ನಮ್ಮ ಸರ್ಕಾರದ ಸುಧಾರಣೆಗಳು ಮನವರಿಕೆಯ ವಿಷಯವಾಗಿದೆ, ಬಲವಂತವಲ್ಲ: ಪ್ರಧಾನಿ ಮೋದಿ

August 11th, 06:52 pm

2021 ರ ಭಾರತೀಯ ಕೈಗಾರಿಕಾ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಭಾರತದ ಅಭಿವೃದ್ಧಿ ಮತ್ತು ಸಾಮರ್ಥ್ಯಗಳಿಗಾಗಿ ವಿಶ್ವಾಸದ ವಾತಾವರಣದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವಂತೆ ಪ್ರಧಾನಿ ಮೋದಿ ಉದ್ಯಮವನ್ನು ಕೇಳಿದರು. ಪ್ರಸ್ತುತ ಸರ್ಕಾರದ ವಿಧಾನದಲ್ಲಿನ ಬದಲಾವಣೆಗಳು ಮತ್ತು ಪ್ರಸ್ತುತ ಸೆಟಪ್‌ನ ಕಾರ್ಯ ವಿಧಾನಗಳ ಬದಲಾವಣೆಯನ್ನು ಗಮನಿಸಿದ ಪ್ರಧಾನಿ, ಇಂದಿನ ಹೊಸ ಭಾರತವು ಹೊಸ ಪ್ರಪಂಚದೊಂದಿಗೆ ಸಾಗಲು ಸಿದ್ಧವಾಗಿದೆ ಎಂದು ಒತ್ತಿ ಹೇಳಿದರು.

ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ವಾರ್ಷಿಕ ಸಭೆ 2021 ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

August 11th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕೈಗಾರಿಕಾ ಒಕ್ಕೂಟದ [ಸಿಐಐ] ವಾರ್ಷಿಕ ಸಭೆ 2021 ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದರು. ಸಭೆಯಲ್ಲಿ ವಿವಿಧ ವಲಯಗಳಲ್ಲಿ ಕೈಗೊಂಡಿರುವ ಸುಧಾರಣೆಗಳು, ದೇಶವನ್ನು ಐದು ಟ್ರಿಲಿಯನ್ ಡಾಲರ್ ಆರ್ಥ ವ್ಯವಸ್ಥೆಯ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರ ಬದ್ಧತೆಗೆ ಕೈಗಾರಿಕಾ ವಲಯದ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು.

"ನಾವು ರೈಲ್ವೆಗಳನ್ನು ಕೇವಲ ಸೇವೆಯಾಗಿ ಮಾತ್ರವಲ್ಲದೆ ಆಸ್ತಿಯಾಗಿಯೂ ಅಭಿವೃದ್ಧಿಪಡಿಸಿದ್ದೇವೆ: ಪ್ರಧಾನಿ ಮೋದಿ "

July 16th, 04:05 pm

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ರೈಲ್ವೆಯ ಹಲವಾರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ ಮತ್ತು ಗುಜರಾತ್ ಸೈನ್ಸ್ ಸಿಟಿಯಲ್ಲಿನ ನೇಚರ್ ಪಾರ್ಕ್ ಅನ್ನು ಉದ್ಘಾಟಿಸಿದರು.

ಗುಜರಾತ್‌ನಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

July 16th, 04:04 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿನ ರೈಲ್ವೆಯ ಹಲವಾರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ ಮತ್ತು ಗುಜರಾತ್ ಸೈನ್ಸ್ ಸಿಟಿಯಲ್ಲಿನ ನೇಚರ್ ಪಾರ್ಕ್ ಅನ್ನು ಉದ್ಘಾಟಿಸಿದರು. ಅವರು ಗಾಂಧಿನಗರ ಕ್ಯಾಪಿಟಲ್ - ವಾರಾಣಸಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗಾಂಧಿನಗರ ಕ್ಯಾಪಿಟಲ್ ಮತ್ತು ವಾರೆಥಾ ನಡುವಿನ ಮೆಮು ರೈಲುಗಳಿಗೆ ಹಸಿರು ನಿಶಾನೆ ತೋರಿದರು.