ಎನ್‌ಸಿಸಿ ದಿನದ ಅಂಗವಾಗಿ ಎನ್‌ಸಿಸಿ ಕೆಡೆಟ್ ಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
November 28th, 06:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್‌ಸಿಸಿ ದಿನದ ಅಂಗವಾಗಿ ಎನ್‌ಸಿಸಿ ಕೆಡೆಟ್ ಗಳಿಗೆ ಶುಭ ಕೋರಿದ್ದಾರೆ. “ಭಾರತ ದೇಶಾದ್ಯಂತ ಇರುವ ಎನ್‌ಸಿಸಿ ಹಳೆಯ ವಿದ್ಯಾರ್ಥಿಗಳು ತಮ್ಮ ಬೆಂಬಲ ಮತ್ತು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಎನ್‌ಸಿಸಿ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಮತ್ತಷ್ಟು ಶ್ರೀಮಂತಗೊಳಿಸುವಂತೆ ಶ್ರೀ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ.ಉತ್ತರ ಪ್ರದೇಶದ ಝಾನ್ಸಿಯಲ್ಲಿ “ರಾಷ್ಟ್ರ ರಕ್ಷಾ ಸಮರ್ಪಣ ಪರ್ವ”ದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
November 19th, 05:39 pm
ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ರಾಣಿ ಲಕ್ಷ್ಮೀಬಾಯಿ ಅವರ ನೆಲದ ಜನರಿಗೆ ನಾನು ಕೈಮುಗಿದು ನಮಸ್ಕರಿಸುತ್ತೇನೆ. ಝಾನ್ಸಿಯು ಸ್ವಾತಂತ್ರ್ಯದ ಜ್ವಾಲೆಯನ್ನು, ಕಿಡಿಯನ್ನು ಹಚ್ಚಿತು. ಈ ನೆಲದ ಪ್ರತಿಯೊಂದು ಕಣವೂ ವೀರತ್ವ ಮತ್ತು ದೇಶಪ್ರೇಮದಲ್ಲಿ ಮಿಂದೆದ್ದಿದೆ. ಝಾನ್ಸಿಯ ವೀರ ರಾಣಿ, ರಾಣಿ ಲಕ್ಷ್ಮೀಬಾಯಿ ಅವರಿಗೆ ನಾನು ವಂದಿಸುತ್ತೇನೆ.ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಿದ ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ್‌ದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ
November 19th, 05:38 pm
ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಕ್ಷಾ ಸಂಪರ್ಪಣ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಲಾಗಿತ್ತು. ದೇಶದ ಭದ್ರತಾಪಡೆಗಳಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತ, ಝಾನ್ಸಿಯ ಕೋಟೆ ಆವರಣದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಹೊಸ ಹೆಜ್ಜೆಗಳ ಕುರಿತು ಮಾತನಾಡಿದರು. ಎನ್‌ಸಿಸಿಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಆರಂಭಿಸುವುದೂ ಇವುಗಳಲ್ಲಿ ಒಂದಾಗಿತ್ತು. ಪ್ರಧಾನಿ ನರೇಂದ್ರಮೋದಿ ಅವರು ಈ ಸಂಘಕ್ಕೆ ತಾವೇ ಮೊದಲ ಸದಸ್ಯರಾಗಿ ಹೆಸರು ನೊಂದಾಯಿಸಿದರು. ಎನ್‌ಸಿಸಿ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಸಿಮ್ಯುಲೆಷನ್ ತರಬೇತಿ ಕಾರ್ಯಕ್ರಮದ ಆರಂಭವನ್ನು ಘೋಷಿಸಲಾಯಿತು. ಸಮರ ವೀರರಿಗೆ ಹುತಾತ್ಮರಾದವರಿಗೆ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ನಮನ ಸಲ್ಲಿಸಲು ಕಿಯಾಸ್ಕ್ ಅನ್ನು ಸಮರ್ಪಿಸಲಾಯಿತು. ರಾಷ್ಟ್ರೀಯ ಸಮರ ಸ್ಮರಣೆಯ ಮೊಬೈಲ್ ಆ್ಯಪ್ ಅನ್ನು ಆರಂಭಿಸಲಾಯಿತು. ಡಿಆರ್‌ಡಿಒ ವಿನ್ಯಾಸಗೊಳಿಸಿರುವ, ಅಭಿವೃದ್ಧಿ ಪಡಿಸಿರುವ ವಿದ್ಯುನ್ಮಾನ ಸಮರ ಸ್ಯೂಟ್ ಶಕ್ತಿ ಅನ್ನು ಭಾರತೀಯ ನೌಕೆಗಳಿಗೆ ನೀಡಲಾಯಿತು. ಹಗುರ ಸಮರ ಹೆಲಿಕಾಪ್ಟರ್, ಡ್ರೋನ್‌ಗಳನ್ನು ಸಮರ್ಪಿಸಲಾಯಿತು. ಉತ್ತರ ಪ್ರದೇಶದ ಕೈಗಾರಿಕಾ ಕಾರಿಡಾರ್‌ನಲ್ಲಿರುವ ಭಾರತ್ ಡೈನಾಮಿಕ್ಸ್ ಲಿಮಿಟೆಡ್‌ಗೆ 400 ಕೋಟಿ ಮೌಲ್ಯದ ನೂತನ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದರು.