ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 04:54 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕಾರ್ಯಕ್ರಮಕ್ಕೆ ತಂತ್ರಜ್ಞಾನದ ನೆರವಿನಿಂದ ವರ್ಚುವಲ್ ಆಗಿ ಪಾಲ್ಗೊಂಡಿರುವ ಗೌರವಾನ್ವಿತ ರಾಜ್ಯಪಾಲರುಗಳೇ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ನಾಯ್ಡು ಅವರೇ, ವರ್ಚ್ಯುವಲ್ ಆಗಿ ಪಾಲ್ಗೊಂಡಿರುವ ಇತರೆ ಸಂಪುಟ ಸಹೋದ್ಯೋಗಿಗಳೇ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಉತ್ತರ ಪ್ರದೇಶ ಸರ್ಕಾರದ ನಾನಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಬನಾರಸ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ 6,100 ಕೋಟಿ ರೂ. ಮೊತ್ತದ ಬಹುವಿಧದ ವಿಮಾನ ನಿಲ್ದಾಣ ಯೋಜನೆಗಳು ಮತ್ತು ವಾರಾಣಸಿಯ ಬಹು ಅಭಿವೃದ್ಧಿ ಉಪಕ್ರಮಗಳು ಸೇರಿವೆ.ಸೆಪ್ಟೆಂಬರ್ 23ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು
September 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 23ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಪ್ರಧಾನಮಂತ್ರಿಯವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:15ಕ್ಕೆ ಪ್ರಧಾನಮಂತ್ರಿಯವರು `ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರ’ಕ್ಕೆ ತಲುಪಲಿದ್ದು, `ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ-2023’ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಆವಾಸಿಯಾ ವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ.