Prime Minister Narendra Modi to visit Andhra Pradesh and Odisha

January 06th, 06:29 pm

PM Modi will visit Andhra Pradesh and Odisha from 8th-9th January 2025. In Visakhapatnam, he will dedicate and lay the foundation of projects worth over ₹2 Lakh Crore, including the NTPC Green Hydrogen Hub, Krishnapatnam Industrial Area, and key railway, road, and healthcare projects. In Odisha, PM will inaugurate the 18th Pravasi Bhartiya Divas in Bhubaneswar and flag off the Pravasi Bharatiya Express tourist train.

ಜನವರಿ 3 ರಂದು ದೆಹಲಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

January 02nd, 10:18 am

'ಎಲ್ಲರಿಗೂ ವಸತಿ' ಎಂಬ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಜನವರಿ 3 ರಂದು ಮಧ್ಯಾಹ್ನ 12:10ರ ಸುಮಾರಿಗೆ ದೆಹಲಿಯ ಅಶೋಕ್ ವಿಹಾರ್ ನ ಸ್ವಾಭಿಮಾನ್ ಅಪಾರ್ಟ್ ಮೆಂಟ್ ನಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಝುಗ್ಗಿ ಜೋಪ್ರಿ (ಜೆಜೆ) ಕ್ಲಸ್ಟರ್ ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ ಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 12:45ಕ್ಕೆ ಅವರು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 23rd, 11:00 am

ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!

ರೋಜ್‌ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್‌ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.

ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ

December 16th, 03:26 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.

ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ

December 16th, 01:00 pm

ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.

ದೆಹಲಿಯಲ್ಲಿ ʻಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನʼದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

December 15th, 10:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 4ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2024ರ ಡಿಸೆಂಬರ್ 13 ರಿಂದ 15 ರವರೆಗೆ ದೆಹಲಿಯಲ್ಲಿ ನಡೆಯಿತು.

ಪ್ರಧಾನಿ ಮೋದಿಯವರ ಗ್ರೀನ್ ಎನರ್ಜಿ ವಿಷನ್ ಭಾರತಕ್ಕೆ ಗೇಮ್ ಚೇಂಜರ್ ಆಗಿದೆ. ಅಂಕಿಅಂಶಗಳು ಏನು ಮಾತನಾಡುತ್ತವೆ ಎಂಬುದು ಇಲ್ಲಿದೆ

December 13th, 01:58 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪರಿವರ್ತಕ ತಳ್ಳುವಿಕೆಯನ್ನು ಮುನ್ನಡೆಸಿದ್ದಾರೆ, ಸುಸ್ಥಿರ ಇಂಧನ ಉಪಕ್ರಮಗಳಲ್ಲಿ ರಾಷ್ಟ್ರವನ್ನು ಜಾಗತಿಕ ನಾಯಕನನ್ನಾಗಿ ಮಾಡಿದ್ದಾರೆ.

2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ

December 13th, 12:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.

ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 09th, 11:00 am

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,

ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 09th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.

ಸೇಂಟ್ ಲೂಸಿಯಾ ಪ್ರಧಾನಮಂತ್ರಿ​​​​​​​ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 21st, 10:13 am

ಎರಡನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 20 ರಂದು ಸೇಂಟ್ ಲೂಸಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ. ಫಿಲಿಪ್ ಜೆ. ಪಿಯರ್ ಅವರನ್ನು ಭೇಟಿ ಮಾಡಿ ಫಲಪ್ರದ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿಯವರಿಂದ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿಯವರ ಭೇಟಿ

November 21st, 09:37 am

ಅಭಿವೃದ್ಧಿ ಹೊಂದುತ್ತಿರುವ ಕಿರು ದ್ವೀಪ ರಾಷ್ಟ್ರಗಳು (ಎಸ್ ಐ ಡಿ ಎಸ್) ಗಾಗಿ ಸಾಮರ್ಥ್ಯ ನಿರ್ಮಾಣ ಹಾಗೂ ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಉಭಯ ನಾಯಕರು ಚರ್ಚಿಸಿದರು. ಭಾರತ- ಕ್ಯಾರಿಕಾಮ್ ಪಾಲುದಾರಿಕೆಯನ್ನು ಬಲಪಡಿಸಲು ಪ್ರಧಾನಮಂತ್ರಿಗಳ ಏಳು ಅಂಶಗಳ ಯೋಜನೆಯನ್ನು ಪ್ರಧಾನಿ ಬ್ರೌನ್ ಶ್ಲಾಘಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೆಂಬಲವನ್ನು ಅವರು ಪುನರುಚ್ಚರಿಸಿದರು.

