ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.ಡಿಸೆಂಬರ 12 ರಂದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (GPAI) ಕುರಿತ ವಾರ್ಷಿಕ ಜಾಗತಿಕ ಪಾಲುದಾರಿಕೆ ಶೃಂಗಸಭೆಗೆ ಪ್ರಧಾನಮಂತ್ರಿ ಚಾಲನೆ
December 11th, 04:27 pm
ಭಾರತವು ಮೂರು ದಿನಗಳ ವಾರ್ಷಿಕ ಜಿಪಿಎಐ ಶೃಂಗಸಭೆಯನ್ನು 2023 ರ ಡಿಸೆಂಬರ12 ರಿಂದ 14 ರವರೆಗೆ ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ.ಡಿಸೆಂಬರ್ 3ರಂದು ಇನ್ಫಿನಿಟಿ ಫೋರಂ ಉದ್ಘಾಟಿಸಲಿರುವ ಪ್ರಧಾನಮಂತ್ರಿ
November 30th, 11:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಡಿಸೆಂಬರ್ 3ರಂದು ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಣಕಾಸು ತಂತ್ರಜ್ಞಾನ - ಫಿನ್ ಟೆಕ್ ಕುರಿತ ಚಿಂತನಾ ನಾಯಕತ್ವ ವೇದಿಕೆ - ಫಿನ್ ಟೆಕ್ ಫೋರಂ ಅನ್ನು ಉದ್ಘಾಟಿಸಲಿದ್ದಾರೆ.ಜಾಗತಿಕ ತೈಲ ಮತ್ತು ಅನಿಲ ಸಿಇಓ ಮತ್ತು ತಜ್ಞರೊಂದಿಗೆ ಪ್ರಧಾನಿ ಸಂವಾದ
October 09th, 02:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಶ್ವಾದ್ಯಂತದಿಂದ ಆಗಮಿಸಿದ ತೈಲ ಮತ್ತು ಅನಿಲ ಸಿಇಓಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಿದರು.ರಾಸ್ನೆಫ್ಟ್, ಬಿಪಿ, ರಿಲಯೆನ್ಸ್, ಸೌದಿ ಅರಾಮ್ಕೋ, ಎಕ್ಸಾನ್ ಮೊಬಿಲ್, ರಾಯಲ್ ಡಚ್ ಶೆಲ್, ವೇದಾಂತ, ವುಡ್ ಮೆಕೆನ್ಜಿ, ಐಎಚ್ಎಸ್ ಮಾರ್ಕಿಟ್, ಸ್ಕಲ್ಬರ್ಗರ್, ಹಾಲಿಬರ್ಟನ್, ಎಕ್ಸ್ಕೋಲ್, ಒಎನ್ಜಿಸಿ, ಇಂಡಿಯನ್ ಆಯಿಲ್, ಗೈಲ್, ಪೆಟ್ರೋನೆಟ್ ಎಲ್ಎನ್ಜಿ, ಆಯಿಲ್ ಇಂಡಿಯಾ, ಎಚ್ಪಿಎಲ್ಎಲ್, ಡೆಲೋನೆಕ್ಸ್ ಎನರ್ಜಿ, ಎನ್ಐಪಿಎಫ್ಪಿ, ಅಂತಾರಾಷ್ಟ್ರೀಯ ಅನಿಲ ಒಕ್ಕೂಟ, ವಿಶ್ವಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯ ಉನ್ನತ ಸಿಇಓಗಳು ಮತ್ತು ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.