ನೈಸರ್ಗಿಕ ವಿಪತ್ತು ತಾಳಿಕೊಳ್ಳುವಂತಹ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ 4ನೇ ಆವೃತ್ತಿಯ ಉದ್ಘಾಟನಾ ಗೋಷ್ಠಿಯನ್ನುದ್ದೇಶಿಸಿ ಪ್ರಧಾನಿ ಭಾಷಣ

May 04th, 10:29 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಪತ್ತು ತಾಳಿಕೊಳ್ಳುವಂತಹ ಮೂಲಸೌಕರ್ಯ ಕುರಿತ ಅಂತರಾಷ್ಟ್ರೀಯ ಸಮ್ಮೇಳನದ ನಾಲ್ಕನೇ ಆವೃತ್ತಿಯ ಉದ್ಘಾಟನಾ ಗೋಷ್ಠಿಯನ್ನು ಉದ್ದೇಶಿಸಿ ವಿಡಿಯೋ ಮೂಲಕ ಮಾತನಾಡಿದರು. ಅಧಿವೇಶನವನ್ನು ಉದ್ದೇಶಿಸಿ ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಸ್ಕಾಟ್ ಮಾರಿಸನ್, ಘಾನಾದ ಅಧ್ಯಕ್ಷ ಗೌರವಾನ್ವಿತ ನಾನಾ ಅಡ್ಡೋ ಡಂಕ್ವಾ ಅಕುಫೋ ಅಡ್ಡೋ, ಜಪಾನ್ ಪ್ರಧಾನಿ ಗೌರವಾನ್ವಿತ ಫ್ಯೂಮಿಯೊ ಕಿಶಿಡಾ ಮತ್ತು ಮಡಗಾಸ್ಕರ್ ಅಧ್ಯಕ್ಷ ಗೌರವಾನ್ವಿತ ಆಂಡ್ರಿ ನಿರಿನಾ ರಾಜೋಲಿನಾ ಮತ್ತಿತರ ಗಣ್ಯರು ಭಾಷಣ ಮಾಡಿದರು.

ವಿಶ್ವ ಪರಿಸರ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು

June 05th, 11:05 am

ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವ ಮೂಲಕ ಭಾರತ ಮತ್ತೊಂದು ಹಾದಿಯನ್ನು ಹಿಡಿದಿದೆ ಎಂದು ಪ್ರಧಾನಿ ಹೇಳಿದರು. 21 ನೇ ಶತಮಾನದ ಭಾರತದ ಪ್ರಮುಖ ಆದ್ಯತೆಗಳಲ್ಲಿ ಎಥೆನಾಲ್ ಕೂಡ ಒಂದಾಗಿದೆ ಎಂದು ಅವರು ಹೇಳಿದರು.

ವಿಶ್ವ ಪರಿಸರ ದಿನದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಭಾಷಣ

June 05th, 11:04 am

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಪುಣೆಯ ರೈತನೊಂದಿಗೆ ಸಂವಾದ ನಡೆಸಿದರು, ಆ ರೈತ ಸಾವಯವ ಕೃಷಿ ಮತ್ತು ಕೃಷಿಯಲ್ಲಿ ಜೈವಿಕ ಇಂಧನ ಬಳಕೆಯ ಅನುಭವವನ್ನು ಪ್ರಧಾನಿವರೊಂದಿಗೆ ಹಂಚಿಕೊಂಡರು.