Be it COVID, disasters, or development, India has stood by you as a reliable partner: PM in Guyana

November 21st, 02:15 am

PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.

ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ

November 21st, 02:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್‌ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ

November 20th, 08:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಅವರು ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ 2ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಿದರು. ಪ್ರಥಮ ವಾರ್ಷಿಕ ಶೃಂಗಸಭೆಯನ್ನು 2023ರ ಮಾರ್ಚ್ 10ರಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಅಲ್ಬನೀಸ್ ಅವರ ಭಾರತದ ಭೇಟಿಯ ಸಮಯದಲ್ಲಿ ನಡೆಸಲಾಗಿತ್ತು.

ಚಿಲಿ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 20th, 08:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವೆಂಬರ್ 19ರಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಚಿಲಿ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಭೇಟಿಯಾದರು. ಇದು ಅವರ ಮೊದಲ ಭೇಟಿಯಾಗಿತ್ತು.

ಸುಸ್ಥಿರ ಅಭಿವೃದ್ಧಿ ಮತ್ತು ಇಂಧನ ಪರಿವರ್ತನೆ ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ

November 20th, 01:40 am

ಇಂದಿನ ಅಧಿವೇಶನದ ವಿಷಯವು ಬಹಳ ಪ್ರಸ್ತುತವಾಗಿದೆ ಮತ್ತು ಮುಂದಿನ ಪೀಳಿಗೆಯ ಭವಿಷ್ಯದೊಂದಿಗೆ ನಿಕಟ ಸಂಬಂಧ ಹೊಂದಿದೆ. ನವದೆಹಲಿ ಜಿ -20 ಶೃಂಗಸಭೆಯಲ್ಲಿ, ಎಸ್ ಡಿಜಿಗಳ ಸಾಧನೆಯನ್ನು ವೇಗಗೊಳಿಸಲು ನಾವು ವಾರಣಾಸಿ ಕ್ರಿಯಾ ಯೋಜನೆಯನ್ನು ಅಳವಡಿಸಿಕೊಂಡಿದ್ದೇವೆ.

ಸುಸ್ಥಿರ ಅಭಿವೃದ್ಧಿ ಮತ್ತು ಇಂಧನ ಪರಿವರ್ತನೆ ಕುರಿತು ಜಿ 20 ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 20th, 01:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಸ್ಥಿರ ಅಭಿವೃದ್ಧಿ ಮತ್ತು ಇಂಧನ ಪರಿವರ್ತನೆ ಕುರಿತು ಜಿ-20 ಶೃಂಗಸಭೆಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ನವದೆಹಲಿ ಜಿ-20 ಶೃಂಗಸಭೆಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಮೂರು ಪಟ್ಟು ಹೆಚ್ಚಿಸಲು ಮತ್ತು 2030ರ ವೇಳೆಗೆ ಇಂಧನ ದಕ್ಷತೆಯ ದರವನ್ನು ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಈ ಸುಸ್ಥಿರ ಅಭಿವೃದ್ಧಿ ಆದ್ಯತೆಗಳನ್ನು ಮುಂದಕ್ಕೆ ತೆಗೆದುಕೊಳ್ಳುವ ಬ್ರೆಜಿಲ್ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದರು.

ಜಂಟಿ ಹೇಳಿಕೆ: ಭಾರತ-ಆಸ್ಟ್ರೇಲಿಯಾ 2ನೇ ವಾರ್ಷಿಕ ಶೃಂಗಸಭೆ

November 19th, 11:22 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರು 2024ರ ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ʻಗ್ರೂಪ್ ಆಫ್ 20ʼ (ಜಿ 20) ಶೃಂಗಸಭೆಯ ನೇಪಥ್ಯದಲ್ಲಿ ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ ನಡೆಸಿದರು.