2024 ರ ಮಧ್ಯಂತರ ಬಜೆಟ್ ಕುರಿತು ಪ್ರಧಾನಮಂತ್ರಿಯವರ ಇಂಗ್ಲೀಷ್ ಭಾಷಣದ ಅನುವಾದ
February 01st, 02:07 pm
ಇಂದು ಎಲ್ಲರನ್ನೊಳಗೊಂಡ ಮತ್ತು ನಾವೀನ್ಯತೆಯ ಮಧ್ಯಂತರ ಬಜೆಟ್ ಮಂಡಿಸಲಾಗಿದೆ. “ಬಜೆಟ್ ವಿಶ್ವಾಸವನ್ನು ನಿರಂತರವಾಗಿ ಮುಂದುವರೆಸಲಿದೆ”. “ಈ ಬಜೆಟ್ ಅಭಿವೃದ್ಧಿ ಹೊಂದಿದ ಭಾರತದ ಎಲ್ಲಾ ಆಧಾರ ಸ್ತಂಭಗಳನ್ನು ಸಬಲೀಕರಣಗೊಳಿಸಲಿದೆ – ಯುವ ಜನಾಂಗ, ಬಡವರು, ಮಹಿಳೆಯರು ಮತ್ತು ರೈತರನ್ನು ಸಬಲೀಕರಣಗೊಳಿಸಲಿದೆ. ನಿರ್ಮಲಾ ಜೀ ಅವರ ಬಜೆಟ್ ಭವಿಷ್ಯದ ದೇಶವನ್ನು ನಿರ್ಮಿಸಲಿದೆ. ಬರುವ 2047 ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಬಜೆಟ್ ನ ಖಾತರಿಗಳು ಭಾರತದ ಆಧಾರ ಸ್ತಂಭವನ್ನು ಬಲಗೊಳಿಸಲಿದೆ. ಈ ಕಾರಣಕ್ಕಾಗಿ ನಿರ್ಮಲಾ ಜೀ ಮತ್ತು ಅವರ ತಂಡವನ್ನು ನಾನು ಹೃದಯದುಂಬಿ ಅಭಿನಂದಿಸುತ್ತೇನೆ.ಬಜೆಟ್ ಕೇವಲ ಮಧ್ಯಂತರ ಬಜೆಟ್ ಅಲ್ಲ, ಇದು ಎಲ್ಲರನ್ನೊಳಗೊಂಡ ಮತ್ತು ನಾವೀನ್ಯತೆಯ ಬಜೆಟ್ : ಪ್ರಧಾನಮಂತ್ರಿ
February 01st, 12:36 pm
ಈ ಬಜೆಟ್ ಕೇವಲ ಮಧ್ಯಂತರ ಬಜೆಟ್ ಅಲ್ಲ, ಇದು ಎಲ್ಲರನ್ನೊಳಗೊಂಡ ಮತ್ತು ನಾವೀನ್ಯತೆಯ ಬಜೆಟ್ ಆಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. “ಬಜೆಟ್ ವಿಶ್ವಾಸವನ್ನು ನಿರಂತರವಾಗಿ ಮುಂದುವರೆಸಲಿದೆ”. “ಈ ಬಜೆಟ್ ಅಭಿವೃದ್ಧಿ ಹೊಂದಿದ ಭಾರತದ ಎಲ್ಲಾ ಆಧಾರ ಸ್ತಂಭಗಳನ್ನು ಸಬಲೀಕರಣಗೊಳಿಸಲಿದೆ – ಯುವ ಜನಾಂಗ, ಬಡವರು, ಮಹಿಳೆಯರು ಮತ್ತು ರೈತರನ್ನು ಸಬಲೀಕರಣಗೊಳಿಸಲಿದೆ ಎಂದು ಹೇಳಿದ್ದಾರೆ.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2023ರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸುವವರೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 19th, 11:32 pm
ನಿಮ್ಮೆಲ್ಲರೊಂದಿಗೆ ಮಾತನಾಡುವುದನ್ನು ನಾನು ನಿಜವಾಗಿಯೂ ಆನಂದಿಸಿದೆ. ದೇಶ ಎದುರಿಸುತ್ತಿರುವ ಪ್ರಸ್ತುತ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸಲು ದೇಶದ ಯುವ ಪೀಳಿಗೆ ಹಗಲು ರಾತ್ರಿ ಶ್ರಮಿಸುತ್ತಿದೆ ಎಂದು ನನಗೆ ಸಂತೋಷವಾಗಿದೆ. ಹಿಂದಿನ ಹ್ಯಾಕಥಾನ್ ಗಳಿಂದ ಪಡೆದ ಪರಿಹಾರಗಳು ತುಂಬಾ ಪರಿಣಾಮಕಾರಿಯಾಗಿವೆ. ಹ್ಯಾಕಥಾನ್ ಗಳಲ್ಲಿ ಭಾಗವಹಿಸಿದ ಅನೇಕ ವಿದ್ಯಾರ್ಥಿಗಳು ತಮ್ಮದೇ ಆದ ಸ್ಟಾರ್ಟ್ ಅಪ್ ಗಳನ್ನು ಸಹ ಪ್ರಾರಂಭಿಸಿದ್ದಾರೆ. ಈ ಸ್ಟಾರ್ಟ್ ಅಪ್ ಗಳು ಮತ್ತು ಪರಿಹಾರಗಳು ಸರ್ಕಾರ ಮತ್ತು ಸಮಾಜಕ್ಕೆ ಸಹಾಯ ಮಾಡುತ್ತಿವೆ. ಇಂದು ಈ ಹ್ಯಾಕಥಾನ್ ನಲ್ಲಿ ಭಾಗವಹಿಸುವ ತಂಡಗಳು ಸಾವಿರಾರು ವಿದ್ಯಾರ್ಥಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರನ್ನು ಉದ್ದೇಶಿಸಿ ಪ್ರಧಾನಿ ಭಾಷಣ
