ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.ಭಾರತದ ಫಿನ್‌ಟೆಕ್ ಪರಿಸರ ವ್ಯವಸ್ಥೆಯು ಇಡೀ ಪ್ರಪಂಚದ ಜೀವನವನ್ನು ಸುಲಭಗೊಳಿಸುತ್ತದೆ: ಮುಂಬೈನ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪ್ರಧಾನಿ ಮೋದಿ
August 30th, 12:00 pm
ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪಿಎಂ ಮೋದಿ ಅವರು ಭಾರತದ ಫಿನ್‌ಟೆಕ್ ಕ್ರಾಂತಿಯನ್ನು ಎತ್ತಿ ತೋರಿಸಿದರು, ಆರ್ಥಿಕ ಸೇರ್ಪಡೆ, ತ್ವರಿತ ಅಳವಡಿಕೆ ಮತ್ತು ಜಾಗತಿಕ ನಾವೀನ್ಯತೆಗಳ ಮೇಲೆ ಅದರ ಪ್ರಭಾವವನ್ನು ಪ್ರದರ್ಶಿಸಿದರು. ಜನ್ ಧನ್ ಯೋಜನೆ ಮತ್ತು ಪಿಎಂ ಸ್ವನಿಧಿ ಮೂಲಕ ಮಹಿಳೆಯರ ಸಬಲೀಕರಣದಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಪ್ರವೇಶವನ್ನು ಪರಿವರ್ತಿಸುವವರೆಗೆ, ಫಿನ್‌ಟೆಕ್ ಭಾರತದ ಆರ್ಥಿಕತೆ ಮತ್ತು ಜೀವನದ ಗುಣಮಟ್ಟವನ್ನು ಮರುರೂಪಿಸುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು
August 30th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ವಾಕ್ ಥ್ರೋ ನಡೆಸಿದರು. ಜಿಎಫ್ಎಫ್ ಉತ್ಸವವನ್ನು ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಫಿನ್ ಟೆಕ್ ಕನ್ವರ್ಜೆನ್ಸ್ ಕೌನ್ಸಿಲ್ ಜಂಟಿಯಾಗಿ ಆಯೋಜಿಸಿವೆ. ಇದು ಫಿನ್ ಟೆಕ್ ನಲ್ಲಿ ಭಾರತದ ದಾಪುಗಾಲುಗಳನ್ನು ಪ್ರದರ್ಶಿಸುವ ಮತ್ತು ಕ್ಷೇತ್ರದ ಪ್ರಮುಖ ಮಧ್ಯಸ್ಥಗಾರರನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿದೆ.ವಂಚಿತರಿಗೆ ಆದ್ಯತೆ ನೀಡುವುದೇ ಎನ್‌ಡಿಎ ಸರ್ಕಾರದ ಅಭಿವೃದ್ಧಿ ಮಾದರಿ: ಪ್ರಧಾನಿ ಮೋದಿ
July 13th, 06:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮುಂಬೈ ಮತ್ತು ಹತ್ತಿರದ ಪ್ರದೇಶಗಳ ನಡುವೆ ರಸ್ತೆ ಮತ್ತು ರೈಲು ಸಂಪರ್ಕವನ್ನು ಸುಧಾರಿಸಲು 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಸಮರ್ಪಿಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
July 13th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದಲ್ಲಿ ಸರ್ಕಾರ ಕೆಲಸ ಮಾಡಿದೆ: ಪ್ರಧಾನಿ ಮೋದಿ
April 01st, 11:30 am
ಮಹಾರಾಷ್ಟ್ರದ ಮುಂಬೈನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ 90 ವರ್ಷಗಳನ್ನು ಗುರುತಿಸುವ ಕಾರ್ಯಕ್ರಮವಾದ ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಮುಂದಿನ ದಶಕವು ವಿಕಸಿತ್ ಭಾರತ್‌ನ ನಿರ್ಣಯಗಳಿಗೆ ನಿರ್ಣಾಯಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ವೇಗದ ಬೆಳವಣಿಗೆ ಮತ್ತು ನಂಬಿಕೆ ಮತ್ತು ಸ್ಥಿರತೆಯ ಮೇಲೆ ಕೇಂದ್ರೀಕರಿಸಲು ಆರ್‌ಬಿಐ ಆದ್ಯತೆಯನ್ನು ಎತ್ತಿ ತೋರಿಸಿದರು. ಸುಧಾರಣೆಗಳ ಸಮಗ್ರ ಸ್ವರೂಪದ ಬಗ್ಗೆ ಮಾತನಾಡುತ್ತಾ, ಪ್ರಧಾನಿ ಮೋದಿ ಹೇಳಿದರು. ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದ ಮೇಲೆ ಕೆಲಸ ಮಾಡಿದೆ.ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ, ಪ್ರಧಾನಮಂತ್ರಿ
April 01st, 11:00 am
ಮಹಾರಾಷ್ಟ್ರದ ಮುಂಬೈನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ 90 ವರ್ಷಗಳನ್ನು ಗುರುತಿಸುವ ಕಾರ್ಯಕ್ರಮವಾದ ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಮುಂದಿನ ದಶಕವು ವಿಕಸಿತ್ ಭಾರತ್‌ನ ನಿರ್ಣಯಗಳಿಗೆ ನಿರ್ಣಾಯಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ವೇಗದ ಬೆಳವಣಿಗೆ ಮತ್ತು ನಂಬಿಕೆ ಮತ್ತು ಸ್ಥಿರತೆಯ ಮೇಲೆ ಕೇಂದ್ರೀಕರಿಸಲು ಆರ್‌ಬಿಐ ಆದ್ಯತೆಯನ್ನು ಎತ್ತಿ ತೋರಿಸಿದರು. ಸುಧಾರಣೆಗಳ ಸಮಗ್ರ ಸ್ವರೂಪದ ಬಗ್ಗೆ ಮಾತನಾಡುತ್ತಾ, ಪ್ರಧಾನಿ ಮೋದಿ ಹೇಳಿದರು. ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದ ಮೇಲೆ ಕೆಲಸ ಮಾಡಿದೆ.ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ "ಎ+" ರೇಟಿಂಗ್ ಪಡೆದ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ಅಭಿನಂದಿಸಿದರು
September 01st, 10:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ (ಜಾಗತಿಕ ಹಣಕಾಸು ಕೇಂದ್ರ) ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023ರಲ್ಲಿ 'ಎ+' ರೇಟಿಂಗ್ ಪಡೆದ ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಅಭಿನಂದಿಸಿದ್ದಾರೆ. ಎ+ ರೇಟಿಂಗ್ ಪಡೆದ ಮೂವರು ಕೇಂದ್ರ ಬ್ಯಾಂಕ್ ಗವರ್ನರ್ ಗಳ ಪಟ್ಟಿಯಲ್ಲಿ ಶ್ರೀ ದಾಸ್ ಅಗ್ರಸ್ಥಾನದಲ್ಲಿದ್ದಾರೆ.1,514 ಪಟ್ಟಣ ಸಹಕಾರಿ ಬ್ಯಾಂಕ್ಗಳನ್ನು ಬಲಪಡಿಸುವ ಆರ್ಬಿಐ ಸೂಚನೆಗಳನ್ನು ಪ್ರಧಾನಮಂತ್ರಿಯವರು ಸ್ವಾಗತಿಸಿದ್ದಾರೆ
June 10th, 04:03 pm
1,514 ಪಟ್ಟಣ ಸಹಕಾರಿ ಬ್ಯಾಂಕ್ಗಳನ್ನು ಬಲಪಡಿಸುವ ಆರ್ಬಿಐ ಸೂಚನೆಗಳನ್ನು ಸ್ವಾಗತಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:ಸೆಂಟ್ರಲ್ ಬ್ಯಾಂಕಿಂಗ್ ಅವಾರ್ಡ್ಸ್ 2023 ರಲ್ಲಿ 'ವರ್ಷದ ಗವರ್ನರ್' ಪ್ರಶಸ್ತಿಗಾಗಿ ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು.
March 17th, 07:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರೀಯ ಬ್ಯಾಂಕಿಂಗ್ ಪ್ರಶಸ್ತಿಗಳು 2023ರಲ್ಲಿ 'ವರ್ಷದ ಗವರ್ನರ್' ಪ್ರಶಸ್ತಿಗೆ ಭಾಜನರಾದ ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಅಭಿನಂದಿಸಿದ್ದಾರೆ.ಭಾರತ ಮತ್ತು ಸಿಂಗಾಪುರದ ನಡುವಿನ UPI-PayNow ಸಂಪರ್ಕದ ಉದ್ಘಾಟನಾ ಸಮಾರಂಭದಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್
February 21st, 11:00 am
ಭಾರತದ ಯೂನಿಫೈಡ್ ಪೆಮೆಂಟ್ ಇಂಟರ್ಫೇಸ್ (UPI) ಮತ್ತು ಸಿಂಗಾಪುರದ ಪೆ ನೌ ನಡುವಿನ ವಾಸ್ತವ ಪಾವತಿ ಸಂಪರ್ಕದ ಉದ್ಘಾಟನಾ ಸಮಾರಂಭದಲ್ಲಿ ವರ್ಚುವಲ್ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮತ್ತು ಸಿಂಗಾಪುರ ಪ್ರಧಾನಿ ಶ್ರೀ ಲೀ ಸಿಯೆನ್ ಲೂಂಗ್ ಭಾಗವಹಿಸಿದರು. ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಮತ್ತು ಸಿಂಗಾಪುರದ ಹಣಕಾಸು ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಶ್ರೀ ರವಿ ಮೆನನ್ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ಬಳಸಿ ಪರಸ್ಪರ ಗಡಿಯಾಚೆಗಿನ ವಹಿವಾಟು ಮಾಡಿದರು.ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಭೀಮ್ ಯುಪಿಐ ವಹಿವಾಟುಗಳ ಪ್ರಚಾರಕ್ಕಾಗಿ ಪ್ರೋತ್ಸಾಹಕ ಯೋಜನೆಗೆ ಸಂಪುಟದಿಂದ ಅನುಮೋದನೆ
January 11th, 03:30 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಏಪ್ರಿಲ್‌ನಿಂದ ಒಂದು ವರ್ಷದ ಅವಧಿಗೆ ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ ಸಂಪುಟದಿಂದ ವಹಿವಾಟುಗಳಿಗೆ (ವ್ಯಕ್ತಿಯಿಂದ ವ್ಯಾಪಾರಿ) ಪ್ರೋತ್ಸಾಹಕ ಯೋಜನೆಗೆ ಅನುಮೋದನೆ ನೀಡಿದೆ.Today's new India emphasizes on solving problems rather than avoiding them: PM Modi
December 12th, 10:43 am
Prime Minister Narendra Modi addressed a function on “Depositors First: Guaranteed Time-bound Deposit Insurance Payment up to Rs. 5 Lakh” in New Delhi. He said, Banks play a major role in the prosperity of the country. And for the prosperity of the banks, it is equally important for the depositors' money to be safe. If we want to save the bank, then depositors have to be protected.ದೆಹಲಿಯಲ್ಲಿ ಬ್ಯಾಂಕ್ ಠೇವಣಿ ವಿಮಾ ಕಾರ್ಯಕ್ರಮದಲ್ಲಿ ಠೇವಣಿದಾರರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
December 12th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು “ಠೇವಣಿದಾರರು ಮೊದಲು: ಕಾಲಮಿತಿಯಲ್ಲಿ 5 ಲಕ್ಷ ರೂ.ಗಳವರೆಗೆ ಖಾತ್ರಿಪಡಿಸಿದ ಠೇವಣಿ ವಿಮೆ ಪಾವತಿ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಹಣಕಾಸು ಸಚಿವರು, ಹಣಕಾಸು ಖಾತೆ ರಾಜ್ಯ ಸಚಿವರು ಮತ್ತು ಆರ್ ಬಿಐ ಗೌರ್ನರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಧಾನಮಂತ್ರಿ ಅವರು ಕೆಲವು ಠೇವಣಿದಾರರಿಗೆ ಚಕ್ ಗಳನ್ನು ವಿತರಿಸಿದರು.ಅನಿರ್ಭಂದಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯತೆ ಕುರಿತ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
November 18th, 12:31 pm
ದೇಶದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಜಿ, ಹಣಕಾಸು ಖಾತೆ ರಾಜ್ಯ ಸಚಿವ ಶ್ರೀ ಪಂಕಜ್ ಚೌಧರಿ ಜಿ, ಡಾ. ಭಗವತ್ ಕರದ್ ಜಿ, ಆರ್‌ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಜಿ, ಬ್ಯಾಂಕಿಂಗ್ ಕ್ಷೇತ್ರದ ಎಲ್ಲಾ ದಿಗ್ಗಜರು, ಭಾರತೀಯ ಉದ್ಯಮದ ಗೌರವಾನ್ವಿತ ಸಹೋದ್ಯೋಗಿಗಳು, ಕಾರ್ಯಕ್ರಮಕ್ಕೆ ಸಂಬಂಧಿಸಿದ ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ.“ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗೆ ಸಮನ್ವಯ ರೂಪಿಸುವ” ಕುರಿತ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
November 18th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ “ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗೆ ಸಮನ್ವಯ ರೂಪಿಸುವ’ ಕುರಿತ ಸಮಾರೋಪ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು.ಭಾರತೀಯ ರಿಸರ್ವ್ ಬ್ಯಾಂಕಿನ ಎರಡು ವಿನೂತನ ಗ್ರಾಹಕ ಕೇಂದ್ರಿತ ಉಪಕ್ರಮಗಳ ಕಾರ್ಯಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
November 12th, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ರಿಸರ್ವ್ ಬ್ಯಾಂಕ್‌ನ(ಆರ್‌ಬಿಐ) ಎರಡು ನವೀನ ಗ್ರಾಹಕ ಕೇಂದ್ರಿತ ಉಪಕ್ರಮಗಳಾದ ʻರೀಟೇಲ್ ಡೈರೆಕ್ಟ್ ಸ್ಕೀಮ್ʼ ಮತ್ತು ʻರಿಸರ್ವ್ ಬ್ಯಾಂಕ್ – ಸಮಗ್ರ ಒಂಬುಡ್ಸ್‌ಮನ್ ಸ್ಕೀಮ್ʼಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಇಲ್ಲಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಉಪಸ್ಥಿತರಿದ್ದರು.ಆರ್‌ಬಿಐನ ಎರಡು ನವೀನ ಗ್ರಾಹಕ ಕೇಂದ್ರಿತ ಉಪಕ್ರಮಗಳಿಗೆ ಪ್ರಧಾನಿ ಚಾಲನೆ
November 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ರಿಸರ್ವ್ ಬ್ಯಾಂಕ್‌ನ(ಆರ್‌ಬಿಐ) ಎರಡು ನವೀನ ಗ್ರಾಹಕ ಕೇಂದ್ರಿತ ಉಪಕ್ರಮಗಳಾದ ʻರೀಟೇಲ್ ಡೈರೆಕ್ಟ್ ಸ್ಕೀಮ್ʼ ಮತ್ತು ʻರಿಸರ್ವ್ ಬ್ಯಾಂಕ್ – ಸಮಗ್ರ ಒಂಬುಡ್ಸ್‌ಮನ್ ಸ್ಕೀಮ್ʼಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಇಲ್ಲಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಉಪಸ್ಥಿತರಿದ್ದರು.ನವೆಂಬರ್ 5 ರಂದು ವರ್ಚುವಲ್ ಜಾಗತಿಕ ಹೂಡಿಕೆದಾರರ ಸಭೆಯ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
November 03rd, 06:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2020ರ ನವೆಂಬರ್ 5ರಂದು ಜಾಗತಿಕ ಹೂಡಿಕೆದಾರರ ವರ್ಚುವಲ್ ದುಂಡು ಮೇಜಿನ (ವಿಜಿಐಆರ್) ಸಭೆ ಅಧ್ಯಕ್ಷತೆ ವಹಿಸಲಿದ್ದಾರೆ. ವಿಜಿಐಆರ್ ಅನ್ನು ಭಾರತ ಸರ್ಕಾರದ ಹಣಕಾಸು ಸಚಿವಾಲಯ ಮತ್ತು ರಾಷ್ಟ್ರೀಯ ಹೂಡಿಕೆ ಮತ್ತು ಮೂಲಸೌಕರ್ಯ ನಿಧಿ ಆಯೋಜಿಸಿದೆ. ಇದು ಪ್ರಮುಖ ಜಾಗತಿಕ ಸಾಂಸ್ಥಿಕ ಹೂಡಿಕೆದಾರರು, ಭಾರತೀಯ ವಾಣಿಜ್ಯ ಮುಖಂಡರು ಹಾಗೂ ಹಣಕಾಸು ಮಾರುಕಟ್ಟೆ ನಿಯಂತ್ರಕರು ಮತ್ತು ಭಾರತ ಸರ್ಕಾರದ ಉನ್ನತ ನಿರ್ಧಾರ ತೆಗೆದುಕೊಳ್ಳುವವರ ನಡುವಿನ ವಿಶೇಷ ಸಂವಾದವಾಗಲಿದೆ. ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವರು, ಕೇಂದ್ರ ಹಣಕಾಸು ರಾಜ್ಯ ಸಚಿವರು, ಆರ್.ಬಿಐ ಗೌರ್ನರ್ ಮತ್ತು ಇತರ ಗಣ್ಯರು ಭಾಗಿಯಾಗಲಿದ್ದಾರೆ.