ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼಯ ನಾಯಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಉದ್ಘಾಟನಾ ಭಾಷಣದ ಇಂಗ್ಲಿಷ್ ಅವತರಿಣಿಕೆ
August 17th, 10:00 am
ಭಾರತದ 140 ಕೋಟಿ ಭಾರತೀಯರ ಪರವಾಗಿ ತಮ್ಮೆಲ್ಲರಿಗೂ ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼ ಸಮ್ಮೇಳನಕ್ಕೆ (3ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ) ಆತ್ಮೀಯ ಸ್ವಾಗತ. ಕಳೆದ ಎರಡು ಶೃಂಗಸಭೆಗಳಲ್ಲಿ, ನಿಮ್ಮಲ್ಲಿ ಹಲವರೊಂದಿಗೆ ನಿಕಟವಾಗಿ ಕಾರ್ಯನಿವಹಿಸುವ ಅವಕಾಶ ನನಗೆ ಒದಗಿ ಬಂದಿತ್ತು. ಈ ವರ್ಷ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆದ ತರುವಾಯ ಮತ್ತೊಮ್ಮೆ ಈ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಪಾಲ್ಗೊಳ್ಳಲು ಅವಕಾಶ ಸಿಕ್ಕಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ.‘ಕಟ್ಟಕಡೆಯ ವ್ಯಕ್ತಿಯನ್ನು ತಲುಪುವುದು ಅಥವಾ ದೂರದ ಪ್ರದೇಶಗಳಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವುದು’ ವಿಷಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 27th, 10:16 am
ಬಜೆಟ್ ಮಂಡನೆಯ ನಂತರ ಸಂಸತ್ತಿನಲ್ಲಿ ಆಯವ್ಯಯ ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಯುತ್ತದೆ ಎಂಬುದು ಸಾಮಾನ್ಯ ತಿಳಿವಳಿಕೆಯಾಗಿದೆ. ಆದರೆ ಇದು ಅವಶ್ಯಕ ಮತ್ತು ಉಪಯುಕ್ತವಾಗಿದೆ. ನಮ್ಮ ಸರ್ಕಾರವು ಬಜೆಟ್ ಕುರಿತು ಚರ್ಚೆಯನ್ನು ಒಂದು ಹೆಜ್ಜೆ ಮುಂದಕ್ಕೆ ತೆಗೆದುಕೊಂಡು ಹೋಗಿದೆ. ಕಳೆದ ಕೆಲವು ವರ್ಷಗಳಿಂದ, ನಮ್ಮ ಸರ್ಕಾರವು ಬಜೆಟ್ ಮಂಡನೆಯ ಮೊದಲು ಮತ್ತು ನಂತರ ಎಲ್ಲಾ ಪಾಲುದಾರರೊಂದಿಗೆ ವಿಸ್ತೃತ ಚರ್ಚೆ ಮತ್ತು ಸಂವಾದ ಹಾಗೂ ಸಲಹೆ ಸೂಚನೆ ಸ್ವೀಕರಿಸುವ ಹೊಸಸಂಪ್ರದಾಯ ಹುಟ್ಟುಹಾಕಿದೆ. ಬಜೆಟ್ ಕಾರ್ಯಕ್ರಮಗಳ ಪ್ರಾಮಾಣಿಕ ಅನುಷ್ಠಾನ ಮತ್ತು ಕಾಲಮಿತಿಯಲ್ಲಿ ಕಾರ್ಯಕ್ರಮಗಳ ಜಾರಿ ದೃಷ್ಟಿಕೋನದಿಂದ ಇದು ಬಹಳ ಮುಖ್ಯವಾಗಿದೆ. ತೆರಿಗೆದಾರರ ಹಣದ ಪ್ರತಿ ಪೈಸೆಯ ಸಮರ್ಪಕ ಬಳಕೆಯನ್ನು ಇದು ಖಾತ್ರಿಗೊಳಿಸುತ್ತಿದೆ. ನಾನು ಕಳೆದ ಕೆಲವು ದಿನಗಳಲ್ಲಿ ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಮಾತನಾಡಿದ್ದೇನೆ. ಇಂದು ನಿಮ್ಮ ನೀತಿಗಳು ಮತ್ತು ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೆ ಹಾಗೂ ದೂರದ ಪ್ರದೇಶಗಳಿಗೆ ಎಷ್ಟು ಬೇಗ ತಲುಪುತ್ತವೆ ಎಂದು ಮಹಾತ್ಮ ಗಾಂಧಿ ಹೇಳುತ್ತಿದ್ದ ‘ಕೊನೆಯ ಮೈಲಿ ತಲುಪುವುದು’ ಬಹಳ ಮುಖ್ಯವಾಗಿದೆ. ಅದಕ್ಕಾಗಿಯೇ ಇಂದು ಈ ವಿಷಯದ ಬಗ್ಗೆ ಎಲ್ಲಾ ಪಾಲುದಾರರೊಂದಿಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರಿಂದಾಗಿ ನಾವು ಬಜೆಟ್‌ನ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತ ಗೊಳಿಸಬಹುದು ಮತ್ತು ಸಂಪೂರ್ಣ ಪಾರದರ್ಶಕತೆಯೊಂದಿಗೆ ಫಲಾನುಭವಿಗಳಿಗೆ ತಲುಪಿಸಬಹುದು.ʼಕೊನೆಯ ಮೈಲಿಯನ್ನು ತಲುಪುವುದುʼ ವಿಷಯವಾಗಿ ಬಜೆಟ್ ಕುರಿತ ವೆಬಿನಾರ್‌ನಲ್ಲಿ ಪ್ರಧಾನ ಮಂತ್ರಿಗಳ ಭಾಷಣ
February 27th, 10:00 am
ಕೊನೆಯ ಮೈಲಿ ತಲುಪುವುದುʼʼ ಕುರಿತಂತೆ ಬಜೆಟ್ ವೆಬ್‌ನಾರ್‌ನಲ್ಲಿ ಶ್ರೀ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆ, ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಂಬಂಧ ಸಲಹೆ, ಹೊಸ ಚಿಂತನೆಗಳನ್ನು ಸ್ವೀಕರಿಸುವ ಸಲುವಾಗಿ ಬಜೆಟ್ ಮಂಡನೆ ನಂತರ ನಡೆಯುತ್ತಿರುವ 12 ಸರಣಿ ವೆಬ್‌ನಾರ್ ಸರಣಿಯ ಭಾಗವಾಗಿ ಇದು ನಾಲ್ಕನೇ ವೆಬಿನಾರ್ ಆಗಿದೆ.