December 19th, 09:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್- 2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರೊಂದಿಗೆ ಸಂವಾದ ನಡೆಸಿದರು ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು.ಸಿಒಪಿ-28ರಲ್ಲಿ ಕೈಗಾರಿಕಾ ಪರಿವರ್ತನೆಗಾಗಿ ನಾಯಕತ್ವ ಗುಂಪಿನ ಎರಡನೇ ಹಂತಕ್ಕೆ ಭಾರತ ಮತ್ತು ಸ್ವೀಡನ್ ಜಂಟಿಯಾಗಿ ಆತಿಥ್ಯ ವಹಿಸಿವೆ
December 01st, 08:29 pm
ಭಾರತ ಮತ್ತು ಸ್ವೀಡನ್ ಉದ್ಯಮ ಪರಿವರ್ತನೆ ವೇದಿಕೆಯನ್ನು ಸಹ ಪ್ರಾರಂಭಿಸಿವೆ, ಇದು ಎರಡೂ ದೇಶಗಳ ಸರ್ಕಾರಗಳು, ಕೈಗಾರಿಕೆಗಳು, ತಂತ್ರಜ್ಞಾನ ಪೂರೈಕೆದಾರರು, ಸಂಶೋಧಕರು ಮತ್ತು ಚಿಂತಕರ ಚಾವಡಿಗಳನ್ನು ಸಂಪರ್ಕಿಸುತ್ತದೆ.ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸಿಂಧಿಯಾ ಶಾಲೆಯ 125ನೇ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
October 21st, 11:04 pm
ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲ ಶ್ರೀ ಮಂಗುಭಾಯ್ ಪಟೇಲ್ ಅವರೇ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಾಗೂ ಸಿಂಧಿಯಾ ಶಾಲಾ ಮಂಡಳಿಯ ನಿರ್ದೇಶಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮತ್ತು ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀ ನರೇಂದ್ರ ಸಿಂಗ್ ತೋಮರ್, ಡಾ. ಜಿತೇಂದ್ರ ಸಿಂಗ್ ಅವರೇ, ಶಾಲಾ ಆಡಳಿತ ಮಂಡಳಿಯ ಸಹೋದ್ಯೋಗಿಗಳೇ, ಎಲ್ಲಾ ಸಿಬ್ಬಂದಿ, ಶಿಕ್ಷಕರು, ಪೋಷಕರು ಮತ್ತು ಆತ್ಮೀಯ ಯುವ ಸ್ನೇಹಿತರೇ!ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಿಂಧಿಯಾ ಶಾಲೆಯ 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
October 21st, 05:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 'ದಿ ಸಿಂಧಿಯಾ ಶಾಲೆಯ' 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಪ್ರಧಾನಮಂತ್ರಿಯವರು ಶಾಲೆಯಲ್ಲಿ 'ವಿವಿಧೋದ್ದೇಶ ಕ್ರೀಡಾ ಸಂಕೀರ್ಣ'ಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಪ್ರತಿಭಾವಂತ ಹಳೆಯ ವಿದ್ಯಾರ್ಥಿಗಳು ಮತ್ತು ಉನ್ನತ ಸಾಧಕರಿಗೆ ಶಾಲೆಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಿಂಧಿಯಾ ಶಾಲೆಯನ್ನು 1897ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಐತಿಹಾಸಿಕ ಗ್ವಾಲಿಯರ್ ಕೋಟೆಯ ಮೇಲಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಣಾರ್ಥ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿದರು.ಚಂದ್ರಯಾನ-3 ಯಶಸ್ಸಿಗೆ ಶುಭ ಕೋರಿದ ವಿಶ್ವ ನಾಯಕರಿಗೆ ಪ್ರಧಾನಿ ಧನ್ಯವಾದ
August 24th, 10:03 am
