
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.
“ಪರೀಕ್ಷಾ ಪೇ ಚರ್ಚಾ 2025” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
February 10th, 11:30 am
ಈ ಕಾರ್ಯಕ್ರಮಕ್ಕೆ ಇಷ್ಟೊಂದು ಮಕ್ಕಳು ನೋಂದಾಯಿಸಿಕೊಂಡಿರುವುದು ಒಂದು ದೊಡ್ಡ ಸೌಭಾಗ್ಯ, ಮತ್ತು ನಾವು ಅವರಲ್ಲಿ ಒಬ್ಬರಾಗಿದ್ದೇವೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025ರ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
February 10th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ) ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ತಮ್ಮ ಅನೌಪಚಾರಿಕ ಸಂವಾದದಲ್ಲಿ ವ್ಯಾಪಕ ವಿಷಯಗಳ ಬಗ್ಗೆ ಚರ್ಚಿಸಿದರು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಾಂಪ್ರದಾಯಿಕವಾಗಿ ನೀಡಲಾಗುವ ಎಳ್ಳಿನಿಂದ ತಯಾರಿಸಿದ ಸಿಹಿತಿಂಡಿಗಳನ್ನು ಅವರು ವಿತರಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ
February 04th, 07:00 pm
ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 04th, 06:55 pm
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 11th, 05:00 pm
ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024ರ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
December 11th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಗ್ರ್ಯಾಂಡ್ ಫಿನಾಲೆಯ ಯುವ ನವೋದ್ಯಮಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೆಂಪುಕೋಟೆಯಿಂದ ಮಾಡಿದ ಭಾಷಣದಲ್ಲಿ ‘ಸಬ್ಕಾ ಪ್ರಯಾಸ್’ ಪುನರುಚ್ಚಾರವನ್ನು ನೆನಪಿಸಿದರು. ಇಂದಿನ ಭಾರತವು ‘ಸಬ್ಕಾ ಪ್ರಾರ್ಥನೆ’ ಅಥವಾ ಪ್ರತಿಯೊಬ್ಬರ ಪ್ರಯತ್ನದಿಂದ ತ್ವರಿತ ಗತಿಯಲ್ಲಿ ಪ್ರಗತಿ ಹೊಂದಬಹುದು ಎಂಬುದಕ್ಕೆ ಇಂದಿನ ಸಂದರ್ಭವು ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ, ಯುವ ನವೋದ್ಯಮಿಗಳ ನಡುವೆ ಇರುವಾಗ ಹೊಸದನ್ನು ಕಲಿಯಲು ಮತ್ತು ಅರ್ಥ ಮಾಡಿಕೊಳ್ಳಲು ನನಗೆ ಅವಕಾಶ ಸಿಗುತ್ತದೆ. ಯುವ ನವೋದ್ಯಮಿಗಳ ಮೇಲೆ ತಮ್ಮ ನಿರೀಕ್ಷೆಗಳು ಹೆಚ್ಚಾಗಿವೆ ಎಂದ ಪ್ರಧಾನ ಮಂತ್ರಿ, ಅವರು 21ನೇ ಶತಮಾನದ ಭಾರತವನ್ನು ವಿಭಿನ್ನವಾಗಿ ನೋಡುವ ದೃಷ್ಟಿಕೋನ ಹೊಂದಿದ್ದಾರೆ. ಆದ್ದರಿಂದ, ನಿಮ್ಮ ಪರಿಹಾರಗಳು ಸಹ ವಿಭಿನ್ನವಾಗಿವೆ ಮತ್ತು ಹೊಸ ಸವಾಲು ಬಂದಾಗ, ನೀವು ಹೊಸ ಮತ್ತು ಅನನ್ಯ ಪರಿಹಾರಗಳೊಂದಿಗೆ ಬರುತ್ತೀರಿ. ಈ ಹಿಂದೆ ಹ್ಯಾಕಥಾನ್‌ಗಳ ಭಾಗವಾಗಿದ್ದುದನ್ನು ಸ್ಮರಿಸಿದ ಪ್ರಧಾನ ಮಂತ್ರಿ, ಅದರ ಫಲಿತಾಂಶಗಳಿಂದ ಎಂದಿಗೂ ನಿರಾಶೆಗೊಂಡಿಲ್ಲ. ನೀವು ನನ್ನ ನಂಬಿಕೆಯನ್ನು ಮಾತ್ರ ಬಲಪಡಿಸಿದ್ದೀರಿ, ಹಿಂದೆ ಒದಗಿಸಿದ ಪರಿಹಾರಗಳನ್ನು ವಿವಿಧ ಸಚಿವಾಲಯಗಳಲ್ಲಿ ಬಳಸಲಾಗುತ್ತಿದೆ. ಹ್ಯಾಕಥಾನ್ ಪ್ರತಿನಿಧಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಉತ್ಸುಕತೆ ಹೊಂದಿರುವುದಾಗಿ ತಿಳಿಸಿದ ಅವರು, ಸಂವಾದ ಪ್ರಾರಂಭಿಸಿದರು.ಅಕ್ಟೋಬರ್ 9 ರಂದು ಮಹಾರಾಷ್ಟ್ರದಲ್ಲಿ 7600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ
