾ ಸದಸ್ಯರಾದ ಇಳಯರಾಜಾ ಜಿ, ಬಿ ಹೆಚ್ ಯು ಉಪಕುಲಪತಿ ಸುಧೀರ್ ಜೈನ್, ಐಐಟಿ ಮದ್ರಾಸ್ ನಿರ್ದೇಶಕರಾದ ಪ್ರೊಫೆಸರ್ ಕಾಮಕೋಟಿ ಜಿ, ಇತರ ಎಲ್ಲ ಗಣ್ಯರು ಮತ್ತು ಕಾಶಿ ಮತ್ತು ತಮಿಳುನಾಡಿನಿಂದ ಬಂದ ನನ್ನ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,ಉತ್ತರ ಪ್ರದೇಶದ ವಾರಾಣಸಿಯಲ್ಲಿ 'ಕಾಶಿ ತಮಿಳು ಸಂಗಮಂ' ಉದ್ಘಾಟಿಸಿದ ಪ್ರಧಾನಮಂತ್ರಿ
November 19th, 02:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ತಿಂಗಳಿಡೀ ಆಯೋಜಿಸಲಾಗಿರುವ 'ಕಾಶಿ ತಮಿಳು ಸಂಗಮಂ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಉದ್ದೇಶವೆಂದರೆ ದೇಶದ ಅತ್ಯಂತ ಪ್ರಮುಖ ಮತ್ತು ಪ್ರಾಚೀನ ಕಲಿಕಾ ಕ್ಷೇತ್ರಗಳಲ್ಲಿ ಎರಡು ತಾಣಗಳಾದ ತಮಿಳುನಾಡು ಮತ್ತು ಕಾಶಿ ನಡುವಿನ ಪ್ರಾಚೀನ ಸಂಬಂಧಗಳನ್ನು ಆಚರಿಸುವುದು, ಪುನರುಚ್ಚರಿಸುವುದು ಮತ್ತು ಮರುಶೋಧಿಸುವುದಾಗಿದೆ. ತಮಿಳುನಾಡಿನಿಂದ 2500ಕ್ಕೂ ಹೆಚ್ಚು ಪ್ರತಿನಿಧಿಗಳು ಕಾಶಿಗೆ ಭೇಟಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು 'ತಿರುಕ್ಕುರಳ್' ಪುಸ್ತಕವನ್ನು ಮತ್ತು ಅದರ 13 ಭಾಷೆಗಳ ಅನುವಾದವನ್ನು ಬಿಡುಗಡೆ ಮಾಡಿದರು. ಆರತಿಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು.ಏಪ್ರಿಲ್ 16 ರಂದು ಮೊರ್ಬಿಯಲ್ಲಿ 108 ಅಡಿ ಹನುಮಾನ್ ಪ್ರತಿಮೆಯನ್ನು ಅನಾವರಣಗೊಳಿಸಲಿರುವ ಪ್ರಧಾನಿ
April 15th, 04:00 pm
ಹನುಮಾನ್ ಜಯಂತಿಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 16 ಏಪ್ರಿಲ್, 2022ರಂದು ಗುಜರಾತಿನ ಮೋರ್ಬಿಯಲ್ಲಿ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಲಿದ್ದಾರೆ.ಡಾ. ಕಲಾಂ ಭಾರತದ ಯುವಜನರಿಗೆ ಸ್ಫೂರ್ತಿ ನೀಡಿದರು : ಪ್ರಧಾನಿ ಮೋದಿ
July 27th, 12:34 pm
ಸಭೆಯಲ್ಲಿ ಮಾತನಾಡಿದ ಪ್ರಧಾನಿ , ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರಿಗೆ ಗೌರವ ಸಲ್ಲಿಸಿದರು. ಡಾ. ಕಲಾಂ ಯಾವಾಗಲೂ ರಾಮೇಶ್ವರಂನ ಸರಳತೆ, ಆಳ ಮತ್ತು ಶಾಂತತೆಯನ್ನು ಪ್ರತಿಬಿಂಬಿಸುತ್ತಾರೆ ಎಂದು ಪ್ರಧಾನಿ ಹೇಳಿದರು. ಡಾ. ಕಲಾಂ ಅವರು ಭಾರತಯ ಯುವಕರಿಗೆ ಸ್ಫೂರ್ತಿ ನೀಡಿದರು ಎಂದು ಪ್ರಧಾನಿ ಹೇಳಿದರು. ಇಂದು ಯುವಕರು ಪ್ರಗತಿಯಲ್ಲಿ ಹೊಸ ಎತ್ತರಕ್ಕೆ ಏರಲು ಇಚ್ಛಿಸುತ್ತಾರೆ ಮತ್ತು ಉದ್ಯೋಗಧಾತರಾಗಲು ಬಯಸುತ್ತಾರೆತಮಿಳುನಾಡಿನ ರಾಮೇಶ್ವರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸ್ಮಾರಕ ಉದ್ಘಾಟಿಸಿದರು
July 27th, 12:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಮೇಶ್ವರಂನಲ್ಲಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸ್ಮಾರಕವನ್ನು ಉದ್ಘಾಟಿಸಿದರು. ಅವರು ಡಾ. ಕಲಾಂ ಅವರ ಪುತ್ಥಳಿಯನ್ನೂ ಅನಾವರಣ ಮಾಡಿದರು ಮತ್ತು ಕಲಾಂ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿದರು. ಡಾ. ಕಲಾಂ ಅವರ ಕುಟುಂಬದ ಸದಸ್ಯರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.ಪ್ರಧಾನಿ ಮೋದಿ ಡಾ. ಎ ಪಿಜೆ ಅಬ್ದುಲ್ ಕಲಾಂ ಮೆಮೋರಿಯಲ್ ಅನ್ನು ನಾಳೆ ಉದ್ಘಾಟಿಸಲಿದ್ದಾರೆ
July 26th, 05:59 pm
ರಾಮೇಶ್ವರಂನಲ್ಲಿ ಮಾಜಿ ಅಧ್ಯಕ್ಷರಾದ ಎ.ಪಿ.ಜೆ. ಅಬ್ದುಲ್ ಕಲಾಮ್ ಅವರ ಸ್ಮಾರಕವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ 'ಕಲಾಂ ಸಂದೇಶ್ ವಾಹಿನಿ ' ಎಂಬ ವಸ್ತು ಪ್ರದರ್ಶನ ಬಸ್ ಅನ್ನು ಪ್ರಾರಂಭಿಸಲಿದ್ದಾರೆ . ಪ್ರಧಾನಿ ಮೋದಿ ಅವರು ದೀರ್ಘಾವಧಿಯ ಪ್ರಯಾಣಿಕರಿಗೆ ದೃಢೀಕರಣ ಪತ್ರಗಳನ್ನು ವಿತರಿಸುತ್ತಾರೆ . ಅಯೋಧ್ಯೆಯಿಂದ ರಾಮೇಶ್ವರಂಗೆ ಹೊಸ ಎಕ್ಸ್ಪ್ರೆಸ್ ರೈಲ್ ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ಗ್ರೀನ್ ರಾಮೇಶ್ವರಂ ಯೋಜನೆಯ ಸಾರಾಂಶವನ್ನು ಬಿಡುಗಡೆ ಮಾಡಲಿದ್ದಾರೆ .