ಚಂದ್ರಯಾನ-3 ಮಿಷನ್ ಅಡಿ ವಿಕ್ರಂ ಲ್ಯಾಂಡರ್ ನ ಯಶಸ್ವೀ ಲ್ಯಾಂಡಿಂಗ್‌ಗೆ ಅನೇಕ ವಿಶ್ವ ನಾಯಕರು ಭಾರತವನ್ನು ಅಭಿನಂದಿಸಿದ್ದಾರೆ. ಅವರ ಆಶಯಗಳಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರಣಿ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.PM Modi and First Lady of the US Jill Biden visit the National Science Foundation
June 22nd, 02:49 am
PM Modi and First Lady of the US Jill Biden visited the National Science Foundation. They participated in the ‘Skilling for Future Event’. It is a unique event focused on promoting vocational education and skill development among youth. Both PM Modi and First Lady Jill Biden discussed collaborative efforts aimed at creating a workforce for the future. PM Modi highlighted various initiatives undertaken by India to promote education, research & entrepreneurship in the country.ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.ಕರ್ನಾಟಕದ ಹುಬ್ಬಳ್ಳಿ-ಧಾರವಾಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 12th, 04:01 pm
ಈ ವರ್ಷದ ಆರಂಭದಲ್ಲೂ ಹುಬ್ಬಳ್ಳಿಗೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿತ್ತು. ಹುಬ್ಬಳ್ಳಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರು ರಸ್ತೆಬದಿಯಲ್ಲಿ ನಿಂತು ನನ್ನ ಮೇಲೆ ಇಷ್ಟೊಂದು ಪ್ರೀತಿ ಮತ್ತು ಆಶೀರ್ವಾದಗಳನ್ನು ಸುರಿಸಿದ ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಈ ಹಿಂದೆ ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿತ್ತು. ಬೆಂಗಳೂರಿನಿಂದ ಬೆಳಗಾವಿಯವರೆಗೆ, ಕಲಬುರಗಿಯಿಂದ ಶಿವಮೊಗ್ಗದವರೆಗೆ, ಮೈಸೂರಿನಿಂದ ತುಮಕೂರಿನವರೆಗೆ ಕನ್ನಡಿಗರು ನನಗೆ ನಿರಂತರವಾಗಿ ನೀಡಿದ ಪ್ರೀತಿ, ವಾತ್ಸಲ್ಯ ಮತ್ತು ಆಶೀರ್ವಾದ ನಿಜಕ್ಕೂ ಅಗಾಧವಾಗಿದೆ. ನಾನು ನಿಮ್ಮ ಪ್ರೀತಿಗೆ ಚಿರಋಣಿಯಾಗಿದ್ದೇನೆ ಮತ್ತು ಕರ್ನಾಟಕದ ಜನರಿಗೆ ನಿರಂತರವಾಗಿ ಸೇವೆ ಸಲ್ಲಿಸುವ ಮೂಲಕ ಈ ಋಣವನ್ನು ತೀರಿಸುತ್ತೇನೆ. ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಯು ಸಂತೃಪ್ತ ಜೀವನವನ್ನು ಹೊಂದಿದ್ದಾನೆ ಎಂದು ಖಚಿತಪಡಿಸಿಕೊಳ್ಳುವ ದಿಕ್ಕಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ; ಇಲ್ಲಿನ ಯುವಕರು ಮುಂದೆ ಸಾಗುತ್ತಿದ್ದಾರೆ ಮತ್ತು ನಿಯಮಿತವಾಗಿ ಹೊಸ ಉದ್ಯೋಗಾವಕಾಶಗಳನ್ನು ಪಡೆಯುತ್ತಿದ್ದಾರೆ. ಇಲ್ಲಿನ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಉತ್ತಮ ರೀತಿಯಲ್ಲಿ ಸಶಕ್ತರಾಗಿದ್ದಾರೆ. ಬಿಜೆಪಿಯ ಡಬಲ್ ಎಂಜಿನ್ ಸರಕಾರವು ಕರ್ನಾಟಕದ ಪ್ರತಿ ಜಿಲ್ಲೆ, ಪ್ರತಿ ಗ್ರಾಮ ಮತ್ತು ಪ್ರತಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಇಂದು ಧಾರವಾಡದ ಈ ಭೂಮಿಯಲ್ಲಿ ಅಭಿವೃದ್ಧಿಯ ಹೊಸ ಪ್ರವಾಹವು ಹೊರಹೊಮ್ಮುತ್ತಿದೆ. ಈ ಅಭಿವೃದ್ಧಿಯ ಪ್ರವಾಹವು ಹುಬ್ಬಳ್ಳಿ, ಧಾರವಾಡ ಮತ್ತು ಇಡೀ ಕರ್ನಾಟಕದ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ ಮತ್ತು ಅರಳಿಸುತ್ತದೆ.ಕರ್ನಾಟಕದ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದ ಪ್ರಧಾನಮಂತ್ರಿ
March 12th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 2019ರ ಫೆಬ್ರವರಿಯಲ್ಲಿ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ಮಾಡಿದ್ದ ಐಐಟಿ ಧಾರವಾಡ, ವಿಶ್ವದ ಅತಿ ದೊಡ್ಡ ರೈಲ್ವೆ ಪ್ಲಾಟ್‌ಫಾರ್ಮ್ ಎಂದು ಗಿನ್ನೆಸ್ ವಿಶ್ವದಾಖಲೆಯ ಪುಸ್ತಕದಲ್ಲಿ ಮಾನ್ಯತೆ ಪಡೆದಿರುವ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ನಿಲ್ದಾಣದ 1507 ಮೀಟರ್ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್, ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್ ವಿಭಾಗದ ವಿದ್ಯುದ್ದೀಕರಣ ಮತ್ತು ಹೊಸಪೇಟೆ ರೈಲು ನಿಲ್ದಾಣದ ಉನ್ನತೀಕರಣ ಯೋಜನೆಗಳ ರಾಷ್ಟ್ರ ಸಮರ್ಪಣೆ ಇದರಲ್ಲಿ ಸೇರಿವೆ. ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನೂ ಪ್ರಧಾನಮಂತ್ರಿಯವರು ನೆರವೇರಿಸಿದರು. ಜಯದೇವ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಧಾರವಾಡ ಬಹುಗ್ರಾಮ ನೀರು ಸರಬರಾಜು ಯೋಜನೆ ಹಾಗೂ ತುಪ್ಪರಿಹಳ್ಳ ಪ್ರವಾಹ ಹಾನಿ ನಿಯಂತ್ರಣ ಯೋಜನೆಗೆ ಶಂಕುಸ್ಥಾಪನೆಯನ್ನು ಪ್ರಧಾನಿಯವರು ನೆರವೇರಿಸಿದರು.ಕೌಶಲ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಯುವ ಶಕ್ತಿಯ ಬಳಕೆ ಕುರಿತ ಬಜೆಟ್ ನಂತರದ ವೆಬಿನಾರ್‌ನಲ್ಲಿ ಪ್ರಧಾನ ಮಂತ್ರಿ ಭಾಷಣ
February 25th, 12:13 pm
'ಅಮೃತ ಕಾಲ'ದ ಈ ಯುಗದಲ್ಲಿ ಕೌಶಲ್ಯ ಮತ್ತು ಶಿಕ್ಷಣ ದೇಶಕ್ಕೆ 2 ಪ್ರಮುಖ ಸಾಧನಗಳಾಗಿವೆ. ನಮ್ಮ ಯುವಕರು ಅಭಿವೃದ್ಧಿ ಹೊಂದಿದ ಭಾರತವನ್ನು ದೃಷ್ಟಿಯಲ್ಲಿಟ್ಟುಕೊಂಡು ದೇಶದ ಅಮೃತ ಯಾತ್ರೆ ಮುನ್ನಡೆಸುತ್ತಿದ್ದಾರೆ. ಹಾಗಾಗಿ 'ಅಮೃತ ಕಾಲ'ದ ಮೊದಲ ಬಜೆಟ್‌ನಲ್ಲಿ ಯುವಕರು ಮತ್ತು ಅವರ ಉಜ್ವಲ ಭವಿಷ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಬಜೆಟ್ ನಮ್ಮ ಶಿಕ್ಷಣ ವ್ಯವಸ್ಥೆಯು ಪ್ರಾಯೋಗಿಕ ಮತ್ತು ಉದ್ಯಮ ಆಧಾರಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಭದ್ರ ಬುನಾದಿ ಬಲಪಡಿಸುತ್ತಿದೆ. ಹಲವಾರು ವರ್ಷಗಳಿಂದ ನಮ್ಮ ಶಿಕ್ಷಣ ಕ್ಷೇತ್ರ ಗಟ್ಟಿತದಿಂದ ಹೊರತಾಗಿದೆ. ಈ ಸನ್ನಿವೇಶವನ್ನು ಬದಲಾಯಿಸಲು ನಾವು ಪ್ರಯತ್ನಿಸಿದ್ದೇವೆ. ನಾವು ಯುವಕರ ಯೋಗ್ಯತೆ ಮತ್ತು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಶಿಕ್ಷಣ ಮತ್ತು ಕೌಶಲ್ಯವನ್ನು ಮರುನಿರ್ದೇಶಿಸಿದ್ದೇವೆ. ರಾಷ್ಟ್ರೀಯ ಶಿಕ್ಷಣ ನೀತಿಯು ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಸಮಾನ ಒತ್ತು ನೀಡಿದೆ. ಈ ಪ್ರಯತ್ನದಲ್ಲಿ ನಮಗೆ ಶಿಕ್ಷಕರಿಂದ ಹೆಚ್ಚಿನ ಬೆಂಬಲ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗಿದೆ. ಇದು ನಮ್ಮ ಮಕ್ಕಳನ್ನು ಹಿಂದಿನ ಹೊರೆಯಿಂದ ಮುಕ್ತಗೊಳಿಸಲು ನಮಗೆ ಹೆಚ್ಚಿನ ಧೈರ್ಯ ನೀಡಿದೆ. ಇದು ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಮತ್ತಷ್ಟು ಸುಧಾರಣೆಗಳನ್ನು ಕೈಗೊಳ್ಳಲು ಸರ್ಕಾರವನ್ನು ಉತ್ತೇಜಿಸಿದೆ.“ಯುವ ಶಕ್ತಿಯ ಸದ್ಬಳಕೆ- ಕೌಶಲ್ಯ ಮತ್ತು ಶಿಕ್ಷಣ “ಕುರಿತಂತೆ ಬಜೆಟ್ ನಂತರ ವೆಬಿನಾರ್ ಉದ್ದೇಶಿಸಿ ಪ್ರಧಾನಿ ಭಾಷಣ
February 25th, 09:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಯುವಶಕ್ತಿಯ ಸಬ್ಧಳಕೆ- ಕೌಶಲ್ಯ ಮತ್ತು ಶಿಕ್ಷಣ’ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಇಂದು ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾಗಿರುವ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್ ಸರಣಿಯಲ್ಲಿ ಇದು ಮೂರನೆಯದ್ದಾಗಿದೆ.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ವಿಜೇತರನ್ನು ಪ್ರಧಾನಿ ಶ್ಲಾಘಿಸಿದರು
January 24th, 09:49 pm
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ) ವಿಜೇತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು. ನಾವೀನ್ಯ, ಸಮಾಜ ಸೇವೆ, ಪಾಂಡಿತ್ಯ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಹಾಗೂ ಶೌರ್ಯ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಭಾರತ ಸರ್ಕಾರವು ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡುತ್ತಿದೆ. ಪಿ.ಎಂ.ಆರ್.ಬಿ.ಪಿ -2023ಕ್ಕೆ ಬಾಲ ಶಕ್ತಿ ಪುರಸ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ದೇಶಾದ್ಯಂತ 11 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದ 6 ಹುಡುಗರು ಮತ್ತು 5 ಹುಡುಗಿಯರಿದ್ದಾರೆ.ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