October 08th, 07:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 9 ರಂದು ಮಧ್ಯಾಹ್ನ 1 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ ಸುಮಾರು 7600 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2023ರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸುವವರೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 19th, 11:32 pm
ನಿಮ್ಮೆಲ್ಲರೊಂದಿಗೆ ಮಾತನಾಡುವುದನ್ನು ನಾನು ನಿಜವಾಗಿಯೂ ಆನಂದಿಸಿದೆ. ದೇಶ ಎದುರಿಸುತ್ತಿರುವ ಪ್ರಸ್ತುತ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸಲು ದೇಶದ ಯುವ ಪೀಳಿಗೆ ಹಗಲು ರಾತ್ರಿ ಶ್ರಮಿಸುತ್ತಿದೆ ಎಂದು ನನಗೆ ಸಂತೋಷವಾಗಿದೆ. ಹಿಂದಿನ ಹ್ಯಾಕಥಾನ್ ಗಳಿಂದ ಪಡೆದ ಪರಿಹಾರಗಳು ತುಂಬಾ ಪರಿಣಾಮಕಾರಿಯಾಗಿವೆ. ಹ್ಯಾಕಥಾನ್ ಗಳಲ್ಲಿ ಭಾಗವಹಿಸಿದ ಅನೇಕ ವಿದ್ಯಾರ್ಥಿಗಳು ತಮ್ಮದೇ ಆದ ಸ್ಟಾರ್ಟ್ ಅಪ್ ಗಳನ್ನು ಸಹ ಪ್ರಾರಂಭಿಸಿದ್ದಾರೆ. ಈ ಸ್ಟಾರ್ಟ್ ಅಪ್ ಗಳು ಮತ್ತು ಪರಿಹಾರಗಳು ಸರ್ಕಾರ ಮತ್ತು ಸಮಾಜಕ್ಕೆ ಸಹಾಯ ಮಾಡುತ್ತಿವೆ. ಇಂದು ಈ ಹ್ಯಾಕಥಾನ್ ನಲ್ಲಿ ಭಾಗವಹಿಸುವ ತಂಡಗಳು ಸಾವಿರಾರು ವಿದ್ಯಾರ್ಥಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರನ್ನು ಉದ್ದೇಶಿಸಿ ಪ್ರಧಾನಿ ಭಾಷಣ
December 19th, 09:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಸ್ಮಾರ್ಟ್ ಇಂಡಿಯಾ ಹ್ಯಾಕಥಾನ್- 2023ʼರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದವರೊಂದಿಗೆ ಸಂವಾದ ನಡೆಸಿದರು ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು.ಡಿಸೆಂಬರ್ 19 ರಂದು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2023 ರ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸುವವರೊಂದಿಗೆ ಪ್ರಧಾನ ಮಂತ್ರಿ ಸಂವಾದ
December 18th, 06:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19ನೇ ಡಿಸೆಂಬರ್ 2023 ರಂದು ರಾತ್ರಿ 9:30 ಗಂಟೆಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2023 ರ ಗ್ರಾಂಡ್ ಫಿನಾಲೆಯಲ್ಲಿ ಭಾಗವಹಿಸುವವರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಎಲ್ಲರನ್ನೂ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ರಾಜಸ್ಥಾನದ ಜೋಧಪುರದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅವತರಿಣಿಕೆ
October 05th, 11:54 am
ಮೊಟ್ಟ ಮೊದಲನೆಯದಾಗಿ ನಾನು ವೀರ ದುರ್ಗಾದಾಸ್ ರಾಥೋಡ್ ಅವರ ಮಡೋರ್ ವೀರ ಭೂಮಿಗೆ ನನ್ನ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಜೋಧಪುರದ ಮಾರ್ವಾಡ್ ಪುಣ್ಯಭೂಮಿಯಲ್ಲಿ ಇಂದು ಹಲವು ಮಹತ್ವದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಜತೆಗೆ ಆಯ್ದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ರಾಜಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡ ನಮ್ಮ ನಿರಂತರ ಪ್ರಯತ್ನಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಅವುಗಳ ಫಲಶ್ರುತಿಯನ್ನು ನಾವೆಲ್ಲರೂ ಇಂದು ಕಾಣುತ್ತಿದ್ದೇವೆ. ಈ ಎಲ್ಲ ಅಭಿವೃದ್ಧಿ ಉಪಕ್ರಮಗಳಿಗಾಗಿ ನಾನು ನಿಮ್ಮೆಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ರಾಜಸ್ತಾನದ ಜೋಧ್ ಪುರದಲ್ಲಿ ಸುಮಾರು 5000 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆಗೊಳಿಸಿದ ಪ್ರಧಾನಮಂತ್ರಿ
October 05th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜಸ್ತಾನದ ಜೋಧ್ ಪುರದಲ್ಲಿಂದು ಸುಮಾರು 5000 ಕೋಟಿ ರೂ. ಮೌಲ್ಯದ ಹಲವು ರಸ್ತೆ, ರೈಲು, ವಿಮಾನಯಾನ, ಆರೋಗ್ಯ ಹಾಗೂ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಲಯಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆಗೊಳಿಸಿದರು. ಈ ಯೋಜನೆಗಳಲ್ಲಿ ಜೋಧ್ ಪುರ ಏಮ್ಸ್ ನಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ಬ್ಲಾಕ್ ಮತ್ತು 350 ಹಾಸಿಗೆಗಳ ಟ್ರಾಮಾ ಸೆಂಟರ್ ಗೆ ಶಂಕುಸ್ಥಾಪನೆ, ಪಿಎಂ-ಎಬಿಎಚ್ಐಎಂ ಅಡಿಯಲ್ಲಿ 7 ಕ್ರಿಟಿಕಲ್ ಕೇರ್ ಬ್ಲಾಕ್ ಗಳ ನಿರ್ಮಾಣ ಮತ್ತು ಜೋಧ್ ಪುರ್ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡದ ಅಭಿವೃದ್ಧಿಗೆ ಶಂಕುಸ್ಥಾಪನೆಯೂ ಒಳಗೊಂಡಿದೆ. ಅಲ್ಲದೆ ಪ್ರಧಾನಿ ಅವರು, ರಾಜಸ್ತಾನದ ಕೇಂದ್ರೀಯ ವಿಶ್ವವಿದ್ಯಾಲಯದ ಉನ್ನತೀಕರಿಸಿದ ಮೂಲಸೌಕರ್ಯ ಮತ್ತು ಐಐಟಿ, ಜೋಧ್ ಪುರ ಕ್ಯಾಂಪಸ್ ಅನ್ನು ಲೋಕಾರ್ಪಣೆಗೊಳಿಸಿದರು. ಪ್ರಧಾನಮಂತ್ರಿ ಅವರು, ಹಲವು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು 145 ಕಿ.ಮೀ. ಉದ್ದದ ದೇಗನಾ-ರೈ ಕಾ ಬಾಗ್ ಮತ್ತು 57 ಕಿ.ಮೀ. ಉದ್ದದ ದೇಗನಾ-ಕುಚಮನ್ ನಗರ ರೈಲು ಸಂಚಾರವನ್ನು ಉದ್ಘಾಟಿಸಿದರು. ಶ್ರೀ ನರೇಂದ್ರ ಮೋದಿ ಅವರು, ದೆಹಲಿ-ಜೈಸಲ್ಮೇರ್ ಗೆ ಸಂಪರ್ಕ ಕಲ್ಪಿಸುವ ರುನಿಚಾ ಎಕ್ಸ್ ಪ್ರೆಸ್ ಮತ್ತು ಮಾರ್ವಾರ್ ಜಂಕ್ಷನ್ ಮತ್ತು ಖಂಬ್ಲಿ ಘಾಟ್ ನಡುವೆ ಸಂಪರ್ಕ ಕಲ್ಪಿಸುವ ಹೊಸ ಪಾರಂಪರಿಕ ರೈಲು ಸೇರಿ, ಎರಡು ಹೊಸ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.ಗುಜರಾತ್ ನ ಅಹಮದಾಬಾದ್ನಲ್ಲಿರುವ ಸೈನ್ಸ್ ಸಿಟಿಗೆ ಪ್ರಧಾನಮಂತ್ರಿ ಭೇಟಿ ನೀಡಿದರು
