ಭಾರತದಲ್ಲಿ ಹೆಚ್ಚುತ್ತಿರುವ ರಾಮ್ಸಾರ್ ಸೈಟ್‌ಗಳ ಬಗ್ಗೆ ಪ್ರಧಾನಿ ಮೋದಿ ಸಂತೋಷ ವ್ಯಕ್ತಪಡಿಸಿದ್ದಾರೆ
August 14th, 09:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದಲ್ಲಿ ರಾಮ್ಸಾರ್ ತಾಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ರಾಮ್ಸರ್ ಕನ್ವೆನ್ಷನ್ ಅಡಿಯಲ್ಲಿ ಈ ಎರಡು ರಾಜ್ಯಗಳಿಂದ ಮೂರು ಸೈಟ್ಗಳನ್ನು ಸೇರಿಸಿರುವ ಬಗ್ಗೆ ಅವರು ತಮಿಳುನಾಡು ಮತ್ತು ಮಧ್ಯಪ್ರದೇಶದ ಜನರನ್ನು ಮತ್ತಷ್ಟು ಅಭಿನಂದಿಸಿದ್ದಾರೆ.ಭಾರತವು ಪ್ರಜಾಪ್ರಭುತ್ವದ ತಾಯಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
January 29th, 11:30 am
ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಇದು 2023 ನೇ ಮೊದಲ ಮನದ ಮಾತು ಜೊತೆಗೆ ಈ ಕಾರ್ಯಕ್ರಮದ 97 ನೇ ಕಂತು ಇದಾಗಿದೆ. ನಿಮ್ಮೆಲ್ಲರೊಂದಿಗೆ ಮತ್ತೊಮ್ಮೆ ಮಾತನಾಡಿ ನನಗೆ ಬಹಳ ಸಂತೋಷವೆನಿಸುತ್ತಿದೆ. ಪ್ರತಿ ವರ್ಷ ಜನವರಿ ತಿಂಗಳು ಬಹಳಷ್ಟು ಕಾರ್ಯಕ್ರಮಗಳಿಂದ ತುಂಬಿ ತುಳುಕುತ್ತದೆ. ಈ ತಿಂಗಳಿನಲ್ಲಿ ಜನವರಿ 14 ರಂದು ಉತ್ತರದಿಂದ ದಕ್ಷಿಣದವರೆಗೆ ಮತ್ತು ಪೂರ್ವದಿಂದ ಪಶ್ಚಿಮದವರೆಗೆ ದೇಶಾದ್ಯಂತ ಹಬ್ಬಗಳ ಉತ್ಸಾಹವಿರುತ್ತದೆ. ಇದರ ನಂತರ ದೇಶ ತನ್ನ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ. ಈ ವರ್ಷವೂ ಗಣರಾಜ್ಯೋತ್ಸವ ಸಮಾರಂಭದಲ್ಲಿ ಬಹಳಷ್ಟು ಅಂಶಗಳ ಬಗ್ಗೆ ಬಹಳಷ್ಟು ಪ್ರಶಂಸೆ ಮೂಡಿಬರುತ್ತಿದೆ. ಜೈಸಲ್ಮೇರ್ ನಿಂದ ಪುಲ್ಕಿತ್ ಅವರು ನನಗೆ ಹೀಗೆ ಬರೆದಿದ್ದಾರೆ - ಜನವರಿ 26 ರ ಕವಾಯತಿನ ಸಂದರ್ಭದಲ್ಲಿ ಕಾರ್ಮಿಕರು ಕರ್ತವ್ಯ ಪಥವನ್ನು ನಿರ್ಮಿಸುತ್ತಿರುವುದನ್ನು ಕಂಡು ಬಹಳ ಸಂತೋಷವಾಯಿತು. ಕಾನ್ಪುರದಿಂದ ಜಯಾ ಅವರು ಮೆರವಣಿಗೆಯಲ್ಲಿ ಭಾರತೀಯ ಸಂಸ್ಕೃತಿಯ ವಿವಿಧ ಅಂಶಗಳನ್ನು ಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಂಡು ಆನಂದಿಸಿರುವುದಾಗಿ ಬರೆದಿದ್ದಾರೆ. ಈ ಪರೇಡ್‌ನಲ್ಲಿ ಮೊದಲ ಬಾರಿಗೆ ಭಾಗವಹಿಸಿದ ಸಿಆರ್‌ಪಿಎಫ್‌ನ ಮಹಿಳಾ ತುಕಡಿ ಕೂಡ ಹೆಚ್ಚು ಮೆಚ್ಚುಗೆಗೆ ಪಾತ್ರವಾಗಿದೆ.ದೇಶದಲ್ಲಿ ಇನ್ನೂ 10 ಜೌಗು ಪ್ರದೇಶಗಳನ್ನು ರಾಮ್ಸಾರ್ ತಾಣಗಳಾಗಿ ಗೊತ್ತುಪಡಿಸಿರುವುದಕ್ಕೆ ಪ್ರಧಾನಮಂತ್ರಿ ಸಂತಸ
August 03rd, 10:30 pm
ದೇಶದಲ್ಲಿ ಇನ್ನೂ 10 ಜೌಗು ಪ್ರದೇಶಗಳನ್ನು ರಾಮ್ಸಾರ್ ತಾಣಗಳಾಗಿ ಗೊತ್ತುಪಡಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.ದಕ್ಷಿಣ ಏಷ್ಯಾದ ಅತಿದೊಡ್ಡ ರಾಮ್ ಸರ್ ಸ್ಥಳದ ಜಾಲವನ್ನು ಭಾರತ ಹೊಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ
February 03rd, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಮ್ ಸರ್ ಸ್ಥಳಗಳ ಪಟ್ಟಿಗೆ ಗುಜರಾತ್ ನ ಖಿಜಾದಿಯ ವನ್ಯಜೀವಿಧಾಮ ಮತ್ತು ಉತ್ತರ ಪ್ರದೇಶದ ಬಖೀರಾ ವನ್ಯಜೀವಿಧಾಮ ಎರಡು ತೇವದ ಪ್ರದೇಶಗಳು ಸೇರ್ಪಡೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.ನಾಲ್ಕು ಭಾರತೀಯ ತಾಣಗಳು ರಾಮ್‌ಸರ್ ಮನ್ನಣೆ ಪಡೆಯುವುದು ನಮಗೆ ಹೆಮ್ಮೆಯ ವಿಷಯ: ಪ್ರಧಾನಿ
August 14th, 07:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಲ್ಕು ಭಾರತೀಯ ತಾಣಗಳಿಗೆ ರಾಮ್ಸರ್ ಮಾನ್ಯತೆ ದೊರೆತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.