January 24th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ತಮ್ಮ ನಿವಾಸ 7 ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.ಡಿಸೆಂಬರ್ 11 ರಂದು ಮಹಾರಾಷ್ಟ್ರ ಮತ್ತು ಗೋವಾಕ್ಕೆ ಪ್ರಧಾನಿ ಭೇಟಿ
December 09th, 07:39 pm
ಅಂದು ಬೆಳಿಗ್ಗೆ 9:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ನಾಗಪುರ ರೈಲು ನಿಲ್ದಾಣವನ್ನು ತಲುಪುತ್ತಾರೆ. ಅಲ್ಲಿ ಅವರು ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಿಯವರು ಫ್ರೀಡಂ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಖಾಪ್ರಿ ಮೆಟ್ರೋ ನಿಲ್ದಾಣಕ್ಕೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ, ಅಲ್ಲಿ ಅವರು 'ನಾಗಪುರ ಮೆಟ್ರೋ ಮೊದಲ ಹಂತ' ವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಕಾರ್ಯಕ್ರಮದ ಸಮಯದಲ್ಲಿಯೇ, ಅವರು 'ನಾಗಪುರ ಮೆಟ್ರೋ ಹಂತ- II' ರ ಶಂಕುಸ್ಥಾಪನೆಯನ್ನೂ ಮಾಡಲಿದ್ದಾರೆ. ಬೆಳಗ್ಗೆ 10:45 ರ ಸುಮಾರಿಗೆ, ಪ್ರಧಾನ ಮಂತ್ರಿಯವರು ನಾಗಪುರ ಮತ್ತು ಶಿರಡಿಯನ್ನು ಸಂಪರ್ಕಿಸುವ ಸಮೃದ್ಧಿ ಮಹಾಮಾರ್ಗದ ಮೊದಲ ಹಂತವನ್ನು ಉದ್ಘಾಟಿಸುತ್ತಾರೆ ಮತ್ತು ಹೆದ್ದಾರಿಯ ಪ್ರವಾಸವನ್ನು ಕೈಗೊಳ್ಳುತ್ತಾರೆ. ಪ್ರಧಾನಮಂತ್ರಿಯವರು ಬೆಳಗ್ಗೆ 11:15 ರ ಸುಮಾರಿಗೆ ನಾಗಪುರದ ಏಮ್ಸ್ (ಎಐಐಎಂಎಸ್) ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ಮಂದಿಗೆ ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಭಾಷಾಂತರ
November 22nd, 10:31 am
ನಿಮ್ಮೆಲ್ಲರಿಗೂ ಅಭಿನಂದನೆಗಳು. ಇಂದು, ದೇಶದ 45 ನಗರಗಳಲ್ಲಿ 71,000 ಕ್ಕೂ ಹೆಚ್ಚು ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇಂದು ಸಾವಿರಾರು ಮನೆಗಳಲ್ಲಿ ಸಮೃದ್ಧಿಯ ಹೊಸ ಯುಗವು ಪ್ರಾರಂಭವಾಗಿದೆ. ಕಳೆದ ತಿಂಗಳು, ಧಂತೇರಸ್ ದಿನದಂದು, ಕೇಂದ್ರ ಸರ್ಕಾರವು 75,000 ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿತ್ತು. ಇಂದಿನ 'ರೋಜ್ಗಾರ್ ಮೇಳ'ವು ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಮಿಷನ್ ಮೋಡ್ ನಲ್ಲಿ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ
November 22nd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಪಾಲ್ಗೊಳ್ಳುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ರೋಜ್ಗಾರ್ ಮೇಳವು ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ. ಈ ಹಿಂದೆ ಅಕ್ಟೋಬರ್ ನಲ್ಲಿ, ರೋಜ್ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡವರಿಗೆ 75,000 ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿತ್ತು.