September 27th, 02:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ಅಹಮದಾಬಾದ್ನಲ್ಲಿರುವ ಸೈನ್ಸ್ ಸಿಟಿಗೆ ಭೇಟಿ ನೀಡಿದರು. ಅವರು ರೋಬೋಟಿಕ್ಸ್ ಗ್ಯಾಲರಿ, ನೇಚರ್ ಪಾರ್ಕ್, ಅಕ್ವಾಟಿಕ್ ಗ್ಯಾಲರಿ ಮತ್ತು ಶಾರ್ಕ್ ಟನಲ್ ಅನ್ನು ವೀಕ್ಷಿಸಿದರು ಮತ್ತು ಈ ಸಂದರ್ಭದಲ್ಲಿ ಪ್ರದರ್ಶನ ಕೂಡ ವೀಕ್ಷಿಸಿದರು.In NEP traditional knowledge and futuristic technologies have been given the same importance: PM Modi
July 29th, 11:30 am
PM Modi inaugurated Akhil Bhartiya Shiksha Samagam at Bharat Mandapam in Delhi. Addressing the gathering, the PM Modi underlined the primacy of education among the factors that can change the destiny of the nation. “Our education system has a huge role in achieving the goals with which 21st century India is moving”, he said. Emphasizing the importance of the Akhil Bhartiya Shiksha Samagam, the Prime Minister said that discussion and dialogue are important for education.ದೆಹಲಿಯ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಉದ್ಘಾಟಿಸಿದ ಪ್ರಧಾನಮಂತ್ರಿ
July 29th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿದರು. ಇದು ರಾಷ್ಟ್ರೀಯ ಶಿಕ್ಷಣ ನೀತಿ 2020 ರ 3 ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ. ಪಿಎಂ ಶ್ರೀ ಯೋಜನೆಯಡಿ ಮೊದಲ ಕಂತಿನ ಹಣವನ್ನು ಅವರು ಬಿಡುಗಡೆ ಮಾಡಿದರು. 6207 ಶಾಲೆಗಳು ಒಟ್ಟು 630 ಕೋಟಿ ರೂಪಾಯಿಗಳ ಮೊದಲ ಕಂತನ್ನು ಪಡೆದಿವೆ. 12 ಭಾರತೀಯ ಭಾಷೆಗಳಿಗೆ ಭಾಷಾಂತರಿಸಲಾದ ಶಿಕ್ಷಣ ಮತ್ತು ಕೌಶಲ್ಯ ಪಠ್ಯಕ್ರಮ ಪುಸ್ತಕಗಳನ್ನು ಅವರು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.ಕೌಶಲ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಯುವ ಶಕ್ತಿಯ ಬಳಕೆ ಕುರಿತ ಬಜೆಟ್ ನಂತರದ ವೆಬಿನಾರ್‌ನಲ್ಲಿ ಪ್ರಧಾನ ಮಂತ್ರಿ ಭಾಷಣ
February 25th, 12:13 pm
'ಅಮೃತ ಕಾಲ'ದ ಈ ಯುಗದಲ್ಲಿ ಕೌಶಲ್ಯ ಮತ್ತು ಶಿಕ್ಷಣ ದೇಶಕ್ಕೆ 2 ಪ್ರಮುಖ ಸಾಧನಗಳಾಗಿವೆ. ನಮ್ಮ ಯುವಕರು ಅಭಿವೃದ್ಧಿ ಹೊಂದಿದ ಭಾರತವನ್ನು ದೃಷ್ಟಿಯಲ್ಲಿಟ್ಟುಕೊಂಡು ದೇಶದ ಅಮೃತ ಯಾತ್ರೆ ಮುನ್ನಡೆಸುತ್ತಿದ್ದಾರೆ. ಹಾಗಾಗಿ 'ಅಮೃತ ಕಾಲ'ದ ಮೊದಲ ಬಜೆಟ್‌ನಲ್ಲಿ ಯುವಕರು ಮತ್ತು ಅವರ ಉಜ್ವಲ ಭವಿಷ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಬಜೆಟ್ ನಮ್ಮ ಶಿಕ್ಷಣ ವ್ಯವಸ್ಥೆಯು ಪ್ರಾಯೋಗಿಕ ಮತ್ತು ಉದ್ಯಮ ಆಧಾರಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಭದ್ರ ಬುನಾದಿ ಬಲಪಡಿಸುತ್ತಿದೆ. ಹಲವಾರು ವರ್ಷಗಳಿಂದ ನಮ್ಮ ಶಿಕ್ಷಣ ಕ್ಷೇತ್ರ ಗಟ್ಟಿತದಿಂದ ಹೊರತಾಗಿದೆ. ಈ ಸನ್ನಿವೇಶವನ್ನು ಬದಲಾಯಿಸಲು ನಾವು ಪ್ರಯತ್ನಿಸಿದ್ದೇವೆ. ನಾವು ಯುವಕರ ಯೋಗ್ಯತೆ ಮತ್ತು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಶಿಕ್ಷಣ ಮತ್ತು ಕೌಶಲ್ಯವನ್ನು