ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 04:54 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕಾರ್ಯಕ್ರಮಕ್ಕೆ ತಂತ್ರಜ್ಞಾನದ ನೆರವಿನಿಂದ ವರ್ಚುವಲ್ ಆಗಿ ಪಾಲ್ಗೊಂಡಿರುವ ಗೌರವಾನ್ವಿತ ರಾಜ್ಯಪಾಲರುಗಳೇ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ನಾಯ್ಡು ಅವರೇ, ವರ್ಚ್ಯುವಲ್ ಆಗಿ ಪಾಲ್ಗೊಂಡಿರುವ ಇತರೆ ಸಂಪುಟ ಸಹೋದ್ಯೋಗಿಗಳೇ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಉತ್ತರ ಪ್ರದೇಶ ಸರ್ಕಾರದ ನಾನಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಬನಾರಸ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ 6,100 ಕೋಟಿ ರೂ. ಮೊತ್ತದ ಬಹುವಿಧದ ವಿಮಾನ ನಿಲ್ದಾಣ ಯೋಜನೆಗಳು ಮತ್ತು ವಾರಾಣಸಿಯ ಬಹು ಅಭಿವೃದ್ಧಿ ಉಪಕ್ರಮಗಳು ಸೇರಿವೆ.ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 02:21 pm
ಶ್ರೀ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ, ಪೂಜ್ಯ ಜಗದ್ಗುರುಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್; ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್; ಶಂಕರ ನೇತ್ರ ಪ್ರತಿಷ್ಠಾನದ ಆರ್.ವಿ.ರಮಣಿ; ಡಾ.ಎಸ್.ವಿ. ಬಾಲಸುಬ್ರಮಣ್ಯಂ; ಶ್ರೀ ಮುರಳಿ ಕೃಷ್ಣಮೂರ್ತಿ; ರೇಖಾ ಜುಂಜುನ್‌ವಾಲಾ; ಮತ್ತು ಸಂಸ್ಥೆಯ ಎಲ್ಲಾ ಇತರ ಗೌರವಾನ್ವಿತ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 20th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್.ಜೆ.ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಆಸ್ಪತ್ರೆಯು ವಿವಿಧ ಕಣ್ಣಿನ ಪರಿಸ್ಥಿತಿಗಳಿಗೆ ಸಮಗ್ರ ಸಮಾಲೋಚನೆಗಳು ಮತ್ತು ಚಿಕಿತ್ಸೆಗಳನ್ನು ನೀಡುತ್ತದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನೂ ಶ್ರೀ ಮೋದಿ ಅವರು ವೀಕ್ಷಿಸಿದರು.ಅಕ್ಟೋಬರ್ 20ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 19th, 05:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 20, 2024ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:00 ಗಂಟೆಗೆ ಆರ್.ಜೆ. ಶಂಕರ ಕಣ್ಣಿನ ಆಸ್ಪತ್ರೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ. ನಂತರ, ಸಂಜೆ 4:15 ರ ಸುಮಾರಿಗೆ, ಅವರು ವಾರಣಾಸಿಯಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.