ಮರುನಿರ್ದೇಶಿಸಿದ್ದೇವೆ. ರಾಷ್ಟ್ರೀಯ ಶಿಕ್ಷಣ ನೀತಿಯು ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಸಮಾನ ಒತ್ತು ನೀಡಿದೆ. ಈ ಪ್ರಯತ್ನದಲ್ಲಿ ನಮಗೆ ಶಿಕ್ಷಕರಿಂದ ಹೆಚ್ಚಿನ ಬೆಂಬಲ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗಿದೆ. ಇದು ನಮ್ಮ ಮಕ್ಕಳನ್ನು ಹಿಂದಿನ ಹೊರೆಯಿಂದ ಮುಕ್ತಗೊಳಿಸಲು ನಮಗೆ ಹೆಚ್ಚಿನ ಧೈರ್ಯ ನೀಡಿದೆ. ಇದು ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಮತ್ತಷ್ಟು ಸುಧಾರಣೆಗಳನ್ನು ಕೈಗೊಳ್ಳಲು ಸರ್ಕಾರವನ್ನು ಉತ್ತೇಜಿಸಿದೆ.“ಯುವ ಶಕ್ತಿಯ ಸದ್ಬಳಕೆ- ಕೌಶಲ್ಯ ಮತ್ತು ಶಿಕ್ಷಣ “ಕುರಿತಂತೆ ಬಜೆಟ್ ನಂತರ ವೆಬಿನಾರ್ ಉದ್ದೇಶಿಸಿ ಪ್ರಧಾನಿ ಭಾಷಣ
February 25th, 09:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಯುವಶಕ್ತಿಯ ಸಬ್ಧಳಕೆ- ಕೌಶಲ್ಯ ಮತ್ತು ಶಿಕ್ಷಣ’ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಇಂದು ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾಗಿರುವ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್ ಸರಣಿಯಲ್ಲಿ ಇದು ಮೂರನೆಯದ್ದಾಗಿದೆ.India has immense potential to become a great knowledge economy in the world: PM Modi
October 19th, 12:36 pm
The Prime Minister, Shri Narendra Modi launched Mission Schools of Excellence at Trimandir, Adalaj, Gujarat today. The Mission has been conceived with a total outlay of 10,000 Crores. During the event at Trimandir, the Prime Minister also launched projects worth around Rs 4260 crores. The Mission will help strengthen education infrastructure in Gujarat by setting up new classrooms, smart classrooms, computer labs and overall upgradation of the infrastructure of schools in the State.PM launches Mission Schools of Excellence at Trimandir, Adalaj, Gujarat
October 19th, 12:33 pm
The Prime Minister, Shri Narendra Modi launched Mission Schools of Excellence at Trimandir, Adalaj, Gujarat today. The Mission has been conceived with a total outlay of 10,000 Crores. During the event at Trimandir, the Prime Minister also launched projects worth around Rs 4260 crores. The Mission will help strengthen education infrastructure in Gujarat by setting up new classrooms, smart classrooms, computer labs and overall upgradation of the infrastructure of schools in the State.